ಬೀದರ್: ತೆಲಂಗಾಣದಲ್ಲಿ ಸಂಭವಿಸಿದ ಅಫಘಾತದಲ್ಲಿ ಮೃತರಾದ ಬೀದರ್ ಮೂಲದ ಆರು ಜನರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಕೂಲಿಗೆ ಹೋದವರು ಆರು ಜನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸರ್ಕಾರ ಅವರ ಕುಟುಂಬದ ಜೊತೆ ಇದ್ದು, ಪರಿಹಾರ ನೀಡತ್ತಿದೆ. ಮೃತರಾದ ಎಲ್ಲರ ಆತ್ಮಕ್ಕೆ ಶಾಂತಿ ನೀಡಲಿ. ಈಗಾಗಲೇ ಸಿಎಂ ಜೊತೆ ಮಾತನಾಡಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ನೀಡುತ್ತೇವೆ. ಮೃತ ಆರು …
Read More »ಭೀಷ್ಮ ಕೆರೆಯಲ್ಲಿ ಮೀನುಗಳ ಮಾರಣಹೋಮ; ವಿಷ ಬೆರೆತ ಅನುಮಾನ
ಗದಗ: ನಗರದ ಹೃದಯ ಭಾಗದಲ್ಲಿರುವ (Gadag) ಐತಿಹಾಸಿಕ ಭೀಷ್ಮ ಕೆರೆಯಲ್ಲಿ ರಾಶಿ ರಾಶಿ ಮೀನುಗಳು ಸತ್ತು ಬಿದ್ದಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕೆರೆ ನೀರು ಕಲುಷಿತವಾಗಿದೆಯಾ, ಯಾರಾದರೂ ವಿಷಕಾರಿ ವಸ್ತು ಹಾಕಿದ್ದಾರಾ ಎಂಬ ಅನುಮಾನ ಇದೀಗ ವ್ಯಕ್ತವಾಗುತ್ತಿದೆ. ಮೀನುಗಳ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಗದಗ-ಬೆಟಗೇರಿ ಅವಳಿ ನಗರದ ಪ್ರಮುಖ ಜಲಮೂಲವಾಗಿರುವ ಭೀಷ್ಮ ಕೆರೆಯ ದಡದಲ್ಲಿ ಸಾಕಷ್ಟು ಮೀನುಗಳು ಸತ್ತು ಬಿದ್ದಿರುವುದು ಕಂಡುಬಂದಿದೆ. ಪ್ರತಿದಿನ ಕೆರೆ …
Read More »ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೀದರ್ ATM ದರೋಡೆಕೋರರು ಕೊನೆಗೂ ಅರೆಸ್ಟ್
ಬಿಹಾರದಲ್ಲಿ ಆರೋಪಿಗಳ ಕಾರು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಅಮನ್‌ಕುಮಾರ್ ಸಿಂಗ್ & ಅಲೋಕ್‌ಕುಮಾರ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ವೈಶಾಲಿ ಜಿಲ್ಲೆಯ ಧಾಮೋದರ್ ಎಂಬ ಗ್ರಾಮದಲ್ಲಿ ಇಬ್ಬರು ಆರೋಪಿಗಳ ಬಂಧನ ಮಾಡಿದ್ದು, 1 ವರ್ಷ 7 ತಿಂಗಳ ಬಳಿಕ ದರೋಡೆಕೋರರ ಬಂಧನವಾಗಿದೆ. ಕಳೆದ ಇಪ್ಪತ್ತು ದಿನಗಳ ಹಿಂದೆ ಆರೋಪಿಗಳ ಸುಳಿವು ಬೀದರ್ ಪೊಲೀಸರಿಗೆ ಸಿಕ್ಕಿತ್ತು. ಹೀಗಾಗಿ, ಇಪ್ಪತ್ತು ದಿನಗಳಿಂದ ನಿರಂತರವಾಗಿ ಆರೋಪಿಗಳನ್ನ ಬೀದರ್ ಪೊಲೀಸರು ವಾಚ್ ಮಾಡಿದ್ದಾರೆ. ಬೀದರ್ ಎಸ್‌ಪಿ ಪ್ರದೀಪ್ …
Read More »ಕರ್ನಾಟಕ ಬಂದ್‌ಗೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ – ಎಂದಿನಂತೆ ಬಸ್ ಸಂಚಾರ
ಬೆಂಗಳೂರು: ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್‌ಗೆ ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಮುಖ ಕನ್ನಡ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳು ಬಂದ್‌ಗೆ ಬೆಂಬಲ ನೀಡದಿರುವುದರಿಂದ ನಗರದಲ್ಲಿ ವಾಹನ ಸಂಚಾರ ಮತ್ತು ಸಾರ್ವಜನಿಕ ಜನಜೀವನ ಎಂದಿನಂತೆ ಸಾಗುತ್ತಿದೆ. ಬಂದ್ ಹಿನ್ನೆಲೆಯಲ್ಲಿ ನಗರದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಕನ್ನಡಪರ ಸಂಘಟನೆಯ ಅಧ್ಯಕ್ಷ ಗಿರೀಶ್ ಗೌಡ …
Read More »ಗುಂಡಿ ತಪ್ಪಿಸಲು ಹೋಗಿ ಭೀಕರ ರಸ್ತೆ ಅಪಘಾತ – ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸಾವು
ಆನೇಕಲ್: ರಸ್ತೆ ಗುಂಡಿ ತಪ್ಪಿಸಲು ಹೋಗಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿ ಹಿಂಬದಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಉಸಿರು ಚೆಲ್ಲಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಸಮೀಪದ ಅನಂತನಗರದಲ್ಲಿ ಈ ದುರಂತ ಸಂಭವಿಸಿದೆ. ಕೇರಳ ಮೂಲದ ಮೇಧಾ (32) ಮೃತ ಯುವತಿ. ಈಕೆ ಎಲೆಕ್ಟ್ರಾನಿಕ್ ಸಿಟಿಯ ಭವಿಷ್ಯ ನಿಧಿ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು. ಮೇಧಾ ಅವರು ತಮ್ಮ ಸ್ನೇಹಿತ ಅಜಯ್ ಗುರು ಜೊತೆಗೆ ಬೈಕ್‌ನಲ್ಲಿ …
Read More »ಹಬ್ಬಕ್ಕೆ ಬಟ್ಟೆ ಕೊಡಿಸದಿದ್ದಕ್ಕೆ ಮನನೊಂದು ಸಹೋದರಿಯರು ನೇಣಿಗೆ ಶರಣು
ಕಲಬುರಗಿ: ಹಬ್ಬಕ್ಕೆ ತಂದೆ ಬಟ್ಟೆ ಕೊಡಿಸದಿದ್ದಕ್ಕೆ ಮನನೊಂದು ಇಬ್ಬರು ಅಪ್ರಾಪ್ತ ವಯಸ್ಸಿನ ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಕಲಬುರಗಿ ಜಿಲ್ಲೆಯ ಶಹಬಾದ್ ಪಟ್ಟಣದ ಶಾಂತನಗರದಲ್ಲಿ ನಡೆದಿದೆ. ಪಿಯುಸಿ ದ್ವಿತೀಯ ವರ್ಷದ ಪೂಜಾ (17) ಹಾಗು ಹಣಮಂತಿ ಮೃತ ಬಾಲಕಿಯರಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ವೇಲ್‌ನಿಂದ ಮನೆಯಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹತ್ತು ವರ್ಷಗಳ ಹಿಂದೆ ತಾಯಿ ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಸಹೋದರ ಹೈದರಾಬಾದ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಇನ್ನು ತಂದೆ …
Read More »ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವಾಗ?
ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆಗಸ್ಟ್ 18 ರಿಂದ ಸೆಪ್ಟೆಂಬರ್ 9ರವರೆಗೆ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಅವಧಿ: ಆಗಸ್ಟ್ 18ರಿಂದ ಸೆಪ್ಟೆಂಬರ್ 9ರವರೆಗೆ. …
Read More »ಗಲಗಲಿ ಬ್ಯಾರೇಜ್‌ನಿಂದ ಮಂಟೂರ ಸಮೀಪದ ಕಾಲುವೆಗೆ ಬೃಹತ್ ಪೈಪ್‌ಲೈನ್ ಮೂಲಕ ನೀರು
ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಗಲಗಲಿ ಬ್ಯಾರೇಜ್‌ನಿಂದ ಮಂಟೂರ ಸಮೀಪದ ಕಾಲುವೆಗೆ ಬೃಹತ್ ಪೈಪ್‌ಲೈನ್ ಮೂಲಕ ನೀರು ಹರಿಸಲಾಗುತ್ತಿದೆ. ಬ್ಯಾರೇಜ್‌ನಿಂದ ನೀರನ್ನು ಪೈಪ್‌ಲೈನ್ ಮೂಲಕ ಕಾಲುವೆಗೆ ಹರಿಸುವ ಕಾಮಗಾರಿ ನಡೆಯುತ್ತಿದ್ದು, ನೀರು ಕಾಲುವೆಗೆ (Canal Water) ಸೇರುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಮಂಟೂರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗಿದೆ. ಸದ್ಯ ಬ್ಯಾರೆಜ್‌ನಿಂದ ನೀರು ಹರಿಯುತ್ತಿದ್ದು, ಕೃಷಿ ಚಟುವಟಿಕೆಗೆ ಉತ್ತೇಜನ ಸಿಕ್ಕಂತಾಗಿದ್ದು, …
Read More »ಚರ್ಚ್ ಪಾದ್ರಿಯಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ – ಪೋಕ್ಸೋ ಕೇಸ್ ದಾಖಲು
ಚಿಕ್ಕಬಳ್ಳಾಪುರ: ಚರ್ಚ್ ಪಾದ್ರಿಯೊಬ್ಬರ ವಿರುದ್ಧ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ. ಹಾಸ್ಟೆಲ್‌ನಲ್ಲಿದ್ದ 13 ವರ್ಷದ ಬಾಲಕಿಗೆ ಚರ್ಚ್ ಪಾದ್ರಿ 3 ತಿಂಗಳಿನಿಂದ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಹಾಸ್ಟೆಲ್‌ನ ಶೌಚಾಲಯ ಸ್ವಚ್ಛಗೊಳಿಸಲು ಬಾಲಕಿಯನ್ನ ಕಳುಹಿಸಿ, ಆಕೆಯ ಹಿಂದಿನಿಂದ ಬಂದು ಕಿರುಕುಳ ನೀಡುತ್ತಿದ್ದ ಎಂದು ಸಂತ್ರಸ್ತ ಬಾಲಕಿ ತನ್ನ ಚಿಕ್ಕಮ್ಮನ ಬಳಿ ಭಾವುಕವಾಗಿ …
Read More »ಮುಖ್ಯಮಂತ್ರಿಗಳ ನೂತನ ರಾಜಕೀಯ ಕಾರ್ಯದರ್ಶಿಯಾಗಿ ಎ.ಎಸ್ ಪೊನ್ನಣ್ಣ ನೇಮಕ
ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ಅವರ ರಾಜಕೀಯ ಕಾರ್ಯದರ್ಶಿಯಾಗಿ ಶಾಸಕ ಎ.ಎಸ್ ಪೊನ್ನಣ್ಣ ಅವರನ್ನ ನೇಮಕ ಮಾಡಿ, ಆದೇಶ ಮಾಡಲಾಗಿದೆ. ಈ ಹಿಂದೆ ಪೊನ್ನಣ್ಣ ಅವರ ಹೆಸರನ್ನ ವಿಧಾನಸಭೆ ಉಪಾಧ್ಯಕ್ಷರ ಹುದ್ದೆಗೆ ಸೂಚಿಸಲಾಗಿತ್ತು. ಹೈಕಮಾಂಡ್ ನಿಂದ ಪ್ರಕಟವಾದ ಸಚಿವರ ಪಟ್ಟಿಯಲ್ಲಿ ಸ್ಪೀಕರ್, ಸಭಾಪತಿ, ಹಾಗೂ ಡೆಪ್ಯೂಟಿಗಳ ಹೆಸರು ಉಲ್ಲೇಖಿಸಲಾಗಿತ್ತು. ಆದರೆ ದಿಢೀರ್ ಹೆಸರು ಬದಲಾವಣೆ ಮಾಡಲಾಗಿದೆ. ಎ.ಎಸ್ ಪೊನ್ನಣ್ಣ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಸಲಹೆಗಾರರಾಗಿದ್ದರು. ಮುಡಾ ಹಗರಣ …
Read More »
Laxmi News 24×7