Breaking News

Uncategorized

ಬಾಲ್ಯ ವಿವಾಹಕ್ಕೆ ಬ್ರೇಕ್; ಪೋಷಕರ ಮನವೊಲಿಸಿ ಬಾಲಕಿಯ ರಕ್ಷಣೆ!

ಗದಗ, : ಬಾಲ್ಯ ವಿವಾಹ ಅಪರಾಧ ಎಂದುನಿರಂತರ ಜಾಗೃತಿಮಾಡಲಾಗುತ್ತಿದೆ. ಆದ್ರೆ, ಇನ್ನು ಬಾಲ್ಯ ವಿವಾಹ ಎನ್ನುವ ಅನಿಷ್ಠ ಪದ್ಧತಿ ಮಾತ್ರ ನಿಲ್ಲುತ್ತಿಲ್ಲ. ಕಾನೂನು ಹಾಗೂ ಅಧಿಕಾರಿಗಳ ಕಣ್ಣು ತಪ್ಪಿಸಿ ಬಾಲ್ಯ ವಿವಾಹ(child marriage) ನಡೆಯುತ್ತಿವೆ. ಹೌದು, ಇಂದು(ಏ.26) ಗದಗದಲ್ಲಿ(Gadag) ನಡೀತಿದ್ದ ಬಾಲ್ಯ ವಿವಾಹವೊಂದಕ್ಕೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ನಗರದ ಕರ್ನಾಟಕ ಭವನದಲ್ಲಿ ಗದಗ ತಾಲೂಕಿನ ಕೊಟುಮಚಗಿ ಗ್ರಾಮದ ಇಬ್ಬರು ಸಹೋದರರ ಮದುವೆ ನಿಶ್ಚಿಯ ಮಾಡಲಾಗಿತ್ತು. ಆದ್ರೆ, ಕಿರಿಯ ಸಹೋದರನ ಮದುವೆ …

Read More »

ರಾಹುಲ್ ಗಾಂಧಿಗೆ ಬುದ್ದಿ ಮೆದುಳಲ್ಲಿಲ್ಲ, ತೊಡೆಯಲ್ಲಿದೆ- ಯತ್ನಾಳ್​ ಎಡವಟ್ಟು

ಹುಬ್ಬಳ್ಳಿ, : ರಾಹುಲ್‌ ಗಾಂಧಿಗೆ ಬುದ್ಧಿ ಮೆದುಳಿನಲ್ಲಿಲ್ಲ, ತೊಡೆಯಲ್ಲಿದೆ ಎಂದು ಮಾತಿನ ಭರದಲ್ಲಿ ಮತ್ತೊಮ್ಮೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basanagouda patil yatnal) ಹಳಿ ತಪ್ಪಿದ್ದಾರೆ. ಧಾರವಾಡ ಜಿಲ್ಲೆಯ ‌ಕುಂದಗೋಳದಲ್ಲಿ ಪ್ರಹ್ಲಾದ್‌ ಜೋಶಿ ಪರ ಪ್ರಚಾರ ಸಭೆಯಲ್ಲಿಮಾತನಾಡಿದಅವರು, ‘ಡಿಸಿಎಂ ಡಿ.ಕೆ ಶಿವಕುಮಾರ್‌ ಹಾಗೂ ಸಚಿವ ದಿನೇಶ್‌ ಗುಂಡೂರಾವ್ ಹುಚ್ಚರು, ನಮ್ಮ ದೇಶ ಆಳಲು ರಾಹುಲ್ ಸಮರ್ಥನಾ? ಎಂದು ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿ ಗೆದ್ರೆ ಬಟಾಯಿಂದ ಬಂಗಾರ ಇದೇ ವೇಳೆ …

Read More »

ಬೆಳಗಾವಿ ಮೇಲೆ ಪಿಎಂ-ಸಿಎಂ ಕಣ್ಣು, ಅಖಾಡಕ್ಕೆ ಏಕಕಾಲಕ್ಕೆ ಮೋದಿ, ಸಿದ್ದರಾಮಯ್ಯ ಎಂಟ್ರಿ

ಬೆಳಗಾವಿ, ಏಪ್ರಿಲ್​ 27: ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಿತು. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರಂದು ಮತದಾನ ನಡೆಯಲಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳು ಸೇರಿವೆ. ಈ ಹಿನ್ನೆಲೆಯಲ್ಲಿ ಪ್ರಚಾರ ಇನ್ನೂ ನಡೆದಿದೆ. ರಾಜಕೀಯ ಪವರ್​ ಸೆಂಟರ್ ಎನಿಸಿಕೊಂಡಿರುವ ಬೆಳಗಾವಿ (Belagavi) ಅಖಾಡಕ್ಕೆ ಏಕಕಾಲಕ್ಕೆ …

Read More »

ಬಸ್​​​ ನಿಲ್ಲಿಸಿಲ್ಲವೆಂದು ಚಾಲಕನ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ

ಬೆಳಗಾವಿ, ಏ.25: ಬಸ್ ನಿಲ್ಲಿಸಿಲ್ಲ ಎಂದು ಸರ್ಕಾರಿ ಬಸ್ ನಿರ್ವಾಹಕ ಮತ್ತು ಚಾಲಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿದ ಘಟನೆಬೈಲಹೊಂಗಲ(Bailhongal) ಬಸ್ ನಿಲ್ದಾಣದಲ್ಲಿ ನಡೆದಿದೆ. ಇನ್ನು ಈ ಬಸ್​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟ್ಟಿತ್ತು. ಈ ವೇಳೆ ಓಡಿ ಬಂದು ಬಸ್ ಹತ್ತಲು ಮಹಿಳೆ ಯತ್ನಿಸಿದ್ದಾರೆ. ಆಗ ಮಹಿಳೆಗೆ ನಿರ್ವಾಹಕ ಬೈಯ್ದಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಸ್​ಗಳನ್ನ ಸ್ಥಗಿತಗೊಳಿಸಿ ಪ್ರತಿಭಟನೆ ಇನ್ನು ಈ ವೇಳೆ ಜಗಳ …

Read More »

ಇನ್ಮುಂದೆ ವರ್ಷಕ್ಕೆ ಎರಡು ಬಾರಿ ‘CBSE’ ಬೋರ್ಡ್ ಪರೀಕ್ಷೆ : ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿ ಸಾಧ್ಯತೆ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 2025-26ರ ಶೈಕ್ಷಣಿಕ ವರ್ಷದಿಂದ ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳನ್ನ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಈ ಸಂಭಾವ್ಯ ಕ್ರಮವು ಜಾರಿಗೆ ಬಂದರೆ, ಸಿಬಿಎಸ್‌ಇ ಮೌಲ್ಯಮಾಪನಗಳ ಹೆಗ್ಗುರುತಾಗಿರುವ ಸಾಂಪ್ರದಾಯಿಕ ವಾರ್ಷಿಕ ಪರೀಕ್ಷಾ ಸ್ವರೂಪದಿಂದ ಗಮನಾರ್ಹ ನಿರ್ಗಮನವನ್ನು ಸೂಚಿಸುತ್ತದೆ. ದ್ವಿವಾರ್ಷಿಕ ಪರೀಕ್ಷೆಗಳತ್ತ ಸಾಗುವುದರಿಂದ ವಿದ್ಯಾರ್ಥಿಗಳಿಗೆ ವಿಷಯಗಳಲ್ಲಿ ತಮ್ಮ ತಿಳುವಳಿಕೆ ಮತ್ತು ಕಾರ್ಯಕ್ಷಮತೆಯನ್ನ ಪ್ರದರ್ಶಿಸಲು ಹೆಚ್ಚಿನ ಅವಕಾಶಗಳನ್ನ ಒದಗಿಸಬಹುದು. ಅಂತಹ …

Read More »

‘ಸಿ.ಟಿ ರವಿ’ ವಿರುದ್ಧ ‘FIR’ ದಾಖಲು

ಚಿಕ್ಕಮಗಳೂರು: ಈಗಾಗಲೇ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಧರ್ಮ ದ್ವೇಷ ಭಾಷಣದ ಕಾರಣ ಚುನಾವಣಾ ಆಯೋಗ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಬೆನ್ನಲ್ಲೇ ದ್ವೇಷ ಭಾಷಣ ಮಾಡಿದಂತ ಬಿಜೆಪಿ ಮುಖಂಡ ಸಿ.ಟಿ ರವಿ ರವಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Read More »

IT ಅಧಿಕಾರಿಗಳಿಂದ 4.8 ಕೋಟಿ ಜಪ್ತಿ ಕೇಸ್: ಬಿಜೆಪಿ ಅಭ್ಯರ್ಥಿ ‘ಡಾ.ಕೆ.ಸುಧಾಕರ್’ ವಿರುದ್ಧ ‘FIR’ ದಾಖಲು

ಚಿಕ್ಕಬಳ್ಳಾಪುರ: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬಿಜೆಪಿ ಮುಖಂಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಕೆ ಸುಧಾಕರ್ ಆಪ್ತ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ದಾಳಿ ಮಾಡಿದ್ದರು. ಈ ದಾಳಿಯ ವೇಳೆಯಲ್ಲಿ 4.82 ಕೋಟಿ ಹಣ ಜಪ್ತಿ ಮಾಡಿದ್ದರು. ಈ ಪ್ರಕರಣದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿಕೊಂಡ ಬಳಿಕ ಬೆಂಗಳೂರು ಉತ್ತರ ತಾಲೂಕಿನ ಚುನಾವಣಾ ನೋಡೆಲ್ …

Read More »

ಗೃಹ ಸಚಿವರ ತವರು ಕ್ಷೇತ್ರದಲ್ಲಿ 10 ಗುಡಿಸಲುಗಳಿಗೆ ಬೆಂಕಿ

ಬೆಂಗಳೂರು, ಏಪ್ರಿಲ್ 26: ರಾಜ್ಯದಲ್ಲಿ ಎಲ್ಲರ ಚಿತ್ತ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನದತ್ತ ನೆಟ್ಟಿದೆ. ತುಮಕೂರು ಕ್ಷೇತ್ರದಲ್ಲಿ ಇಂದು ಮತದಾನ ನಡೆದಿದೆ. ಇದೇ ವೇಳೆ ಗೃಹ ಸಚಿವರ ತವರು ಕ್ಷೇತ್ರದಲ್ಲಿ ಹಲವು ಗುಡಿಸಲುಗಳಿಗೆ ಬಂಕಿ ಬಿದ್ದು, ಎಲ್ಲವು ಸುಟ್ಟು ಭಸ್ಮವಾಗಿವೆ. ಹೌದು, ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪ್ರತಿನಿಧಿಸುವ ತುಮಕೂರು ಜಿಲ್ಲೆಯ ಕೊರಟಗೆರೆ (ತಾಲೂಕು) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದಲ್ಲಿ ಸುಮಾರು 10 ಗುಡಿಸಲುಗಳಿಗೆ ಬೆಂಕಿಗೆ ಆಹುತಿಯಾಗಿವೆ. …

Read More »

ಕೋಳಿ ಮಾಂಸಕ್ಕಿಂತ ಬೀನ್ಸ್‌ ದುಬಾರಿ!

ಹೊಸಕೋಟೆ: ಮಾರುಕಟ್ಟೆಯಲ್ಲಿ ಆವಕ ಕುಸಿದ ಕಾರಣ ಈ ವಾರ ಬೀನ್ಸ್‌ ಬೆಲೆ ಏಕಾಏಕಿ ಏರಿಕೆಯಾಗಿದ್ದು ಕೆ.ಜಿ. ಬೀನ್ಸ್‌ ಬೆಲೆ ₹250 ಗಡಿ ತಲುಪಿದೆ. ಮಾರುಕಟ್ಟೆಯಲ್ಲಿ ಕೋಳಿಮಾಂಸಕ್ಕಿಂತ ಬೀನ್ಸ್‌ ದುಬಾರಿಯಾಗಿದೆ. ಕೆ.ಜಿ ಕೋಳಿ ಮಾಂಸ ₹240 ಇದ್ದರೆ, ಬೀನ್ಸ್‌ ₹250ರಂತೆ ಮಾರಾಟವಾಗುತ್ತಿದೆ. ಕಳೆದ ವಾರ ₹130-₹140 ಆಸುಪಾಸಿನಲ್ಲಿದ್ದ ಕೆ.ಜಿ ಬೀನ್ಸ್‌ ಈ ವಾರ ದಿಢೀರ್‌ ನೂರು ರೂಪಾಯಿ ಏರಿಕೆಯಾಗಿದೆ. ಈ ಮೊದಲು ಕೆ.ಜಿ ಲೆಕ್ಕದಲ್ಲಿ ಬೀನ್ಸ್‌ ಖರೀದಿಸುತ್ತಿದ್ದ ಗ್ರಾಹಕರು ಈಗ ಗ್ರಾಂ …

Read More »

ರೈತನ ಕೈಹಿಡಿದ ಪಪ್ಪಾಯಿ; ಉತ್ತಮ ಆದಾಯ

ಧಾರವಾಡ: ತಾಲ್ಲೂಕಿನ ಮಾದನಭಾವಿಯ ಎಂಜಿನಿಯರಿಂಗ್‌ ಪದವೀಧರ ದಯಾನಂದ ಹೊಳೆಹಡಗಲಿ ಅವರು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪ್ರಯೋಜನ ಪಡೆದು ಥೇವಾನ್ ರೆಡ್ ಲೇಡಿ ತಳಿ ಪಪ್ಪಾಯಿ ಲಾಭ ಗಳಿಸಿದ್ದಾರೆ. ಕೊಲ್ಲಾಪುರ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಅವರು ಕೋವಿಡ್‌ ತಲ್ಲಣದ ಕಾಲಘಟ್ಟದಲ್ಲಿ ಉದ್ಯೊಗ ತೊರೆದು ಊರು ಸೇರಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. 15 ಎಕರೆ ಜಮೀನಿನಲ್ಲಿ ಮಿಶ್ರ ಬೇಸಾಯ (ಕಬ್ಬು, ಗೋವಿನಜೋಳ, ಕಡಲೆ, ತರಕಾರಿ, ಸೋಯಾಬಿನ್…) ಮಾಡುತ್ತಿದ್ದಾರೆ. ಹೊಸ ಬೆಳೆ …

Read More »