ಶಿವಮೊಗ್ಗ: ಮೊದಲು ಪೊಲೀಸರು ಅಂದ್ರೆ ಜನರಿಗೆ ಭಯ ಇರುತಿತ್ತು. ಆದರೆ ಇತ್ತೀಚೆಗೆ ಜನರಿಗೆ ಪೊಲೀಸರ ಕಂಡರೆ ಭಯವೇ ಇಲ್ಲದಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಕಳವಳ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಇಂದಿನಿಂದ ಅನಿರ್ದಿಷ್ಟಾವಧಿಯವರೆಗೆ ಹಾಫ್ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಇಂದು ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಸಿಪಿಐ ಹಾಗೂ ಸಿಪಿಐ ಮೇಲ್ಪಟ್ಟ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಚಿವರು ಕೊರೊನಾ …
Read More »ಬೆಂಗಳೂರಿನಲ್ಲಿ ಮತ್ತೆರಡು ಕೋವಿಡ್ ಕೇರ್ ಸೆಂಟರ್ ತೆರೆಯಲು ಮುಂದಾದ ಸರ್ಕಾರ
ಬೆಂಗಳೂರು,ಜು.16- ಕೊರೋನಾ ಮಟ್ಟಹಾಕಲು ಕಠಿಣ ಕ್ರಮಗಳನ್ನು ತೆಗೆದುಕೊಂಡು ದಿಟ್ಟ ಹೋರಾಟ ಮಾಡುತ್ತಿರುವ ರಾಜ್ಯ ಸರ್ಕಾರ ಇದೀಗ ನಗರದಲ್ಲಿ ಮತ್ತೆರಡು ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಕೋವಿಡ್-19 ನಿರ್ವಹಣೆಯ ಉಸ್ತುವಾರಿ ವಹಿಸಿಕೊಂಡಿರುವ ಅಧಿಕಾರಿಗಳು ನಿನ್ನೆಯಷ್ಟೇ ಉನ್ನತ ಮಟ್ಟದ ಸಭೆಯೊಂದನ್ನು ನಡೆಸಿದ್ದು, ಸಭೆಯಲ್ಲಿ ಬೆಂಗಳೂರು ನಗರದಲ್ಲಿ 2 ಕೋವಿಡ್ ಕೇರ್ ಕೇಂದ್ರಗಳನ್ನು ತೆರೆಯಲು ನಿರ್ಧಾರ ಕೈಗೊಂಡಿದ್ದಾರೆಂದು ತಿಳಿದುಬಂದಿದೆ. ಈಗಾಗಲೇ ನಗರದಲ್ಲಿ 8 ಕೋವಿಡ್ ಕೇರ್ ಕೇಂದ್ರಗಳು ಅಸ್ತಿತ್ವದಲ್ಲಿದ್ದು, …
Read More »ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ರೈತ ಸಮುದಾಯ ನಾಶ ಮಾಡುವ ಹುನ್ನಾರ ಇದರಲ್ಲಿದೆ
ಬೆಂಗಳೂರು: ಕೊರೊನಾ ಪರಿಸ್ಥಿತಿಯ ಲಾಭ ಪಡೆದು ಕಳ್ಳದಾರಿಯಲ್ಲಿ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸಿದೆ. ಇದು ಅತ್ಯಂತ ಕರಾಳ ಶಾಸನವಾಗಿದ್ದು, ಬಿಜೆಪಿಯ ಹಿಡನ್ ಅಜೆಂಡಾ ವಿರುದ್ಧ ಕಾಂಗ್ರೆಸ್ ಉಗ್ರ ಹೋರಾಟ ಮಾಡಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ತಮ್ಮ ನಿವಾಸದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದು ಸಾಮಾನ್ಯ ರೈತರಿಗೆ ವಿರೋಧಿಯಾದ ಕಾಯಿದೆ ಆಗಿದೆ. ಕೊರೊನಾ ಪರಿಸ್ಥಿತಿ …
Read More »ಹೈದರಾಬಾದ್‍ನಲ್ಲಿ ಶೂಟಿಂಗ್ ಆರಂಭಿಸಿದ ‘ಫ್ಯಾಂಟಮ್’ ಚಿತ್ರತಂಡ- ಸೆಟ್‍ನಲ್ಲಿ ಕನ್ನಡಿಗರಿಗೆ ಅವಕಾಶ
ಬೆಂಗಳೂರು: ಕೊರೊನಾ ಕಾರಣದಿಂದ ಸ್ಥಗಿತದೊಂಡಿದ್ದ ಸಿನಿರಂಗದ ಚಿತ್ರೀಕರಣಕ್ಕೆ ಸದ್ಯ ಮರುಚಾಲನೆ ಲಭಿಸುತ್ತಿದೆ. ಕಿಚ್ಚ ಸುದೀಪ್ ಮತ್ತು ಅನೂಪ್ ಭಂಡಾರಿ ಕಾಂಬಿನೇಷನ್‍ನಲ್ಲಿ ಮೂಡಿಬರುತ್ತಿರುವ ‘ಫ್ಯಾಂಟಮ್’ ಸಿನಿಮಾದ ಚಿತ್ರೀಕರಣ ಹೈದರಾಬಾದ್‍ನಲ್ಲಿ ಆರಂಭವಾಗಿದೆ. ಹೈದರಾಬಾದ್‍ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಚಿತ್ರತಂಡ ಗಣಪನಿಗೆ ಪೂಜೆ ಸಲ್ಲಿಸುವ ಮೂಲಕ ಚಿತ್ರೀಕರಣದ ಕೆಲಸಕ್ಕೆ ಚಾಲನೆ ನೀಡಿದೆ. ಕೊರೊನಾ ಲಾಕ್‍ಡೌನ್ ಮುನ್ನವೇ ಚಿತ್ರತಂಡ ಹೈದರಾಬಾದ್‍ನಲ್ಲಿ ಚಿತ್ರೀಕರಣ ಆರಂಭಿಸಿತ್ತು. ಎಲ್ಲ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿರಬೇಕಿತ್ತು. ಆದರೆ ಕೊರೊನಾ …
Read More »ಎಸ್‍ಎಸ್‍ಎಲ್‍ಸಿಯಲ್ಲಿ 97.8% ,12ನೇ ತರಗತಿಯಲ್ಲಿ 95.2% – ಅಂಗವೈಫಲ್ಯವನ್ನು ಮೆಟ್ಟಿನಿಂತ ಅನುಷ್ಕಾ ಪಂಡಾ
ಗುರುಗ್ರಾಮ್: ಎಸ್‍ಎಸ್‍ಎಲ್‍ಸಿಯಲ್ಲಿ 97.8%, 12ನೇ ತರಗತಿಯಲ್ಲಿ 95.2% ಅಂಕ ಗಳಿಸುವ ಮೂಲಕ ಗುರುಗ್ರಾಮ್‍ನ ದಿವ್ಯಾಂಗಿ ಬಾಲಕಿ ಅನುಷ್ಕಾ ಪಂಡಾ ತನ್ನ ಅಂಗವೈಫಲ್ಯವನ್ನು ಮೆಟ್ಟಿನಿಂತಿದ್ದಾಳೆ. ಅನುಷ್ಕಾಗೆ ಬೆನ್ನುಮೂಳೆ ಸ್ನಾಯುವಿನ ಸಮಸ್ಯೆಯಿದ್ದು, ಆಕೆ ವೀಲ್‍ಚೇರ್ ಇಲ್ಲದೇ ನಿಲ್ಲಲು ಮತ್ತು ಕೂರಲು ಆಗುವುದಿಲ್ಲ. ಆದರೆ ಇದನ್ನು ಲೆಕ್ಕಿಸದ ಅನುಷ್ಕಾ ವೀಲ್‍ಚೇರ್ ಮೇಲೆ ಕುಳಿತೇ ದಿನಕ್ಕೆ ಎರಡು ಗಂಟೆ ಓದಿ ಸಿಬಿಎಸ್‍ಇ 12 ನೇ ತರಗತಿ ಪರೀಕ್ಷೆಯಲ್ಲಿ 95.2% ಅಂಕ ಪಡೆದಿದ್ದಾಳೆ. ಅಂಗವೈಫಲ್ಯ ಇರುವ ಮಕ್ಕಳ …
Read More »ಕೊರೊನಾಗೆ ಔಷಧಿ ಕಂಡು ಹಿಡಿಯಲು ಜಾಗತಿಕ ಮಟ್ಟದಲ್ಲಿ ಭಾರಿ ಪೈಪೋಟಿ..!
ಬೆಂಗಳೂರು, ಜು.15- ವಿಶ್ವವನ್ನೇ ಕಂಗೆಡಿಸಿರುವ ಮಹಾಮಾರಿ ಕೊರೊನಾಗೆ ಔಷಧಿ ಕಂಡು ಹಿಡಿದು ಈಗಾಗಲೇ ಪ್ರಯೋಗಾತ್ಮಕ ಪರೀಕ್ಷೆ ನಡೆಯುತ್ತಿದ್ದು, ಅದನ್ನು ಬಿಡುಗಡೆ ಮಾಡಲು ಜಾಗತಿಕ ಪೈಪೋಟಿ ಆರಂಭವಾಗಿದೆ. ಅಮೆರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಇಂದು ಹೇಳಿಕೆ ನೀಡಿದ್ದು, ದಾಖಲಾರ್ಹ ಸಮಯದಲ್ಲಿ ಅಮೆರಿಕಾ ಕೊರೊನಾಗೆ ಔಷಧಿಯನ್ನು ಬಿಡುಗಡೆ ಮಾಡಲಿದೆ ಎಂದು ಘೋಷಿಸಿದ್ದಾರೆ. ರಷ್ಯಾ ಈಗಾಗಲೇ ತಾನು ಔಷಧಿ ಕಂಡು ಹಿಡಿದಿದ್ದು, ಮಾನವ ಪ್ರಯೋಗ ಮಾಡಿ ಯಶಸ್ವಿಯಾಗಿರುವುದಾಗಿ ಹೇಳಿಕೊಂಡಿತ್ತು. ಆಗಸ್ಟ್ ಮಧ್ಯ ಭಾಗದಲ್ಲಿ …
Read More »ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗೋಕಾಕ ನಗರದ ಕೀರ್ತಿ ತಂದಿದ್ದಾನೆ.
ಗೋಕಾಕ: ಮದುವೆ, ಸಭೆ ಸಮಾರಂಭಗಳಲ್ಲಿ ಅಡುಗೆ ಮಾಡುತ್ತ ಜೀವನೋಪಾಯ ಸಾಗಿಸುತ್ತಿದ್ದ ಅಡುಗೆ ಭಟ್ಟನ ಮಗ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 98. 16 ಅಂಕಪಡೆದು ಉತ್ತಮ ಸಾಧನೆ ಮಾಡಿ ಗೋಕಾಕ ನಗರದ ಕೀರ್ತಿ ತಂದಿದ್ದಾನೆ. ಮೂಡಬಿದರಿಯ ಆಳ್ವಾಸ ಕಾಲೇಜಿನಲ್ಲಿ ಓದುತ್ತಿದ್ದ ಗೋಕಾಕದ ಅನಿಲ ರಾಜು ಬನ್ನಿಶೆಟ್ಟಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಗಣಿತ, ಬಯೋಲಾಜಿ, ಹಿಂದಿ ವಿಷಯಗಳಲ್ಲಿ ನೂರಕ್ಕೆ ನೂರು ಅಂಕ ಪಡೆಯುವ ಮೂಲಕ 600 ಅಂಕಗಳ ಪೈಕಿ …
Read More »ವಾರದ ಹಿಂದೆ ಗಾಂಜಾ ಕೇಸಲ್ಲಿ ಅಂದರ್ ಆಗಿದ್ದ ಖೈದಿಗೂ ಕೊರೊನಾ ಪಾಸಿಟಿವ್
ಚಿಕ್ಕಮಗಳೂರು: ವಾರದ ಹಿಂದೆ ಗಾಂಜಾ ಕೇಸಲ್ಲಿ ಅಂದರ್ ಆಗಿದ್ದ ಖೈದಿಗೂ ಕೊರೊನಾ ಪಾಸಿಟಿವ್ ಬಂದು ಜೈಲಿನಿಂದ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಆಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮದಲ್ಲಿ ಮಾರುತಿ 800 ಕಾರಿನಲ್ಲಿ 50 ಕೆ.ಜಿ. ಗಾಂಜಾವನ್ನ ಸಾಗಿಸುತ್ತಿದ್ದ ನಾಲ್ವರನ್ನ ಪೊಲೀಸರು ಬಂಧಿಸಿದ್ದರು. ಬಂಧಿತ ನಾಲ್ವರನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹಕ್ಕೆ ರವಾನಿಸಲಾಗಿತ್ತು. ಆ ನಾಲ್ವರಲ್ಲಿ ಓರ್ವನಿಗೆ ಕೊರೊನಾ ಸೋಂಕು ದೃಢವಾಗಿದ್ದು, ಸೋಂಕಿತ ಖೈದಿಯನ್ನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. …
Read More »ಬಡ ಕುಟುಂಬಗಳಿಗೆ ಸಾಲ ವಸೂಲಿ ನೆಪದಲ್ಲಿ ಸಾಕಷ್ಟು ತೊಂದರೆ ನೀಡುತ್ತಿರುವ ಖಾಸಗಿ ಬ್ಯಾಂಕ್,
ಅಥಣಿ: ಲಾಕ್ ಡೌನ್ ನಿಂದ ಕೆಲಸವಿಲ್ಲದೇ ಜನರು ಸಂಕಷ್ಟದಲ್ಲಿದ್ದು, ಇಂತಹ ಕಠಿಣ ಪರಿಸ್ಥಿತಿಯಲ್ಲಿ ರೈತರಿಗೆ, ಹಾಗೂ ಬಡ ಕುಟುಂಬಗಳಿಗೆ ಸಾಲ ವಸೂಲಿ ನೆಪದಲ್ಲಿ ಸಾಕಷ್ಟು ತೊಂದರೆ ನೀಡುತ್ತಿರುವ ಖಾಸಗಿ ಬ್ಯಾಂಕ್, ಫೈನಾನ್ಸ್, ಹಾಗೂ ಸ್ವಸಹಾಯ ಸಂಘಗ ಸಿಬ್ಬಂದಿಗಳ ಮೇಲೆ ಕ್ರಮಕೈಗೊಳ್ಳುವಂತೆ ಜಯಕರ್ನಾಟಕ ಸಂಘಟನೆ ಪದಾಧಿಕಾರಿಗಳು ಆಗ್ರಹಿಸಿದರು. ಪಟ್ಟಣದ ಮಿನಿ ವಿಧಾನಸೌಧದ ಬಳಿಕ ಸೇರಿದ ಪದಾಧಿಕಾರಿಗಳು ಪೈನಾನ್ಸ್ ಗಳ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಮೂಲಕ …
Read More »ಲಾಕ್‍ಡೌನ್ ಟೈಮಲ್ಲಿ ಎಣ್ಣೆ ವಿಚಾರಕ್ಕೆ ಬಿತ್ತು ಸ್ನೇಹಿತನ ಹೆಣ..!
ಬೆಂಗಳೂರು,ಜು.15-ಲಾಕ್‍ಡೌನ್ ಸಂದರ್ಭದಲ್ಲಿ ಮದ್ಯ ತರುವ ವಿಚಾರದಲ್ಲಿ ಸ್ನೇಹಿತರ ನಡುವೆ ಜಗಳ ನಡೆದು ಒಬ್ಬನ ಕೊಲೆಯಾಗಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸ್ನೇಹಿತರಿಂದಲೇ ಕೊಲೆಯಾದವನನ್ನು ಪಂತರಪಾಳ್ಯ ಅಂಬೇಡ್ಕರ್ ಸ್ಲಂ ನಿವಾಸಿ ಶಶಿ(22) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ 8 ಗಂಟೆಗೆ ಲಾಕ್‍ಡೌನ್ ಜಾರಿಯಾದ ಸಂದರ್ಭದಲ್ಲಿ ಶಶಿ ಮತ್ತು ಸ್ನೇಹಿತರಾದ ವಿನೋದ್ ಹಾಗೂ ವೇಲು ಅವರುಗಳು ಮದ್ಯ ತರುವ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದರು.ಗಲಾಟೆ ಸಂದರ್ಭದಲ್ಲಿ ಶಶಿ, ವಿನೋದ್ ಮೇಲೆ ಹಲ್ಲೆ …
Read More »
Laxmi News 24×7