Breaking News
Home / Uncategorized (page 100)

Uncategorized

ದೇವೇಗೌಡರ ಕುಟುಂಬದವರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮಾಜಿ ಸಿಎಂ ಮೊಯ್ಲಿ ಆಕ್ರೋಶ

ಬೆಳಗಾವಿ : ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಕಿಡಿ ಕಾರಿದ್ದು, ದೇವೇಗೌಡರ ಕುಟುಂಬ ಸದಸ್ಯರು ಹಾಸನದಲ್ಲಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ. ರಾಜಕೀಯ ಕೆಡಿಸಿದ್ದಾರೆ, ದೇಶದ ಎದುರು ಕರ್ನಾಟಕ ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದರು. ಭಾರತ ಸರ್ಕಾರದ ಬಳಿಯೇ ನ್ಯಾಷನಲ್ ಕ್ರೈಂ ರೆಕಾರ್ಡ್ ಮಾಹಿತಿ ಇದೆ. ಯುಪಿಎ ಸಮಯದಲ್ಲಿ ಮೂರು ಲಕ್ಷ ಮಹಿಳೆಯರ ಮೇಲೆ …

Read More »

ಪ್ರಧಾನಿ ಮೋದಿ ಎದುರು ಸ್ಪರ್ಧಿಸುವುದಾಗಿ ಘೋಷಿಸಿದ ಖ್ಯಾತ ಕಾಮಿಡಿಯನ್

ವಾರಣಾಸಿ: ದೇಶದಲ್ಲಿ 18ನೇ ಸಾರ್ವತ್ರಿಕ ಚುನಾವಣೆಯ ಭರಾಟೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಚುನಾವಣೆಯ ಕಣ ಮಾತ್ರ ರಂಗೇರುತ್ತಿರುವುದು ಸುಳ್ಳಲ್ಲ. ಇದೀಗ ಕೇಳಿ ಬಂದಿರುವ ಮಾಹಿತಿ ಪ್ರಕಾರ ಪ್ರಧಾನಿ ನರೇಂದ್ರ ಮೋದಿ ಎದುರು ವಾರಣಾಸಿ ಲೋಕಸಭೆ ಕ್ಷೇತ್ರದಲ್ಲಿ ಖ್ಯಾತ ಕಾಮಿಡಿಯನ್​ ಶ್ಯಾಮ್​ ರಂಗೀಲಾ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

Read More »

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದೆ ಡಿಕೆಶಿ ಕೈವಾಡ

ಬೆಂಗಳೂರು: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅನವಶ್ಯಕವಾಗಿ ತಮ್ಮ ಕುಟುಂಬದ ಒಳ ಜಗಳವನ್ನು ಕಾಂಗ್ರೆಸ್‌ ಪಕ್ಷ, ಡಿ.ಕೆ.ಶಿವಕುಮಾರ್ ಅವರ ಮೇಲೆ ಹಾಕುತ್ತಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ಮತ್ತು ಸಂವಹನ ಮುಖ್ಯಸ್ಥ ರಮೇಶ್ ಬಾಬು ಕಿಡಿಕಾರಿದ್ದಾರೆ. ಪ್ರಜ್ವಲ್ ವಿದೇಶದಲ್ಲಿರುವ ಬಗ್ಗೆ ಎಸ್‌ಐಟಿ ಅಧಿಕಾರಿಗಳು ಮಾಹಿತಿ ಕಲೆ‌ ಹಾಕಿದ್ದಾರೆ. ಪ್ರಜ್ವಲ್ ಪತ್ತೆಗಾಗಿ‌ ಲುಕ್ ಔಟ್ ನೋಟಿಸ್ ಜಾರಿ‌ ಮಾಡಿ, ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಅಂತರರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ರವಾನಿಸಿದ್ದಾರೆ. …

Read More »

ಪ್ರಜ್ವಲ್ ರೇವಣ್ಣ ವಿರುದ್ಧ SIT ಲುಕ್‌ಔಟ್ ನೊಟೀಸ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಹೊರಡಿಸಿದ್ದಾರೆ. ಸಂಸದ ಪ್ರಜ್ವಲ್‌ ಹಾಗೂ ಎಚ್‌.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ.ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಿದ್ದು, ಎಸ್‌ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ.   ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ‌ ಪ್ರಕರಣದಲ್ಲಿ …

Read More »

ಮೇ 20ರಂದು ಅಮೇಥಿ ಮತ್ತು ರಾಯ್‌ಬರೇಲಿ ಚುನಾವಣೆ

ಮೇ 20ರಂದು ಅಮೇಥಿ ಮತ್ತು ರಾಯ್‌ಬರೇಲಿ ಚುನಾವಣೆ ನಡೆಯಲಿದೆ. ಲೋಕಸಭಾ ಚುನಾವಣೆಯ 5ನೇ ಹಂತಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾದ ಮೇ 3ರಂದು ಪುಣೆಯಲ್ಲಿ ರ್ಯಾಲಿ ನಡೆಸಲು ರಾಹುಲ್ ಗಾಂಧಿ ಈಗ ಪ್ಲಾನ್ ಮಾಡಿದ್ದಾರೆ . ಈ ನಡುವೆ ಅಮೇಥಿ ಮತ್ತು ರಾಯ್​ಬರೇಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಭುಗಿಲೆದ್ದಿದೆ.

Read More »

ಒಂದು ಹುಕ್ಕಾ ಸೇವನೆ 100 ಸಿಗರೇಟು ಸೇವನೆಗೆ ಸಮ: ರಾಜ್ಯ ಸರ್ಕಾರದ ಹುಕ್ಕಾ ಬಾರ್ ನಿಷೇಧ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಸಾರ್ವಜನಿಕ ಹಿತದೃಷ್ಟಿಯಿಂದ ಎಲ್ಲಾ ಬಗೆಯ ಹುಕ್ಕಾ ದಾಸ್ತಾನು, ಮಾರಾಟ, ಸೇವನೆ ಮತ್ತು ಜಾಹೀರಾತು ನಿಷೇಧಿಸಿ ರಾಜ್ಯ ಸರ್ಕಾರ ರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ಎತ್ತಿಹಿಡಿದಿದೆ.   ಹುಕ್ಕಾ ಬಾರ್‌ ನಿಷೇಧ ಪ್ರಶ್ನಿಸಿ ಬೆಂಗಳೂರಿನ ಆರ್‌. ಭರತ್‌ ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾ.ಎಂ. ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ, ಸೋಮವಾರ ತೀರ್ಪು ಪ್ರಕಟಿಸಿತು.

Read More »

ಬಿಟ್ ಕಾಯಿನ್ ಹಗರಣ: ‘ತಮ್ಮ ವ್ಯಾಲೆಟ್‌ಗಳಿಗೆ ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿಕೊಳ್ಳಲು ಶ್ರೀಕಿಗೆ ಡ್ರಗ್ಸ್ ನೀಡಿದ ಪೊಲೀಸರು’

ಬಿಟ್ ಕಾಯಿನ್ ಹಗರಣ: ‘ತಮ್ಮ ವ್ಯಾಲೆಟ್‌ಗಳಿಗೆ ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿಕೊಳ್ಳಲು ಶ್ರೀಕಿಗೆ ಡ್ರಗ್ಸ್ ನೀಡಿದ ಪೊಲೀಸರು’ ಬೆಂಗಳೂರು: 2020 ರ ಬಿಟ್‌ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಆರೋಪಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ ತಮ್ಮ ವ್ಯಾಲೆಟ್‌ಗಳಿಗೆ ಕ್ರಿಪ್ಟೋ ಕರೆನ್ಸಿಯನ್ನು ವರ್ಗಾಯಿಸಿಕೊಳ್ಳಲು ಅಲ್ಪ್ರಜೋಲಮ್(ಕ್ಸಾನಾಸ್ – ಸೈಕೋಟ್ರೋಪಿಕ್ ವಸ್ತು) ಡ್ರಗ್ಸ್ ಅನ್ನು ನೀಡಿದ್ದಾರೆ.

Read More »

ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರಕಾರ ರಚನೆ ;ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರಕಾರ ರಚನೆ ಆಗಲಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ರಚನೆ ಆದರೆ ಜಗದೀಶ್ ಶೆಟ್ಟರ್ ಅವರಿಗೆ ಮೋದಿ ಅವರು ಉನ್ನತ ಸ್ಥಾನ ನೀಡಲಿದ್ದಾರೆ. ಆಗ ನಾವು ಕೇಂದ್ರದ ಅನೇಕ ಯೋಜನೆಗಳನ್ನು ಹಾಗೂ ಅನೇಕ ಮಹತ್ವದ ಕೆಲಸಗಳನ್ನು ನಮ್ಮ ಕ್ಷೇತ್ರಕ್ಕಾಗಿ ಮಾಡಿಸಬಹುದು. ಹಾಗಾಗಿ ಜಗದೀಶ ಶೆಟ್ಟರ್ ಅವರನ್ನು ಸಂಸತ್ತಿಗೆ ಆಯ್ಕೆ ಮಾಡಿ ಕಳುಹಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿಕೊಂಡರು. ಬುಧವಾರದಂದು …

Read More »

ಜಗದೀಶ್ ಶೆಟ್ಟರ್‌ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ, : ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆದಿದ್ದು, ಇನ್ನುಳಿದ ಕ್ಷೇತ್ರಗಳಿಗೆ ಮೇ 7ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಈ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಅಬ್ಬರದ ಪ್ರಚಾರ ಮಾಡಿದ್ದರು.ಹಾಗೆಯೇ ಇದೀಗ ಚಾಲಚಂದ್ರ ಜಾರಕಿಹೊಳಿ ಅವರು ಜಗದೀಶ್‌ ಶೆಟ್ಟರ್‌ ಅವರ ಮುಂದಿನ ಸ್ಥಾನದ ಬಗ್ಗೆ ಸ್ಫೋಟಕ ಭವಿಷ್ಯವೊಂದನ್ನು ನುಡಿದಿದ್ದಾರೆ.   ಈ ಬಾರಿಯೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬರಲಿದೆ. ಇನ್ನು …

Read More »

ಖಜಾನೆ ಖಾಲಿ ಮಾಡಿದ್ದೇ ಕಾಂಗ್ರೆಸ್ ಸಾಧನೆ: ಎಚ್.ಡಿ.ಕುಮಾರಸ್ವಾಮಿ ಟೀಕೆ

ಕೋಣಂದೂರು: ‘ಅಭಿವೃದ್ಧಿಗಾಗಿ ಯಾವುದೇ ಕಾರ್ಯಕ್ರಮಗಳನ್ನು ರೂಪಿಸದೇ ಗ್ಯಾರಂಟಿಗಳಿಗಾಗಿ ₹52,000 ಕೋಟಿ ಸಾಲ ಮಾಡಿದ್ದೇ ಕಾಂಗ್ರೆಸ್ ಪಕ್ಷದ ಸಾಧನೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಇಲ್ಲಿ ಸೋಮವಾರ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ರಚನೆಯಾಗಿ 11 ತಿಂಗಳು ಕಳೆದರೂ ಅಭಿವೃದ್ಧಿಗಾಗಿ ಒಂದು ಪೈಸೆಯನ್ನೂ ಕೊಡಲಿಲ್ಲ. ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿ ತೋರಿಸುವುದು ಇವರ ಸಾಧನೆ. ದಲಿತರಿಗೆ ಮೀಸಲಿದ್ದ ಹಣವನ್ನು ಗ್ಯಾರಂಟಿಗಳಿಗೆ ವಿನಿಯೋಗಿಸುವ …

Read More »