Breaking News

new delhi

ಈ ವರ್ಷ ‘ಬೆಂಗಳೂರಿಗೆ ಪ್ರತ್ಯೇಕ ಕಾನೂನು’ ಜಾರಿ – ಡಿಸಿಎಂ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು : ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಮತ್ತಿತರೆ ಮೂಲಭೂತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಎದುರಿಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರು ನಗರಕ್ಕೆ ಪ್ರತ್ಯೇಕ ಕಾಯ್ದೆಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಸರಕಾರ ಹೆಜ್ಜೆಗಳನ್ನಿಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಎಲ್ಲರಿಗೂ ಗೊತ್ತಿರುವಂತೆ ಬೆಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರ. ಇದು ಇತರೆ ನಗರಗಳಂತೆ ಅಲ್ಲ. ದಿನೇದಿನೆ ರಾಜ್ಯದ ಮೂಲೆಮೂಲೆಗಳಿಂದ, ಇತರೆ ರಾಜ್ಯಗಳಿಂದ …

Read More »

500 ಕನ್ನಡ ಪುಸ್ತಕ ಸಗಟು ಖರೀದಿಗೆ ಕ್ರಮ – ಸಚಿವ ಎಸ್ ಸುರೇಶ್ ಕುಮಾರ್

ಬೆಂಗಳೂರು : ರಾಜ್ಯ ಗ್ರಂಥಾಲಯ ಇಲಾಖೆಯಿಂದ ವಾರ್ಷಿಕ ಸಗಟು ಖರೀದಿ ಯೋಜನೆಯಡಿ ಇನ್ನು ಮುಂದೆ ಕನ್ನಡ ಪುಸ್ತಕಗಳ 500 ಪ್ರತಿಗಳನ್ನು ಖರೀದಿಸಲು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬುಧವಾರ ರಾಜ್ಯ ಸಾರ್ವಜನಿಕ ಗ್ರಂಥಾಲಯ ನಿರ್ದೇಶನಾಲಯದಲ್ಲಿ ನೂತನ ರಾಜ್ಯ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ಪ್ರಥಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬರಹಗಾರರ ಮತ್ತು ಪ್ರಕಾಶಕರ ಸಂಘದ ಕೋರಿಕೆಯಂತೆ ಬಹುದಿನಗಳ ನಿರೀಕ್ಷೆಯಾಗಿದ್ದ …

Read More »

ಎಬಿವಿಪಿಯಿಂದ ಸಹಿ ಸಂಗ್ರಹ ಅಭಿಯಾನ ಆರಂಭ

ಬೆಳಗಾವಿ: ‘ಡ್ರಗ್ಸ್ ಜಾಲದಲ್ಲಿ ತೊಡಗಿರುವವರನ್ನು ತಕ್ಷಣ ಬಂಧಿಸಿ, ದೇಶದ್ರೋಹದ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮಹಾನಗರ ಘಟಕದ ಕಾರ್ಯಕರ್ತರು ಬುಧವಾರ ಸಹಿ ಸಂಗ್ರಹ ಅಭಿಯಾನ ಆರಂಭಿಸಿದರು. ಇಲ್ಲಿನ ಹುತಾತ್ಮ ಚೌಕದಲ್ಲಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಚಾಲನೆ ನೀಡಿದರು. ಎಬಿವಿಪಿ ರಾಜ್ಯ ಸಹ ಸಂಘಟನಾ ಕಾರ್ಯದರ್ಶಿ ಪೃಥ್ವಿಕುಮಾರ್ ಮಾತನಾಡಿ, ‘ಶಾಲಾ-ಕಾಲೇಜು ಅಂಗಳಕ್ಕೂ ಡ್ರಗ್ಸ್ ಜಾಲ ಕಾಲಿಟ್ಟಿದೆ. ಗುಣಾತ್ಮಕ ಶಿಕ್ಷಣ ಪಡೆದು ಭವಿಷ್ಯ ಕಟ್ಟಿಕೊಳ್ಳಬೇಕಿದ್ದ …

Read More »

ಬಿಟ್ಟು ಬ್ಯಾಸರಲೇ ಕೇಂದ್ರ ತಂಡದ ಅಧ್ಯಯನ : ವರದಿಯಿಂದ ರೈತರ ಕಣ್ಣೀರು ಒರಸತ್ತಾ ಮೂಲೆಗೆ ಸೇರುತ್ತಾ?

ಹುಬ್ಬಳ್ಳಿ; ಆಗಸ್ಟ್​ನಿಂದ ಈವರೆಗೆ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಉಂಟಾಗಿ ಹಾನಿಗೀಡಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ನಿನ್ನೆ ಭೇಟಿ ನೀಡಿ ಪರಿಶೀಲಿಸಿತು. ತಾಲೂಕಿನ 2 ಹಳ್ಳಿಗೆ ಭೇಟಿ ನೀಡಿದ ತಂಡದ ಅಧಿಕಾರಿಗಳು, ಹಾನಿ ಪಟ್ಟಿಯಲ್ಲಿದ್ದ ರೈತರ ಜಮೀನಿಗೆ ಭೇಟಿ ನೀಡದೆ ರೈತನೊಬ್ಬನನ್ನು ತಾವಿದ್ದಲ್ಲೇ ಕರೆಸಿಕೊಂಡರು. ಕಾಲು ದಾರಿಯಲ್ಲಿ ನೀರಿದೆ ಎಂದು ರೈತ ಮಹಿಳೆಯನ್ನು ತಮ್ಮ ಹತ್ತಿರ ಕರೆಸಿಕೊಂಡಿದ್ದು ಕಾಟಾಚಾರದ ಅಧ್ಯಯನಕ್ಕೆ ಹಿಡಿದ …

Read More »

ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರ ಮಣಿಕರ್ಣಿಕಾ ಕಚೇರಿಯ ಡೆಮಾಲಿಷನ್ ಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ.

ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರ ಮಣಿಕರ್ಣಿಕಾ ಕಚೇರಿಯ ಡೆಮಾಲಿಷನ್ ಗೆ ಬಾಂಬೆ ಹೈಕೋರ್ಟ್ ತಡೆ ನೀಡಿದೆ. ಕಂಗನಾ ರಾಣಾವತ್ ಅವರು, ಅನಧಿಕೃತವಾಗಿ ಕಚೇರಿ ನಿರ್ಮಿಸಿದ್ದಾರೆ ಎಂದು ಬೃಹತ್ ಮುಂಬೈ ಕಾರ್ಪೊರೇಷನ್ ನೋಟಿಸ್ ನೀಡಿತ್ತು. ಆ ಬೆನ್ನಲ್ಲೇ ಇಂದು ಕಚೇರಿ  ನೆಲಸಮಗೊಳಿಸಲು ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಸದ್ಯ ಈ ಕಾರ್ಯಕ್ಕೆ ನ್ಯಾಯಾಲಯ ತಡೆ ನೀಡಿದ್ದು, ಕಂಗನಾ ಸಲ್ಲಿಸಿರುವ ಅರ್ಜಿಗೆ ಉತ್ತರಿಸುವಂತೆ ಬಿಎಂಸಿಗೆ ಹೇಳಿದೆ. ಈ ಜಾಗದಲ್ಲಿ ಅನಧಿಕೃತವಾಗಿ ಕಚೇರಿ ನಿರ್ಮಿಸಲಾಗಿದೆ ಎಂದು …

Read More »

ನಗರದಲ್ಲಿ ಇಂದು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

ಗೋಕಾಕ್ : ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಮಹತ್ವದ ಯೋಜನೆ ರೂಪಿಸಿದ್ದು, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ‘ಆರೋಗ್ಯ ಹಸ್ತ’ಕ್ಕೆ ಚಾಲನೆ ನೀಡಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಇಂದು ‘ಆರೋಗ್ಯ ಹಸ್ತ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ‘ಜನರ ಆರೋಗ್ಯ ಹಾಗೂ ದೂರದೃಷ್ಟಿ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಹೊಸ ಯೋಜನೆ ರೂಪಿಸಿದೆ. ಪ್ರತಿಯೊಬ್ಬರಿಗೆ ಕೋವಿಡ್ ಬಗ್ಗೆ ಇರುವ ಭಯವನ್ನು ದೂರ ಮಾಡುವುದರ ಜತೆಗೆ ಜಾಗೃತಿ …

Read More »

ಜಾಗನೂರಿನ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ

ಚಿಕ್ಕೋಡಿ ಉಪವಿಭಾಗವೂ ಸೇರಿ ಹಲವೆಡೆ ಬೈಕ್ ಕಳ್ಳತನ ಮಾಡಿದ ಜಾಗನೂರಿನ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 5 ಬೈಕ್ ವಶಪಡಿಸಿಕೊಂಡಿದ್ದಾರೆ. ಚಿಕ್ಕೋಡಿ, ಮಹಾಲಿಂಗಪುರ, ಉಳ್ಳಾಗಡ್ಡಿ ಖಾನಾಪುರ, ಅಂಕಲಗಿ, ಹುಕ್ಕೇರಿ ಕಡೆ ಬೈಕ್ ಕಳ್ಳತನ ಮಾಡಿದ ಆರೋಪದ ಮೇಲೆ ಚಿಕ್ಕೋಡಿ ತಾಲೂಕು ಜಾಗನೂರು ಗ್ರಾಮದ ರವಿ ಮಾರುತಿ ಗಣಾಚಾರ ಎಂಬ ಯುವಕನನ್ನು ಚಿಕ್ಕೋಡಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತನಿಂದ 1.15 ಲಕ್ಷ ರೂ ಮೌಲ್ಯದ 5 ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಪಿಎಸ್‍ಐ …

Read More »

ನೀರು ಪೂರೈಕೆ ಯೋಜನೆ ಪ್ರಗತಿ ಪರಿಶೀಲನೆ

ಬೆಳಗಾವಿ: ತಾಲ್ಲೂಕಿನ ತುಮ್ಮರಗುದ್ದಿ, ಕುಂದರಗಿ, ಬಸವಸನಕೊಳ್ಳ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಕ್ಕೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ನಿರ್ದೇಶಕಿ ದೀಪಾ ಕುಡಚಿ ಮಂಗಳವಾರ ಭೇಟಿ ನೀಡಿದರು. ಮಂಡಳಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳು ಹಾಗೂ ಕುಡಿಯುವ ನೀರು ಪೂರೈಕೆ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ‘ಸೆ. 15ರಂದು ಬೆಂಗಳೂರಿನಲ್ಲಿ ಮಂಡಳಿ ಸಭೆ ನಡೆಯಲಿದೆ. ಮಂಡಳಿತ ಅಧ್ಯಕ್ಷರೊಂದಿಗೆ ಚರ್ಚಿಸಿ, ಅಭಿವೃದ್ಧಿ ಕೆಲಸಕ್ಕೆ ವೇಗ ನೀಡಲಾಗುವುದು. ಎಲ್ಲ ಕಾಮಗಾರಿಗಳನ್ನು …

Read More »

ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಮಾಮನಿ ನೇಮಕ

ಸವದತ್ತಿ / ಉಗರಗೋಳ: ಇಲ್ಲಿನ ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರನ್ನಾಗಿ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ಕ್ಷೇತ್ರದ ಶಾಸಕರೂ ಆದ ಆನಂದ ಮಾಮನಿ ಅವರನ್ನು ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ. ‘2018ರ ಮಾರ್ಚ್‌ 23ರಂದು 16 ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ಸರ್ಕಾರ ರಚಿಸಿತ್ತು. ಅದರ ಅಧಿಕಾರದ ಅವಧಿ ಮುಗಿದಿದ್ದು, ಹೊಸದಾಗಿ ರಚನೆ ಆಗಬೇಕಿದೆ. ಅಲ್ಲಿವರೆಗೆ ಅಧ್ಯಕ್ಷರನ್ನಾಗಿ ಆನಂದ ಮಾಮನಿ ಅವರನ್ನು ನೇಮಿಸಲಾಗಿದೆ’ ಎಂದು …

Read More »

ರಾಜ್ಯದಲ್ಲಿ ಕೊರೋನಾಕ್ಕೆ 2ನೇ ಗರಿಷ್ಠ ಸಾವು

ಬೆಂಗಳೂರು : ರಾಜ್ಯದಲ್ಲಿ ಮಂಗಳವಾರ ಕೊರೋನಾ ಹೆಮ್ಮಾರಿಗೆ 146 ಮಂದಿ ಬಲಿಯಾಗಿದ್ದು, ಹೊಸದಾಗಿ 8,225 ಮಂದಿ ಕೊರೋನಾ ಸೋಂಕಿತರಾಗಿದ್ದಾರೆ. ತನ್ಮೂಲಕ ರಾಜ್ಯದಲ್ಲಿನ ಈವರೆಗಿನ ಒಟ್ಟು ಸೋಂಕಿತರ ಸಂಖ್ಯೆ 4.12 ಲಕ್ಷ ತಲುಪಿದೆ. ಕರೋನಾ ಸೋಂಕಿಗೆ ಮಂಗಳವಾರ 146 ಮಂದಿ ಬಲಿಯಾಗಿರುವುದು ಇದುವರೆಗಿನ ಎರಡನೇ ಗರಿಷ್ಠ ಸಾವಿನ ಪ್ರಮಾಣವಾಗಿದೆ. ಆಗಸ್ಟ್‌ 25 ರಂದು 148 ಮಂದಿ ಸೋಂಕಿಗೆ ಮೃತಪಟ್ಟಿದ್ದು ಇದುವರೆಗಿನ ದಾಖಲೆ. ರಾಜ್ಯದಲ್ಲಿ ಸದ್ಯ 96,918 ಸಕ್ರೀಯ ಕೊರೋನಾ ಪ್ರಕರಣಗಳಿದ್ದು ಇದರಲ್ಲಿ …

Read More »