ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಹಾದು ಹೋಗಿರುವ ಕರ್ನಾಟಕ ಮತ್ತು ಆಂಧ್ರಪ್ರದೇಶ ಮಧ್ಯದ ಅಂತರರಾಜ್ಯ ಗಡಿಯಲ್ಲಿನ ಏಳು ಗಣಿ ಗುತ್ತಿಗೆಗಳ ಜಂಟಿ ಸಮೀಕ್ಷೆ ಕಾರ್ಯ ಬುಧವಾರ ಆರಂಭವಾಯಿತು. ಮೊದಲ ದಿನದ ಸಮೀಕ್ಷೆ ಸಂಡೂರಿನ ತುಮಟಿ, ವಿಠಲಾಪುರ ಮತ್ತು ಆಂಧ್ರ ಪ್ರದೇಶದ ಮಲಪನಗುಡಿಯಲ್ಲಿ ಬರುವ ಮೆಹಬೂಬ್ ಟ್ರಾನ್ಸ್‌ಪೋರ್ಟ್ ಕಂಪನಿಯ (ಎಂಬಿಟಿ) ಗಣಿಯಿಂದ ಆರಂಭವಾಯಿತು. ಇದಕ್ಕೆ ಹೊಂದಿಕೊಂಡಂತಿರುವ ಹಿಂದ್ ಟ್ರೇಡರ್ಸ್ (ಎಚ್‌ಟಿ) ಮತ್ತು ಟಿ. ನಾರಾಯಣ ರೆಡ್ಡಿ (ಟಿಎನ್‌ಆರ್) ಗಣಿ ಗುತ್ತಿಗೆದಾರರ ಪರ ಪ್ರತಿನಿಧಿಗಳು ಮತ್ತು …
Read More »ತಳಿರು ತೋರಣಗಳಿಂದ ವಿದ್ಯಾರ್ಥಿಗಳ ಸ್ವಾಗತಕ್ಕೆ ಸಿದ್ಧತೆ
ಹರಿಹರ: ಮೇ 31ರಿಂದ 1ರಿಂದ 10ನೇ ತರಗತಿಯ ಶಾಲೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನಾದ್ಯಂತ ಎಲ್ಲಾ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸೂಚಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಹನುಮಂತಪ್ಪ ತಿಳಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ 53 ಸರ್ಕಾರಿ ಕಿರಿಯ, 81 ಸರ್ಕಾರಿ ಹಿರಿಯ ಪ್ರಾಥಮಿಕ, 19 ಸರ್ಕಾರಿ ಪ್ರೌಢಶಾಲೆಗಳು, ತಲಾ 25 ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, 20 ಅನುದಾನ ರಹಿತ ಕಿರಿಯ ಪ್ರಾಥಮಿಕ, 42 …
Read More »ಬಾಲಕನಿಂದ ವ್ಹೀಲಿಂಗ್; ವಾಹನ ಜಪ್ತಿ
ಬೆಂಗಳೂರು: ಕೆ.ಜಿ.ಹಳ್ಳಿ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡುವವರನ್ನು ಪತ್ತೆ ಹಚ್ಚಲು ಕೈಗೊಂಡ ವಿಶೇಷ ಕಾರ್ಯಾಚರಣೆಯಲ್ಲಿ ಓರ್ವ ಬಾಲಕನನ್ನು ಪತ್ತೆಮಾಡಿದ್ದು, ವಾಹನವನ್ನು ಜಪ್ತಿಮಾಡಲಾಗಿದೆ. ಬುಧವಾರ ಠಾಣಾ ಸಿಬ್ಬಂದಿ ಗಸ್ತಿನಲ್ಲಿರುವಾಗ ಹೆಚ್.ಬಿ.ಆರ್. ಲೇಔಟ್ ಮುಖ್ಯರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಬಾಲಕನ ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ‘ವಿಚಾರಣೆಯಲ್ಲಿ ಸವಾರ ಅಪ್ರಾಪ್ತ ವಯಸ್ಕನೆಂದು ತಿಳಿದು ಬಂದಿದ್ದು, ಸಂಚಾರ ಪೊಲೀಸರು ಸವಾರನ ಪೋಷಕರು/ ವಾಹನ ಮಾಲೀಕರ ವಿರುಧ್ಧ ಪ್ರಥಮ ವರ್ತಮಾನ ವರದಿ (ಎಫ್.ಐ.ಆರ್) …
Read More »ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ಶಕ್ತಿ ಯೋಜನೆಯಿಂದ ಜಿಎಸ್‌ಟಿಗೆ ಕೊಡುಗೆ
ಬೆಂಗಳೂರು, ಮೇ 29: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯು ಕರ್ನಾಟಕದ ಜಿಎಸ್‌ಟಿ ಸಂಗ್ರಹಕ್ಕೆ ಕೊಡುಗೆ ನೀಡುತ್ತಿದೆ ಮತ್ತು ಕಾರ್ಮಿಕ ಬಲದಲ್ಲಿ ಮಹಿಳಾ ಭಾಗವಹಿಸುವಿಕೆಯನ್ನು ಹೆಚ್ಚಿಸುತ್ತಿದೆ ಎಂದು ರಾಜ್ಯ ಹಣಕಾಸು ನೀತಿ ಸಂಸ್ಥೆ (ಎಫ್‌ಪಿಐ) ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ. ಕಳೆದ ವರ್ಷ, ಶಕ್ತಿ ಯೋಜನೆಯನ್ನು ಪ್ರಾರಂಭಿಸಿದಾಗಿನಿಂದ ಈ ವರ್ಷದ ಮಾರ್ಚ್‌ವರೆಗೆ, ಕರ್ನಾಟಕದ ಜಿಎಸ್‌ಟಿ ಸಂಗ್ರಹವು ಸಂಭಾವ್ಯವಾಗಿ 309.64 ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ. ಏಕೆಂದರೆ ಮಹಿಳೆಯರು ಉಳಿಸುವ ಹಣವನ್ನು …
Read More »ಅಕ್ರಮವಾಗಿ ಸಾಗಿಸುತ್ತಿದ್ದ ‘ಸ್ಪಿರಿಟ್’ ವಾಹನದ ಮೇಲೆ ‘CCB’ ದಾಳಿ : 2 ಲಕ್ಷ ಮೌಲ್ಯದ ಸ್ಪಿರಿಟ್ ಜಪ್ತಿ
ಧಾರವಾಡ : ಧಾರವಾಡದ ಬಳಿ ಅಕ್ರಮವಾಗಿ ಸ್ಪಿರಿಟ್ ಅನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ದಾಳಿಯ ವೇಳೆ ಅಂದಾಜು 2 ಲಕ್ಷ ಮೌಲ್ಯದ 350 ಲೀಟರ್ ಸ್ಪಿರಿಟ್ ಅನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಟವೇರಾ ವಾಹನದಲ್ಲಿ ಧಾರವಾದದಿಂದ ಹುಬ್ಬಳ್ಳಿಗೆ ಸಾಗಿಸುತ್ತಿದ್ದಾಗ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಸಿಬಿ ಪೊಲೀಸರ ದಾಳಿಯ ವೇಳೆ ವಾಹನದಲ್ಲಿ ಇದ್ದಂತಹ ಇಬ್ಬರು ಪರಾರಿಯಾಗಿದ್ದಾರೆ. ಜಪ್ತಿ ಮಾಡಿದಂತ ಸ್ಪಿರಿಟ್ ಅನ್ನು …
Read More »ಕರ್ನಾಟಕ ರಾಜ್ಯ ಹಣಕಾಸು ಹಣಕಾಸು ಸಂಸ್ಥೆ ಮೇಲೆ ಲೋಕಾ ದಾಳಿ :ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಡೆಪ್ಯೂಟಿ ಮ್ಯಾನೇಜರ್
ಧಾರವಾಡ : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯ ವೇಳೆ 8 ಸಾವಿರ ಲಂಚ ಪಡೆಯುವಾಗ ಡೆಪ್ಯೂಟಿ ಮ್ಯಾನೇಜರ್ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಅಗಿ ಬಲೆಗೆ ಬಿದ್ದಿದ್ದಾನೆ. ಹೌದು ಧಾರವಾಡ ನಗರದ ರಾಯಪುರ ಬಡಾವಣೆಯಲ್ಲಿರುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಕಚೇರಿಯ ಮೇಲೆ 8 ಸಾವಿರ ಲಂಚ ಪಡೆಯುವಾಗ ಬೆಳಗ್ಗೆ ಬಿದ್ದ ಅಧಿಕಾರಿ ಡೆಪ್ಯೂಟಿ ಮ್ಯಾನೇಜರ್ ರಮೇಶ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ . …
Read More »ಸಾಣಿಕೊಪ್ಪದಲ್ಲಿ ಹೆಜ್ಜೆ-ಹೆಜ್ಜೆಗೂ ಸಮಸ್ಯೆ
ಬೈಲಹೊಂಗಲ: ರಸ್ತೆಬದಿ ಬಿದ್ದಿರುವ ಕಸದ ರಾಶಿ. ತ್ಯಾಜ್ಯ ಪದಾರ್ಥಗಳಿಂದ ತುಂಬಿ ತುಳುಕುವ ಚರಂಡಿಗಳು. ರಸ್ತೆಯಲ್ಲೇ ಹರಿಯುವ ಕೊಳಚೆ ನೀರು. ಹಿರೇಬಾಗೇವಾಡಿ-ಸವದತ್ತಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ತಾಲ್ಲೂಕಿನ ಸಾಣಿಕೊಪ್ಪದಲ್ಲಿ ಒಂದು ಸುತ್ತು ಹಾಕಿಬಂದರೆ, ಇಂಥ ದೃಶ್ಯ ಕಣ್ಣಿಗೆ ಬೀಳುತ್ತವೆ. ಚಿವಟಗುಂಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಟ್ಟಿರುವ ಈ ಗ್ರಾಮದಲ್ಲಿ 400 ಮನೆಗಳಿವೆ. 2,200 ಜನಸಂಖ್ಯೆ ಇದೆ. ರಾಜ್ಯ ಹೆದ್ದಾರಿ ಹಾಯ್ದು ಹೋಗಿದ್ದರೂ, ಈ ಊರು ಅಭಿವೃದ್ಧಿಗೆ ತನ್ನನ್ನು ತೆರೆದುಕೊಂಡಿಲ್ಲ. ಕನಿಷ್ಠ ಮೂಲಸೌಲಭ್ಯಕ್ಕಾಗಿ ಗ್ರಾಮಸ್ಥರ …
Read More »ದುಃಸ್ಥಿತಿಯಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ
ಚಿಕ್ಕೋಡಿ: ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕು ವ್ಯಾಪ್ತಿಯಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಬಾಲಕ ಹಾಗೂ ಬಾಲಕಿಯರ 16 ವಸತಿ ನಿಲಯಗಳು ಇದ್ದು, ಇವುಗಳ ಪೈಕಿ ಚಿಕ್ಕೋಡಿ ಪಟ್ಟಣದ ಬಾಲಕಿಯರ ವಸತಿ ನಿಲಯ ಶಿಥಿಲಗೊಂಡಿದ್ದು, ಈಗಲೋ ಆಗಲೋ ಬೀಳುವ ಸ್ಥಿತಿಯಲ್ಲಿದೆ. ಶಾಲಾ ತರಗತಿಗಳು ಪ್ರಾರಂಭವಾಗುತ್ತಿದ್ದರೂ ಪರ್ಯಾಯ ವ್ಯವಸ್ಥೆ ಮಾಡದೇ ಅಧಿಕಾರಿಗಳು ಕೈ ಕಟ್ಟಿ ಕುಳಿತಿದ್ದಾರೆ. ಮೆಟ್ರಿಕ್ ಪೂರ್ವ 13 ಹಾಗೂ ಮೆಟ್ರಿಕ್ ನಂತರದ 3 ವಸತಿ ನಿಲಯಗಳಲ್ಲಿ 2024-25ನೇ ಸಾಲಿನಲ್ಲಿ ವ್ಯಾಸಾಂಗ …
Read More »ಕುಸಿದ ಅಂತರ್ಜಲ ಮಟ್ಟ: ಬರಿದಾಗಿವೆ ಬೆಳವಿ, ಯಾದಗೂಡ ಕೆರೆ
ಹುಕ್ಕೇರಿ: ಭೀಕರ ಬರದ ಹಿನ್ನೆಲೆಯಲ್ಲಿ ತಾಲ್ಲೂಕಿನ ಯಾದಗೂಡ ಮತ್ತು ಬೆಳವಿ ಗ್ರಾಮದಲ್ಲಿನ ಕೆರೆಗಳ ಒಡಲು ಬರಿದಾಗಿದೆ. ಪ್ರತಿವರ್ಷ ಉತ್ತಮ ಮಳೆಯಾಗಿ, ಬೇಸಿಗೆಯಲ್ಲೂ ಕೆರೆಗಳಲ್ಲಿ ಒಂದಿಷ್ಟು ನೀರು ಸಂಗ್ರಹವಿರುತ್ತಿತ್ತು. ಆದರೆ, ಕಳೆದ ವರ್ಷ ಮಳೆಯಾಗದ ಹಿನ್ನೆಲೆಯಲ್ಲಿ ಈ ಬಾರಿ ನೀರಿಲ್ಲದೆ ಭಣಗುಡುತ್ತಿವೆ. ಇದರಿಂದಾಗಿ ಪಕ್ಕದ ಜಮೀನುಗಳಲ್ಲಿ ಕೊರೆಯಿಸಿರುವ ತೆರೆದಬಾವಿ ಮತ್ತು ಕೊಳವೆಬಾವಿಗಳಲ್ಲೂ ಅಂತರ್ಜಲ ಮಟ್ಟ ಕುಸಿದಿದೆ. ಕೆರೆಯನ್ನೇ ನಂಬಿಕೊಂಡು ಕೃಷಿ ಮಾಡುತ್ತಿದ್ದವರಿಗೆ ತೊಂದರೆಯಾಗಿದೆ. ಇಂದು ಅಥವಾ ನಾಳೆ ದೊಡ್ಡ ಮಳೆ ಸುರಿಯಬಹುದು. ಕೆರೆ …
Read More »ಪ್ರಜ್ವಲ್ ರೇವಣ್ಣ’ ವಾಪಸ್ ಬಂದ್ರೆ ಏರ್ ಪೋರ್ಟ್ ನಲ್ಲೇ ಅರೆಸ್ಟ್ ಮಾಡ್ತೀವಿ-ಗೃಹ ಸಚಿವ
ಬೆಂಗಳೂರು : ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ವಾಪಸ್ ದೇಶಕ್ಕೆ ಬಂದ್ರೆ ಏರ್ ಪೋರ್ಟ್ ನಲ್ಲೇ ಅರೆಸ್ಟ್ ಮಾಡ್ತೀವಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಪ್ರಜ್ವಲ್ ರೇವಣ್ಣ ಈಗಾಗಲೇ ಪ್ರಜ್ವಲ್ ರೇವಣ್ಣ ಬಂಧಿಸಲು ವಾರೆಂಟ್ ಜಾರಿ ಮಾಡಲಾಗಿದೆ. ಆದ್ದರಿಂದ ಅವರು ಭಾರತಕ್ಕೆ ಬರುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ಹೇಳಿದರು. ಈ ಪ್ರಕರಣದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಎಂಬ ಆಧಾರದ ಮೇಲೆ …
Read More »