Breaking News

Uncategorized

ನೇಜಾರಿನ ತಾಯಿ, ಮೂವರು ಮಕ್ಕಳ ಹತ್ಯೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ಅರ್ಜಿ ತಿರಸ್ಕರಿಸಿದ ಕೋರ್ಟ್

ಉಡುಪಿ: ಜಿಲ್ಲೆಯ ಹಂಪನಕಟ್ಟೆ ಸಮೀಪದ ನೇಜಾರಿನಲ್ಲಿ 2023ರಲ್ಲಿ ನಡೆದ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವಿಡಿಯೋ ದಾಖಲಿಸಬೇಕೆಂದು ಕೋರಿ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ಅರ್ಜಿಯನ್ನು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ಅಲ್ಲದೆ, ಆರೋಪಿ ಪ್ರವೀಣ್ ಚೌಗುಲೆ ಕೃತ್ಯಕ್ಕೆ ಬಳಸಿದ ಕಾರನ್ನು ಸಾಲದ ಕಂತು ಪಾವತಿಸದ ಹಿನ್ನೆಲೆಯಲ್ಲಿ ತಮ್ಮ ವಶಕ್ಕೆ ನೀಡಬೇಕೆಂಬ ಬ್ಯಾಂಕಿನವರ ಅರ್ಜಿಯ ಕುರಿತ ಅಂತಿಮ …

Read More »

ಸ್ಪೀಕರ್ ತೀರ್ಮಾನ ಕಾನೂನಾತ್ಮಕ, ಬದಲಾವಣೆ ಮಾಡಬಾರದು: ಮಧು ಬಂಗಾರಪ್ಪ

ಶಿವಮೊಗ್ಗ: “ಸದನದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರು ಕಾನೂನಾತ್ಮಕವಾಗಿ ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಆದರೆ ಅವರು ತಮ್ಮ ತೀರ್ಮಾನದಿಂದ ಹಿಂದೆ ಸರಿಯಬಾರದು” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದಲ್ಲಿ ಬಾರೆಹಳ್ಳ ಮತ್ತು ಹಾಯ್​ಹೊಳೆ ಕರೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೇರವೇರಿಸಿ ಅವರು ಮಾತನಾಡಿದರು. ಪುರದಾಳು ಗ್ರಾಮದ ಬಾರೆಹಳ್ಳ ಡ್ಯಾಂ ನಿರ್ಮಾಣವಾಗಿ 45 ವರ್ಷವಾಗಿದೆ. ಹಿಂದೆ ನೋಡಿದಾಗ ನೀರು ಸಾಕಷ್ಟು ಪೋಲಾಗಿ ಹೋಗುತ್ತಿತ್ತು. ಇದರ ರಿಪೇರಿ …

Read More »

ಬೆಳಗಾವಿಯ ಅರಿಹಂತ್ ಆಸ್ಪತ್ರೆ ಯಶಸ್ವಿ ಮೂತ್ರಪಿಂಡ ಬದಲಾವಣೆಯೊಂದಿಗೆ ಮತ್ತೊಂದು ಅತ್ಯುತ್ತಮ ಮೈಲಿಗಲ್ಲನ್ನು ಸಾಧಿಸಿದೆ

ಬೆಳಗಾವಿಯ ಅರಿಹಂತ್ ಆಸ್ಪತ್ರೆಯು ಮತ್ತೊಂದು ಯಶಸ್ವಿ ಮೂತ್ರಪಿಂಡ ಬದಲಾವಣೆಯೊಂದಿಗೆ ಮಹತ್ವದ ಸಾಧನೆಯನ್ನು ಮಾಡಿದೆ. ಇದರಲ್ಲಿ ಲ್ಯಾಪರೋಸ್ಕೋಪಿ ವಿಧಾನದಲ್ಲಿ ದಾನಿ ಮೂತ್ರಪಿಂಡವನ್ನು ತೆಗೆದುಹಾಕುವ ಶಸ್ತ್ರಚಿಕಿತ್ಸೆ (ಲ್ಯಾಪರೋಸ್ಕೋಪಿಕ್ ಡೋನರ್ ನೆಫ್ರೆಕ್ಟಮಿ) ನಡೆಸಲಾಗಿದೆ. ಈ ವಿಶಿಷ್ಟ ಪ್ರಕ್ರಿಯೆಯಲ್ಲಿ 47 ವರ್ಷದ ಅಕ್ಕ ತಮ್ಮ 45 ವರ್ಷದ ತಂಗಿಗೆ ಮೂತ್ರಪಿಂಡ ದಾನ ಮಾಡಿದ್ದು, ಆಕೆ ಹೊಸ ಜೀವನವನ್ನು ಪಡೆದಿದ್ದಾಳೆ. ರೋಗಿಗೆ ಕಳೆದ ಎರಡು ವರ್ಷಗಳಿಂದ ಡಯಾಲಿಸಿಸ್ ನಡೆಸಲಾಗುತ್ತಿತ್ತು ಮತ್ತು ಆಕೆ ಹಲವಾರು ಆರೋಗ್ಯ ಸಮಸ್ಯೆಗಳೊಂದಿಗೆ ಹೋರಾಡುತ್ತಿದ್ದರು.ರಕ್ತನಾಳಗಳ …

Read More »

ಗಡಿ ಜಿಲ್ಲೆ ಬೆಳಗಾವಿಯಲ್ಲಿ ತಗಾದೆ ತೆಗೆಯುತ್ತಿರುವ ಮರಾಠಿ ಸಂಘಟನೆಗಳಿಗೆ ಎಚ್ಚರಿಕೆ ನೀಡಲು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬೆಂಗಳೂರಿನಲ್ಲಿ ಆರಂಭದಲ್ಲೇ ನೀರಸ ಪ್ರತಿಕ್ರಿಯೆ

ಬೆಂಗಳೂರು : ಗಡಿ ಜಿಲ್ಲೆ ಬೆಳಗಾವಿಯಲ್ಲಿ ತಗಾದೆ ತೆಗೆಯುತ್ತಿರುವ ಮರಾಠಿ ಸಂಘಟನೆಗಳಿಗೆ ಎಚ್ಚರಿಕೆ ನೀಡಲು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬೆಂಗಳೂರಿನಲ್ಲಿ ಆರಂಭದಲ್ಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಸಾರ್ವಜನಿಕರ ಸಂಚಾರ ಎಂದಿನಂತಿದ್ದು, ಆಟೋ, ಬಸ್​ಗಳು ರಸ್ತೆಗಿಳಿದಿವೆ. ಬಂದ್​ ಯಶಸ್ಸಿಗಾಗಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳ ಬಳಿ ಕನ್ನಡ ಪರ ಸಂಘಟನೆಗಳು ಮನವಿ ಮಾಡಿದ್ದವು. ಆದರೆ ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲವಷ್ಟೇ ದೊರೆತಿರುವುದರಿಂದ ಎಂದಿನಂತೆಯೇ ಸಾರ್ವಜನಿಕರು, ಸಾರಿಗೆ ವಾಹನಗಳ ಸಂಚಾರ …

Read More »

ಬಜೆಟ್’ನಲ್ಲಿ ಒಂದು ಕಣ್ಣಿಗೆ ಬೆಣ್ಣೆ-ಇನ್ನೊಂದು ಕಣ್ಣಿಗೆ ಸುಣ್ಣ…:ಶಶಿಕಲಾ ಜೊಲ್ಲೆ…

ವಿಧಾನ ಮಂಡಲದಲ್ಲಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ… ರಾಜ್ಯ ಸರ್ಕಾರವು ತನ್ನ ಬಜೆಟ್’ನಲ್ಲಿ ಹಲವಾರು ಮಹತ್ವದ ಕ್ಷೇತ್ರಗಳನ್ನು ಕಡೆಗಣಿಸಿ ಒಂದು ಕಣ್ಣಿಗೆ ಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆ ಎಂಬಂತೆ ಯೋಜನೆಗಳನ್ನು ಜಾರಿ ಮಾಡಿದೆ. ಆದ್ದರಿಂದ ಮಹತ್ವದ ಕ್ಷೇತ್ರಗಳಿಗೆ ಅನುದಾನವನ್ನು ನೀಡಬೇಕೆಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮತ್ತು ನವಲಗುಂದ ಶಾಸಕ ಎನ್.ಎಚ್ ಕೊನರೆಡ್ಡಿ ಹೇಳಿದರು. ಇಂದು ವಿಧಾನ ಮಂಡಲದ ಅಧಿವೇಶನದಲ್ಲಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರು ಸರ್ಕಾರ ತನ್ನ ಬಜೆಟಿನಲ್ಲಿ …

Read More »

ಯುದ್ಧಕಾಂಡವಾದ ಸಾಮಾನ್ಯ ಸಭೆ, ರೊಚ್ಚಿಗೆದ್ದ ಮಹಿಳಾ ಸದಸ್ಯೆ ಸಭೆಯಿಂದ ಪಲಾಯಣ.

ರಾಯಬಾಗ : ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ಪುರಸಭೆಯಲ್ಲಿ ದಿನಾಂಕ 20 ರಂದು ಕರೆದಿದ್ದ ಸಾಮಾನ್ಯ ಸಭೆ ಯುದ್ಧಕಾಂಡವಾಗಿ ಪರಿಣಮಿಸಿದೆ. ಗುರುವಾರ ಮುಂಜಾನೆ 11 ಗಂಟೆಗೆ ಪುರಸಭೆ ಅಧ್ಯಕ್ಷರ ಅಪ್ಪಣೆಯ ಮೇರೆಗೆ ಪುರಸಭೆಯ ಕಚೇರಿಯಲ್ಲಿ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು. 2025-26ನೇ ಸಾಲಿನ ಸಂತೆ ಕರ ಬಹಿರಂಗ ಹರಾಜು ಮಾಡುವ ವಿಷಯವು ಅಜೆಂಡದಲ್ಲಿ ಇತ್ತು. ಇಲಾಖೆಯ ನಿಯಮದಂತೆ 4 ಜನರು ಹರಾಜಿನಲ್ಲಿ ಭಾಗವಹಿಸಬೇಕೆನ್ನುವುದು ಅಧಿಕಾರಿಗಳ ಹಾಗು ಸರ್ವ ಸದಸ್ಯರ …

Read More »

ಪೋಕ್ಸೋ ಕೇಸ್ : ಜಾಮೀನು ಷರತ್ತು ಸಡಿಲಿಕೆ, ಆದೇಶ;B.S.Y.

ಬೆಂಗಳೂರು : ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮ್ಮ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ತೆಗೆದುಕೊಂಡಿದ್ದ ಕಾಗ್ನಿಜೆನ್ಸ್ ಅನ್ನು ರದ್ದುಪಡಿಸಿ, ಮತ್ತೆ ಹೊಸದಾಗಿ ಪರಿಗಣಿಸುವಂತೆ ಸೂಚನೆ ನೀಡಿರುವ ಆದೇಶದ ಕುರಿತು ಸ್ಪಷ್ಟನೆ ಮತ್ತು ಜಾಮೀನಿಗೆ ವಿಧಿಸಿರುವ ಷರತ್ತುಗಳನ್ನು ಸಡಿಲಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್​ಗೆ ಎರಡು ಮಧ್ಯಂತರ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಎರಡೂ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, …

Read More »

ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ: ಪೂರ್ವಭಾವಿ ಸಭೆ:ಮೊಹಮ್ಮದ್ ರೋಷನ್

ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ: ಪೂರ್ವಭಾವಿ ಸಭೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೆಳಗಾವಿ : ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಏಪ್ರಿಲ್ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು. ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ …

Read More »

ನಕಲಿ ವೈದ್ಯರು, ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಅಧಿವೇಶನದಲ್ಲಿ ಸಂಸದ ಈರಣ್ಣ ಕಡಾಡಿ ಆಗ್ರಹ.

ಮೂಡಲಗಿ: ನಕಲಿ ವೈದ್ಯರು ಮತ್ತು ತರಬೇತಿ ಪಡೆಯದ ವೈದ್ಯಕೀಯ ವೃತ್ತಿಪರರು ಯಾವುದೇ ಅರ್ಹತೆ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಕಾರಣ ಅವರ ಜೀವಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿದ್ದಾರೆ. ಸಮಸ್ಯೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಅನಧಿಕೃತ ವೈದ್ಯರು ಮತ್ತು ಚಿಕಿತ್ಸಾಲಯಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು, ನಕಲಿ ಶಸ್ತ್ರಚಿಕಿತ್ಸೆಗಳನ್ನು ತಡೆಗಟ್ಟಲು ಆಸ್ಪತ್ರೆಗ ನಿಯಮಿತ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಆಗ್ರಹಿಸಿದರು. ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದ ಶೂನ್ಯ …

Read More »

ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸರ್ಕಾರ ನಿರ್ಧಾರ ಮಾಡಿದೆ.

ಬೆಂಗಳೂರು : “ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,‌ ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ. ಈ ಹಿಂದೆ ಪರಿಶಿಷ್ಟ ಜಾತಿ,‌ ಪಂಗಡವರಿಗೆ ಗುತ್ತಿಗೆ ಮೀಸಲಾತಿ ನೀಡುವಂತೆ ತಿದ್ದುಪಡಿ ಮಾಡಿದ್ದೆವು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ …

Read More »