ಹುಬ್ಬಳ್ಳಿ : ಸರ್ಕಾರ ದಕ್ಷ ಪೊಲೀಸ್ ಅಧಿಕಾರಿ ನೇಮಿಸಬೇಕು. ಸರ್ಕಾರಕ್ಕೆ ಧಮ್ಮ ಇಲ್ಲ, ಅಂದರೆ ರಾಜೀನಾಮೆ ಕೊಟ್ಟು ಹೋಗಿ ಎಂದು ಮೃತ ನೇಹಾ ತಂದೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾರ್ಪೋರೇಟರ್ ನಿರಂಜನ್ ಹಿರೇಮಠ (niranjan hiremath) ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಾರ್ಡ್ನಲ್ಲಿ ಎರಡು ಕೊಲೆಗಳು ಆಗಿವೆ. ಮೊದಲು ನನ್ನ ಕೊಲೆ ಮಾಡಲು ಸಂಚು ರೂಪಿಸಿದ್ದರು, ಆದರೆ ನನ್ನ ಮಗಳನ್ನು ಕೊಲೆ ಮಾಡಿದ್ದಾರೆ. ಬಳಿಕ ಅಂಜಲಿ ಯುವತಿಯ ಕೊಲೆ …
Read More »ಸತತ 6 ಸೋಲಿನಿಂದ ಸತತ 6 ಗೆಲುವಿನ ತನಕ; ಅಸಾಧ್ಯವನ್ನೂ ಸಾಧಿಸಿದ ಆರ್ಸಿಬಿ ಪ್ಲೇಆಫ್ ಹಾದಿಯೇ ರೋಚಕ
ಮೊದಲ 8 ಪಂದ್ಯಗಳಲ್ಲಿ ಕೇವಲ ಒಂದು ಗೆಲುವು. ಉಳಿದ 7 ಪಂದ್ಯಗಳಲ್ಲಿ ಹೀನಾಯ ಸೋಲು. ಅದರಲ್ಲೂ ಆರು ಪಂದ್ಯಗಳಲ್ಲಿ ಸತತ ಸೋಲು. ಅಂಕಪಟ್ಟಿಯಲ್ಲಿ ಕೊನೆಯ (10ನೇ) ಸ್ಥಾನ. ಈ ತಂಡ ಐಪಿಎಲ್ 2024ರ ಪ್ಲೇಆಫ್ ಪ್ರವೇಶಿಸುವುದು ಬಿಡಿ, ಕನಿಷ್ಠ ಅಂಕಪಟ್ಟಿಯಲ್ಲಿ 9ನೇ ಸ್ಥಾನ ಪಡೆಯುವುದು ಕೂಡಾ ಅಸಾಧ್ಯ ಎಂದು ಹೇಳಿದವರೇ ಹೆಚ್ಚು. ಆದರೆ, ಆ ತಂಡದ ಕೋಟ್ಯಾಂತರ ನಿಷ್ಠಾವಂತ ಅಭಿಮಾನಿಗಳಿಗೆ ತನ್ನ ನೆಚ್ಚಿನ ತಂಡದ ಮೇಲೆ ಸಂಪೂರ್ಣ ನಂಬಿಕೆ ಇತ್ತು. …
Read More »ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ
ಮೇಷ: ಗೃಹಕೃತ್ಯಗಳಿಗೆ ಅನಿವಾರ್ಯವಾಗಿ ಸಮಯ ನೀಡಿಕೆ. ಹತ್ತಿರದ ದೇವಾಲಯಕ್ಕೆ ಭೇಟಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಮಾಧಾನದ ದಿನ. ದೂರದಲ್ಲಿರುವ ಆತ್ಮೀಯ ಮಿತ್ರರಿಂದ ಶುಭ ಸಮಾಚಾರ. ವೃಷಭ: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ. ಕುಟುಂಬದ ಹಿರಿಯ ಸದಸ್ಯರ ಭೇಟಿ. ಅನಾಥಾಶ್ರಮ, ವೃದ್ಧಾಶ್ರಮ ಗಳಿಗೆ ಭೇಟಿ. ಹಿರಿಯರು, ಗೃಹಿಣಿಯರಿಗೆ ನೆಮ್ಮದಿಯ ಅನುಭವ. ಬಂಧುವರ್ಗದಲ್ಲಿ ವಿವಾಹ ಮಾತುಕತೆ. ಮಿಥುನ: ಮನೆಯಲ್ಲಿ ವಿರಾಮದ ಭಾವ. ಉದ್ಯೋಗಸ್ಥರಿಗೆ ಬಾಕಿಯುಳಿದಿರುವ ನಾಳೆಗೆ ಉಳಿದಿರುವ ಕೆಲಸಗಳ ಚಿಂತೆ. ವ್ಯವಹಾರಸ್ಥರಿಗೆ ನಿರಾಳ …
Read More »BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
ಹೊಸದಿಲ್ಲಿ:”ಆಮ್ ಆದ್ಮಿ ಪಕ್ಷದ ಉನ್ನತ ನಾಯಕರು ಭಾನುವಾರ (ಮೇ 19) ಬಿಜೆಪಿ ಪ್ರಧಾನ ಕಚೇರಿಗೆ ಬರುತ್ತೇವೆ. ಎಲ್ಲರನ್ನೂ ಬಂಧಿಸಿ” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸವಾಲು ಹಾಕಿದ್ದಾರೆ. ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಆರೋಪದಲ್ಲಿ ಅವರ ಸಹಾಯಕ ಬಿಭವ್ ಕುಮಾರ್ ಅವರನ್ನು ಬಂಧಿಸಿದ ಕೆಲವೇ ಗಂಟೆಗಳ ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್ “ಪ್ರಧಾನಿ ಜೈಲಿನ ಆಟ ಆಡುತ್ತಿದ್ದಾರೆ’ ಎಂದು …
Read More »ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
ಗದಗ: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸಾವಿಗೀಡಾಗಿ, ಓರ್ವ ಗಾಯಗೊಂಡ ದುರ್ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ. ರೋಣದ ವೀರಭದ್ರೇಶ್ವರ ಜಾತ್ರೆ ಅಂಗವಾಗಿ ಶನಿವಾರ ಸಂಜೆ ಮಹಾರಥೋತ್ಸವ ನಡೆಯಿತು. ಈ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯವಾಗಿವೆ. ಮೃತ ಭಕ್ತರು ರೋಣ ಮೂಲದ ನಿವಾಸಿಗಳು ಎನ್ನಲಾಗುತ್ತಿದೆ. ಮಲ್ಲಪ್ಪ ಲಿಂಗನ ಗೌಡ್ರ(55) ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇನ್ನೋರ್ವನ ಹೆಸರು …
Read More »Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ
ಕಲಬುರಗಿ: ಮೆಟ್ರಿಕ್ ನಕಲು ಮಾರ್ಕ್ಸ್ ಕಾರ್ಡ್ ನೀಡಲು 5000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ ಶಿಕ್ಷಣ ಇಲಾಖೆಯ ಇಬ್ಬರು ಎಫ್.ಡಿ.ಎ ಗಳು ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳನ್ನು ಶಿವಶಂಕರಯ್ಯ ಹಾಗೂ ಜಟ್ಟಿಂಗ್ರಾಯ ಎಂದು ಗುರುತಿಸಲಾಗಿದೆ. ಇವರಿಬ್ಬರು ಹತ್ತನೇ ತರಗತಿಯ ಮಾರ್ಕ್ಸ್ ಕಾರ್ಡಿನ ನಕಲನ್ನು ನೀಡಲು ವಿದ್ಯಾರ್ಥಿಯ ತಂದೆಯಿಂದ 5000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಶನಿವಾರ ಸಾರ್ವಜನಿಕ ಸ್ಥಳ ಒಂದರಲ್ಲಿ ದೂರುದಾರ ಆರೂನ್ …
Read More »ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ
ಹುಬ್ಬಳ್ಳಿ: ನೇಹಾ ಹಿರೇಮಠ ಮತ್ತು ಅಂಜಲಿ ಅಂಬಿಗೇರ ಹತ್ಯೆಗೆ ಸಂಬಂಧಿಸಿ ರಾಜ್ಯ ಸರ್ಕಾರವು ಹು-ಧಾ. ಪೊಲೀಸ್ ಆಯುಕ್ತಾಲಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೋಲಿಸ್ ಆಯುಕ್ತ (ಡಿಸಿಪಿ)ರ ತಲೆದಂಡವಾಗಿದೆ. ಯುವತಿಯರಿಬ್ಬರ ಕೊಲೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಆಪಾದನೆ ಅಡಿ ಡಿಸಿಪಿ ರಾಜೀವ ಎಂ. ಅವರನ್ನು ರಾಜ್ಯ ಸರ್ಕಾರವು ಅಮಾನತುಗೊಳಿಸಿ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.
Read More »ರಾಜ್ಯಕ್ಕೆ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿB.J.P. ಪ್ರಕಟನೆ
ಬೆಂಗಳೂರು: ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಕುಸಿಯುತ್ತಿದೆ ಎಂದು ಆರೋಪಿಸಿರುವ ಬಿಜೆಪಿ, ಇದೀಗ ರಾಜ್ಯಕ್ಕೆ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಕಟನೆ ಹೊರಡಿಸುವ ಮೂಲಕ ಸರಕಾರವನ್ನು ಕೆಣಕಿದೆ. ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮಹಿಳೆಯರು, ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡುವುದಕ್ಕೆ ಗ್ಯಾರಂಟಿ ಕೊಡುವ ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ ಎಂದು ವ್ಯಂಗ್ಯವಾಡಿದೆ. ಅಪರಾಧಿಗಳಿಗೆ ಶ್ರೀರಕ್ಷೆ- ಅಮಾಯಕರಿಗೆ ಶಿಕ್ಷೆ. ರಕ್ತ ಸಿಕ್ತ ಕೈನಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, …
Read More »ಶಾಲಾರಂಭಕ್ಕೆ ಭರದ ಸಿದ್ಧತೆ
ಉಡುಪಿ: ಉಭಯ ಜಿಲ್ಲೆಗಳಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಮೇ 29ರಿಂದ 2024-25ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭವಾಗಲಿದೆ. ಸರಕಾರಿ ಶಾಲೆಗಳಲ್ಲಿ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ನೀಡಲು ಬೇಕಾದ ತಯಾರಿಯೂ ಆಗುತ್ತಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಶಾಲೆಗಳಿಗೆ ಅಗತ್ಯವಿರುವ ಪಠ್ಯಪುಸ್ತಕ ಹಾಗೂ ಸಮವಸ್ತ್ರದ ಮಾಹಿತಿಯನ್ನು ಈಗಾಗಲೇ ಜಿಲ್ಲಾ ಉಪನಿರ್ದೇಶಕರ ಕಚೇರಿಯಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ. ಅದರಂತೆ …
Read More »ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
ಬೆಂಗಳೂರು: ಇದೇ ತಿಂಗಳು 20ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಒಂದು ವರ್ಷ ಪೂರೈಸಲಿದೆ. ಆದರೆ ಸಂಭ್ರಮಾಚರಣೆ ನಡೆಸುವುದಕ್ಕೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗಿದೆ. ವಿಧಾನಸಭಾ ಚುನಾವಣೆಗೆ ಮುನ್ನ ಜನತೆಗೆ ನೀಡಿದ್ದ ಗ್ಯಾರಂಟಿ ಯೋಜನೆಗಳ ಭರವಸೆಯನ್ನು ಹಲವು ಸವಾಲುಗಳ ಮಧ್ಯೆಯೂ ಸಮರ್ಪಕವಾಗಿ ಅನುಷ್ಠಾನ ಗೊಳಿಸಿರುವ ರಾಜ್ಯ ಸರಕಾರವು ಅದರ ನೆರಳಿನಲ್ಲೇ ಲೋಕ ಸಭಾ ಚುನಾವಣೆ ಯನ್ನು ಎದುರಿಸಿದೆ. ಈ ಸಾಧನೆಯ ಬಲದಿಂದಲೇ ಲೋಕಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಗಳಿಕೆಯ …
Read More »