ಬೆಳಗಾವಿ: ಪ್ರಸ್ತುತ ಮುಂಗಾರು ಮಳೆಯ ಅಭಾವದ ಕಾರಣ, ಬೆಳಗಾವಿ ಮಹಾನಗರಕ್ಕೆ ನೀರು ಸರಬರಾಜು ಮಾಡುವ, ರಕ್ಕಸಕೊಪ್ಪ ಜಲಾಶಯ ಹಾಗೂ ಹಿಡಕಲ್ ಜಲಾಶಯಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿತವಾಗಿರುತ್ತದೆ. ಮಹಾನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಕೊರತೆಯನ್ನು ನಿಭಾಯಿಸಲು ಈ ಕೆಳಗಿನಂತೆ ತುರ್ತು ಕ್ರಮ ತೆಗೆದುಕೊಳ್ಳಲಾಗಿದೆ. ಪ್ರಸ್ತುತ 24/7 ವಲಯಗಳಿಗೆ ದಿನನಿತ್ಯ 2 ತಾಸಿನವರೆಗೆ ನೀರನ್ನು ಸರಬರಾಜು ಮಾಡಲಾಗುವುದು. 4 ರಿಂದ 5 ದಿನಗಳಿಗೊಮ್ಮೆ 3 ರಿಂದ 4 ತಾಸಿನವರೆಗೆ ನೀರು ಸರಬರಾಜು …
Read More »ಗೋಕಾಕದ ಪಂಚನಟ್ಟಿ ಬಳಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು!
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನಲ್ಲಿ ಇಂದು ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಗೋಕಾಕ ತಾಲೂಕಿನ ಪಂಚನಟ್ಟಿ ಗ್ರಾಮದ ಬಳಿ ಇರುವ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಸ್ಥಳದಲ್ಲೇ ಇಬ್ಬರು ದುರದೈವಿಗಳು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರನ್ನು ಪಂಚನಟ್ಟಿ ಗ್ರಾಮದ ಈರಪ್ಪ ಮಲ್ಲಪ್ಪ ನಂದಿಗೌಡರ (32) ಮತ್ತು ಮಲ್ಲಪ್ಪ ಮಹಾದೇವ ನಂದಿಗೌಡರ …
Read More »ಧಾರವಾಡ ಕೋರ್ಟ್‌ಗೆ ಇ-ಮೇಲ್ ಬಾಂಬ್ ಬೆದರಿಕೆ – ಕಲಾಪ ಸ್ಥಗಿತ
ಧಾರವಾಡ: ಧಾರವಾಡ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಕೋರ್ಟ್ ಕಲಾಪಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಹೊರಗೆ ಕಳುಹಿಸಲಾಯಿತು. ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಅನುಮಾನಾಸ್ಪದ ಇ-ಮೇಲ್ ಬಂದಿದ್ದು, ಅದರಲ್ಲಿ ಬಾಂಬ್ ಸ್ಫೋಟದ ಬಗ್ಗೆ ಬೆದರಿಕೆ ಹಾಕಲಾಗಿದೆ. “Karunanidhi.kundi.@underworlddog” ಎಂಬ ಇ-ಮೇಲ್ ವಿಳಾಸದಿಂದ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ನಿನ್ನೆ ಮಧ್ಯಾಹ್ನ 2 ಗಂಟೆಗೆ …
Read More »ನಡು ರಸ್ತೆಯಲ್ಲಿ ತಲ್ವಾರ್‌ನಿಂದ ಬೃಹತ್ ಕೇಕ್ ಕತ್ತರಿಸಿ ಬರ್ತಡೇ ಸೆಲೆಬ್ರೇಷನ್ – ಪುಂಡನ ವಿರುದ್ಧ ಎಫ್‌ಐಆರ್
ಚಿಕ್ಕಮಗಳೂರು: ಇಲ್ಲಿನ ವಾಜಪೇಯಿ ಲೇಔಟ್‌ನಲ್ಲಿ ಯುವಕರ ಗುಂಪೊಂದು ನಡು ರಸ್ತೆಯಲ್ಲಿ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿ, ಪುಂಡಾಟ ಮೆರೆದಿದೆ. ಮಹಮದ್ ಸಮೀರ್ ಎಂಬಾತ ಮಧ್ಯರಾತ್ರಿ ವೇಳೆ ರೌಡಿ ಸ್ಟೈಲ್‌ನಲ್ಲಿ ಕಾರಿನಿಂದ ಕೆಳಗಿಳಿದು ಲಾಂಗ್‌ನಿಂದ ಕೇಕ್ ಕತ್ತರಿಸಿದ್ದಾನೆ. ಸುಮಾರು 5 ಕೆಜಿಗೂ ಅಧಿಕ ತೂಕದ ಬೃಹತ್ ಕೇಕ್ ಕತ್ತರಿಸಲಾಗಿದೆ. ಈ ವೇಳೆ 10ಕ್ಕೂ ಹೆಚ್ಚು ಯುವಕರು ಸ್ಥಳದಲ್ಲಿದ್ದರು. ಇದನ್ನು ವಿಡಿಯೋ ಮಾಡಿದ್ದ ಯುವಕರು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ವಿಡಿಯೋ ವೈರಲ್ …
Read More »ಗ್ರಾಹಕನ ಸೋಗಿನಲ್ಲಿ ಬಂದು ಸಿನಿಮಾ ಶೈಲಿಯಲ್ಲಿ ಚಿನ್ನದ ಸರ ಕದ್ದು ಪರಾರಿ
ಬಾಗಲಕೋಟೆ: ಜಿಲ್ಲೆಯ ವಿದ್ಯಾಗಿರಿಯಲ್ಲಿ ಹಗಲು ಹೊತ್ತಿನಲ್ಲೇ ಗ್ರಾಹಕನ ಸೋಗಿನಲ್ಲಿ ಬಂದ ಖದೀಮನೊಬ್ಬ ಆಭರಣ ಅಂಗಡಿಯಿಂದ ಚಿನ್ನದ ಸರವನ್ನು ಕದ್ದೊಯ್ದಿರುವ ಘಟನೆ ನಡೆದಿದೆ. ಬಾಗಲಕೋಟೆ ವಿದ್ಯಾಗಿರಿ ಠಾಣಾ ವ್ಯಾಪ್ತಿಯ ಪ್ರಸಿದ್ಧ ಬೆಂಬಳಗಿ ಜ್ಯುವೆಲ್ಲರ್ಸ್ ಆಭರಣ ಮಳಿಗೆಯಲ್ಲಿ ಈ ಸಿನಿಮಾ ಮಾದರಿಯ ಕಳ್ಳತನ ನಡೆದಿದ್ದು, ಇಡೀ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೀನ್ಸ್ ಪ್ಯಾಂಟ್, ಲಾಂಗ್ ಶರ್ಟ್ ಹಾಗೂ ಶೂ ಧರಿಸಿ ಫುಲ್ ಅಪ್‌ಟುಡೇಟ್ ಆಗಿ ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ, ಚಿನ್ನದ ಸರ …
Read More »ಕುಟುಂಬ ಸಮೇತರಾಗಿ ಬೆಳ್ಳಂಬೆಳಗ್ಗೆ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆದ ಡಿಕೆಶಿ
ಬೆಂಗಳೂರು: ಮೊದಲಿನಿಂದಲೂ ದೇವರಲ್ಲಿ ಅಪಾರ ಭಕ್ತಿ, ನಂಬಿಕೆ ಹೊಂದಿರುವ ಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಒಂದಿಲ್ಲೊಂದು ದೇವಸ್ಥಾನಗಳಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಕುಟುಂಬ ಸಮೇತರಾಗಿ ತೆರಳಿ ವಿಶೇಷ ಪೂಜೆ ಸಲ್ಲಿಸಿ, ದೇವರಲ್ಲಿ ಪ್ರಾರ್ಥಿಸುತ್ತಾರೆ.ಅದೇ ರೀತಿ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಸಿಎಂ ಡಿ.ಕೆ ಶಿವಕುಮಾರ್ ಅವರು ಪತ್ನಿ ಉಷಾ ಅವರ ಜೊತೆ ತಿರುಪತಿ ತಿರುಮಲ ದೇವಸ್ಥಾನಕ್ಕೆ ತೆರಳಿದ್ದಾರೆ. ಶುಕ್ರವಾರ (ಇಂದು) ಮುಂಜಾನೆ ತೆರಳಿ …
Read More »ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಚಿಕ್ಕೋಡಿಯ ಬಟ್ಟೆ ಅಂಗಡಿಗೆ ಬೆಂಕಿ
ಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ಪರಿಣಾಮವಾಗಿ ಬಟ್ಟೆ ಅಂಗಡಿಯೊಂದು ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಪೇಟೆಯಲ್ಲಿರುವ ಪ್ರಸಿದ್ಧ ಜಯಶ್ರೀ ಗಾರ್ಮೆಂಟ್ಸ್ ಬಟ್ಟೆ ಅಂಗಡಿಯಲ್ಲಿ ಗುರುವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಅಂಗಡಿಯಲ್ಲಿ ಹಠಾತ್ ಕಾಣಿಸಿಕೊಂಡ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಉಂಟಾಗಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಅಂಗಡಿಗೆ ವ್ಯಾಪಿಸಿದೆ. ಜವಳಿ ಅಂಗಡಿಯಾಗಿದ್ದರಿಂದ ಬೆಂಕಿ ಅತ್ಯಂತ ವೇಗವಾಗಿ ಹರಡಿದ್ದು, ಇಡೀ ಕಟ್ಟಡವನ್ನು ದಟ್ಟವಾದ ಹೊಗೆ …
Read More »ಭೀಕರ ಅಪಘಾತ – ಇಬ್ಬರು ದುರ್ಮರಣ, ಮೂವರು ಗಂಭೀರ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಹೊರವಲಯದಲ್ಲಿರುವ ಮುಡಿಗುಂಡ ಸೇತುವೆ ಬಳಿ ರಾತ್ರಿ ಭೀಕರ ಕಾರು ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಕೊಳ್ಳೇಗಾಲ ನ್ಯಾಯಾಲಯ ಶಿರಸ್ತೆದಾರ ನಂಜುಂಡಪ್ಪ ಹಾಗೂ ಸಿಬ್ಬಂದಿ ಯಮುನಪ್ಪ ಎಂದು ಹೇಳಲಾಗುತ್ತಿದ್ದು, ಕಾರಿನಲ್ಲಿದ್ದ ಕೃಷ್ಣಪ್ಪ, ಲೋಕೇಶ್ ಹಾಗೂ ಶಂಕರಪ್ಪ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾಸ್ಥಳಕ್ಕೆ ಪಟ್ಟಣ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಕೊಳ್ಳೇಗಾಲ ಸರ್ಕಾರಿ …
Read More »ಅಡ್ಡ ಮತದಾನದ ಬಗ್ಗೆ ಮೊದಲೇ ಮಾಹಿತಿ ಇತ್ತು, ಪರೀಕ್ಷಿಸಲೆಂದೇ ಅಭ್ಯರ್ಥಿ ಹಾಕಿದೆ: ಹೆಚ್‌ಡಿಕೆ
ಮೈಸೂರು: ನಿನ್ನೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಪಕ್ಷದ ನಾಲ್ವರು ಅಡ್ಡ ಮತದಾನ ಮಾಡಿದ್ದಾರೆ. ಅವರು ಯಾರು ಅಂತಲೂ ಗೊತ್ತಿದೆ. ಈಗಾಗಲೇ ಅವರು ಪಕ್ಷ ಬಿಡುವ ಚರ್ಚೆಯನ್ನೂ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಹೇಳಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರಿಷತ್ ಚುನಾವಣೆ ಸಂಬಂಧ ಹಲವು ಸ್ಫೋಟಕ ವಿಚಾರಗಳನ್ನ ಹಂಚಿಕೊಂಡರು. ಯಾರು ಅಡ್ಡ ಮತದಾನ ಮಾಡಿದ್ದಾರೆ, ಯಾವ್ಯಾವ ಕಾರಣಕ್ಕೆ ಮಾಡಿದ್ದಾರೆ ಅನ್ನೋದ್ರ ಬಗ್ಗೆ ನನಗೆ ಸಂಪೂರ್ಣ …
Read More »ರಾಮ ಮಂದಿರ ದೇಣಿಗೆ ಕಳ್ಳತನ – ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ರೂ ಕ್ರಮ ನಿಶ್ಚಿತ: ಸಿಎಂ ಯೋಗಿ ಎಚ್ಚರಿಕೆ
ಲಕ್ನೋ: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಅಪರಾಧಿಗಳು ಎಷ್ಟೇ ಪ್ರಭಾವಿಗಳಾಗಿದ್ದರೂ, ಅವರನ್ನು ಯಾವ ಕಾರಣಕ್ಕೂ ಬಿಡುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರು ನೀಡಿರುವ ಕೋಟ್ಯಂತರ ರೂ. ದೇಣಿಗೆ ಹಣ ಕಳ್ಳತನದ ಬಗ್ಗೆ ಮಾತನಾಡಿ, ಪ್ರಭು ಶ್ರೀರಾಮನ ಆದರ್ಶಗಳಾದ ಘನತೆ ಮತ್ತು ತಾಳ್ಮೆಯನ್ನು ಎಲ್ಲರೂ ಪಾಲಿಸಬೇಕು. ಜೊತೆಗೆ ಅಯೋಧ್ಯೆ ಅಥವಾ ರಾಮ ಜನ್ಮಭೂಮಿ ಮಂದಿರದ ಹೆಸರಿಗೆ ಮಸಿ …
Read More »
Laxmi News 24×7