Breaking News

Uncategorized

80ನೇ ಸ್ವಾತಂತ್ರ್ಯ ದಿನಾಚರಣೆ – ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಬೆಳಕಿನ ಅಲಂಕಾರ

ವಿಜಯಪುರ: 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಜಯಪುರದ ಆಲಮಟ್ಟಿ ಜಲಾಶಯಕ್ಕೆ  ಬೆಳಕಿನ ಅಲಂಕಾರ ಮಾಡಲಾಗಿದೆ. 80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ವಿಜಯಪುರದ ನಿಡಗುಂಡಿ ತಾಲೂಕಿನ ಆಲಮಟ್ಟಿಯ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಕೇಸರಿ, ಬಳಿ ಹಾಗೂ ಹಸಿರು ಬಣ್ಣಗಳ ಬೆಳಕಿನ ಅಲಂಕಾರ ಮಾಡಲಾಗಿದೆ. ಜೊತೆಗೆ ಬೇರೆ ಬೇರೆ ಬಣ್ಣದ ಲೈಟಿಂಗ್‌ನಿಂದಲೂ ಅಲಂಕರಿಸಲಾಗಿದೆ.  ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ ಹರಿದು ಹೋಗುತ್ತಿರುವ ನೀರಿಗೆ ಲೈಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸುಂದರ ದೃಶ್ಯ ಮೈನವಿರೇಳಿಸುವಂತಿದೆ.

Read More »

ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಇಂದಿನ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಮತ್ತಷ್ಟು ಪಾರದರ್ಶಕ, ತಂತ್ರಜ್ಞಾನಾಧಾರಿತ ಹಾಗೂ ತ್ವರಿತಗೊಳಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ನೂತನ ಪರೀಕ್ಷಾ ನಿಯಂತ್ರಕರಾಗಿ ಅಧಿಕಾರ ವಹಿಸಿಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ  ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಅವರನ್ನು ಆಯೋಗದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಮುಂದಿನ ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಕೇಂದ್ರ ಲೋಕಸೇವಾ ಆಯೋಗ ಮಾದರಿಯಲ್ಲಿ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪರೀಕ್ಷಾ ಪದ್ಧತಿಗಳಲ್ಲಿ …

Read More »

ಸ್ವಾತಂತ್ರ್ಯ ದಿನಾಚರಣೆಯನ್ನೇ ಮರೆತ ಅಧಿಕಾರಿಗಳು – ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿರ್ಲಕ್ಷ್ಯ!

ಮಡಿಕೇರಿ: ಒಂದೆಡೆ ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಸಂಭ್ರಮದಿಂದ ಆಚರಿಸಲಾಗುತ್ತಿದ್ದರೆ, ಕೊಡಗು ಜಿಲ್ಲೆಯ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ  ಕೇಂದ್ರ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯೇ ನಡೆಯದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. 3ನೇ ಶನಿವಾರದ ನೆಪದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಚೇರಿಗೆ ಗೈರಾಗಿದ್ದು, ಮಧ್ಯಾಹ್ನವಾದರೂ ರಾಷ್ಟ್ರಧ್ವಜ ಹಾರಿಸದಿರುವುದು ಹಲವು ಪ್ರಶ್ನೆಗಳನ್ನ ಹುಟ್ಟುಹಾಕಿದೆ. ಮಡಿಕೇರಿ ಜಿಲ್ಲಾ ಕ್ರೀಡಾಂಗಣದ ಸಮೀಪದಲ್ಲಿರುವ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿಯಲ್ಲಿ …

Read More »

ಮಹಿಳಾ ಮೀಸಲಾತಿ ಜಾರಿಗೆ ಪಕ್ಷಭೇದ ಮರೆತು ಬೆಂಬಲಿಸಿ: ಮೋದಿ

ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸುವ ‘ನಾರಿ ಶಕ್ತಿ ವಂದನ್ ಅಧಿನಿಯಮ’ವನ್ನು ಜಾರಿಗೊಳಿಸಲು ಎಲ್ಲ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಬೆಂಬಲ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ  ಮನವಿ ಮಾಡಿದ್ದಾರೆ. ದೇಶದ 80ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಆವರಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, ಮಹಿಳೆಯರಿಗೆ ರಾಜಕೀಯದಲ್ಲಿ ಹೆಚ್ಚಿನ ಪ್ರಾತಿನಿಧ್ಯ ದೊರೆಯಬೇಕಾದ ಅಗತ್ಯವನ್ನು ಒತ್ತಿ ಹೇಳಿದರು. ಪಂಚಾಯಿತಿಗಳು, ನಗರಸಭೆಗಳು ಹಾಗೂ ಮಹಾನಗರ ಪಾಲಿಕೆಗಳಲ್ಲಿ ಮಹಿಳಾ ಜನಪ್ರತಿನಿಧಿಗಳು …

Read More »

ಝೆನ್‌-ಜಿ, ಆಲ್ಫಾ ಅಂತ ಕರೆಯಬೇಡಿ.. ‘ಮಗ-ಮಗಳು’ ಎಂದು ಕರೆಯಿರಿ: ಅಸ್ಸಾಂ ಸಿಎಂ

ಗುವಾಹಟಿ: ಝೆನ್‌-ಜಿ , ಆಲ್ಫಾ ಅನ್ನೋದೆಲ್ಲಾ ಯುರೋಪಿಯನ್‌ ಪರಿಕಲ್ಪನೆಯನ್ನು ಲೇಬಲ್‌ ಮಾಡುತ್ತದೆ. ಅವರನ್ನು ‘ಮಗ-ಮಗಳು’ ಅಂತ ಕರೆಯಬೇಕು ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ  ತಿಳಿಸಿದ್ದಾರೆ. ಅಸ್ಸಾಂ ಯುವಜನತೆ ಮತ್ತು ಅಭಿವೃದ್ಧಿಗೆ ತನ್ನದೇ ಆದ ವಿಧಾನವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಗುವಾಹಟಿಯಲ್ಲಿ 80ನೇ ಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜಾರೋಹಣ ಮಾಡಿದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶರ್ಮಾ, ‘ನಾನು ಝೆನ್‌-ಜಿ ಅಥವಾ ಜನರಲ್ ಆಲ್ಫಾ ಪರಿಕಲ್ಪನೆಯನ್ನು ನಂಬುವುದಿಲ್ಲ. ಅದು ಪಾಶ್ಚಿಮಾತ್ಯ …

Read More »

ಸ್ವಾತಂತ್ರ್ಯ ದಿನಾಚರಣೆ ವೇಳೆ ಶಾಲೆಯ ಕಾಂಕ್ರೀಟ್‌ ಛಾವಣಿ ಕುಸಿತ – ಓರ್ವ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

ಲಕ್ನೋ: ಉತ್ತರ ಪ್ರದೇಶದ ಸಂಭಾಲ್‌ನಲ್ಲಿರುವ  ಅಲ್-ಹಸ್ನೈನ್ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕಾಂಕ್ರೀಟ್ ಛಾವಣಿ ಕುಸಿದು ಒಂದು ಮಗು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಧ್ವಜಾರೋಹಣ ಸಮಾರಂಭದ ನಂತರ ಮಕ್ಕಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೆಲವು ಮಕ್ಕಳು ಶಾಲೆಯ ಮುಖ್ಯ ದ್ವಾರದ ಮೇಲಿದ್ದ ಛಾವಣಿ ಹತ್ತಿದಾಗ, ತೂಕ ಹೆಚ್ಚಾಗಿ ರಚನೆ ಕುಸಿದು ಬಿದ್ದು ಅವಘಡ ಸಂಭವಿಸಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಎಸ್‌ಡಿಎಂ, ವೃತ್ತ ಅಧಿಕಾರಿ (ಸಿಒ) ಮತ್ತು …

Read More »

ಡೇವಿಡ್ ಡಿಸೋಜಾ ಹತ್ಯೆ ಕೇಸ್; ಮತ್ತಿಬ್ಬರು ಪ್ರಮುಖ ಆರೋಪಿಗಳ ಬಂಧನ

ಉಡುಪಿ: ಕಾಪು ತಾಲೂಕಿನ ಮುದರಂಗಡಿಯಲ್ಲಿ ಉದ್ಯಮಿ ಡೇವಿಡ್ ಡಿಸೋಜಾ  ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ನೀಡಿ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆ.7ರಂದು ಮಧ್ಯಾಹ್ನ 3:45ರ ಸುಮಾರಿಗೆ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್‌ನಲ್ಲಿ ಪ್ರಿನ್ಸ್ ಎಂಟರ್ಪ್ರೈಸರ್ಸ್‌ ಮಾಲೀಕ ಡೇವಿಡ್ ಡಿಸೋಜಾ ಅವರನ್ನು ಬೈಕ್‌ನಲ್ಲಿ ಬಂದ ಆರೋಪಿಗಳು ಪಿಸ್ತೂಲಿನಿಂದ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದರು. ಈ ಬಗ್ಗೆ ಶಿರ್ವ …

Read More »

ಆಷಾಢ ಮುಗಿದರೂ ತವರಿನಿಂದ ಬಾರದ ಪತ್ನಿ – ಮನನೊಂದು ನೇಣಿಗೆ ಶರಣಾದ ಪತಿ

ತುಮಕೂರು: ಆಷಾಢಕ್ಕೆ ತವರು ಮನೆಗೆ ಹೋದ ಪತ್ನಿ  ವಾಪಸ್ ಬರದೇ ಇದ್ದಿದ್ದಕ್ಕೆ ಮನನೊಂದು ಪತಿ ನೇಣಿಗೆ ಶರಣಾದ ಘಟನೆ ಕುಣಿಗಲ್ ಪಟ್ಟಣದ ಮಹಾವೀರ ನಗರದಲ್ಲಿ ನಡೆದಿದೆ. ಅವಿನಾಶ್ (28) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಳೆದ 6 ತಿಂಗಳ ಹಿಂದಷ್ಟೇ ಹಾಸನದ ಅರಸೀಕೆರೆ ಮೂಲದ ಯುವತಿಯನ್ನು ಅವಿನಾಶ್‌ ಪ್ರೀತಿಸಿ ಮದುವೆಯಾಗಿದ್ದ. ಆಷಾಢಕ್ಕೆ ಪತ್ನಿ ತವರಿಗೆ ತೆರಳಿದ್ದಳು. ಕರೆ ಮಾಡಿ ಬರುವಂತೆ ಅವಿನಾಶ್‌ ತಿಳಿಸಿದ್ದ. ಆದರೆ ನಾನು ಬರಲ್ಲ ಎಂದು ಪತ್ನಿ ಹೇಳಿದ್ದಳು. …

Read More »

ಆಸ್ಟ್ರೇಲಿಯಾ ಶಿಖರದ ತುತ್ತತುದಿಯಲ್ಲಿ ಭಾರತದ ತ್ರಿವರ್ಣ ಧ್ವಜ ಹಾರಿಸಿದ ಕೊಡಗಿನ ಮಹಿಳೆ

ಮಡಿಕೇರಿ: ಸ್ವಾತಂತ್ರ್ಯ  ದಿನದಂದು ಆಸ್ಟ್ರೇಲಿಯಾದ ಅತಿ ಎತ್ತರದ ಮೌಂಟ್ ಕೊಸ್ಸಿಯಸ್ಕೊ ಶಿಖರದ ತುತ್ತತುದಿಯಲ್ಲಿ ಭಾರತದ ತ್ರಿವರ್ಣ ಧ್ವಜ ಹೆಮ್ಮೆಯಿಂದ ಹಾರಾಡಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದವರು ಕೊಡಗಿನ ದಿಟ್ಟ ಮಹಿಳೆ ಜಮ್ಮಡ ಪ್ರೀತ್ ಅಪ್ಪಯ್ಯ. ಹಿಮ, ಕೊರೆವ ಚಳಿ ಮತ್ತು ಪ್ರಬಲ ಗಾಳಿಯ ನಡುವೆಯೂ ಶಿಖರ ತಲುಪಿ, ಕೊಡವ ಸಾಂಪ್ರದಾಯಿಕ ಉಡುಪಿನಲ್ಲೇ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶಪ್ರೇಮದ ಜೊತೆಗೆ ಕೊಡಗಿನ ಅಸ್ಮಿತೆಯನ್ನೂ ವಿಶ್ವದ ಮುಂದೆ ಅನಾವರಣಗೊಳಿಸಿದ್ದಾರೆ. ಆಗಸ್ಟ್ 10ರಿಂದ 19ರವರೆಗೆ …

Read More »

ಸ್ವಾತಂತ್ರ್ಯೋತ್ಸವ ಸಂಭ್ರಮ – ಹೆಲಿಕಾಪ್ಟರ್‌ನಲ್ಲಿ ಹಾರಾಡಿದ ಕಡೇನಂದಿಹಳ್ಳಿ ಸರ್ಕಾರಿ ಶಾಲೆ ಮಕ್ಕಳು

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ  ತಾಲೂಕಿನ ಕಡೇನಂದಿಹಳ್ಳಿ  ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳು  80ನೇ ಸ್ವಾತಂತ್ರ್ಯ ದಿನಾಚರಣೆಯನ್ನ  ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಸ್ವಾತಂತ್ರ್ಯೋತ್ಸವದ ವಿಶೇಷ ದಿನದಂದು ಶಾಲೆಯ 12 ಪ್ರತಿಭಾವಂತ ವಿದ್ಯಾರ್ಥಿಗಳು ಹೆಲಿಕಾಪ್ಟರ್‌ನಲ್ಲಿ ಹಾರಾಡಿ ಸಂಭ್ರಮಿಸಿದ್ದಾರೆ. ಕಡೇನಂದಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಮತ್ತು ಕ್ರೀಡೆಯಲ್ಲಿ ಪ್ರತಿಭಾನ್ವಿತರಾದ ಮಕ್ಕಳನ್ನು ಹೆಲಿಕಾಪ್ಟರ್‌ ಪ್ರಯಾಣಕ್ಕೆ ಆಯ್ಕೆ ಮಾಡಿಕೊಳ್ಳಲಾಗಿತ್ತು. ಆದರಂತೆ ಜಾನ್ಹವಿ, ಧ್ರುವ, ಹೇಮಂತ್, ಜೀವಿತಾ, ಚಂದನ್, ನಂದನ್, ವಿದ್ಯಾಶ್ರೀ, ಪೃಥ್ವಿಕ್, ರಚಿತಾ, ವಿಜಯ್, ಅನುಶ್ರೀ …

Read More »