ಮೈಸೂರು, ಮೇ 21: ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಮಳೆ ಬಾರದೆ ಸಕಾಲದಲ್ಲಿ ತಂಬಾಕು ಕೃಷಿ ಆರಂಭಿಸಲು ಅಡಚಣೆ ಮಾಡಿದ ಮಳೆ ಇದೀಗ ಕಷ್ಟಪಟ್ಟು ಬೋರ್ ವೆಲ್ ನೀರಿನ ಮೂಲಕ ಬೆಳೆ ಬೆಳೆದ ಬೆಳೆಗಾರರಿಗೂ ಸಂಕಷ್ಟ ತಂದಿದೆ. ಕಾರಣ ಪೂರ್ವ ಮುಂಗಾರು ಮಳೆಯ ಅಬ್ಬರಕ್ಕೆ ಬಹುತೇಕ ಕಡೆ ಜಮೀನಿಗೆ ನೀರು ನುಗ್ಗಿ ಕೃಷಿ ನೆಲಕಚ್ಚಿವೆ. ಪಿರಿಯಾಪಟ್ಟಣ, ಹುಣಸೂರು, ಕೆ.ಆರ್.ನಗರ ತಾಲೂಕು ವ್ಯಾಪ್ತಿಯಲ್ಲಿ ತಂಬಾಕು ಕೃಷಿಗೆ ಮುಂದಾಗಿದ್ದ ಬೆಳೆಗಾರರು ಈಗ ಸಂಕಷ್ಟ ಎದುರಿಸುವಂತಾಗಿದೆ. ಕಳೆದ …
Read More »ಧಾರವಾಡ ಜಿಲ್ಲೆಗೆ ಮೂರು ದಿನ ಗುಡು ಸಹಿತ ಭಾರೀ ಮಳೆ ಸಂಭವ:?
ಧಾರವಾಡ, ಮೇ 21: ವಿದ್ಯಾಕಾಶಿ ಧಾರವಾಡ ಜಿಲ್ಲೆಯ ವ್ಯಾಪ್ತಿಯಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಆಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಹವಾಮಾನದಲ್ಲಿನ ಬದಲಾವಣೆಗಳಿಂದ ಮುಂದಿನ ಕೆಲವು ದಿನಗಳ ಕಾಲ ಜೋರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹುಬ್ಬಳ್ಳಿ, ಕಲಘಟಗಿ ಸೇರಿದಂತೆ ಧಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿ ಕಳೆದೊಂದು ವಾರದಿಂದ ಉತ್ತಮ ಮಳೆ ಆಗುತ್ತಿದೆ. ಬಿಸಿಲಿನಿಂದ ರೋಸಿ ಹೋಗಿದ್ದ ಜನರಿಗೆ ಮಳೆರಾಯ ಆಗಾಗ ತಂಪೆರೆಯುತ್ತಿದ್ದಾನೆ. ಇದೀಗ ಮುಂದಿನ …
Read More »ಕರೂರ್ ವೈಶ್ಯ ಬ್ಯಾಂಕ್ ಲಾಭದಲ್ಲಿ ಶೇ 34ರಷ್ಟು ಏರಿಕೆ
ಕರೂರ್ ವೈಶ್ಯ ಬ್ಯಾಂಕ್ ಲಾಭದಲ್ಲಿ ಶೇ 34ರಷ್ಟು ಏರಿಕೆ ಬೆಂಗಳೂರು: ಕರೂರ್ ವೈಶ್ಯ ಬ್ಯಾಂಕ್ 2023-24ನೇ ಹಣಕಾಸು ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ₹456 ಕೋಟಿ ನಿವ್ವಳ ಲಾಭ ಗಳಿಸಿದೆ. 2022-23ರ ಇದೇ ಅವಧಿಯಲ್ಲಿ ₹338 ಕೋಟಿ ಲಾಭ ಗಳಿಸಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 34.9ರಷ್ಟು ಏರಿಕೆಯಾಗಿದೆ ಎಂದು ಬ್ಯಾಂಕ್ ತಿಳಿಸಿದೆ. ವರಮಾನವು ₹739 ಕೋಟಿಯಿಂದ ₹867 ಕೋಟಿಗೆ ಹೆಚ್ಚಳವಾಗಿದೆ. ನಿವ್ವಳ ಬಡ್ಡಿ ಆದಾಯವು ಶೇ 11.5ರಷ್ಟು ಏರಿಕೆಯಾಗಿದ್ದು, ₹893 ಕೋಟಿಯಿಂದ …
Read More »ಅಧಿಕಾರ ಸಿಗದೆ ಕುಮಾರಸ್ವಾಮಿ ಕೈ ಹೊಸಕಿಕೊಳ್ಳುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ
ಬೆಂಗಳೂರು : “ಕುಮಾರಸ್ವಾಮಿ ಅವರು ಕಿಂಗ್ ಮೇಕರ್ ಆಗುತ್ತೇನೆ ಎಂದುಕೊಂಡಿದ್ದರು. ನನ್ನ ಅಧ್ಯಕ್ಷತೆಗೆ ಜನರು 136 ಸ್ಥಾನ, ಅವರಿಗೆ 19 ಸ್ಥಾನ ನೀಡಿದ್ದಾರೆ. ಈಗ ಅಧಿಕಾರ ಸಿಗದೆ ಕೈ, ಕೈ ಹೊಸಕಿಕೊಳ್ಳುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು. ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದದಲ್ಲಿ ಡಿ.ಕೆ.ಶಿವಕುಮಾರ್ ರಾಜಿನಾಮೆ ನೀಡಲಿ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆಗೆ ಅವರು ತಿರುಗೇಟು ನೀಡಿದ ಅವರು, “ಅಸೂಯೆಗೆ ಎಲ್ಲಾದರೂ ಮದ್ದಿದೆಯೇ? ಶಕ್ತಿ ಕಳೆದುಕೊಂಡಿದ್ದೇವೆ ಎಂದು …
Read More »ಸಹೋದರಿ ಮೇಲೆಯೇ ಅತ್ಯಾಚಾರವೆಸಗಿ ಗರ್ಭಿಣಿಯಾಗಿಸಿದ ಅಣ್ಣಂದಿರಿಬ್ಬರು ಅರೆಸ್ಟ್
ತಮ್ಮ 14 ವರ್ಷದ ಸಹೋದರಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಸಹೋದರರನ್ನು ಉತ್ತರಪ್ರದೇಶದ ಗಾಜೀಯಾಬಾದ್ ಪೊಲೀಸರು ಬಂಧಿಸಿದ್ದಾರೆ. ತಿಲಾ ಮೋರ್ಹ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಭಾನುವಾರ ಸಹೋದರರನ್ನು ಬಂಧಿಸಲಾಗಿದೆ. ದೂರಿನ ಪ್ರಕಾರ ಇಬ್ಬರು ಸಹೋದರರು ತಮ್ಮ ಸಹೋದರಿ 8 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾರೆ. ಕಳೆದ ಒಂದು ವರ್ಷದಿಂದ ಆಕೆಯನ್ನು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದು, ಈ ಕಾರಣದಿಂದ ಆಕೆ ಗರ್ಭಿಣಿಯಾಗಿದ್ದಳು. ಶನಿವಾರ …
Read More »1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅರ್ಜಿ ಶುಲ್ಕ ನಾಳೆ ಕೊನೆಯ ದಿನ!
ಬೆಂಗಳೂರು: ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆ ದಿನ. ಆದರೆ ಶುಲ್ಕ ಪಾವತಿಸಲು ಮೇ 22ರವರೆಗೆ ಅವಕಾಶ ನೀಡಲಾಗಿದೆ. ಹುದ್ದೆ ಹೆಸರು : ಗ್ರಾಮ ಆಡಳಿತ ಅಧಿಕಾರಿ (VA – ಗ್ರಾಮ ಲೆಕ್ಕಿಗ) ಹುದ್ದೆಗಳ …
Read More »ಜಾಮೀನು ಸಿಕ್ಕರೂ H.D ರೇವಣ್ಣಗೆ ತಪ್ಪದ ಸಂಕಷ್ಟ
ಬೆಂಗಳೂರು : ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಜಾಮೀನು ಮಂಜೂರು ಆಗಿದೆ. ಜಾಮೀನು ಸಿಕ್ಕರೂ ರೇವಣ್ಣಗೆ ಸಂಕಷ್ಟ ತಪ್ಪಿಲ್ಲ, ಎಸ್ ಐ ಟಿ ಹೈಕೋರ್ಟ್ ಮೆಟ್ಟಿಲೇರಿದೆ. ಹೌದು. ಜಾಮೀನು ಪಡೆದಿದ್ದ ಹೆಚ್ ಡಿ ರೇವಣ್ಣಗೆ ವಿಶೇಷ ತನಿಖಾ ತಂಡ ( ಎಸ್ ಐ ಟಿ) ಶಾಕ್ ನೀಡಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಜಾಮೀನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದೆ. ರೇವಣ್ಣ ಜಾಮೀನು ಆದೇಶ ವಜಾ …
Read More »ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ: ಸಿಎಂ
ಬೆಂಗಳೂರು: ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆಯ ಕುರಿತು ಎದ್ದಿರುವ ಊಹಾಪೋಹಗಳಿಗೆ ಸಿಎಂ ಸಿದ್ದರಾಮಯ್ಯ ಸೋಮವಾರ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನ ಪ್ರೆಸ್ ಕ್ಲಬ್ ಆಯೋಜಿಸಿದ್ದ ‘ಮೀಟ್ ದಿ ಪ್ರೆಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ‘ಲೋಕಸಭೆ ಚುನಾವಣೆ ನಂತರ ಯಾವುದೇ ಸಚಿವ ಸಂಪುಟ ಪುನಾರಚನೆ ಸುದ್ದಿಗಳಲ್ಲಿ ಹುರುಳಿಲ್ಲ. ಆ ಬಗ್ಗೆ ನಾವಿನ್ನೂ ಯೋಚಿಸಿಲ್ಲ ಎಂದರು. ಸಚಿವ ಸಂಪುಟ ಪುನಾರಚನೆ ಮಾಡುವ ಯೋಚನೆ ಸದ್ಯಕ್ಕಿಲ್ಲ. ಯಾವುದೇ ಕಾರಣಕ್ಕೂ ನಾವು ಯಾವುದೇ ಗ್ಯಾರಂಟಿ …
Read More »ಮೂಲ ಸೌಕರ್ಯ ಕಲ್ಪಿಸದ ಲೇಔಟ್ ಡೆವಲಪರ್‌ಗಳಿಗೆ ನೋಟೀಸ್: ಡಿಸಿಎಂ
ಬೆಂಗಳೂರು: ಯಲಹಂಕ ವಲಯದ ಗೇಟೆಡ್ ಕಮ್ಯುನಿಟಿ ವಿಲ್ಲಾಗಳಲ್ಲಿ ಹಠಾತ್ ಪ್ರವಾಹ ಸಂಭವಿಸಿದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು. ಸೂಕ್ತ ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್‌ಗಳ ಡೆವಲಪರ್‌ಗಳಿಗೆ ನೋಟಿಸ್ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ನಗರದ ರಾಜಕಾಲುವೆಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಉಪಮುಖ್ಯಮಂತ್ರಿ, ‘ಖಾಸಗಿ ಬಡಾವಣೆಗಳಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮನೆಗಳಿಗೆ …
Read More »ಕೊಯ್ನಾ ಅಣೆಕಟ್ಟೆಯಿಂದ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಒಪ್ಪಿಗೆ
ಬೆಳಗಾವಿ: ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪತ್ರ ಬರೆದಿದ್ದರು.ಇದಾದ ಕೆಲವೇ ದಿನಗಳಲ್ಲಿ ಕರ್ನಾಟಕಕ್ಕೆ ನೀರು ಬಿಡಲು ಶಿಂಧೆ ಸಮ್ಮತಿ ನೀಡಿದ್ದಾರೆ. ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಶೀಘ್ರದಲ್ಲೇ ಕೃಷ್ಣಾ ನದಿಗೆ ನೀರು ಬಿಡಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇದಲ್ಲದೆ, ಸೋಮವಾರ ರಾಯಬಾಗ ತಾಲೂಕಿಗೆ …
Read More »