ಶಿವಮೊಗ್ಗ: ‘ಪೊಲೀಸ್ ಸಿಬ್ಬಂದಿ ಆರೋಗ್ಯವಾಗಿದ್ದರೆ ಮತ್ತು ಮನೆಯಲ್ಲಿ ನೆಮ್ಮದಿ ಇದ್ದರೆ ಇಲಾಖೆ ಸಶಕ್ತವಾಗಿರುತ್ತದೆ. ಆಗ ಸಾರ್ವಜನಿಕರಿಗೂ ಒಳ್ಳೆಯ ಸೇವೆ ಸಿಗಲಿದೆ. ಹೀಗಾಗಿ ಸಿಬ್ಬಂದಿಯ ಹಿತ ಕಾಯಲು ಇಲಾಖೆ ಬದ್ಧವಾಗಿದೆ’ ಎಂದು ಎಡಿಜಿಪಿ ಅಲೋಕ್‌ಕುಮಾರ್ ಹೇಳಿದರು. ಇಲ್ಲಿನ ಡಿಎಆರ್ ಮೈದಾನದಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕುಟುಂಬ ವರ್ಗದವರ ಜೊತೆ ಸಭೆ ನಡೆಸಿ ಅವರ ಯೋಗಕ್ಷೇಮ ಆಲಿಸಿದ ಅವರು ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ಪೊಲೀಸರು ಕರ್ತವ್ಯದ ಮೇಲೆ ಹಲವು …
Read More »ಕಸ ಸಂಗ್ರಹಿಸುವಾಗ ಸಿಕ್ಕ ಚಿನ್ನದ ಮಾಂಗಲ್ಯ ಸರ; ಮಾಲೀಕರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಪೌರ ಕಾರ್ಮಿಕರು
ಬೆಳಗಾವಿ: ಕಸ ಸಂಗ್ರಹಿಸುವ ಪೌರಕಾರ್ಮಿಕರಿಗೆ ಕಸದಲ್ಲಿ 50 ಗ್ರಾಂ ಚಿನ್ನದ ಮಾಂಗಲ್ಯ ಸರ ಸಿಕ್ಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಮಹಾತ್ಮ ಗಾಂಧೀಜಿ ಮಾರುಕಟ್ಟೆಯಲ್ಲಿ ನಡೆದಿದೆ. ಪುರಸಭೆ ವಾಹನಗಳ ಮೂಲಕ ಪೌರಕಾರ್ಮಿಕರು ಕಸ ಸಂಗ್ರಹ ಮಾಡುತ್ತಿದ್ದಾಗ ಕಸದಲ್ಲಿ ಮಾಂಗಲ್ಯ ಸರ ಸಿಕ್ಕಿದ್ದು, ಸಂಬಂಧಪಟ್ಟ ಮಾಲೀಕರಿಗೆ ಬಂಗಾರದ ಸರ ಮರಳಿಸುವ ಮೂಲಕ ಪೌರ ಕಾರ್ಮಿಕರು ಪ್ರಾಮಾಣಿಕತೆ ಮೆರೆದಿದ್ದಾರೆ. ಎಂದಿನಂತೆ ಇಂದು ಮುಂಜಾನೆ ಎಂ.ಜಿ.ಮಾರ್ಕೆಟ್ ನಲ್ಲಿ ಕಸ ಸಂಗ್ರಹಿಸಿದ ಪೌರ ಕಾರ್ಮಿಕ …
Read More »BREAKING NEWS: ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗೆ ಕೊಲೆ ಬೆದರಿಕೆ
ಬೆಂಗಳೂರು: ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ( Sri Ram Sene founder president Pramod Muthalik ) ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಬಂದಿರುವುದಾಗಿ ತಿಳಿದು ಬಂದಿದೆ. ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು – ಡಿ.ಕೆ. ಶಿವಕುಮಾರ್ ಪ್ರಶ್ನೆ ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಿನ್ನೆ ರಾತ್ರಿ ನಾಲ್ಕು ನಂಬರ್ ಗಳಿಂದ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ. ಬೆಳಗಾವಿ …
Read More »ಪ್ರಧಾನಿ ಮೋದಿ ಸೂಚನೆ ಮೇರೆಗೆ ಕರ್ನಾಟಕ – ಮಹಾರಾಷ್ಟ್ರ ರಾಜ್ಯಪಾಲರ ಸಭೆ
ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಇಂದು ಕೊಲಾಪುರದಲ್ಲಿ ಉಭಯ ರಾಜ್ಯಗಳ ರಾಜ್ಯಪಾಲರ ಸಭೆ ನಡೆಯುತ್ತಿದ್ದು, ರಾಜ್ಯದ ಜನರಲ್ಲಿ ಕುತೂಹಲ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆ ಮೇರೆಗೆ ಈ ಸಭೆ ನಡೆಯುತ್ತಿರುವುದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೊಲ್ಲಾಪುರಕ್ಕೆ ಆಗಮಿಸಿದ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಾಯರಿ ಸ್ವಾಗತಿಸಿದರು. ಕೊಲ್ಲಾಪುರ ನಗರದ ಛತ್ರಪತಿ ಶಿವಾಜಿ ವಿಶ್ವವಿದ್ಯಾಲಯದ ಆವರಣದಲ್ಲಿ ಶುಕ್ರವಾರ ಬೆಳಗ್ಗೆ …
Read More »ಭದ್ರತಾ ದಾರ’ ತಯಾರಿ: ಪಾಕ್-ಚೀನದ ನೆರಳೂ ಬೀಳುವಂತಿಲ್ಲ!
ನವದೆಹಲಿ: ಕರೆನ್ಸಿ ನೋಟುಗಳ ಮುದ್ರಣಕ್ಕಾಗಿ 3 ಲಕ್ಷ ಕಿಲೋಮೀಟರ್ ಉದ್ದದ “ಬಣ್ಣ ಬದಲಿಸುವಂಥ ಭದ್ರತಾ ದಾರ’ವನ್ನು ತಯಾರಿಸಲು ದೇಶವು ಜಾಗತಿಕ ಕಂಪನಿಗಳನ್ನು ಸಂಪರ್ಕಿಸಿದ್ದು, ಅವುಗಳಿಗೆ ಹಲವು ಷರತ್ತುಗಳನ್ನೂ ಸರ್ಕಾರ ವಿಧಿಸಿದೆ. ಭದ್ರತಾ ದಾರ ತಯಾರಿ ಪ್ರಕ್ರಿಯೆಯು ಸಂಪೂರ್ಣ ಭದ್ರತಾ ವಲಯದೊಳಗೆ ನಡೆಯಬೇಕು. ಪಾಕಿಸ್ತಾನ ಮತ್ತು ಚೀನಗೆ ಸಂಬಂಧಿಸಿದವರು ಇದರ ಹತ್ತಿರವೂ ಸುಳಿಯಬಾರದು. ಈ ಎರಡು ದೇಶಗಳ ನಾಗರಿಕರು ಅಥವಾ ಈ ಹಿಂದೆ ಪಾಕಿಸ್ತಾನ ಅಥವಾ ಚೀನದಲ್ಲಿ ಕೆಲಸ ಮಾಡಿರುವವರು, ಅಲ್ಲಿ …
Read More »ಮನೆ ಮನೆಗೆ ಬುದ್ಧ, ಬಸವ-ಅಂಬೇಡ್ಕರ್: ಸತೀಶ್ ಜಾರಕಿಹೊಳಿಯಿಂದ ವಿನೂತನ ಕಾರ್ಯಕ್ರಮ
ಬೆಳಗಾವಿ: ಹರ್ ಘರ್ ತಿರಂಗಾ, ಮನೆಮನೆಗೂ ಕನ್ನಡ ಧ್ವಜ ಅಭಿಯಾನ ಆಯ್ತು. ಇದೀಗ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮ ಆಯೋಜಿಸಿದ್ದಾರೆ. ಇದೇ ನ. 6ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಸಮಾವೇಶ ಮಾಡಿ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಇನ್ನು ಈ ಬಗ್ಗೆ ಇಂದು(ನ.02) ನಿಪ್ಪಾಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
Read More »ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರದಾನ
ಧಾರಾಕಾರವಾಗಿ ಸುರಿಯುತ್ತಿದ್ದ ಮಳೆ ಮತ್ತು ಸಹಸ್ರಾರು ಅಭಿಮಾನಿಗಳ ಹರ್ಷೋದ್ಗಾರಗಳ ಮಧ್ಯೆಯೇ, ನಾಡಿನ ಜನರ ಮನಗೆದ್ದ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಮಂಗಳವಾರ ಸಂಜೆ ನಡೆದ ಸಮಾರಂಭದಲ್ಲಿ, ಪುನೀತ್ ಅವರನ್ನು ಕಳೆದುಕೊಂಡು ಆಗಸವೇ ಅಳುತ್ತಿದೆ ಯೇನೋ ಎಂಬಂತೆ ಭೋರ್ಗರೆದು ಸುರಿಯುತ್ತಿದ್ದ ವರ್ಷಧಾರೆಯ ನಡುವೆಯೇ ಛತ್ರಿಯ ಆಸರೆಯಲ್ಲಿ ಸಮಾರಂಭ ನಡೆಯಿತು. ತಂದೆ ಡಾ. ರಾಜ್‌ಕುಮಾರ್ ಅವರಿಗೆ 30 ವರ್ಷಗಳ ಹಿಂದೆ …
Read More »ನನ್ನನ್ನು ಮುಗಿಸಲು ಮುಧೋಳ-ಬೆಂಗಳೂರಿಂದ ಗ್ಯಾಂಗ್ ಬಂದಿತ್ತು: ಹೊಸ ಬಾಂಬ್ ಸಿಡಿಸಿದ ಯತ್ನಾಳ್
ವಿಜಯಪುರ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಮೂಲಕ ರಾಜ್ಯ ರಾಜಕಾರಣಕ್ಕೆ ಸಂದೇಶ ರವಾನಿಸಿದೆ. ಆದರೆ, ಈ ಚುನಾವಣೆಯಲ್ಲಿ ನನ್ನನ್ನು ಹಣಿಯಲು ಕಳ್ಳರ ಗ್ಯಾಂಗ್ ಮನೆಯಲ್ಲಿಯೇ ಕುಳಿತು ತಂತ್ರ ಮಾಡಿದೆ. ಮಾತ್ರವಲ್ಲ, ಮುಧೋಳ ಮತ್ತು ಬೆಂಗಳೂರಿನಿಂದಲೂ ಬಂದಿದ್ದರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್ ಸಿಡಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಯತ್ನಾಳ್, ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದೆ. ಈ ಹಿಂದೆ …
Read More »ಬೆಳಗಾವಿ: ಗಡಿಯಲ್ಲಿ ಭೋರ್ಗರೆದ ಕನ್ನಡ ಪ್ರೇಮ
ಬೆಳಗಾವಿ: ಉದ್ದಾನುದ್ದದ ಕನ್ನಡ ಬಾವುಟ. ಕನ್ನಡದ ಹಿರಿಮೆಯನ್ನು ಎತ್ತಿಹಿಡಿದ ಯುವಜನರ ಕೈಗಳು, ಕನ್ನಡಕ್ಕಾಗಿ ಕೈ ಎತ್ತಿ ಕಲ್ಪವೃಕ್ಷವಾದಂತೆ ಭಾಸವಾಗುತ್ತಿತ್ತು. ಜಾನಪದ ಕಲಾವಿದರ ಹೆಜ್ಜೆಗಳೂ ಕನ್ನಡದ ಹಿರಿಮೆಯನ್ನೇ ಮಾತನಾಡುತ್ತಿದ್ದವು. ಎತ್ತ ನೋಡಿದರತ್ತ, ಬೆಳಗಾವಿಯ ನಗರದಲ್ಲಿ ಕನ್ನಡದ ಡಿಂಡಿಮ ಮೊಳಗಿತು. ಮೂರು ವರ್ಷಗಳ ನಂತರ ಮಂಗಳವಾರ ಜರುಗಿದ ಕರ್ನಾಟಕ ರಾಜ್ಯೋತ್ಸವದಲ್ಲಿ ಹರ್ಷೋದ್ಗಾರಗಳು ಮುಗಿಲು ಮುಟ್ಟಿದ್ದರೆ, ಹೆಜ್ಜೆಗಳು ಭುವಿಯನ್ನು ನಡುಗಿಸುತ್ತಿದ್ದವು. ಅನ್ಯ ಭಾಷಿಗರು ಸೊಲ್ಲೆತ್ತದಂತೆ ಕನ್ನಡದ ಧ್ವನಿ ನೆಲ-ಬಾನು ಒಂದು ಮಾಡಿದವು. ನಾಡು, ನುಡಿಯ …
Read More »ಮೆಳವಂಕಿ ಸೇತುವೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ
ಗೋಕಾಕ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದ ಸಾರ್ವಜನಿಕ ಸಂಚಾರಕ್ಕಾಗಿ ಮೆಳವಂಕಿ ಹತ್ತಿರ ಸೇತುವೆ ನಿರ್ಮಾಣ ಕಾಮಗಾರಿಗೆ 10 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ಅನುದಾನದಲ್ಲಿ ಮಂಜೂರಾದ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಕಾಮಗಾರಿ ಅನುಷ್ಠಾನದಿಂದ ದಂಡಿನಮಾರ್ಗ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು …
Read More »