Breaking News

Uncategorized

ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂದು ವದಂತಿ

ಬೆಂಗಳೂರು: ಸ್ಯಾಂಡಲ್ ವುಡ್ ನಟರ ಸಾವಿನ ವದಂತಿ ಹಬ್ಬುವುದು ಇದೇ ಮೊದಲಲ್ಲ. ಇದೀಗ ನಟ ಪ್ರಜ್ವಲ್ ದೇವರಾಜ್ ಅವರ ಬಗ್ಗೆ ಇಂತಹದ್ದೊಂದು ವದಂತಿ ಹರಿಯಬಿಡಲಾಗಿದ್ದು, ಕುಟುಂಬಸ್ಥರು ಬೇಸರಗೊಂಡಿದ್ದಾರೆ. ಸ್ಯಾಂಡಲ್ ವುಡ್ ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂದು ಯಾರೋ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹಬ್ಬಿಸಿದ್ದರು. ಇದರಿಂದ ಅಭಿಮಾನಿಗಳು ಆತಂಕಕ್ಕೀಡಾದರು. ಕೆಲವೇ ಕ್ಷಣಗಳಲ್ಲಿ ಈ ಸುದ್ದಿ ವೈರಲ್ ಆಗುತ್ತಿದ್ದಂತೇ ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಆರೋಗ್ಯವಾಗಿರುವ ನಟನ ಬಗ್ಗೆ ಇಂತಹದ್ದೊಂದು ಸುದ್ದಿ, ಫೋಟೋ …

Read More »

ಮಹಾರಾಷ್ಟ್ರದ ಅಣೆಕಟ್ಟಿನಲ್ಲಿ ಬಿರುಕು, ಕರ್ನಾಟಕದ ಗಡಿಭಾಗದಲ್ಲಿ ಹೆಚ್ಚಿದ ಆತಂಕ

ಮುಂಬೈ: ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕಾಳಮ್ಮವಾಡಿಯಲ್ಲಿರುವ ದೂಧಗಂಗಾ ನದಿಗೆ ಅಡ್ಡಲಾಗಿರುವ ಕಾಳಮ್ಮವಾಡಿ ಜಲಾಶಯದಲ್ಲಿ (Kalammawadi Dam) ಬಿರುಕು ಬಿಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ. ಒಟ್ಟು 28 ಟಿಎಂಸಿ ಸಾಮರ್ಥ್ಯದ ಕಾಳಮ್ಮವಾಡಿ ಜಲಾಶಯದಲ್ಲಿ ಬಿರುಕು ಕಂಡುಬಂದಿದ್ದು ನಿರಂತರವಾಗಿ ನೀರು ಸೋರಿಕೆಯಾಗುತ್ತಿದೆ. ಇದು ಕರ್ನಾಟಕದ ಗಡಿಭಾಗದಲ್ಲಿ ಆತಂಕಕ್ಕೆ ಕಾರಣವಾಗಿದೆ. ಮಳೆಗಾಲದಲ್ಲಿ ಡ್ಯಾಂ ಭರ್ತಿಯಾದಲ್ಲಿ ಕುಸಿಯುವ ಆತಂಕ ಚಿಕ್ಕೋಡಿ ನಿಪ್ಪಾಣಿ ತಾಲೂಕಿನ ದೂಧಗಂಗಾ ನದಿಪಾತ್ರದ ನಿವಾಸಿಗಳಿಗೆ ಎದುರಾಗಿದೆ. ಅಣೆಕಟ್ಟಿನಲ್ಲಿ ಬಿರುಕು ಕಾಣಿಸಿಕೊಂಡರೂ ಮಹಾರಾಷ್ಟ್ರ ಸರ್ಕಾರದ ನಿರ್ಲಕ್ಷ್ಯ …

Read More »

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಖರೀದಿಗೆ 121 ಕೋಟಿ ರೂ. ಬಿಡುಗಡೆ

ಬೆಂಗಳೂರು, ಮೇ 30- ಶಿಕ್ಷಣ ಇಲಾಖೆ ವತಿಯಿಂದ ನಡೆಸಲ್ಪಡುತ್ತಿರುವ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಒಂದನಿಂದ ಹತ್ತನೇ ತರಗತಿವರೆಗೆ 2024-25 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲು, ಶೂ ಮತ್ತು ಸಾಕ್ಸ್ ಖರೀದಿಸಲು 121 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಅರ್ಹ ವಿದ್ಯಾರ್ಥಿಗಳ ಶೂ ಮತ್ತು ಸಾಕ್ಸ್ ಖರೀದಿ ಪ್ರಕ್ರಿಯೆಗಳನ್ನು ಕೈಗೊಳ್ಳಲು ಸೂಚಿಸಿದ್ದಾರೆ. ರಾಜ್ಯದಲ್ಲಿ ಸುಮಾರು …

Read More »

ಬಿಜೆಪಿ ಗೆಲುವಿನ ಅಂತರ ಕುಸಿತ ? 6 ನೇ ಹಂತದ ಚುನಾವಣೆ ಬಳಿಕ ತನ್ನ ಭವಿಷ್ಯವಾಣಿಯನ್ನೇ ಬದಲಿಸಿದ ‘ಸಟ್ಟಾ ಬಜಾರ್’

ಲೋಕಸಭೆ ಚುನಾವಣೆಯ ಕೊನೆಯ ಹಂತ ಬಾಕಿಯಿರುವಾಗಲೇ ರಾಜಸ್ಥಾನದ ಬೆಟ್ಟಿಂಗ್ ಮಾರ್ಕೆಟ್ ಫಲೋಡಿ ಸಟ್ಟಾ ಬಜಾರ್, ಆರನೇ ಹಂತದ ಚುನಾವಣೆಯ ನಂತರ ಯಾರಿಗೆ ಎಷ್ಟು ಸ್ಥಾನ ಎನ್ನುವ ವಿಚಾರದಲ್ಲಿ ಮತ್ತೊಂದು ಭವಿಷ್ಯ ಹೇಳಿದೆ. ಬಿಜೆಪಿ ಮೈತ್ರಿಕೂಟ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದಿರುವ ಬಜಾರ್, ಬಿಜೆಪಿ ನಿರೀಕ್ಷಿಸಿದಷ್ಟು ಸ್ಥಾನ ಪಡೆಯುವುದು ಕಷ್ಟವೆಂದಿದೆ. ಕೆಲವು ದಿನಗಳ ಹಿಂದೆ ತಾನು ಭವಿಷ್ಯ ನುಡಿದಿದ್ದಕ್ಕಿಂತ ಇದೀಗ 10 ಸ್ಥಾನಗಳು ಕಡಿಮೆಯಾಗುತ್ತವೆ ಎಂದು ಆರನೇ ಚುನಾವಣೆ ಬಳಿಕ …

Read More »

ವಾಸಿಗರ ಕಣ್ಮನ ಸೆಳೆಯುತ್ತಿದೆ ರಾಯಣ್ಣನ ಸಂಗೊಳ್ಳಿ

ಎಂ.ಆರ್‌.ಬಡೇಘರಉದಯವಾಣಿ ಸಮಾಚಾರ ಬೈಲಹೊಂಗಲ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಹುಟ್ಟೂರಿನಲ್ಲಿ 10 ಎಕರೆ ಭೂಪ್ರದೇಶದಲ್ಲಿ ನಿರ್ಮಿಸಿರುವ ಸಂಗೊಳ್ಳಿ ರಾಯಣ್ಣನ ಜೀವನ ಚರಿತ್ರೆ ಸಾರುವ ರಾಕ್‌ ಗಾರ್ಡನ್‌ ಹಾಗೂ ರಾಷ್ಟ್ರಮಟ್ಟದ ಸೈನಿಕ ಶಾಲೆ ಕಣ್ಮನ ಸೆಳೆಯುತ್ತಿದೆ. ರಾಕ್‌ ಗಾರ್ಡನ್‌ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕುಟುಂಬ ಸಮೇತ ಕುಳಿತು ಊಟ ಮಾಡಲು, ವಿಶ್ರಾಂತಿ ಪಡೆಯಲು ಅಲ್ಲಲ್ಲಿ ವ್ಯವಸ್ಥೆ ಮಾಡಲಾಗಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ. ಒಟ್ಟು 20 ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಒಂದು ಕ್ಯಾಂಟೀನ್‌ ವ್ಯವಸ್ಥೆ …

Read More »

ಅಕ್ರಮ ಭ್ರೂಣಹತ್ಯೆ ಪ್ರಕರಣ: ಮೂವರ ಬಂಧನ, ಏಳು ಜನರ ವಿರುದ್ಧ ಪ್ರಕರಣ ದಾಖಲು

ಅಕ್ರಮ ಭ್ರೂಣಹತ್ಯೆ ಪ್ರಕರಣ: ಮೂವರ ಬಂಧನ, ಏಳು ಜನರ ವಿರುದ್ಧ ಪ್ರಕರಣ ದಾಖಲು   ಮಹಾಲಿಂಗಪುರ: ಮನೆಯಲ್ಲಿಯೇ ಅಕ್ರಮವಾಗಿ ಭ್ರೂಣಹತ್ಯೆ ಮಾಡುತ್ತಿದ್ದ ಮಹಾಲಿಂಗಪುರದ ಮಹಿಳೆ ಹಾಗೂ ಭ್ರೂಣಹತ್ಯೆ ಪ್ರಕರಣದಲ್ಲಿ ಭಾಗಿಯಾದ ಮಹಾರಾಷ್ಟ್ರದ ಇಬ್ಬರು ಸೇರಿದಂತೆ ಮೂವರನ್ನು ಬುಧವಾರ ಮಹಾಲಿಂಗಪುರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಹಾಲಿಂಗಪುರ ಪಟ್ಟಣದ ಜಯಲಕ್ಷ್ಮೀ ನಗರದ ಕವಿತಾ ಬಾಡನವರ, ಮಹಾರಾಷ್ಟçದ ಸಾಂಗಲಿ ಜಿಲ್ಲೆಯ ದೂದ್‌ಗಾಂವದ ವಿಜಯ ಸಂಜಯ ಗೌಳಿ ಕುಪ್ಪವಾಡದ ಡಾ.ಮಾರುತಿ ಬಾಬಸೋ ಖರಾತ ಬಂತ …

Read More »

ರಸಗೊಬ್ಬರ ಪೂರೈಸಲು ರೈತರ ಒತ್ತಾಯ

ರಾಣೆಬೆನ್ನೂರು: ‘ಹದವಾದ ಮಳೆಯಾಗಿದ್ದು, ರೈತರು ಬಿತ್ತನೆ ಮಾಡುವುದಕ್ಕೆ ಸಕಾಲವಾಗಿದೆ. ಆದರೆ ರಸಗೊಬ್ಬರ ಸಿಗುತ್ತಿಲ್ಲ. ಕೂಡಲೇ ಹೊಸ ಗೊಬ್ಬರ ಪೂರೈಕೆ ಮಾಡಬೇಕು’ ಎಂದು ರೈತ ಜಗದೀಶ್ ಕೆರೋಡಿ ಒತ್ತಾಯಿಸಿದರು. ಸಮೀಪದ ಹುಲ್ಲತ್ತಿ ಗ್ರಾಮದ ರೈತ ಸಂಪರ್ಕ ಕೇಂದ್ರದ ಮುಂದೆ ಶನಿವಾರ ರಸಗೊಬ್ಬರ ಪೂರೈಸುವಂತೆ ಪ್ರತಿಭಟನೆ ನಡೆಸಿ, ರೈತರಿಗೆ ಡಿಎಪಿ ಮತ್ತು ಯುರಿಯಾ ಪೂರೈಕೆ ಆಗದೆ ರೈತರು ಗೊಬ್ಬರಕ್ಕಾಗಿ ಪರದಾಡುವಂತಾಗಿದೆ ಎಂದು ಅವರು ದೂರಿದರು. ಹಾವೇರಿ ಜಿಲ್ಲೆಯಾದ್ಯಂತ ಸುರಿದ ಮಳೆಯಿಂದಾಗಿ ರೈತರ ಕೃಷಿ …

Read More »

ವಿದ್ಯಾರ್ಥಿಗಳಿಗೆ ಗ್ರಾಮೀಣ ಜೀವನದ ಅರಿವು ಅವಶ್ಯ: ಕೂಡಲಶ್ರೀ

ಶಿಗ್ಗಾವಿ: ‘ಗ್ರಾಮೀಣ ಜೀವನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಅವಶ್ಯವಾಗಿದೆ. ಅದರಿಂದ ಭವಿಷ್ಯದ ಭದ್ರತೆ ಕಾಣಲು ಸಾಧ್ಯವಿದೆ. ಹೀಗಾಗಿ ಶಾಲಾ, ಕಾಲೇಜುಗಳ ಹಂತದಲ್ಲಿ ಈ ಯೋಜನೆ ಜಾರಿಗೆ ತರಲಾಗಿದೆ’ ಎಂದು ಕೂಡಲದ ಗುರುಮಹೇಶ್ವರ ಸ್ವಾಮೀಜಿ ಹೇಳಿದರು.   ತಾಲ್ಲೂಕಿನ ಬಂಕಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ದತ್ತು ಗ್ರಾಮ ಚಂದಾಪುರ ಗ್ರಾಮದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ‘ವಿದ್ಯಾರ್ಥಿಗಳಿಗೆ …

Read More »

ಹಾನಗಲ್: ಬಿತ್ತನೆ ಬೀಜದ ಪ್ಯಾಕೇಟ್‌ಗೂ ಬಂತು ಕ್ಯೂಆರ್‌ ಕೋಡ್‌

ಹಾನಗಲ್: ಬಿತ್ತನೆ ಬೀಜಗಳ ನಕಲಿ ಹಾವಳಿ ತಡೆಯುವ ನಿಟ್ಟಿನಲ್ಲಿ ಮುಂಗಾರು ಪೂರ್ವದಿಂದಲೇ ಕೃಷಿ ಇಲಾಖೆ ಬಿತ್ತನೆ ಬೀಜಗಳ ಪ್ಯಾಕೇಟ್‌ ಮೇಲೆ ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಕಡ್ಡಾಯಗೊಳಿಸಿದೆ. ರೈತರಿಗೆ ಪ್ರಮಾಣೀಕೃತ ಬೀಜಗಳ ವಿತರಣೆ ಮತ್ತು ಅಕ್ರಮ ದಾಸ್ತಾನು ತಡೆಗಟ್ಟುವ ಉದ್ದೇಶ ಹೊಂದಲಾಗಿದೆ.   ಕೃಷಿ ಇಲಾಖೆ ಬಿತ್ತನೆ ಬೀಜಗಳನ್ನು ಸಂಗ್ರಹಿಸಿಕೊಂಡು ತಾಲ್ಲೂಕಿನ 9 ಕೇಂದ್ರಗಳ ಮೂಲಕ ವಿತರಣೆ ಆರಂಭಿಸಿದೆ. ಸಹಾಯಧನದ ವಿತರಣಾ ಕೇಂದ್ರಗಳಿಗೆ ರೈತರು ಆಗಮಿಸಿ ಬೀಜ ಖರೀದಿಯಲ್ಲಿ ತೊಡಗಿದ್ದಾರೆ. ಬೀಜ ವಿತರಣೆ …

Read More »

ಶ್ಯಾಡಗುಪ್ಪಿ ಗ್ರಾಮದಲ್ಲಿ ಜ್ವರ ಉಲ್ಬಣ: 8 ಡೆಂಗಿ ಪ್ರಕರಣ ದಾಖಲು

ಹಾನಗಲ್: ತಾಲ್ಲೂಕಿನ ಶ್ಯಾಡಗುಪ್ಪಿ ಗ್ರಾಮದಲ್ಲಿ ಜ್ವರಬಾಧೆ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆ ವರದಿ ಪ್ರಕಾರ ಈ ಗ್ರಾಮದಲ್ಲಿ 8 ಡೆಂಗಿ ಪ್ರಕರಣಗಳು ದಾಖಲಾಗಿವೆ. ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಒಂದು ತಿಂಗಳ ಅವಧಿಯಲ್ಲಿ 54 ಜ್ವರದ ಪ್ರಕರಣಗಳು ದಾಖಲಾಗಿವೆ. ಗ್ರಾಮಸ್ಥರು ಜ್ವರದ ಭೀತಿಗೆ ತಲ್ಲಣಗೊಂಡಿದ್ದಾರೆ. ಜ್ವರದ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಸಮೀಪದ ಅಕ್ಕಿಆಲೂರಿಗೆ ತೆರಳಿ ರಕ್ತ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಪ್ಲೆಟ್‌ಲೆಟ್‌ ಕಡಿಮೆಯಾದ ವರದಿ ಕೈಸೇರುತ್ತಲೇ ಉಳ್ಳವರು ದುಬಾರಿ ವೆಚ್ಚದ ಖಾಸಗಿ …

Read More »