Breaking News

Uncategorized

ಅತೀವೃಷ್ಠಿ ಮತ್ತು ಅನಾವೃಷ್ಠಿ ಕುರಿತು ಮುಂಜಾಗೃತ ಕ್ರಮ ವಹಿಸಿ : ತಹಶಿಲ್ದಾರ ಹನುಮಂತ್ ಶಿರಹಟ್ಟಿ

ಬೆಳಗಾವಿ: ಬೆಳಗಾವಿ ತಾಲ್ಲೂಕಿನಲ್ಲಿ ಅತೀವೃಷ್ಠಿ ಹಾಗೂ ಅನಾವೃಷ್ಠಿ ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ತಹಶಿಲ್ದಾರರಾದ ಹನುಮಂತ್ ಶಿರಹಟ್ಟಿ ಸೂಚನೆ ನೀಡಿದರು. ಸ್ಥಳೀಯ ರೈತ ತರಬೇತಿ ಕೇಂದ್ರದಲ್ಲಿ  ರಂದು ನಡೆದ ವಿಪತ್ತು ನಿರ್ವಹಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಗ್ರಾಮೀಣ ಮಟ್ಟದಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು. ಜಿಂಗಲ್ಸ್ ಹಾಗೂ …

Read More »

ಕಾಂಗ್ರೆಸ್​ 5, ಬಿಜೆಪಿ 2 ಸ್ಥಾನಗಳಲ್ಲಿ ಗೆಲುವು! ಜೆಡಿಎಸ್​ಗೆ ಮುಖಭಂಗ

ಬೆಂಗಳೂರು: ವಿಧಾನ ಪರಿಷತ್‌ನ 7 ಸ್ಥಾನಗಳಿಗಾಗಿ ನಡೆದ ಮತದಾನದ ಫಲಿತಾಂಶ ಇಂದು ಸಂಜೆ ಪ್ರಕಟವಾಗಿದ್ದು, ಆಡಳಿತರೂಢ ಕಾಂಗ್ರೆಸ್​ ಮೇಲುಗೈ ಸಾಧಿಸಿದೆ. 32 ಮತಗಳಿಂದ ಗೆದ್ದ ವಿನಯ್​ ಕಾರ್ತಿಕ್​, ಅತಿ ಹೆಚ್ಚು ಮತಗಳನ್ನು ಗಳಿಸಿ ‘ಕೈ’ ಗೆಲುವಿಗೆ ಸಾಕ್ಷಿಯಾಗಿದ್ದಾರೆ. 6 ಜೆಡಿಎಸ್​, 3 ಬಿಜೆಪಿ ಶಾಸಕರಿಂದ ಅಡ್ಡ ಮತದಾನ! ಏಳನೇ ಸ್ಥಾನದ ಈ ರೋಚಕ ಕದನದಲ್ಲಿ ಕಾಂಗ್ರೆಸ್‌ನ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್‌ನ ಗೋವಿಂದರಾಜು ನಡುವೆ ಪೈಪೋಟಿ ಇತ್ತು, ಇಬ್ಬರಿಗೂ ಮ್ಯಾಜಿಕ್ ನಂಬರ್ …

Read More »

ಎಂಇಎಸ್ ಆಯೋಜಿಸಿರುವ ಕನ್ನಡ ಕಡ್ಡಾಯ ವಿರೋಧಿ ಮಹಾಮೋರ್ಚಾಗೆ ಅನುಮತಿ ನೀಡದಂತೆ ಕರವೇ ಒತ್ತಾಯ

ಜೂನ್ 22 ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ವತಿಯಿಂದ ಆಯೋಜಿಸಲಾಗಿರುವ ಕನ್ನಡ ಕಡ್ಡಾಯ ವಿರೋಧಿ ಮಹಾಮೋರ್ಚಾ ಕಾರ್ಯಕ್ರಮಕ್ಕೆ ಯಾವುದೇ ರೀತಿಯ ಅನುಮತಿ ನೀಡಬಾರದು ಎಂದು ಆಗ್ರಹಿಸಿ, ಇಂದು ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಮಾನ್ಯ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಕನ್ನಡ ನಾಡು, ನುಡಿ ಹಾಗೂ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿರುವ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಹಾಗೂ ಕಾನೂನು ಮತ್ತು …

Read More »

ಜೂ.25ಕ್ಕೆ ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ: ರಾಮಲಿಂಗಾರೆಡ್ಡಿ

ಕೊಪ್ಪಳ: ತುಂಗಭದ್ರಾ ಜಲಾಶಯದ ಹೊಸ ಕ್ರಸ್ಟ್ ಗೇಟ್‌ಗಳನ್ನು ಇದೇ ಜೂನ್ 25ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್‌ಗೆ ಭೇಟಿ ನೀಡಿ, ಜಲಾಶಯದ ಮೇಲ್ಭಾಗ ಹಾಗೂ ಕಾಯ೯ಕ್ರಮ ನಡೆಸುವ ಮೈದಾನವನ್ನು ಪರಿಶೀಲನೆ ನಡೆಸಿ, ಅಧಿಕಾರಿಗಳ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಹೊಸ ಕ್ರಸ್ಟ್ ಗೇಟಗಳ ಲೋಕಾಪ೯ಣೆ ಕಾಯ೯ಕ್ರಮಕ್ಕೆ ಆಂಧ್ರಪ್ರದೇಶ, ತಮಿಳುನಾಡಿನ ಮುಖ್ಯಮಂತ್ರಿಗಳು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರು ಆಗಮಿಸಲಿದ್ದಾರೆ. ಕೇಂದ್ರ ಜಲಸಂಪನ್ಮೂಲ …

Read More »

ಭಟ್ಕಳದಲ್ಲಿ ಲವ್ ಜಿಹಾದ್ ಆರೋಪ – ಅಪಹರಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ಯುವಕ ಅರೆಸ್ಟ್‌

ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ, ಮುಸ್ಲಿಂ ಸಂಘರ್ಷಕ್ಕೆ ಟ್ಟಿಸ್ಟ್ ಸಿಕ್ಕಿದೆ. ಕಾರಿನಲ್ಲಿ ಅಪಹರಿಸಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಮುಸ್ಲಿಂ ಯುವಕನನ್ನು ಅರೆಸ್ಟ್‌ ಮಾಡಲಾಗಿದ್ದು, ಲವ್ ಜಿಹಾದ್  ಆರೋಪ ಕೇಳಿಬಂದಿದೆ. ಯುವತಿಯನ್ನ ಅಪಹರಿಸುವ ವೇಳೆ ಹಿಂದೂಪರ ಕಾರ್ಯಕರ್ತರು ಕಾರನ್ನು ತಡೆದು ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಿದ್ದರು. ಆದರೇ ಗ್ರಾಮೀಣ ಠಾಣೆ ಪೊಲೀಸರು ಹಿಂದೂ ಮುಖಂಡರ ವಿರುದ್ಧವೇ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿದ್ದನ್ನ ವಿರೋಧಿಸಿ ಹಿಂದೂಪರ …

Read More »

ಹೊಸ ಸರ್ಕಾರ ಬಂದ ಮೇಲೆ ಶಾಸಕರ ಬೆಂಬಲ ನೋಡಿ ಆಶ್ಚರ್ಯ ಆಗ್ತಿದೆ: ಡಿಕೆಶಿ

ಬೆಂಗಳೂರು: ಹೊಸ ಸರ್ಕಾರ ಬಂದ ಮೇಲೆ ನಡೆದ ಚುನಾವಣೆಯಲ್ಲಿ ಶಾಸಕರ ಬೆಂಬಲ ನೋಡಿ ಆಶ್ಚರ್ಯ ಆಗುತ್ತಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದರು. ಪರಿಷತ್‌ ಚುನಾವಣೆ  ಫಲಿತಾಂಶದ ಬಗ್ಗೆ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ನಮ್ಮ ಸರ್ಕಾರಕ್ಕೆ ನೀವು ಮುಂದುವರಿಯಿರಿ ಎಂದು ರಾಜ್ಯದ ಜನರ ಅಭಿಪ್ರಾಯದ ಬೆಂಬಲ ಇದಾಗಿದೆ. ನಮಗೆ ಬೇರೆ ಬೇರೆ ಪಕ್ಷದವರು ಮತ ಕೊಟ್ಟಿದ್ದಾರೆ. ಅವರ ವಿಶ್ವಾಸಕ್ಕೆ, ಭಾವನಗೆ ನಾವು ಗೌರವಿಸುತ್ತೇವೆ. ಇದು ಇಡಿ …

Read More »

ಬಿಸಿಯೂಟದಲ್ಲಿ ಹಲ್ಲಿ ಬಾಲ ಪತ್ತೆ ಶಂಕೆ; 67 ಮಕ್ಕಳು ಆಸ್ಪತ್ರೆಗೆ ದಾಖಲು

ಮಂಡ್ಯ: ಶಾಲೆಯ ಬಿಸಿಯೂಟದಲ್ಲಿ ಹಲ್ಲಿ  ಬಿದ್ದಿರುವ ಶಂಕೆ ವ್ಯಕ್ತವಾದ ಹಿನ್ನೆಲೆ 67 ವಿದ್ಯಾರ್ಥಿಗಳನ್ನು ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ರಾವಣಿ ಗ್ರಾಮದಲ್ಲಿ ನಡೆದಿದೆ. ರಾವಣಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ ಒಬ್ಬ ವಿದ್ಯಾರ್ಥಿಯ ತಟ್ಟೆಯಲ್ಲಿ ಹಲ್ಲಿ ಬಾಲದಂತಿರುವ ಪದಾರ್ಥ ಪತ್ತೆಯಾಗಿದೆ. ಇದರಿಂದ ವಿದ್ಯಾರ್ಥಿಗಳು, ಶಿಕ್ಷಕರಲ್ಲಿ ಆತಂಕ ಉಂಟಾಗಿದೆ. ತಕ್ಷಣ ಎಚ್ಚೆತ್ತ ಶಾಲಾ ಸಿಬ್ಬಂದಿ, …

Read More »

ಮೊದಲ ಮಹಡಿಯಿಂದ ಬಿದ್ದು ಮಗು ದಾರುಣ ಸಾವು

ನೆಲಮಂಗಲ: ಆಟವಾಡುತ್ತಿದ್ದ ಮಗು ಮೊದಲನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ. ಟಿ.ದಾಸರಹಳ್ಳಿ  ನಿವಾಸಿ ನವೀನ್ ಕುಮಾರ್ ಹಾಗೂ ಕಾವ್ಯ ದಂಪತಿ ಪುತ್ರ ದೀಕ್ಷಿತ್ (2) ಮೃತಪಟ್ಟ ಮಗು. ಆಟವಾಡುವ ವೇಳೆ ಮೆಟ್ಟಿಲ ಮೇಲಿಂದ ಮಗು ಉರುಳಿ ಬಿದ್ದಿದೆ. ಕೂಡಲೇ ಪೋಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. 24 ಗಂಟೆಗಳ ಕಾಲ ಕೋಮಾದಲ್ಲಿದ್ದ ಮಗು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ನವೀನ್ ಕುಮಾರ್ ಹಾಗೂ ಕಾವ್ಯ …

Read More »

ಟೋಲ್ ವಿರೋಧಿಸಿ ಜೂ.23 ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ಮಂಡ್ಯ: ರಾಜ್ಯದ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ವಿರೋಧಿಸಿ ಮತ್ತು ರೈತರ ವಾಹನಗಳಿಗೆ ಟೋಲ್‌ನಿಂದ ವಿನಾಯಿತಿ ನೀಡಬೇಕೆಂದು ಆಗ್ರಹಿಸಿ, ಜೂನ್ 23 ರಂದು ರಾಜ್ಯಾದ್ಯಂತ ಟೋಲ್‌ ಬೂತ್‌ಗಳ ಮುಂದೆ ಬೃಹತ್ ಪ್ರತಿಭಟನೆ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ  ಕರೆ ನೀಡಿದೆ‌. ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದೆ ಎಂದು ಅಧ್ಯಕ್ಷ ಕುರುಬೂರು ಶಾಂತಕುಮಾರ್  ತಿಳಿಸಿದ್ದಾರೆ. ಕಬ್ಬು, ತರಕಾರಿ ಮತ್ತು ಹಣ್ಣುಗಳನ್ನು ಸಾಗಿಸುವ ಕೃಷಿ ವಾಹನಗಳ ಮೇಲೆ …

Read More »

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ – ಸಂಧ್ಯಾ ನಾಗರಾಜ್ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡ  ಅವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಬೆಂಗಳೂರಿನ ಸಂಧ್ಯಾ ನಾಗರಾಜ್‌ ವಿರುದ್ಧ ದೂರು ನೀಡಲಾಗಿದೆ. ಇತ್ತೀಚೆಗೆ ಮಾಧ್ಯಮವೊಂದರಲ್ಲಿ ಮಾತನಾಡಿದ್ದ ಸಂಧ್ಯಾ ನಾಗರಾಜ್‌ , ಜೈಲಿನಲ್ಲಿ ಅಧಿಕಾರಿಗಳು ಆಕೆಗೆ ಸಹಕಾರ ಕೊಡ್ತಿದ್ದಾರೆ. ಪ್ರತಿದಿನ ಬಾಕ್ಸ್‌ನಲ್ಲಿ ಊಟ ತಂದುಕೊಡ್ತಾರೆ. ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದರು. ಈ ಹಿಂದೆ ಜೈಲಿನಲ್ಲಿ ಇದ್ದ ಸಂಧ್ಯಾ ನಾಗರಾಜ್‌ …

Read More »