Breaking News

new delhi

ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ

ಬೆಂಗಳೂರು, ಸೆ. 29: `ಬೆಂಗಳೂರು ಉಗ್ರರ ಕೇಂದ್ರವಾಗಿದೆ’ ಎಂಬ ಬಿಜೆಪಿಯೊಳಗಿನ ಕೆಲ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ. ಇಂಥ ಹೇಳಿಕೆಯನ್ನು ಸಮರ್ಥಿಸಲಾಗದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಂಕಟ ಅನುಭವಿಸಿದ್ದನ್ನು ನಾನು ಮಾಧ್ಯಮದ ಮೂಲಕ ನೋಡಿದೆ. ಈ ಅಪ್ರಬುದ್ಧ ಹೇಳಿಕೆ ಬಿಜೆಪಿಯ ಹಿರಿಯರಿಗೆ ಮಾಡಿದ ಅಪಮಾನವೂ ಹೌದು’ ಎಂದು ಸಂಸದ ತೇಜಸ್ವಿ ಸೂರ್ಯ ವಿರುದ್ಧ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ …

Read More »

ಜೀವ ಜಲವಿಲ್ಲದೆ ಬೇಸತ್ತ ಸೋಂಕಿತರ ಬಗ್ಗೆ ಯಾಕಿಷ್ಟು ತಾತ್ಸಾರ?

ಬೆಳಗಾವಿ: ಕೊರೊನಾ.. ಆರಂಭದಲ್ಲೇ ಹೊಸ ವರ್ಷದ ಹರುಷವನ್ನೇ ಹಾಳು ಮಾಡಿ ದಾರಿದ್ರ್ಯ ತುಂಬಿದ ಮಹಾಮಾರಿ ಕೊರೊನಾ ದೇಶಕ್ಕೆ ಕಂಟಕವಾಗಿ ಕಾಡುತ್ತಿದೆ. ಜೀವನವನ್ನೇ ನರಕ ಮಾಡಿರುವ ಕೊರೊನಾ ಇನ್ನೂ ಕಡಿಮೆಯಾಗಿಲ್ಲ. ದಿನೇ ದಿನೇ ತನ್ನ ಪ್ರತಾಪ ತೋರಿಸುತ್ತಲೇ ಸಾಗಿದೆ. ಈ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವಲ್ಲಿ ವೈದ್ಯರು ಸಹ ಎಡವುತ್ತಿದ್ದಾರೆ. ಜಿಲ್ಲೆಯ ಬಿಮ್ಸ್‌ನಲ್ಲಿ ನೀರಿಗಾಗಿ ಕೊರೊನಾ ಸೋಂಕಿತರು ಪರದಾಡುತ್ತಿರುವಂತ ಪರಿಸ್ಥಿತಿ ಎದುರಾಗಿದೆ. ಕುಡಿಯುವುದಕ್ಕೂ ನೀರಿಲ್ಲ, ಶೌಚಾಲಯಕ್ಕೂ ನೀರಿಲ್ಲ. ಕೊವಿಡ್ ವಾರ್ಡ್‌ನಲ್ಲಿ …

Read More »

IPS ಅಧಿಕಾರಿ ಮಾಡ್ತೀನಿ ಅಂತಾ TV ನಟಿ ಮತ್ತು ಪತಿಯಿಂದ 3.5 ಕೋಟಿ ರೂ ವಂಚನೆ, ಎಲ್ಲಿ?

ಮುಂಬೈ: ಐಪಿಎಸ್ ಅಧಿಕಾರಿಯಾಗಿ ನೇಮಕಗೊಳಿಸುವುದಾಗಿ ಭರವಸೆ ನೀಡಿ 3.5 ಕೋಟಿ ರೂ.ಗೆ ವಂಚನೆ ಮಾಡಿದ್ದ ಟಿವಿ ನಟಿ ಸಪ್ನಾ ರಹಾನ್ (28) ಮತ್ತು ಅವರ ಪತಿ ಪುನೀತ್ ಕುಮಾರ್ ರಹಾನ್ (26) ದಂಪತಿಯನ್ನು ಬಂಧಿಸಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಭಾನುವಾರ ದಂಪತಿಯನ್ನು ಅರೆಸ್ಟ್ ಮಾಡಿದ್ದಾರೆ. ಸಪ್ನಾ ರಹಾನ್ ಟಿವಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದರು. ಹೀಗಾಗಿ ಅವರಿಗೆ ಅನೇಕ ಪ್ರಭಾವಿಗಳ ಪರಿಚಯವಿರುತ್ತೆ ಎಂದು ವ್ಯಕ್ತಿಯೊಬ್ಬ ಇವರನ್ನು ನಂಬಿದ್ದ. ಈ ನಂಬಿಕೆಯನ್ನೇ ಅದಾಯ ಮಾಡಿಕೊಳ್ಳಲು …

Read More »

ರಾಜ್ಯದಲ್ಲಿ ಸಾಲಬಾಧೆಯಿಂದ ಶರಣಾಗುತ್ತಿರುವ ರೈತರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.

ಬೆಂಗಳೂರು (ಸೆ. 29): ರಾಜ್ಯದಲ್ಲಿ ಸಾಲಬಾಧೆಯಿಂದ  ಶರಣಾಗುತ್ತಿರುವ ರೈತರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಭಾನುವಾರವಷ್ಟೇ ಆತ್ಮಹತ್ಯೆ ಮಾಡಿಕೊಂಡ ಮೂವರು ರೈತರು ಸೇರಿದಂತೆ ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ ಇದುವರೆಗೂ ಆತ್ಮಹತ್ಯೆಗೆ ಶರಣಾದ ರೈತರ ಸಂಖ್ಯೆ 199ಕ್ಕೆ ಏರಿಕೆಯಾಗಿದೆ. ವಿಜಯಪುರದ ಸಿಂದಗಿ ತಾಲೂಕಿನ ಯರಗಲ್‌ ಬಿ.ಕೆ.ಗ್ರಾಮದ ಮಲಕಪ್ಪೆ ಜೆಟ್ಟೆಪ್ಪ ಬಾಲಪ್ಪಗೋಳ (4 ಲಕ್ಷ ರು. ಸಾಲ), ಹಾವೇರಿಯ ರಾಣೆಬೆನ್ನೂರಿನ ನದಿಹರಳಹಳ್ಳಿಯ ಮಹಾಂತೇಶಪ್ಪ ಹನುಮಂತಪ್ಪ ಬಜಾರಿ (3 ಲಕ್ಷ ರು. ಸಾಲ) ಮತ್ತು ಬಾಗಲಕೋಟೆ ಮುಧೋಳ …

Read More »

ಸುರೇಶ್ ಅಂಗಡಿಯನ್ನ ಮುಖ್ಯಮಂತ್ರಿಯಾಗಿ ಮಾಡುವ ಸಭೆ ನಡೆದಿತ್ತಂತೆ: ಎಲ್ಲಿ, ಯಾವಾಗ?

ಬೆಳಗಾವಿ: ಕೇಂದ್ರ ಸಚಿವ, ಸ್ಥಳೀಯ ಸಂಸದ ಸುರೇಶ್ ಅಂಗಡಿ ಅಕಾಲಿಕ ಸಾವಿಗೀಡಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸುರೇಶ್ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ, ದಿ. ಸುರೇಶ್ ಅಂಗಡಿ ಸೋದರ ಮಾವ ಲಿಂಗರಾಜ್ ಪಾಟೀಲ್ ಅವರು ರಾಜ್ಯ ರಾಜಕೀಯದ ಮೇಲೆ ಹೊಸ ಬಾಂಬ್ ಹಾಕಿದ್ದಾರೆ. ನಾಲ್ಕು ತಿಂಗಳ ಹಿಂದೆ ಸುರೇಶ್ ಅಂಗಡಿ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡುವ ಕುರಿತು ಸಭೆ ನಡೆದಿತ್ತು. ಕರ್ನಾಟಕ …

Read More »

BSY ಜೈಲಿಗೆ ಹೋಗಿದ್ದವರು, ಈಗ RTGS ಮೂಲಕ ಹಣ ಪಡೆಯುತ್ತಿದ್ದಾರೆ: ಬೇಳೂರು

ಶಿವಮೊಗ್ಗ: ಭೂ ಕಾಯ್ದೆ ತಿದ್ದುಪಡಿ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರ ವಿರುದ್ಧ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. CM BSY, ಅವರ ಪುತ್ರ ಮತ್ತು ಸಚಿವ ಆರ್ ಅಶೋಕ ಅವರುಗಳು ಕಾರ್ಪೋರೇಟರ್ ಕಂಪನಿಗಳ ಗುಲಾಮರು ಎಂದು ಬೇಳೂರು ಗೋಪಾಲಕೃಷ್ಣ ಜರಿದಿದ್ದಾರೆ. ಸಿಎಂ ಬಿಎಸ್ವೈ ರೈತ ನಾಯಕರು ಅಲ್ಲ. ಬಿಎಸ್ವೈ ಮಂಡ್ಯದಿಂದ ಶಿವಮೊಗ್ಗಕ್ಕೆ ರೈತರು ಬೆಳೆದ ನಿಂಬೆ ಮಾರಾಟಕ್ಕೆ ಬಂದವರು. ಸಿಎಂ ಬಿಎಸ್ ವೈ ಮತ್ತು ಸಂಸದ …

Read More »

ಪಾಯಿಂಟ್ಸ್ ಟೇಬಲ್ ಅಗ್ರಸ್ಥಾನದಲ್ಲಿರುವ ಡಿಸಿಗೆ ಇಂದು ತಳದಲ್ಲಿರುವ ಎಸ್​ಆರ್​ಹೆಚ್ ಎದುರಾಳಿ

ರಾಜಸ್ತಾನ ರಾಯಲ್ಸ್ ಜೊತೆ ಇಂಡಿಯನ್ ಪ್ರಿಮೀಯರ್ ಲೀಗ್​ನ 13 ನೇ ಆವೃತಿಯಲ್ಲಿ ಇದುವರೆಗೆ ಆಜೇಯವಾಗಿರುವ ಮತ್ತು ಉಳಿದೆಲ್ಲ ತಂಡಗಳಿಗಿಂತ ಹೆಚ್ಚು ಸಮತೋಲಿತ ಎನಿಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯ 11 ನೇ ದಿನ ವಾಗಿರುವ ಇಂದು ಸತತ ಎರಡು ಸೋಲುಗಳಿಂದ ಕಂಗೆಟ್ಟಿರುವ ಸನ್​ರೈಸರ್ಸ್ ಹೈದರಾಬಾದನ್ನು ಅಬು ಧಾಬಿಯಲ್ಲಿ ಎದುರಿಸಲಿದೆ . ಶ್ರೇಯಸ್ ಅಯ್ಯರ್ ಡೆಲ್ಲಿಯ ನಾಯಕನಾಗಿ ಗಮನಸೆಳೆಯುವಂ ಥ ಪ್ರಬುದ್ಧತೆಯನ್ನು ತೋರುತ್ತಿದ್ದಾರೆ . ಅವರ ಈಸಿ ಗೋ ಲಕ್ಕಿ ಅಪ್ರೋ ಚ್​ನಿಂದ …

Read More »

ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ.

ಮೈಸೂರು, ದಸರಾ ಹಿನ್ನಲೆಯಲ್ಲಿ ಮೈಸೂರು ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ ವಿದ್ಯೂತ್ ದೀಪಗಳ ದುರಸ್ಥಿ ಮತ್ತು ಬಲ್ಬ್ ಗಳ ಬದಲಾವಣೆ ಮಾಡಲಾಗುತ್ತಿದೆ. ಪ್ರತಿ ವರ್ಷ ಅದ್ದೂರಿಯಾಗಿ ದಸರಾ ನಡೆಯುತ್ತಿದ್ದು, ಕೊರೋನಾ ಹಿನ್ನಲೆಯಲ್ಲಿ ಈ ಬಾರಿ ಸರಳ ದಸರಾ ಆಚರಣೆಗೆ ಸರ್ಕಾರ ನಿರ್ಧರಿಸಿದೆ. ದಸರಾ ಮಹೋತ್ಸವವು ಮೈಸೂರು ಅರಮನೆ ಮತ್ತು ಚಾಮುಂಡಿ ಬೆಟ್ಟದಲ್ಲಿ ಮಾತ್ರ ಈ ವರ್ಷ ನಡೆಯಲಿದೆ. ಹೀಗಾಗಿ ಅರಮನೆ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಅವರಮನೆಯಲ್ಲಿನ ವಿದ್ಯೂತ್ ದೀಪಗಳ …

Read More »

ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ.

ಚಿತ್ರದುರ್ಗ, – ದೆವ್ವ ಬಿಡಿಸುವ ನೆಪದಲ್ಲಿ ಎರಡು ವರ್ಷದ ಹೆಣ್ಣು ಮಗುವನ್ನು ಮಾಂತ್ರಿಕನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ. ಪ್ರವೀಣ್ ಹಾಗೂ ಬೇಬಿ ದಂಪತಿಯ ಪುತ್ರಿ ಪೂರ್ಣಿಕಾ ನಿದ್ದೆಯಲ್ಲಿ ಬೆಚ್ಚಿ ಬೀಳುತ್ತಿದ್ದಳು. ಈ ಕಾಯಿಲೆಯ ಬಗ್ಗೆ ಆಸ್ಪತ್ರೆಗೆ ತೋರಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ಮೌಢ್ಯದ ಮೊರೆ ಹೋಗಿದ್ದು , ರಾಕೇಶ್ ಎಂಬ ಮಾಂತ್ರಿಕನ ಬಳಿ ಹೋಗಿದ್ದಾರೆ. ಮಗುವನ್ನು …

Read More »

ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು.

ಬೆಳಗಾವಿ,  ಅಕಾರ ಇದ್ದಾಗ ಭ್ರಷ್ಟಾಚಾರ, ಇಲ್ಲದಿದ್ದಾಗ ಬೆಂಕಿ ಹಚ್ಚುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು. ಸೆ. 23ಕ್ಕೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಸಿಎಂ ಯಡಿಯೂರಪ್ಪ ಡೋಂಗಿ ರಾಜಕಾರಣಿ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ಮಾಜಿ ಸಿಎಂ ಸಿದ್ದರಾಮಯ್ಯ …

Read More »