ಬೆಳಗಾವಿ: ಇಲ್ಲಿನ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ನಾಲ್ಕು ದಿನ ವೈಭವದಿಂದ ನಡೆದ ಬನಶಂಕರಿ ದೇವಸ್ಥಾನದ ಶತಮಾನೋತ್ಸವ ಕಾರ್ಯಕ್ರಮ ಭಾನುವಾರ ಸಂಪನ್ನಗೊಂಡಿತು. ಜಾತ್ರೆಯ ಕೊನೆಯ ದಿನ ಬೆಳಿಗ್ಗೆ ಮಹಾಕುಂಭಾಭಿಷೇಕ, ದೀಪಾರಾಧನೆ, ಮಹಾಮಂಗಳಾರತಿ ಧಾರ್ಮಿಕ ಕಾರ್ಯಕ್ರಮ ನೆರವೇರಿದವು. ಸಾವಿರಾರು ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲೆಯ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ಸರದಿ ಸಾಲಿನಲ್ಲಿ ನಿಂತು, ಬನಶಂಕರಿ ದೇವಿ ದರ್ಶನಾಶೀರ್ವಾದ ಪಡೆದುಕೊಂಡರು. ತಮ್ಮ ಇಷ್ಟಾರ್ಥ ಈಡೇರಿದ್ದರಿಂದ ಕೆಲವರು ದೇವಿಗೆ ಸೀರೆ, ಚಿನ್ನಾಭರಣ …
Read More »ಬಸವಣ್ಣ ಪಾವಿತ್ರ್ಯತೆ ಕಲಿಸಿದ ಪುರುಷೋತ್ತಮ: ಸಿದ್ಧಬಸವ ದೇವರು
ಬೆಳಗಾವಿ: ‘ಸಮಾನತೆ ತತ್ವ, ಸಾಮಾಜಿಕ ಕ್ರಾಂತಿ ಹಾಗು ಅನುಭವ ಮಂಟಪದ ಮುಖಾಂತರ ಪ್ರಜಾಪ್ರಭುತ್ವದ ಕಲ್ಪನೆ ನೀಡಿ, ಸೂಳೆ ಸಂಕವ್ವ ಸೇರಿದಂತೆ ಎಲ್ಲ ವೃತ್ತಿಯವರಿಗೆ ಸಮಾನವಾಗಿ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಬಸವಣ್ಣ ಎಲ್ಲರಿಗೂ ಪಾವಿತ್ರ್ಯತೆ ಕಲಿಸಿದ ಪುರುಷೋತ್ತಮ’ ಎಂದು ಯಮಕನಮರಡಿಯ ಹುಣಸಿಕೊಳ್ಳ ಮಠದ ಸಿದ್ಧಬಸವ ದೇವರು ಶ್ಲಾಘಿಸಿದರು. ಇಲ್ಲಿನ ಶಿವಬಸವ ನಗರದ ಪ್ರಭುದೇವ ಸಭಾಗೃಹದಲ್ಲಿ ಜಾಗತಿಕ ಲಿಂಗಾಯತ ಮಹಾಸಭೆ ಹಾಗೂ ನಾಗನೂರು ರುದ್ರಾಕ್ಷಿಮಠದ ಸಹಯೋಗದಲ್ಲಿ ಬಸವ ಜಯಂತ್ಯುತ್ಸವದ ಎರಡನೇ ದಿನವಾದ …
Read More »ಚಿಕ್ಕೋಡಿ: ಯಮ ಸಲ್ಲೇಖನ ವ್ರತ ಕೈಗೊಂಡ ಮುನಿ
ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕೋಥಳಿಯ ದೇಶಭೂಷಣ ಮುನಿಗಳ ಜೈನ ಆಶ್ರಮದಲ್ಲಿ ಸಮಾಧಿ ಸೇನ ಮುನಿಗಳು(79) ಮೇ 17ರಿಂದ ನಾಲ್ಕು ಪ್ರಕಾರದ ಆಹಾರ(ಲೇಹ, ಪೇಯ, ಸ್ವಾದ್ಯ ಮತ್ತು ಖಾದ್ಯ) ತ್ಯಾಗ ಮಾಡಿ, ಯಮ ಸಲ್ಲೇಖನ ವ್ರತ ಕೈಗೊಂಡಿದ್ದಾರೆ. ಚಿಕ್ಕೋಡಿ, ನಿಪ್ಪಾಣಿ, ಕಾಗವಾಡ, ಅಥಣಿ ತಾಲ್ಲೂಕು, ಪಕ್ಕದ ಮಹಾರಾಷ್ಟ್ರದ ಕೊಲ್ಹಾಪೂರ ಮತ್ತು ಸಾಂಗ್ಲಿ ಜಿಲ್ಲೆಯಿಂದ ಅಪಾರ ಸಂಖ್ಯೆಯಲ್ಲಿ ಜನರು ಆಶ್ರಮಕ್ಕೆ ಆಗಮಿಸಿ, ಮುನಿಗಳ ದರ್ಶನ ಪಡೆಯುತ್ತಿದ್ದಾರೆ. ಗದಗ ಜಿಲ್ಲೆಯ ಗಜೇಂದ್ರಗಡದವರಾದ ಸಮಾಧಿ …
Read More »ಮುಂಡರಗಿ: ಬಿಸಿಲಿನಿಂದ ಬೆಂದಿದ್ದ ಜನಕ್ಕೆ ತಂಪೆರೆದ ವರುಣ
ಮುಂಡರಗಿ: ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಭಾಗಗಳಲ್ಲಿ ಶನಿವಾರ ರಾತ್ರಿ ಹಾಗೂ ಭಾನುವಾರ ಸಂಜೆ ಸಾಧಾರಣ ಮಳೆ ಸುರಿಯಿತು. ಕಳೆದ ಹಲವು ದಿನಗಳಿಂದ ಮಳೆಗಾಗಿ ಹಂಬಲಿಸುತ್ತಿದ್ದ ಜನರ ಮುಖದಲ್ಲಿ ಸಾಧಾರಣವಾಗಿ ಸುರಿದ ಮಳೆಯು ಮಂದಹಾಸ ಮೂಡಿಸಿತು. ಭಾನುವಾರ ಸಂಜೆ 4ಗಂಟೆಗೆ ಆರಂಭವಾದ ಮಳೆಯು ಸುಮಾರು ಮುಕ್ಕಾಲು ಗಂಟೆಗಳ ಕಾಲ ಸುರಿಯಿತು. ಮಳೆಯ ರಭಸಕ್ಕೆ ಹೂತು ಹೋಗಿದ್ದ ಪಟ್ಟಣದ ಬಹುತೇಕ ಚರಂಡಿಗಳ ಹೂಳೆಲ್ಲಿ ಕಿತ್ತುಹೋಯಿತು. ಪಟ್ಟಣದ ಹೊರವಲಯದ ಖಾಲಿ ನಿವೇಶನಗಳು ಹಾಗೂ …
Read More »ಅಧೀರ್ ರಂಜನ್ ಬಗ್ಗೆ ಹೇಳಿಕೆ: ಕೋಲ್ಕತ್ತದಲ್ಲಿ ಖರ್ಗೆ ಪೋಸ್ಟರ್‌ಗೆ ಮಸಿ
ಕೋಲ್ಕತ್ತ: ಇಂಡಿಯಾ ಒಕ್ಕೂಟಕ್ಕೆ ಮಮತಾ ಬ್ಯಾನರ್ಜಿ ಅವರು ಸೇರುವ ಬಗ್ಗೆ ಅಧೀರ್ ರಂಜನ್ ಚೌಧರಿ ಅವರು ನಿರ್ಧರಿಸುವುದಿಲ್ಲ ಎಂದು ಹೇಳಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಚಿತ್ರಕ್ಕೆ ಕೋಲ್ಕತ್ತದಲ್ಲಿ ಮಸಿ ಬಳಿಯಲಾಗಿದೆ. ಇಲ್ಲಿರುವ ಕಾಂಗ್ರೆಸ್‌ನ ರಾಜ್ಯ ಕಚೇರಿಯ ಮುಂಭಾದಲ್ಲಿರುವ ಹಲವು ಪೋಸ್ಟರ್‌ಗಳಲ್ಲಿ ಖರ್ಗೆ ಅವರ ಚಿತ್ರಕ್ಕೆ ಮಸಿ ಬಳಿಯಲಾಗಿದೆ. ಖರ್ಗೆ ಅವರ ಚಿತ್ರವಿದ್ದ ಪೋಸ್ಟರ್ ಮೇಲೆ ‘ತೃಣಮೂಲ ಕಾಂಗ್ರೆಸ್‌ನ ಏಜೆಂಟ್’ ಎಂದು ಬರೆಯಲಾಗಿದೆ. ಘಟನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅಧೀರ್ …
Read More »ಹುಬ್ಬಳ್ಳಿ: ಆತ್ಮಹತ್ಯೆಗೆ ಯತ್ನಿಸಿದ್ದ ಅಂಜಲಿ ಸಹೋದರಿ ಗುಣಮುಖ
ಹುಬ್ಬಳ್ಳಿ: ಫಿನಾಯಿಲ್ ಸೇವಿಸಿ ಶನಿವಾರ ಆತ್ಮಹತ್ಯೆಗೆ ಯತ್ನಿಸಿದ್ದ, ಈಚೆಗೆ ಕೊಲೆಯಾದ ಇಲ್ಲಿನ ವೀರಾಪುರ ಓಣಿಯ ನಿವಾಸಿ ಅಂಜಲಿ ಅವರ ಸಹೋದರಿ ಯಶೋಧಾಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗುಣಮುಖರಾದ ಯಶೋಧಾ ಭಾನುವಾರ ಮನೆಗೆ ಮರಳಿದ್ದಾರೆ. ಹುಬ್ಬಳ್ಳಿಯಲ್ಲಿ ಶನಿವಾರ ನಡೆದ ಮಠಾಧೀಶರ ಪ್ರತಿಭಟನೆ ವೇಳೆ ಯಶೋಧಾ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿತ್ತು. ಆದರೆ, ತಡರಾತ್ರಿ ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ‘ಅಕ್ಕ ಅಂಜಲಿಯನ್ನು ಕೊಲೆ …
Read More »ಅಂಜಲಿ ಕುಟುಂಬಕ್ಕೆ ಜೋಳಿಗೆ ಹಣ: ಚಂದ್ರಶೇಖರ್ ಸ್ವಾಮೀಜಿ
ಹುಕ್ಕೇರಿ (ಬೆಳಗಾವಿ ಜಿಲ್ಲೆ): ಹುಬ್ಬಳ್ಳಿಯಲ್ಲಿ ಹತ್ಯೆಯಾದ ಅಂಜಲಿ ಅಂಬಿಗೇರ ಕುಟುಂಬಕ್ಕೆ ಹುಕ್ಕೇರಿ ಹಿರೇಮಠದಲ್ಲಿ ನಡೆದ ಲಿಂಗದೀಕ್ಷೆ (ಶಿವದೀಕ್ಷಾ) ಪಡೆದ ವಟುಗಳು ಭೀಕ್ಷಾಟನೆ ಮೂಲಕ ಜೋಳಿಗೆಯಲ್ಲಿ ತಂದ ₹ 50 ಸಾವಿರ ನೀಡುವುದಾಗಿ ಸ್ಥಳೀಯ ಹಿರೇಮಠದ ಚಂದ್ರಶೇಖರ್ ಸ್ವಾಮೀಜಿ ಹೇಳಿದರು. ಹಿರೇಮಠದ ಗುರುಶಾಂತೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಜಂಗಮದೀಕ್ಷೆ ಕಾರ್ಯಕ್ರಮದಲ್ಲಿ ಜಂಗಮರ ಜೋಳಿಗೆಯಲ್ಲಿ ಬಂದ ಹಣವನ್ನು ಮಠಕ್ಕಾಗಿ ಬಳಸುತ್ತೇವೆ. ಆದರೆ ಕುಟುಂಬ ಸಾಗಿಸುತ್ತಿದ್ದ ಅಂಜಲಿ ಅಂಬಿಗೇರ ಅವರ ಹತ್ಯೆಯಿಂದ ಕುಟುಂಬ …
Read More »ವೀರಯ್ಯಸ್ವಾಮಿ ಶಾಸ್ತ್ರಿಮಠ ಇನ್ನಿಲ್ಲ: ನಾಳೆ ಅಂತ್ಯಕ್ರಿಯೆ
ಬೆಂಗಳೂರು: ಜಗದ್ಗುರು ದಾರುಕಾಚಾರ್ಯ ಆಶ್ರಮ ಸ್ಥಾಪಕ ವೀರಯ್ಯಸ್ವಾಮಿ ಶಾಸ್ತ್ರಿಮಠ (91) ಭಾನುವಾರ ಬೆಳಗ್ಗೆ ಶಿವಕ್ಯರಾದರು. ಸ್ವಾತಂತ್ಯ ಹೋರಾಟಗಾರರಾಗಿದ್ದ ಇವರು ನೇತಾಜಿ ಸುಭಾಸ್ಚಂದ್ರ ಬೋಸ್ ಟ್ರಸ್ಟ್ ಸೇರಿ ಹಲವು ಸಂ ಸಂಸ್ಥೆಗಳಲ್ಲಿ ಸಕ್ರಿಯಯಾಗಿದ್ದರು. ಸನಾತನ ಧರ್ಮದ ಬಗ್ಗೆ ಪ್ರವರ್ಚನ ನೀಡುತ್ತಾ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ರಾಜಾಜಿನಗರದ ಮನೆಯಲ್ಲಿ ಭಕ್ತಾಧಿಗಳಿಗೆ ದರ್ಶನ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ( ಮೇ 20) ಬೆಳಗ್ಗೆ ಮಾಗಡಿ ರಸ್ತೆಯ ಕನ್ನಹಳ್ಳಿಯ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
Read More »ಶಂಕರ್ ಬಿದರಿ ಫೇಸ್‌ಬುಕ್ ಮತ್ತೆ ಹ್ಯಾಕ್
ಬೆಂಗಳೂರು: ಫೇಸ್‌ಬುಕ್ ಹ್ಯಾಕ್ ಮಾಡಿ ಮೋಸ ಮಾಡುವ ಸೈಬರ್ ಕಳ್ಳರ ಕಾಟ ನಿವೃತ್ತ ಡಿಜಿ-ಐಜಿಪಿ ಶಂಕರ್ ಬಿದರಿ ಅವರಿಗೂ ತಪ್ಪಿಲ್ಲ. ಕೆಲ ದಿನಗಳ ಹಿಂದೆ ಶಂಕರ್‌ಬಿದರಿ ಫೇಸ್‌ಬುಕ್ ಹ್ಯಾಕ್ ಮಾಡಿದ್ದ ಸೈಬರ್ ಕಳ್ಳರು ಟ್ರೇಟಿಂಗ್ ವ್ಯವಹಾರದಲ್ಲಿ ಹಣ ತೊಡಗಿಸಿದರೇ ಹೆಚ್ಚಿನ ಲಾಭಾಂಶ ಸಿಗಲಿದೆ ಎಂಬ ಪೋಸ್ಟ ಮಾಡಿದ್ದರು. ಜತೆಗೆ ಲಿಂಕ್ ಸಹ ಕಳುಹಿಸಿ ಅದರ ಮೇಲೆ ಕ್ಲಿಕ್ ಮಾಡಿ ಹೂಡಿಕೆ ಮಾಡುವಂತೆ ಶಂಕರ್ ಬಿದರಿ ಅವರೇ ಸಲಹೆ ಕೊಟ್ಟಂತೆ ಮಾಡಿದ್ದರು. ಕಳೆದ …
Read More »ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು
ಕಾರ್ಕಳ:/ಅಜೆಕಾರು: ಮೀನು ಹಿಡಿಯಲು ತೆರಳಿದ್ದ ಒಂದೆ ಕುಟುಂಬದ ಇಬ್ಬರು ಸದಸ್ಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುದೆಲ್ಕಡಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ದರ್ಖಾಸು ನಿವಾಸಿ ವಿವಾಹಿತ ಹರೀಶ್ ಪೂಜಾರಿ( 43) ಮತ್ತು ಸಹೋದರಿ ಮಗ ಕೆರ್ವಾಶೆಯ ಪಾಚಾರಬೆಟ್ಟು ನಿವಾಸಿ ಬಾಲಕ ರಿತೇಶ್(17) ಮೃತ ದುರ್ದೈವಿಗಳು. ಶಿರ್ಲಾಲುವಿನ ಮೂಡಯಿಗುಡ್ಡೆ ದರ್ಖಾಸು ನಿವಾಸಿ, ಸೇತು ಪೂಜಾರಿ ಕಮಲ ದಂಪತಿಗಳ ಪುತ್ರರಾಗಿರುವ ಹರೀಶ್ ಪೂಜಾರಿ ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದರು. …
Read More »