ರಾಮದುರ್ಗ: ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಸೋಮವಾರ ರಾಮದುರ್ಗ ಪಟ್ಟಣಕ್ಕೆ ಆಗಮಿಸಿದಾಗ ಬ್ರಾಹ್ಮಣ ಸಮಾಜದ ಪ್ರಮುಖರು ಅದ್ದೂರಿ ಸ್ವಾಗತ ಕೋರಿದರು. ಸಾರೋಟನಲ್ಲಿ ಆಸೀನರಾಗಿದ್ದ ಪೇಜಾವರ ಶ್ರೀಗಳನ್ನು ಮತ್ತು ವಿಶ್ವೇಶ ತೀರ್ಥರ ಭಾವಚಿತ್ರವನ್ನು ತೆರದ ಜೀಪಿನಲ್ಲಿ ಇಟ್ಟು ಭವ್ಯ ಮೆರವಣಿಗೆಯಲ್ಲಿ ಕರೆ ತರಲಾಯಿತು. ಮೆರವಣಿಗೆಯು ಇಲ್ಲಿನ ವೆಂಕಟೇಶ್ವರ ದೇವಸ್ಥಾನದಿಂದ ತೇರ ಬಜಾರ, ರಾಘವೇಂದ್ರ ರಥ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಸುಮಂಗಲೆಯರು ಪೂರ್ಣಕುಂಭ ಮೇಳೆ, ಡೊಳ್ಳು, ಜಾಂಜ್ ಪದಕಗಳ ಸದ್ದು ಮೊಳಗಿದವು. ಮಹಿಳೆಯರು …
Read More »ವಿದ್ಯುತ್ ಕೇಬಲ್ ವೈರ್ ತುಳಿದು ರೈತ ಸಾವು
ಚನ್ನಮ್ಮನ ಕಿತ್ತೂರು: ಕೊಳವೆಬಾವಿಗೆ ಸಂಪರ್ಕ ಕಲ್ಪಿಸಿರುವ ತುಂಡಾಗಿದ್ದ ವಿದ್ಯುತ್ ಪ್ರವಹಿಸುತ್ತಿರುವ ಕೇಬಲ್ ವೈರ್ ಆಕಸ್ಮಿಕವಾಗಿ ತುಳಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಸೋಮವಾರ ಮೃತಪಟ್ಟಿದ್ದಾರೆ. ತಾಲ್ಲೂಕಿನ ಹಿರೇನಂದಿಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯ ಮಂಜುನಾಥ ನೀಲಪ್ಪ ದಾಸನಕೊಪ್ಪ (42) ಮೃತ ವ್ಯಕ್ತಿ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬೆಳಗಾವಿ: ‘ಕಾಹೇರ್’ 14ನೇ ಘಟಿಕೋತ್ಸವ; 1,739 ಪದವಿ ಪ್ರದಾನ ಮಾಡಿದ ಉಪರಾಷ್ಟ್ರಪತಿ
ಬೆಳಗಾವಿ: ನಗರದಲ್ಲಿ ಸೋಮವಾರ ನಡೆದ ಕೆಎಲ್ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ (ಕಾಹೇರ್) 14ನೇ ಘಟಿಕೋತ್ಸವದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ ಅವರು ಘಟಿಕೋತ್ಸವ ಭಾಷಣ ಮಾಡಿದರು. ಒಟ್ಟು 1,739 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಕಾಹೇರ್ನಿಂದ ಇದೇ ಮೊದಲ ಬಾರಿಗೆ ನೀಡಲಾದ ‘ಗೌರವ ಡಾಕ್ಟರೇಟ್’ ಅನ್ನು ಅಮೆರಿಕದ ಫಿಲಿಡೆಲ್ಫಿಯಾದ ಥಾಮಸ್ ಝೆಫರ್ಸನ್ ವಿಶ್ವವಿದ್ಯಾಲಯದ ವೈಸ್ ಪ್ರೊವೊಸ್ಟ್ ಡಾ.ರಿಚರ್ಡ್ ಜಾಕೋಬ್ ಡರ್ಮನ್ ಅವರಿಗೆ ಪ್ರದಾನ ಮಾಡಿದರು. ಆರೋಗ್ಯ ವಿಜ್ಞಾನ ಕ್ಷೇತ್ರದಲ್ಲಿನ ಸಂಶೋಧನೆ …
Read More »ಹೆಸರಷ್ಟೇ ‘ತುಂಬು’ಕೆರೆ, ವರ್ಷವಿಡೀ ಖಾಲಿ
ಎಂ.ಕೆ.ಹುಬ್ಬಳ್ಳಿ: ಒಂದು ಕಾಲದಲ್ಲಿ ಇಡೀ ಊರಿನ ಜನರ ದಾಹ ನೀಗಿಸುತ್ತಿದ್ದ ಇಲ್ಲಿನ ಐತಿಹಾಸಿಕ ‘ತುಂಬುಕೆರೆ’ ಈಗ ಬಾಯಾರಿ ಬಳಲಿದೆ. ಅಧಿಕಾರಿಗಳ ನಿರ್ಲಕ್ಷ್ಯ, ಜನರ ನಿಷ್ಕಾಳಜಿಯಿಂದ ಅವ್ಯವಸ್ಥೆ ಆಗರವಾಗಿ ಮಾರ್ಪಟ್ಟಿದೆ. ಇದು ಹೆಸರಿಗಷ್ಟೇ ತುಂಬುಕೆರೆ. ವರ್ಷವಿಡೀ ‘ಖಾಲಿ’ ಇರುತ್ತದೆ. ಕಾಲುವೆ ಒತ್ತುವರಿಯಾಗಿದ್ದರಿಂದ ಮತ್ತು ರಾಷ್ಟ್ರೀಯ ಹೆದ್ದಾರಿ-4 ನಿರ್ಮಾಣದ ವೇಳೆ ಕೆಲವು ಜಲಮೂಲ ಮುಚ್ಚಿದ್ದರಿಂದ ಕೆರೆಗೆ ಮಳೆನೀರು ಹರಿದುಬರುವುದು ನಿಂತಿದೆ. ಕೆರೆಯ ಜಾಗ ಒತ್ತುವರಿ ಮತ್ತು ಕೊಳಚೆ ನೀರು ನುಗ್ಗುತ್ತಿರುವುದನ್ನು ತಡೆಯುವಲ್ಲಿ ವಿಫಲವಾದ ಪಟ್ಟಣ …
Read More »ಭರವಸೆ ಮೂಡಿದ ಪೂರ್ವ ಮುಂಗಾರು: ಬಿತ್ತನೆ ಬೀಜ ವಿತರಣೆ ಶುರು
ಬೆಳಗಾವಿ: ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಆತಂಕಗೊಂಡಿದ್ದ ಜಿಲ್ಲೆಯ ರೈತರು, ಈ ಬಾರಿ ಮುಂಗಾರು ಪೂರ್ವ ಮಳೆ ಕೈಹಿಡಿದಿದ್ದರಿಂದ ಸಂತಸಗೊಂಡಿದ್ದಾರೆ. ಕಳೆದೊಂದು ವಾರದಿಂದೀಚೆಗೆ ಆಗಾಗ ಸುರಿಯುತ್ತಿರುವ ಮಳೆ, ಬಿತ್ತನೆ ಪೂರ್ವ ಚಟುವಟಿಕೆಗೆ ವೇಗ ನೀಡಿದೆ. ಬಿತ್ತನೆಗಾಗಿ ಭೂಮಿ ಹದಗೊಳಿಸುತ್ತಿರುವ ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಗೆ ಕೃಷಿ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ರಾಮದುರ್ಗ, ಖಾನಾಪುರ, ಮೂಡಲಗಿ ತಾಲ್ಲೂಕುಗಳಲ್ಲಿ ಈಗಾಗಲೇ ಬಿತ್ತನೆ ಬೀಜಗಳ ವಿತರಣೆ ಆರಂಭವಾಗಿದೆ. …
Read More »ಪತಿ ನೆನಪಿಗಾಗಿ ಗ್ರಂಥಾಲಯ ಅಭಿವೃದ್ಧಿ
ಬೆಳಗಾವಿ: 2022ರ ಆಗಸ್ಟ್ನಲ್ಲಿ ನಿಧನರಾದ ಪತಿ ನೆನಪಿಗಾಗಿ ಪತ್ನಿಯೊಬ್ಬರು, ಇಲ್ಲಿನ ಸರ್ಕಾರಿ ಸರ್ದಾರ್ಸ್ ಪ್ರೌಢಶಾಲೆಯಲ್ಲಿ ₹1.13 ಲಕ್ಷ ವೆಚ್ಚದಲ್ಲಿ ಗ್ರಂಥಾಲಯ ಅಭಿವೃದ್ಧಿಪಡಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಸ್ಥಾನಿಕ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ.ವಿದ್ಯಾ ಅರಳಿಕಟ್ಟಿ ಇಂಥದ್ದೊಂದು ಕೆಲಸ ಮಾಡಿದವರು. 174 ವರ್ಷಗಳ ಹಿಂದೆ ಸ್ಥಾಪನೆಯಾದ ಈ ಪ್ರೌಢಶಾಲೆಯಲ್ಲಿ ಗ್ರಂಥಾಲಯಕ್ಕೆ ಪ್ರತ್ಯೇಕ ಕೊಠಡಿ, ಪರಿಕರ ಮತ್ತು ಆಸನ ವ್ಯವಸ್ಥೆ ಇರಲಿಲ್ಲ. ಒಂದಿಷ್ಟು ಹಳೆಯ ಪುಸ್ತಕಗಳನ್ನು ಹೊರತುಪಡಿಸಿದರೆ, ಗ್ರಂಥಾಲಯ …
Read More »ಹೊಸ ಕಾನೂನು; ಪೊಲೀಸರಿಗೆ ತರಬೇತಿ
ಬೆಳಗಾವಿ: ಇಲ್ಲಿನ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದಲ್ಲಿ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ತರಬೇತಿ ನೀಡಲಾಯಿತು. ನಗರ ಪೊಲೀಸ್ ಉಪ ಆಯುಕ್ತರ ನೇತೃತ್ವದಲ್ಲಿ ನಡೆದ ತರಬೇತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ನ್ಯಾಸ ಸಂಹಿತೆ, ಭಾರತೀಯ ಸಾಕ್ಷಿ ಅಧಿನಿಯಮ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ನೀಡಿದರು. ‘ಜುಲೈ 1ರಿಂದ ಹೊಸ ಕಾನೂನುಗಳು ಜಾರಿಗೆ ಬರಲಿವೆ. ಈ ಬಗ್ಗೆ …
Read More »ಉಪರಾಷ್ಟ್ರಪತಿ, ರಾಜ್ಯಪಾಲ ಬೆಳಗಾವಿಗೆ
ಬೆಳಗಾವಿ: ಉಪರಾಷ್ಟ್ರಪತಿ ಜಗದೀಪ್ ಧನಕರ್, ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಮೇ 27ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ. ಅಂದು ಬೆಳಿಗ್ಗೆ 10ಕ್ಕೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್-ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟ್ರೇಡಿಷನಲ್ ಮೆಡಿಸಿನ್(ಐಸಿಎಂಆರ್-ಎನ್ಐಟಿಎಂ)ನಲ್ಲಿ ನಡೆಯಲಿರುವ 18ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. 11.30ಕ್ಕೆ ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ ಆಯಂಡ್ ರಿಸರ್ಚ್(ಕಾಹೇರ್)ನಲ್ಲಿ ನಡೆಯಲಿರುವ 14ನೇ ಘಟಿಕೋತ್ಸವದಲ್ಲಿ ಜಯದೀಪ್ ಧನಕರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಥಾವರಚಂದ್ …
Read More »ಓಕುಳಿ; ಗಮನ ಸೆಳೆದ ಸ್ಪರ್ಧೆಗಳು
ಕಬ್ಬೂರ: ಪಟ್ಟಣದಲ್ಲಿ ಹನುಮಾನ (ಮಾರುತಿ) ದೇವರ ಓಕುಳಿ ಅಂಗವಾಗಿ ಭಾನುವಾರ ವಿವಿಧ ಸ್ಪರ್ಧೆಗಳು ನಡೆದವು. ಇಲ್ಲಿನ ರಾಯಬಾಗ ರಸ್ತೆಯ ಹೆಸ್ಕಾಂ ಕಚೇರಿಯಿಂದ ಮಾಡಲಗಿ ಗ್ರಾಮದವರೆಗೆ (5 ಕಿ.ಮೀ.) ಆಯೋಜಿಸಿದ್ದ ಸ್ಪರ್ಧೆಗಳಿಗೆ ಕಬ್ಬೂರ ಪಿಕೆಪಿಎಸ್ ಅಧ್ಯಕ್ಷ ಮಿಲನ ಪಾಟೀಲ ಚಾಲನೆ ನೀಡಿದರು. ಪುಟ್ಟು ಹಳ್ಳೂರ, ಸುನೀಲ ಕುಲಕರ್ಣಿ, ಶಂಕರ ವಡೇರ, ಮಲ್ಲಪ್ಪಾ ಕಾಮಗೌಡ, ಅಪ್ಪು ಹೇರಲಗಿ, ನೇಮಿನಾಥ ಕಾಗವಾಡೆ ಇದ್ದರು. ಜೋಡು ಕುದುರೆ ಗಾಡಿ ಓಡಿಸುವ ಸ್ಪರ್ಧೆಯಲ್ಲಿ ಅಜ್ಜಪ್ಪ ಶಿರಹಟ್ಟಿ ಪ್ರಥಮ, ಹನುಮಾನ …
Read More »ಸರ್ಕಾರದ ಕಮಿಷನ್ ದಾಹಕ್ಕೆ ಅಧಿಕಾರಿ ಬಲಿ: ಬಿಜೆಪಿ
ಬೆಂಗಳೂರು: ಶಿವಮೊಗ್ಗದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ಬಿಜೆಪಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಡೆತ್ ನೋಟ್ನಲ್ಲಿ ನಿಗಮದ ಎಂ.ಡಿ. ಪದ್ಮನಾಭ ಹಾಗೂ ಇನ್ನೊಬ್ಬ ಅಧಿಕಾರಿ ಹೆಸರನ್ನು ಬರೆದಿದ್ದು, ಈ ಇಲಾಖೆಯ ಸಚಿವರ ಮೌಖೀಕ ಆದೇಶದ ಪ್ರಕಾರ …
Read More »