Breaking News
Home / Uncategorized

Uncategorized

ಡಿ.ಕೆ.ಶಿವಕುಮಾರ್, ಹೇಮಂತ್‌ ನಿಂಬಾಳ್ಕರ್‌ ವಿರುದ್ಧ ಚುನಾವಣಾ ಆಯೋಗಕ್ಕೆ BJP ದೂರು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್‌ ನಿಂಬಾಳ್ಕರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಡಿ.ಕೆ.ಶಿವಕುಮಾರ್ ಅವರು ತಮ್ಮ ಅಧಿಕೃತ ಫೇಸ್‌ಬುಕ್‌ ಪೇಜಿನಲ್ಲಿ ಕರ್ನಾಟಕ ಸರ್ಕಾರದ ಚಿಹ್ನೆ, ಕಾಂಗ್ರೆಸ್‌ ಪಕ್ಷದ ಚಿಹ್ನೆ ಬಳಸಿಕೊಂಡು ಡಿ.ಕೆ.ಸುರೇಶ್‌ ಪರವಾಗಿ ಚುನಾವಣಾ ಪ್ರಚಾರ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಹೇಮಂತ್‌ ನಿಂಬಾಳ್ಕರ್ ಅವರು ತಮ್ಮ ಪತ್ನಿ ಹಾಗೂ ಉತ್ತರಕನ್ನಡ ಕ್ಷೇತ್ರದ …

Read More »

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೂರು ದಾಖಲು!

ಶಿವಮೊಗ್ಗ : ರಾಜ್ಯ ಬಿಜೆಪಿ ಪಕ್ಷಕ್ಕೆ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಕೆ.ಎಸ್.ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ.   ಮಾರ್ಚ್ 24 ರಂದು ಶಿಕಾರಿಪುರದಲ್ಲಿ ಬೈಕ್ ರ್ಯಾಲಿಗೆ ಅನುಮತಿ ಪಡೆದಿದ್ದ ಈಶ್ವರಪ್ಪ ಅವರು ನಿಯಮ ಮೀರಿ ಬೈಕ್ ರ್ಯಾಲಿ ನಡೆಸಿದ್ದರು. …

Read More »

ಖಾನಾಪುರ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಎಂಜಿನಿಯರ್

ಖಾನಾಪುರ: ಸ್ಥಳೀಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ದುರದುಂಡೇಶ್ವರ ಮಹಾದೇವ ಬನ್ನೂರ ಮಂಗಳವಾರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮನರೇಗಾ ಕಾಮಗಾರಿಗೆ ತಾಂತ್ರಿಕ ಅನುಮೋದನೆ ನೀಡಲು ತಮ್ಮ ಕಚೇರಿಯಲ್ಲೇ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರಿಂದ ₹10 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.   ಖಾನಾಪುರ ತಾಲ್ಲೂಕಿನ ನೀಲಾವಡೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 2ನೇ ವಾರ್ಡಿನಲ್ಲಿ ನರೇಗಾ ಯೋಜನೆಯಡಿ ವಿವಿಧ ಅಭಿವೃದ್ಧಿ …

Read More »

ಚುನಾವಣೆ ಚೆಕಿಂಗ್; ದಾಖಲೆ ಇಲ್ಲದ 20 ಲಕ್ಷಕ್ಕೂ ಅಧಿಕ ವಶ.!

ಚಿತ್ರದುರ್ಗ; ಚಿತ್ರದುರ್ಗದಲ್ಲಿ ವಾಹನ ಒಂದರಲ್ಲಿ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸುಮಾರು 20 ಲಕ್ಷಕ್ಕೂ ಅಧಿಕ ಹಣವನ್ನು ಸಾಗಿಸುತ್ತಿದ್ದರು. ಈ ವೇಳೆ ಚಿತ್ರದುರ್ಗ ತಹಸಿಲ್ದಾ‌ರ್ ನಾಗವೇಣಿ ನೇತೃತ್ವದಲ್ಲಿ ಪರಿಶೀಲನೆ ನಡೆದಿದ್ದು, ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More »

ನೀವು ಈ ಕೆಲಸ ಮಾಡಿಲ್ಲ ಅಂದ್ರೆ ಮತದಾನದಿಂದ ವಂಚಿತ.!

ದೆಹಲಿ: ಲೋಕಸಭಾ ಮತದಾನಕ್ಕೆ ಕೆಲವೇ ದಿನಗಳು ಉಳಿದಿವೆ. ಮತದಾನದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ EC ಮನೆಯಲ್ಲಿಯೇ ಕುಳಿತು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅವಕಾಶ ಮಾಡಿಕೊಟ್ಟಿದೆ. ಆದರೆ, ಈ ಪ್ರಕ್ರಿಯೆಗೆ ಉಳಿದಿರುವುದು 1 ದಿನ ಮಾತ್ರ. ನಾಳೆಯೊಳಗೆ ನೋಂದಣಿ ಮಾಡಿಕೊಂಡರೆ ಮಾತ್ರ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಿಮಗೆ ಮತ ಹಾಕಲು ಸಾಧ್ಯ. ಮತದಾರರ ಸಹಾಯವಾಣಿ ಆಪ್ ಡೌನ್‌ಲೋಡ್ ಮಾಡಿ. ಫಾರ್ಮ್ 6ನಲ್ಲಿ 2ನೇ ಆಯ್ಕೆ ಆರಿಸಿ. ಅಗತ್ಯ ಮಾಹಿತಿ …

Read More »

ಕೆಪಿಸಿಸಿಗೆ ಐವರು ನೂತನ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಿದ ಕಾಂಗ್ರೆಸ್‌

ನವದೆಹಲಿ:ಕೆಪಿಸಿಸಿಗೆ ಐವರು ನೂತನ ಕಾರ್ಯಾಧ್ಯಕ್ಷರನ್ನು ಕಾಂಗ್ರೆಸ್‌ ಶನಿವಾರ ನೇಮಕ ಮಾಡಿದೆ. ಲೋಕಸಭಾ ಚುನಾವಣಾ ಪ್ರಚಾರ ಸಮಿತಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಿಸಲಾಗಿದೆ. ಈ ನೇಮಕದಲ್ಲಿ ಜಾತಿ ಹಾಗೂ ಪ್ರದೇಶವಾರು ಸಮತೋಲನ ಕಾಯ್ದುಕೊಳ್ಳಲು ಪ್ರಯತ್ನಿಸಿದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಟಿಕೆಟ್‌ ಹಂಚಿಕೆಯ ಕಗ್ಗಂಟನ್ನು ಕೈ ಪಾಳಯ ಬಹುತೇಕ ಬಗೆಹರಿಸಿದೆ. ಅದರ ಬೆನ್ನಲ್ಲೇ, ಪಕ್ಷದ ಸಂಘಟನಾತ್ಮಕ ಬದಲಾವಣೆ ಮಾಡಿದೆ. ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬುದು ಕಾಂಗ್ರೆಸ್‌ನಲ್ಲಿರುವ ನಿಯಮ. ಅನುಕೂಲಕ್ಕೆ ತಕ್ಕಂತೆ ಈ …

Read More »

ಬರ ಪರಿಹಾರ’ ನೀಡದ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ‘ರಾಜ್ಯ ಸರ್ಕಾರ’.!

ನವದೆಹಲಿ : ‘ಬರ ಪರಿಹಾರ’ ನೀಡದ ಕೇಂದ್ರ ಸರ್ಕಾರದ ವಿರುದ್ಧ ‘ರಾಜ್ಯ ಸರ್ಕಾರ’ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬರ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ನಾವು ಕಾನೂನು ಸಮರಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು. ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆರ್ಟಿಕಲ್ 32 ರಡಿ ಕೇಂದ್ರದ ವಿರುದ್ಧ ರಿಟ್ ಅರ್ಜಿ ಸಲ್ಲಿಸಿದ್ದೇವೆ ಎಂದು …

Read More »

ದಾಖಲೆ ಮಟ್ಟಕ್ಕೆ ಮಾರಾಟವಾದ ಬೆಳಗಾವಿ ರೈತ ಬೆಳೆದ ಅರಿಶಿಣ

ಬೆಳಗಾವಿ, ಮಾರ್ಚ್ 22: ಈ ಬಾರಿ ರಾಜ್ಯದಲ್ಲಿ ಎದುರಾದ ಬರಗಾಲ ರೈತರಿಗೆ ಸಂಕಷ್ಟವನ್ನು ತಂದೊಡ್ಡಿದೆ. ಬೆಳೆಗೆ ನೀರಿಲ್ಲ, ಏನೇ ಮಾಡಿದರು ಉತ್ತಮ ಗುಣಮಟ್ಟದ ಬೆಳೆ ಸಿಗುತ್ತಿಲ್ಲ, ಕಷ್ಟಪಟ್ಟು ಬೆಳೆದ ಬೆಳೆಗೆ ಬೆಲೆ ಸಿಗುತ್ತಿಲ್ಲ ಈ ಎಲ್ಲಾ ಕಾರಣಗಳಿಂದ ರೈತರು ಹೈರಾಣಾಗಿ ಹೋಗಿದ್ದಾರೆ.ಆದರೆ ಈ ಎಲ್ಲಾ ಗೋಳಾಟಗಳ ನಡುವೆ ಇಲ್ಲೊಬ್ಬ ರೈತ ತಾವು ಬೆಳೆದ ಬೆಳೆಗೆ ನಿರೀಕ್ಷೆಗೂ ಮೀರಿದ ಲಾಭ ಗಳಿಸಿ ನೆಮ್ಮದಿಯ ನಗು ಬೀರಿದ್ದಾರೆ.ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ …

Read More »

ಅವಕಾಶ ನೀಡಿದರೆ ಸರಿ, ಇಲ್ಲದಿದ್ದರೆ ಪಕ್ಷೇರರಾಗಿ ಸ್ಪರ್ಧಿಸಿ: ಅಭಿಮಾನಿಗಳ ಆಕ್ರೋಶ

ಬಾಗಲಕೋಟೆ: ಕಾಂಗ್ರೆಸ್‌ ಹೈಕಮಾಂಡ್‌, ರಾಜ್ಯ ನಾಯಕರು ಲೋಕಸಭಾ ಚುನಾವಣೆ ಸ್ಪರ್ಧೆಗೆ ಅವಕಾಶ ನೀಡಿದರೆ ಸರಿ, ಇಲ್ಲದಿದ್ದರೆ ಪಕ್ಷೇತರಾಗಿ ಸ್ಪರ್ಧಿಸಿರಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಮುಖಂಡರು, ಕಾರ್ಯಕರ್ತರು ಶುಕ್ರವಾರ ಚರಂತಿಮಠದಲ್ಲಿ ನಡೆದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ ಅಭಿಮಾನಿಗಳ ಬಳಗದಿಂದ ಶುಕ್ರವಾರ ಆಯೋಜಿಸಿದ್ದ ಸ್ವಾಭಿಮಾನಿ ಕಾರ್ಯಕರ್ತರ ಸಭೆಯಲ್ಲಿ ಆಗ್ರಹಿಸಿದರು. ‘ಬೇಕೇ, ಬೇಕೇ ಬೇಕು, ನ್ಯಾಯ ಬೇಕು’ ಎಂದು ಘೋಷಣೆ ಕೂಗಿದ ಬೆಂಬಲಿಗರು, ಐದು ವರ್ಷಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಿ ಸಂಘಟನೆ …

Read More »

ಲೋಕಸಭೆ ಚುನಾವಣೆ: ಪಿಎಸ್‌ಐ ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಮಾರ್ಚ್ 21: ಲೋಕಸಭೆ ಚುನಾವಣೆ 2024ರ ದಿನಾಂಕ ಘೋಷಣೆಯಾಗಿದೆ. ರಾಜ್ಯದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಈಗಾಗಲೇ ಜಾರಿಗೆ ಬಂದಿದೆ.ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಲಿಖಿತ ಪರೀಕ್ಷೆಯ ದಿನಾಂಕವನ್ನು ಮುಂದೂಡಿಕೆ ಮಾಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಹೇಳಿದೆ.ಲೋಕಸಭೆ ಚುನಾವಣೆ ನೀತಿ …

Read More »