Breaking News

Uncategorized

ಕೋಲಾರದಿಂದ ಖರ್ಗೆ ಕಣಕ್ಕೆ..?

ಬೆಂಗಳೂರು,ಮಾ.29- ಜಿಲ್ಲೆಯಲ್ಲಿ ಉಭಯ ಬಣವನ್ನು ಸಮಾಧಾನಪಡಿಸಲು ನಾನಾ ರೀತಿಯ ಪ್ರಯತ್ನಗಳು ನಡೆಯುತ್ತಿದ್ದು, ಒಂದೆಡೆ ಹೊಸ ಅಭ್ಯರ್ಥಿಯ ಹುಡುಕಾಟ ನಡೆದಿದ್ದರೆ, ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಕ್ಷೇತ್ರದಿಂದ ಕಣಕ್ಕಿಳಿಯುವಂತೆ ರಮೇಶ್ ಕುಮಾರ್ ಬಣ ಹೊಸ ಪ್ರಸ್ತಾವನೆ ಮುಂದಿಟ್ಟಿದೆ. ಈ ನಡುವೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ತನಗೆ ಟಿಕೆಟ್ ಸಿಗುವುದಿಲ್ಲ ಎಂಬುದು ಖಾತ್ರಿಯಾಗಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಶಿವಶಂಕರ ರೆಡ್ಡಿ ಕಾಂಗ್ರೆಸ್ ತೊರೆಯಲು ಮುಂದಾಗಿದ್ದಾರೆ.ಚಿಕ್ಕಬಳ್ಳಾಪುರದಲ್ಲಿ ಮರು ಸ್ಪರ್ಧೆಗಾಗಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ …

Read More »

ಕಾಂಗ್ರೆಸ್‌ಗೆ ಮತ್ತೆ ಶಾಕ್ ನೀಡಿದ ಆದಾಯ ತೆರಿಗೆ ಇಲಾಖೆ, ₹1700 ಕೋಟಿ ತೆರಿಗೆ ಪಾವತಿಸಲು ನೋಟಿಸ್!

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election) ಹೊಸ್ತಿಲಲ್ಲಿರುವಾಗಲೇ ಕಾಂಗ್ರೆಸ್‌ಗೆ ದಿನದಿಂದ ದಿನಕ್ಕೆ ಸಂಕಷ್ಟಗಳು ನಿರಂತರವಾಗಿ ಹೆಚ್ಚುತ್ತಿದ್ದು, ಮರುಮೌಲ್ಯಮಾಪನ ಪ್ರಕ್ರಿಯೆಗಳ (Revaluation Proceedings) ವಿರುದ್ಧ ಪಕ್ಷದ ಅರ್ಜಿಯನ್ನು ದೆಹಲಿ ಹೈಕೋರ್ಟ್ (Delhi High Court) ತಿರಸ್ಕರಿಸಿದ ಕೆಲವೇ ಗಂಟೆಗಳ ನಂತರ ಆದಾಯ ತೆರಿಗೆ ಇಲಾಖೆ ಕೂಡ ಕಾಂಗ್ರೆಸ್‌ಗೆ (Congress) ಶಾಕ್ ನೀಡಿದೆ.   ಸುಮಾರು 1,700 ಕೋಟಿ ರೂಪಾಯಿ ಮೊತ್ತದ ತೆರಿಗೆ ಪಾವತಿಸುವಂತೆ ವಿರೋಧ ಪಕ್ಷ ಕಾಂಗ್ರೆಸ್‌ಗೆ ಆದಾಯ ತೆರಿಗೆ …

Read More »

‘PSI’ ಹುದ್ದೆಗಳ ನೇಮಕಾತಿಯ ಮರುಪರೀಕ್ಷೆ : ಅಂತಿಮ ಅಂಕಪಟ್ಟಿ ಪ್ರಕಟ

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ಹುದ್ದೆಗಳ ನೇಮಕಾತಿಗಾಗಿ ಜ.23ರಂದು ನಡೆಸಿದ್ದ ಮರುಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಪತ್ರಿಕೆ-1 ಮತ್ತು 2ರಲ್ಲಿ ಗಳಿಸಿರುವ ಅಂಕಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ. ಒಟ್ಟು 545 ಹುದ್ದೆಗಳ ನೇಮಕಕ್ಕೆ ಕೆಇಎ ಮರು ಪರೀಕ್ಷೆ ನಡೆಸಿತ್ತು. ಅಭ್ಯರ್ಥಿಗಳು ಪಡೆದ ಅಂಕಗಳ ಮಾಹಿತಿಯನ್ನು ಸದ್ಯದಲ್ಲೇ ಗೃಹ ಇಲಾಖೆಗೆ ಸಲ್ಲಿಸಲಾಗುತ್ತದೆ. ಅದರ ನಂತರ ರೋಸ್ಟರ್ …

Read More »

ಮಹಿಳೆಯ ಹಣ ಕದ್ದ ಖದೀಮರು: ಮಕ್ಕಳೊಂದಿಗೆ ಬಸ್​ ನಿಲ್ದಾಣದಲ್ಲೇ ಅಳುತ್ತಾ ಕುಳಿತ ತಾಯಿ

 ಊರಿಗೆ ತೆರಳಲು ಬಸ್ ಹತ್ತುವಾಗ ಬಡ ಮಹಿಳೆಯ ಪರ್ಸ್‌ನಲ್ಲಿಟ್ಟಿದ್ದ ಹದಿನೈದು ಸಾವಿರ ರೂ. ಹಣವನ್ನು ಕಳ್ಳರು ಎಗರಿಸಿದ್ದಾರೆ. ಹಾಸನದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಇತ್ತ ಹಣ ಕಳೆದುಕೊಂಡ ಮಹಿಳೆ ಊರಿಗೆ ಹೋಗದೆ ಬಸ್ ನಿಲ್ದಾಣದಲ್ಲಿ ತನ್ನ ಇಬ್ಬರು ಮಕ್ಕಳೊಂದಿಗೆ ಕಣ್ಣೀರು ಹಾಕಿದ್ದಾರೆ.ಬಳಿಕ ತಾಯಿ-ಮಕ್ಕಳ ಗೋಳಾಟ ಕಂಡು ಸ್ಥಳೀಯರು ನೆರವು ನೀಡಿದ್ದಾರೆ. ಹಾಸನ, ಮಾರ್ಚ್​ 28: ಸಾರ್ವಜನಿಕ ಸ್ಥಳಗಳಲ್ಲಿ ಮೈಯಲ್ಲಾ ಕಣ್ಣಾಗಿದ್ದರು ಸಾಕಾಗುವುದಿಲ್ಲ. ನಮ್ಮ ಹಣ (money) , ವಸ್ತುಗಳನ್ನು ಎಷ್ಟೇ ಎಚ್ಚರಿಕೆಯಿಂದ ಕಾಯಿದು …

Read More »

ಗುದದ್ವಾರಕ್ಕೆ ಏರ್‌ಬಿಟ್ಟು ಯುವಕ ದುರ್ಮರಣ!

ಬೆಂಗಳೂರು: ಇಬ್ಬರು ಸ್ನೇಹಿತರು ತಮಾಷೆ ಮಾಡುವ ಬರದಲ್ಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ವಾಹನ ಸರ್ವೀಸ್‌ ಸೆಂಟರ್‌ನಲ್ಲಿದ್ದ ಏರ್‌ ಪ್ರೆಶರ್‌ ಮೆಶಿನ್‌ ಗಾಳಿಯು ಗುದದ್ವಾರದ ಮೂಲಕ ಕರಳಿಗಿ ನುಗ್ಗಿ ಯುವಕ ಸಾವಿಗೀಡಾಗಿದ್ದಾನೆ.ಅಶ್ವತ್ಥ ನಗರದ ಯೋಗೇಶ್‌ (23) ಮೃತ ದುರ್ದೈವಿ. ಮಾರ್ಚ್‌ 25 ರಂದು ರಾತ್ರಿ ಯೋಗೇಶ್‌ ಗುದದ್ವಾರಕ್ಕೆ ಏರ್‌ಪ್ರೆಶರ್‌ ಗನ್‌ ಇಟ್ಟು ಸಾವಿಗೆ ಕಾರಣವಾದ ಆರೋಪದ ಮೇರೆಗೆ ಥಣಿಸಂದ್ರದ ಮುರುಳಿ (24) ಎಂಬುವನನ್ನು ಪೊಲೀಸರುಬಂಧಿಸಿದ್ದಾರೆ. ಯೋಗೇಶ್ ಹಾಗೂ ಮುರುಳಿ ಹಲವು …

Read More »

ಡಿ.ಕೆ.ಶಿವಕುಮಾರ್, ಹೇಮಂತ್‌ ನಿಂಬಾಳ್ಕರ್‌ ವಿರುದ್ಧ ಚುನಾವಣಾ ಆಯೋಗಕ್ಕೆ BJP ದೂರು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್‌ ನಿಂಬಾಳ್ಕರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಡಿ.ಕೆ.ಶಿವಕುಮಾರ್ ಅವರು ತಮ್ಮ ಅಧಿಕೃತ ಫೇಸ್‌ಬುಕ್‌ ಪೇಜಿನಲ್ಲಿ ಕರ್ನಾಟಕ ಸರ್ಕಾರದ ಚಿಹ್ನೆ, ಕಾಂಗ್ರೆಸ್‌ ಪಕ್ಷದ ಚಿಹ್ನೆ ಬಳಸಿಕೊಂಡು ಡಿ.ಕೆ.ಸುರೇಶ್‌ ಪರವಾಗಿ ಚುನಾವಣಾ ಪ್ರಚಾರ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಹೇಮಂತ್‌ ನಿಂಬಾಳ್ಕರ್ ಅವರು ತಮ್ಮ ಪತ್ನಿ ಹಾಗೂ ಉತ್ತರಕನ್ನಡ ಕ್ಷೇತ್ರದ …

Read More »

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ದೂರು ದಾಖಲು!

ಶಿವಮೊಗ್ಗ : ರಾಜ್ಯ ಬಿಜೆಪಿ ಪಕ್ಷಕ್ಕೆ ಸೆಡ್ಡು ಹೊಡೆದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಕೆ.ಎಸ್.ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ.   ಮಾರ್ಚ್ 24 ರಂದು ಶಿಕಾರಿಪುರದಲ್ಲಿ ಬೈಕ್ ರ್ಯಾಲಿಗೆ ಅನುಮತಿ ಪಡೆದಿದ್ದ ಈಶ್ವರಪ್ಪ ಅವರು ನಿಯಮ ಮೀರಿ ಬೈಕ್ ರ್ಯಾಲಿ ನಡೆಸಿದ್ದರು. …

Read More »

ಖಾನಾಪುರ: ಲಂಚ ಪಡೆಯುವಾಗ ಸಿಕ್ಕಿಬಿದ್ದ ಎಂಜಿನಿಯರ್

ಖಾನಾಪುರ: ಸ್ಥಳೀಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ದುರದುಂಡೇಶ್ವರ ಮಹಾದೇವ ಬನ್ನೂರ ಮಂಗಳವಾರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮನರೇಗಾ ಕಾಮಗಾರಿಗೆ ತಾಂತ್ರಿಕ ಅನುಮೋದನೆ ನೀಡಲು ತಮ್ಮ ಕಚೇರಿಯಲ್ಲೇ ಗ್ರಾಮ ಪಂಚಾಯ್ತಿ ಸದಸ್ಯರೊಬ್ಬರಿಂದ ₹10 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.   ಖಾನಾಪುರ ತಾಲ್ಲೂಕಿನ ನೀಲಾವಡೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 2ನೇ ವಾರ್ಡಿನಲ್ಲಿ ನರೇಗಾ ಯೋಜನೆಯಡಿ ವಿವಿಧ ಅಭಿವೃದ್ಧಿ …

Read More »

ಚುನಾವಣೆ ಚೆಕಿಂಗ್; ದಾಖಲೆ ಇಲ್ಲದ 20 ಲಕ್ಷಕ್ಕೂ ಅಧಿಕ ವಶ.!

ಚಿತ್ರದುರ್ಗ; ಚಿತ್ರದುರ್ಗದಲ್ಲಿ ವಾಹನ ಒಂದರಲ್ಲಿ ವ್ಯಕ್ತಿಯೊಬ್ಬರು ದಾಖಲೆ ಇಲ್ಲದೆ ಸುಮಾರು 20 ಲಕ್ಷಕ್ಕೂ ಅಧಿಕ ಹಣವನ್ನು ಸಾಗಿಸುತ್ತಿದ್ದರು. ಈ ವೇಳೆ ಚಿತ್ರದುರ್ಗ ತಹಸಿಲ್ದಾ‌ರ್ ನಾಗವೇಣಿ ನೇತೃತ್ವದಲ್ಲಿ ಪರಿಶೀಲನೆ ನಡೆದಿದ್ದು, ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More »

ನೀವು ಈ ಕೆಲಸ ಮಾಡಿಲ್ಲ ಅಂದ್ರೆ ಮತದಾನದಿಂದ ವಂಚಿತ.!

ದೆಹಲಿ: ಲೋಕಸಭಾ ಮತದಾನಕ್ಕೆ ಕೆಲವೇ ದಿನಗಳು ಉಳಿದಿವೆ. ಮತದಾನದಿಂದ ವಂಚಿತವಾಗಬಾರದು ಎಂಬ ಉದ್ದೇಶದಿಂದ EC ಮನೆಯಲ್ಲಿಯೇ ಕುಳಿತು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅವಕಾಶ ಮಾಡಿಕೊಟ್ಟಿದೆ. ಆದರೆ, ಈ ಪ್ರಕ್ರಿಯೆಗೆ ಉಳಿದಿರುವುದು 1 ದಿನ ಮಾತ್ರ. ನಾಳೆಯೊಳಗೆ ನೋಂದಣಿ ಮಾಡಿಕೊಂಡರೆ ಮಾತ್ರ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಿಮಗೆ ಮತ ಹಾಕಲು ಸಾಧ್ಯ. ಮತದಾರರ ಸಹಾಯವಾಣಿ ಆಪ್ ಡೌನ್‌ಲೋಡ್ ಮಾಡಿ. ಫಾರ್ಮ್ 6ನಲ್ಲಿ 2ನೇ ಆಯ್ಕೆ ಆರಿಸಿ. ಅಗತ್ಯ ಮಾಹಿತಿ …

Read More »