ಚಿಕ್ಕೋಡಿ: ಜಾತ್ರೆಯಲ್ಲಿ ವಿಷಾಹಾರ ಸೇವಿಸಿ 44 ಮಂದಿ ಅಸ್ವಸ್ಥವಾಗಿರುವ ಘಟನೆ ಕೇರೂರ ಗ್ರಾಮದಲ್ಲಿ ನಡೆದಿದೆ. ಕೇರೂರ ಗ್ರಾಮದ ಬೇಕ್ಕೆರಿ ತೋಟದಲ್ಲಿ ಇರುವ ಶ್ರೀ ಬಾಳು ಮಾಮಾ ದೇವಸ್ಥಾನದಲ್ಲಿ ಬುಧವಾರ ಜಾತ್ರೆಯನ್ನು ಆಯೋಜಿಸಲಾಗಿತ್ತು. ಮಧ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.ಮಧ್ಯಾಹ್ನ ಅನೇಕ ಭಕ್ತರು ಮಹಾಪ್ರಸಾದ ಸೇವಿಸಿದ್ದರು. ಮಧ್ಯಾಹ್ನ ಉಳಿದಿದ್ದ ಅನ್ನವನ್ನೇ ರಾತ್ರಿ ಸೇವಿಸಿದ್ದ ಭಕ್ತರು ವಾಂತಿ,ಭೇದಿಯಿಂದ ಬಳಲುತ್ತಿದ್ದರು. ಮುಂಜಾನೆಯಿಂದ ಅಸ್ವಸ್ಥವಾಗಿರುವುದರಿಂದ ಚಿಕ್ಕೊಡಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ 31 ಜನ,ಕೇರೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 5 ಜನ,ಯಕ್ಸಂಬಾ …
Read More »ಪ್ರಜ್ವಲ್ ರೇವಣ್ಣನ ಮುಟ್ಟೋದು ಅಷ್ಟು ಸುಲಭವಲ್ಲ! ಕೊನೆ ಕ್ಷಣದಲ್ಲಿ ಏನು ಬೇಕಾದ್ರೂ ಆಗಬಹುದಾ?
ಬೆಂಗಳೂರು: ಪೆನ್ ಡ್ರೈವ್ಗೆ ಸಂಬಂಧಿಸಿದಂತೆ ಸಾಲು ಸಾಲು ಆರೋಪಗಳನ್ನು ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ ರೇವಣ್ಣ ಇಂದು ಮಧ್ಯರಾತ್ರಿ ಬೆಂಗಳೂರಿಗೆ ಬರೋದು ಪಕ್ಕಾ ಆಗಿದೆ. ಜರ್ಮನಿಯಿಂದ ಪ್ರಜ್ವಲ್ನ ಹೊತ್ತ ವಿಮಾನ ಬೆಂಗಳೂರಿನತ್ತ ಧಾವಿಸುತ್ತಿದೆ. ಪ್ರಜ್ವಲ್ ಬಂದ ಕೂಡಲೇ ಬಂಧನಕ್ಕೆ ಎಸ್ ಐಟಿ ಸಜ್ಜಾಗಿದೆ. ಈಗಾಗಲೇ ಕೋರ್ಟ್ ನಿಂದ ಅರೆಸ್ಟ್ ವಾರೆಂಟ್ ಪಡೆಯಲಾಗಿದೆ. ಏರ್ಪೋರ್ಟ್ನಲ್ಲೇ ಅಧಿಕಾರಿಗಳು ಬೀಡುಬಿಟ್ಟಿದ್ದಾರೆ. ಸ್ಥಳೀಯ ಪೊಲೀಸರ ಸಹಾಕಾರದೊಂದಿಗೆ ವಶಕ್ಕೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ. ಕೆಂಪೇಗೌಡ ಏರ್ ಪೋರ್ಟ್ …
Read More »ಹಾವು ಕಚ್ಚಿ ರೈತ ಮಹಿಳೆ ಮೃತ್ಯು
ಭರಮಸಾಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಮಹಿಳೆಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಸಮೀಪದ ಓಬಳಾಪುರ ಗ್ರಾಮದ ವಿಜಯಲಕ್ಷ್ಮೀ (55) ಮೃತ ಮಹಿಳೆ. ಬುಧವಾರ ತಮ್ಮದೇ ಹೊಲದಲ್ಲಿ ಪಾರ್ಥೇನಿಯಂ ಗಿಡ ಕೀಳುವ ವೇಳೆ ಬಲಗೈಗೆ ಹಾವು ಕಚ್ಚಿದೆ. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆ ಗೆ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾರೆ. ಮೃತರು ಪತಿ, …
Read More »ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಕಳವು
ಕುಶಾಲನಗರ: ತಾಲೂಕಿನ ಮಾದಾಪಟ್ಟಣ ಗ್ರಾಮದ ನಿವಾಸಿ ಪೊಲೀಸ್ ಕಾನ್ಸ್ಟೆಬಲ್ ಸುನಿಲ್ ಕುಮಾರ್ ಎಂಬುವರ ಮನೆ ಹಿಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಅಲ್ಮೇರಾ ಒಡೆದು ₹15 ಸಾವಿರ ನಗದು ಹಾಗೂ 40 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾರೆ. ಇದೇ ಮನೆಯ ಹಿಂಭಾಗದಲ್ಲಿರುವ ಮನೆಯಲ್ಲಿಯೂ ಕಳವಿಗೆ ಪ್ರಯತ್ನಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾ ವಿಧಿವಿಜ್ಞಾನ, ಹಾಗೂ ಶ್ವಾನದಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಆದರೆ ಕಳ್ಳರ ಸುಳಿವು ಮಾತ್ರ …
Read More »ಪೆನ್ಡ್ರೈವ್ ಹಂಚಿಕೆ ಪ್ರಕರಣ: ಆರೋಪಿಗಳಾದ ಚೇತನ್, ಲಿಖಿತ್ಗೆ ಜಾಮೀನು
ಹಾಸನ: ಅಶ್ಲೀಲ ವಿಡಿಯೊಗಳಿದ್ದ ಪೆನ್ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್ಗೌಡಗೆ ಗುರುವಾರ ಮೂರನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪೆನ್ಡ್ರೈವ್ ಹಂಚಿಕೆ ಪ್ರಕರಣದ ಆರನೇ ಮತ್ತು ಏಳನೇ ಆರೋಪಿಯಾಗಿರುವ ಯಲಗುಂದ ಚೇತನ್ ಹಾಗೂ ಲಿಖಿತ್ಗೌಡ ಅವರನ್ನು ಎಸ್ಐಟಿ ಅಧಿಕಾರಿಗಳು ಮೇ 12 ರಂದು ಬಂಧಿಸಿದ್ದರು. ಬಂಧನದ ಹದಿನೆಂಟು ದಿನಗಳ ಬಳಿಕ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಸದ್ಯ ಹಾಸನದ ಸಂತೇಪೇಟೆಯ ಜಿಲ್ಲಾ ಕಾರಾಗೃಹದಲ್ಲಿರುವ ಚೇತನ್ …
Read More »ಲೋಕಸಭಾ ಚುನಾವಣೆ ಮತಏಣಿಕೆ: ರಾಜ್ಯಾಧ್ಯಂತ ಜೂ.04 ರಿಂದ 05 ರಂದು 144 ಸೆಕ್ಷನ್ ಅಡಿ ‘ನಿಷೇದಾಜ್ಞೆ’ ಜಾರಿ
ಬೆಂಗಳೂರು: ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಜೂನ್.04 ರ ಬೆಳಗ್ಗೆ 6 ರಿಂದ ಜೂನ್.05 ರ ಬೆಳಗ್ಗೆ 6.00 ಗಂಟೆಯವರೆಗೆ 144 ಸೆಕ್ಷನ್ ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, …
Read More »ಮಹಿಳೆಯರಿಂದ ಭರ್ಜರಿ ‘ಶಕ್ತಿ’ ಪ್ರದರ್ಶನ: GST ಸಂಗ್ರಹ ಹೆಚ್ಚಳ
ಬೆಂಗಳೂರು: ಶಕ್ತಿ ಯೋಜನೆಯಿಂದ ಜಿಎಸ್ಟಿ ಸಂಗ್ರಹ ಮತ್ತು ಮಹಿಳೆಯರ ಪಾಲುದಾರಿಕೆ ಶೇ 25.1ನಿಂದ 30.2ಗೆ ಹೆಚ್ಚಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಕ್ತಿ ಉಚಿತ ಯೋಜನೆ ಎಂದು ಮೂಗು ಮುರಿಯುವವರ ಗಮನಕ್ಕೆ! ಶಕ್ತಿ ಯೋಜನೆಯಿಂದ ಜಿಎಸ್ಟಿ ಸಂಗ್ರಹ ಹೆಚ್ಚಿದ್ದು, ಔದ್ಯೋಗಿಕ ಕ್ಷೇತ್ರದಲ್ಲಿ ಶೇ 25.1ನಿಂದ 30.2ರಷ್ಟು ಮಹಿಳೆಯ ಪಾಲುದಾರಿಕೆ ಹೊಂದಿದೆ. https://x.com/RLR_BTM/status/1795828541709492559?ref_src=twsrc%5Etfw%7Ctwcamp%5Etweetembed%7Ctwterm%5E1795828541709492559%7Ctwgr%5Efd4d0d2428a12bdbfbe853e306ea05eb814d8f7b%7Ctwcon%5Es1_&ref_url=https%3A%2F%2Ftv9kannada.com%2Fkarnataka%2Fshakti-yojana-adds-to-karnatakas-gst-as-more-women-join-work-force-ramalingareddy-ggs-840902.html ಇದು ಬಿಟ್ಟಿ ಭಾಗ್ಯವಲ್ಲ ಸಮಾಜದಲ್ಲಿ ಸರ್ಕಾರ ಹೂಡಿರುವ …
Read More »ಬಾವಿಗೆ ಬಿದ್ದು ಮೇಲೆ ಬರಲಾಗದೆ ಜೀವ ಭಯದಿಂದ ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ
ಯರಗಟ್ಟಿ : ಬಾವಿಗೆ ಬಿದ್ದು ಮೇಲೆ ಬರಲಾಗದೆ ಜೀವ ಭಯದಿಂದ ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯನ್ನು ರೈತರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಿಸಿರುವ ಘಟನೆ ಯರಗಟ್ಟಿ ಪಟ್ಟಣದ ಸತ್ತಿಗೇರಿ ಗ್ರಾಮದಲ್ಲಿ ನಡೆದಿದೆ. ಆಹಾರ ಅರಸುತ್ತಾ ಸಂಚಾರದಲ್ಲಿದ್ದ ನವಿಲು ಶನಿವಾರ ರಾತ್ರಿಯ ವೇಳೆಗೆ ಸಮೀಪದ ಸತ್ತಿಗೇರಿ ಗ್ರಾಮದ ಭೀಮಪ್ಪ ಮಿಲ್ಲಾನಟ್ಟಿ ಎಂಬವರ ಜಮೀನಿನ ಬಾವಿಗೆ ಬಿದ್ದಿತ್ತು. ಸೋಮವಾರ ಬೆಳಗ್ಗೆ 5 ಕ್ಕೆ ಬಾವಿಯಿಂದ ನೀರು ಎತ್ತಲು ಮನೆಯವರು ಬಂದಾಗ ಒದ್ದಾಡುತ್ತಿದ್ದ ನವಿಲನ್ನು ಗಮನಿಸಿ …
Read More »ಯೋಧ ನಿಧನ ; ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ
ಖಾನಾಪುರ : ತಾಲೂಕಿನ ಕಕ್ಕೇರಿ ಗ್ರಾಮದ ಯೋಧ ಮಂಜುನಾಥ ಅಂಬಡಗಟ್ಟಿ ( 35 ) ಮಂಗಳವಾರ ನಿಧನರಾಗಿದ್ದು, ಇಂದು ಅವರ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ತರಲಾಗಿದೆ. ಭಾರತೀಯ ಸೇನೆಯ ಇಂಜಿನಿಯರ್ ರೆಜಿಮೆಂಟ್ ನಲ್ಲಿ ಕಳೆದ 16 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಕಳೆದ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ದೆಹಲಿಯ ಮಿಲಿಟರಿ ಬಿ.ಎಸ್ ದಾಖಲಾಗಿದ್ದ ಇವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ನಿಧನ ಹೊಂದಿದ್ದಾರೆ. ಮೃತರ ಪಾರ್ಥಿವ …
Read More »ಭ್ರಷ್ಟಾಚಾರ ಆರೋಪ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ..?
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಇಂದು ಸಂಜೆ ಸಿಎಂ ತಮ್ಮ ಗೃಹ ಕಚೇರಿಗೆ ಸಚಿವ ನಾಗೇಂದ್ರ ಅವರ ಭೇಟಿಗೆ ಕರೆದುರುವುದು ಬೆಳಕಿಗೆ ಬಂದಿದೆ. ಈ ಕುರಿತು ಸಚಿವ ನಾಗೇಂದ್ರ ಅವರಿಗೆ ಸಿಎಂ ಸಿದ್ದರಾಮಯ್ಯ ಬುಲಾವ್ ನೀಡಿದ್ದು, ಇಂದು ಅಥವಾ ನಾಳೆ ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ. ಇನ್ನೂ ಭ್ರಷ್ಟಾಚಾರ ಕುರಿತು ಈಗಾಗಲೇ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ. ವಾಲ್ಮೀಕಿ …
Read More »