ನವದೆಹಲಿ: ದೇಶದ ಸಾಲದ ಬಗ್ಗೆ ಕಾಂಗ್ರೆಸ್ ಸುಳ್ಳು ಕಾಳಜಿ ತೋರಿಸುತ್ತಿದೆ ಎಂದು ಟೀಕಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ಒಂ ದೆಡೆ ಸಾಲ ಏರುತ್ತಿದೆ ಎಂದು ಮೊಸಳೆ ಕಣ್ಣೀರು ಸುರಿಸುವ ಕಾಂಗ್ರೆಸ್, ಮತ್ತೊಂದೆಡೆ ರಾಜ್ಯಗಳಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಿ ಮತ್ತು ಹೆಚ್ಚು ಸಾಲ ಮಾಡಿ ಎಂದು ಒತ್ತಾಯಿಸುತ್ತಿದೆ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ರಾಜ್ಯಸಭೆಯಲ್ಲಿ 2026-27ರ ಕೇಂದ್ರ ಬಜೆಟ್ ಮೇಲಿನ ಸುದೀರ್ಘ ಚರ್ಚೆಗೆ ಉತ್ತರಿಸಿದ ಸೀತಾರಾಮನ್, ಸರ್ಕಾರದ ಹಣಕಾಸು ನಿರ್ವಹಣೆಯ …
Read More »ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯವರಿಗೆ ಬೇಟಿ ಮಾಡಿದ ಆಹಾರ ಸಚಿವ ಕೆಹೆಚ್:- ಮುನಿಯಪ್ಪ
ಕನಿಷ್ಠ ಬೆಂಬಲ ಬೆಲೆ ಯೋಜನೆಯ ಬಾಕಿ ಮೊತ್ತ 1446 ಕೋಟಿ ರೂ ಗಳ ಬಿಡುಗಡೆಗೆ ಮನವಿ ನವದೆಹಲಿ:ಮಾನ್ಯ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿಯವರ ನೇತೃತ್ವದಲ್ಲಿ ನವದೆಹಲಿಯ ಕೃಷಿ ಭವನದಲ್ಲಿ ನಡೆದ ಆಹಾರ ಇಲಾಖೆಯ ಸಭೆಯಲ್ಲಿ ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿದರು. ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಕರ್ನಾಟಕ ಸರ್ಕಾರವು ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ರೈತರಿಂದ ಧಾನ್ಯಗಳು ಹಾಗೂ ಭತ್ತ/ಕಸ್ಟಮ್ ಮಿಲ್ಡ್ ರೈಸ್ (CMR) ಖರೀದಿ …
Read More »Gold, Silver ಪ್ರಿಯರಿಗೆ ಶಾಕ್; 10 ಗ್ರಾಂ ಚಿನ್ನಕ್ಕೆ 5,400 ರೂ, ಕೆಜಿ ಬೆಳ್ಳಿಗೆ 15,000 ರೂ. ಏರಿಕೆ
ನವದೆಹಲಿ: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಶುಕ್ರವಾರ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ರಾಜಕೀಯ ಅನಿಶ್ಚಿತತೆ ಮತ್ತು ಡಾಲರ್ ದುರ್ಬಲಗೊಳ್ಳುತ್ತಿರುವುದರಿಂದ ಇತ್ತೀಚಿನ ದಿನಗಳಲ್ಲಿ ಚಿನ್ನ, ಬೆಳ್ಳಿ ದರಗಳಲ್ಲಿ ಏರಿಳಿತ ಆಗುತ್ತಿದೆ. ಎರಡೂ ಲೋಹಗಳ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಕಂಡಿದ್ದು, ಹೂಡಿಕೆದಾರರು ಸುರಕ್ಷಿತ ಸ್ವರ್ಗದ ಸ್ವತ್ತುಗಳತ್ತ ಮುಖ ಮಾಡಲು ಕಾರಣವಾಗಿದೆ. ಮುಂಬೈನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 5,400 ರೂ. ಏರಿಕೆಯಾಗಿ 1,59,710 ರೂ.ಗೆ ತಲುಪಿದೆ. …
Read More »ಉದ್ದವ್‌ಗೆ ಕೈಕೊಟ್ಟು ಶಿಂಧೆ ಸೇನಾಗೆ ಎಂಎನ್‌ಎಸ್ ಬಂಬಲ
ಮುಂಬೈ: ಮಹಾರಾಷ್ಟ್ರ ರಾಜಕೀಯ ಹೇಗೆ ಬೇಕಾದರೂ ತಿರುವು ಪಡೆಯುತ್ತದೆ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಹೋದರ ಉದ್ದವ್ ಠಾಕ್ರೆ ಜೊತೆ ಮೈತ್ರಿ ಮಾಡಿಕೊಂಡಿದ್ದ ರಾಜ್ ಠಾಕ್ರೆಯ ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಈಗ ಶಿಂಧೆ ಬಣದ ಶಿವಸೇನೆಗೆ ಬೆಂಬಲ ಸೂಚಿಸಿದೆ. ಕಲ್ಯಾಣ್-ಡೊಂಬಿವಿಲಿ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಚುನಾವಣೆಗೆ ಎಂಎನ್‌ಎಸ್ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಬೆಂಬಲ ನೀಡಿದೆ. ರಾಜ್ ಠಾಕ್ರೆ ಸ್ಥಳೀಯ ನಾಯಕರಿಗೆ ಈ ವಿಚಾರದ …
Read More »ಸಂವಿಧಾನ ರಕ್ಷಣೆಯ ಕ್ರಾಂತಿಯಾಗಲಿ: ಬಸವರಾಜ ಬೊಮ್ಮಾಯಿ*
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು. ಸಂವಿಧಾನಕ್ಕೆ ನಮ್ಮ ಬೆಂಬಲ ಎಂದು ಸಂಕಲ್ಪ ಮಾಡಬೇಕು. ಸಂವಿಧಾನ ರಕ್ಷಣೆಯ ಕಾಂತಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮಾಯಿ ಹೇಳಿದರು. ಅವರು ಬಾಗಲಕೋಟೆಯಲ್ಲಿ ಶನಿವಾರ ಸಿಟಿಜನ್ ಫಾರ್ …
Read More »ಕಂಬಳ ಅತ್ಯಂತ ಜನಪ್ರಿಯ ಗ್ರಾಮೀಣ ಕ್ರೀಡೆ: ಸಿಎಂ ಸಿದ್ದರಾಮಯ್ಯ
ಮಂಗಳೂರು : ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ. ನಮ್ಮ ದೇಶ ಬಹುತ್ವದ ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತ ಸಂಸ್ಕೃತಿಯ ಒಂದು ಭಾಗ …
Read More »ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಾಜಿ ಸಂಸದರ ಪ್ರಜ್ವಲ್ ವಿರುದ್ಧ ಆರೋಪ ನಿಗದಿ ಮಾಡದಂತೆ ವಿಚಾರಣಾ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ.
ಬೆಂಗಳೂರು: ಅತ್ಯಾಚಾರ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ನಿಗದಿಗೂ ಮುಂಚಿನ ವಾದ ಪ್ರತಿವಾದ ಆಲಿಸಬಹುದಾಗಿದೆ. ಆದರೆ, ಆರೋಪ ನಿಗದಿ ಮಾಡಬಾರದು ಎಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಹೈಕೋರ್ಟ್ ಆದೇಶಿಸಿದೆ. ಪ್ರಜ್ವಲ್ ಕಾರು ಚಾಲಕನ ಫೋನ್‌ನಿಂದ ಪಡೆದಿರುವ ಫೋಟೊ ಮತ್ತು ಎಲ್ಲಾ ವಿಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕು ಎಂದು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ …
Read More »ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು,
ಮೈಸೂರು: ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ ಉದ್ಯೋಗಿಗಳಿಗೆ ಜನವರಿ 26ರವರೆಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ, ಬೋನಿಗೆ ಬೀಳದೆ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸುತ್ತಿದೆ. ಕ್ಯಾಮೆರಾದಲ್ಲಿ ಚಿರತೆಯ ಚಲನವಲನ ಸೆರೆಯಾಗಿದೆ. ಆದರೆ ಕಾರ್ಯಾಚರಣೆ ವೇಳೆ ಇನ್ನೂ ಪತ್ತೆಯಾಗದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. …
Read More »ಅಣ್ಣಾವ್ರ ಬಗ್ಗೆ ಸುದೀಪ್ ಅಂದು ಹೇಳಿದ್ದ ಮಾತು ಇಂದು ವೈರಲ್, ಕಾಮೆಂಟ್ಸ್ ಸುರಿಮಳೆ!
ಕಿಚ್ಚ ಸುದೀಪ್ ಅವರು ಡಾ ರಾಜ್‌ಕುಮಾರ್ () ಬಗ್ಗೆ ಮಾತನ್ನಾಡಿದ್ದಾರೆ. ಅವರು ಅಣ್ಣಾವ್ರ ಬಗ್ಗೆ ಅದೇನು ಹೇಳಿದ್ದಾರೆ ಅನ್ನೋದು ಇಲ್ಲಿದೆ. ಜೊತೆಗೆ, ಅವರು ಹೇಳಿದ್ದು ಯಾವಾಗಲೋ ಇರಬಹುದು. ಆದರೆ ಅದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗಿದ್ದರೆ ಕನ್ನಡದ ಸ್ಟಾರ್ ನಟ ಕಿಚ್ಚ ಸುದೀಪ್ ಅವರು ಮೇರುನಟ ಡಾ ರಾಜ್‌ಕುಮಾರ್ ಬಗ್ಗೆ ಅದೇನು ಹೇಳಿದ್ದಾರೆ? ಬಹುಶಃ ನೀವು ಊಹಿಸಿರಲಿಕ್ಕೂ ಸಾಧ್ಯವಿಲ್ಲ. ಅಂತಹ ಮಾತನ್ನು ಸುದೀಪ್ ಹೇಳಿದ್ದಾರೆ. ಅದಕ್ಕೆ ತುಂಬಾ …
Read More »ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!
ಹುಣಸೂರು: ರಾಜ್ಯಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಮಹಾಮಾರಿಗೆ ಹುಣಸೂರು ತಾಲೂಕಿನ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೇ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹೊಸೂರು ಗೇಟ್ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಗುರುಪುರ ಉಪಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ನಾಗೇಂದ್ರ (೩೪) ಮೃತರು, ಪತ್ನಿ ಇದ್ದಾರೆ. ಮೂಲತಃ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ದೊಡ್ಡ ಆಣೆ ಗ್ರಾಮದವರು. ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಇವರು ಪತ್ನಿ ಜ್ಯೋತಿ ಗರ್ಭಿಣಿಯಾಗಿದ್ದು, ಕಾಮಾಕ್ಷಿ ಆಸ್ಪತ್ರೆಯಲ್ಲಿ …
Read More »
Laxmi News 24×7