Breaking News

Uncategorized

ಪದೇಪದೇ ಪುಂಡಾಟಿಕೆ ನಡೆಸುತ್ತಿರುವ ಮರಾಠಿ ಗೂಂಡಾಗಳನ್ನು ಬಂಧಿಸಿ:ಮಹದೇವ ತಳವಾರ

ಸರ್ಕಾರಿ ಅಧಿಕಾರಿಗಳ ಮೇಲೆ ಪದೇಪದೇ ಪುಂಡಾಟಿಕೆ ನಡೆಸುತ್ತಿರುವ ಮರಾಠಿ ಗೂಂಡಾಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಿತ್ತೂರು ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಮಹದೇವ ತಳವಾರ ಆಗ್ರಹಿಸಿದ್ದಾರೆ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದಿನೇ ದಿನೇ ಬೆಳಗಾವಿಯಲ್ಲಿ ಎಂಇಎಸ್ ಹಾವಳಿ ಹೆಚ್ಚಾಗುತ್ತಿದೆ ಇಂದು ಕಿನಯೆ ಗ್ರಾಮ ಪಂಚಾಯಿತಿಗೆ ಹೋಗಿ ಎಂಇಎಸ್ ಪುಂಡನೊಬ್ಬನು ಅಲ್ಲಿಯ ಪಿಡಿಓ ಪತ್ತಾರ ಎಂಬ ಅಧಿಕಾರಿಗೆ ನೀನು ಮರಾಠಿಯಲ್ಲಿ ಮಾತನಾಡಬೇಕೆಂದು ಧಮಕಿಹಾಕಿದ್ದಾನೆ. ಸಹಾಯಕ್ಕೆ ಬಂದ ಸಿಬ್ಬಂದಿಗೂ ಜೀವ …

Read More »

ಬೆಳಗಾವಿಯಲ್ಲಿ ಸಮುದಾಯದ ಭವನ ನಿರ್ಮಾಣದ ಜಮೀನಿಗಾಗಿ ಗಲಾಟೆ.

ಬೆಳಗಾವಿಯಲ್ಲಿ ಸಮುದಾಯದ ಭವನ ನಿರ್ಮಾಣದ ಜಮೀನಿಗಾಗಿ ಗಲಾ*ಟೆ. ನಗರದ ಗಣಾಚಾರಿ ಗಲ್ಲಿಯಲ್ಲಿ ನಡೆದ ಘಟನೆ. ರಾಜು ತಳವಾರ, ಸುದೇಶ ಲಾಠೆಗೆ ಇಬ್ಬರಿಗೆ ತಲೆಗೆ ಗಾಯ. ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಇಬ್ಬರನ್ನು ದಾಖಲಿಸಿದ ಸ್ಥಳೀಯರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ. ಮಹಾನಗರ ಪಾಲಿಕೆಯ ಜಾಗವನ್ನು ಕಬ್ಜಾ ಮಾಡಿರೋ ಕೆಲವರು. ಅತಿಕ್ರಮಣ ತೆರವುಗೊಳಿಸಿ ಭವನ ನಿರ್ಮಾಣಕ್ಕೆ ಮುಂದಾಗಿದ್ದ ಸ್ಥಳೀಯರು. ಪಾಲಿಕೆಯ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಮುಂದಾಗಿದ್ದರು. ಈ ವೇಳೆಯಲ್ಲಿ ಇಪ್ಪತ್ತುಕ್ಕೂ ಹೆಚ್ಚು ಜನರಿಂದ …

Read More »

ಆಸ್ತಿ ಮೌಲ್ಯ ಹೆಚ್ಚಾಗುತ್ತದೆ, ಭೂಮಿ ಮಾರಾಟ ಮಾಡಬೇಡಿ: ಕನಕಪುರ ಕ್ಷೇತ್ರದ ಜನರಿಗೆ ಡಿಕೆಶಿ ಕರೆ –

ರಾಮನಗರ: “ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಂದೆ-ತಾಯಿ, ಗ್ಯಾರಂಟಿಗಳೇ ಬಂಧು-ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕನಕಪುರ ತಾಲೂಕಿನ ಭೂಹಳ್ಳಿ ಹೊಸಕೆರೆ ಬಳಿ ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. “ನನ್ನ ಕ್ಷೇತ್ರಕ್ಕೆ ಸುಮಾರು 400 ಕೋಟಿ ರೂ.ಗಳಷ್ಟು ಅನುದಾನ ತಂದಿದ್ದೇನೆ. ಒಂದೇ ಸಲ ಅನುದಾನ ತಂದರೆ ಬೇರೆ ಕ್ಷೇತ್ರದವರು ಪ್ರಶ್ನೆ ಮಾಡುತ್ತಾರೆ. ಹಂತಹಂತವಾಗಿ ಅನುದಾನ ತಂದು ಅಭಿವೃದ್ಧಿ ಕೆಲಸದ ಮೂಲಕ ಜನರ ಋಣ ತೀರಿಸಲಾಗುವುದು. …

Read More »

ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ*

ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ* *ಬೆಂಗಳೂರು-* ದುಬೈನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಅಭೂತಪೂರ್ವ ಗೆಲುವು ದಾಖಲಿಸಿ ಚಾಂಪಿಯನ್ ಕಿರೀಟ್ ಧರಿಸಿರುವುದಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿ, ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ. ಈ ಮೂಲಕ ಒಟ್ಟು ಮೂರು ಬಾರಿ ಚಾಂಪಿಯನ್ ಟ್ರೋಫಿ ಪಡೆದಿರುವ ಭಾರತವು ವಿಶ್ವದ ಮೊದಲ …

Read More »

ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ

ಭೋವಿರಾಜ್ ಮೀನುಗಾರ ಸಹಕಾರಿ ಸಂಘದ ಹೊಸ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಬೆಳಗಾವಿ : ಬೆಳಗಾವಿ ಜಿಲ್ಲೆಯ ಭೋವಿರಾಜ್ ಮೀನುಗಾರ ಸಹಕಾರಿ ಸಂಘದ (ಫಿಶರೀಸ್ ಸೊಸೈಟಿ) ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಇಂದು ಸದಸ್ಯರ ಸಭೆಯನ್ನು ನಡೆಸಲಾಯಿತು. ಸದರಿ ಸಭೆಯಲ್ಲಿ ಸದಸ್ಯರ ಒಮ್ಮತದೊಂದಿಗೆ ಶ್ರೀ ವಿಜಯ ಹಲಕರ್ಣಿ ಅವರನ್ನು ಸಂಘದ ಅಧ್ಯಕ್ಷರಾಗಿ ಹಾಗೂ ಶ್ರೀ ಆನಂದ ಭಂಡಾರಿ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಈ ಆಯ್ಕೆಯ ಮೂಲಕ ಸಂಘವು ಮುಂದಿನ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿ ವಾಯ್ ಗ್ರಾಮದ ಶ್ರೀ ಹನುಮಂತ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …

Read More »

ಇದು ಮುಸ್ಲಿಮರ ಬಜೆಟ್‌:ಬಿಜೆಪಿ ನಾಯಕರ ಕಿಡಿ

ಬೆಂಗಳೂರು: “ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ” ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ್ ವ್ಯಕ್ತಪಡಿಸಿದ್ದಾರೆ. ಬಜೆಟ್‌ ಮಂಡನೆ ಬಳಿಕ ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯ ಕೊನೆಯ ಬಜೆಟ್‌ ಮಂಡಿಸಿದ್ದಾರೆ. ಈ ಬಜೆಟ್‌ನಲ್ಲಿ ಯಾವುದೇ ಹೊಸ ಘೋಷಣೆ ಇಲ್ಲ. ಆದರೆ, ತಿಪ್ಪೆ ಸಾರಿಸುವಂತೆ ಹಿಂದಿನ ಕಾರ್ಯಕ್ರಮಗಳನ್ನು …

Read More »

ದಲಿತರ ಕಣ್ಣೀರ ಶಾಪ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟದೇ ಇರುವುದಿಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಸಿದ್ದರಾಮಯ್ಯ ವಿಪಕ್ಷದಲ್ಲಿದ್ದಾಗ ಇದ್ದ ದಲಿತಪರ ಕಾಳಜಿ ಅಧಿಕಾರಕ್ಕೆ ಬಂದ ಬಳಿಕ ಮರೆತುಹೋಯಿತೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ. ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಯಿತು. ಹೋರಾಟ ಸಮಿತಿ ಆಹ್ವಾನದ ಮೇರೆಗೆ ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿಜಯೇಂದ್ರ, ಅಹಿಂದ ಹೆಸರಿನೊಂದಿಗೆ ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಕಣ್ಣೀರು ಒರೆಸುವುದಾಗಿ ಹೇಳಿ …

Read More »

ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್‌ ಹಾಕಲು ಕಾಯ್ದೆ ತಿದ್ದುಪಡಿ

ಬೆಂಗಳೂರು, ಮಾರ್ಚ್ 6: ಕರ್ನಾಟಕ ಲೋಕಸೇವಾ ಆಯೋಗದ (KPSC) ಅವ್ಯವಹಾರ, ಭ್ರಷ್ಟಾಚಾರ ಮತ್ತು ಒಂದರ ಮೇಲೊಂದು ಎಡವಟ್ಟುಗಳಿಂದ ಪ್ರಾಮಾಣಿಕ ಅಭ್ಯರ್ಥಿಗಳು ಬೇಸತ್ತು ಹೋಗಿದ್ದಾರೆ. ವ್ಯಾಪಕ ಆಕ್ರೋಶದ ಬಳಿಕ ಎಚ್ಚೆತ್ತಿರುವ ರಾಜ್ಯಸರ್ಕಾರ (Karnataka Govt) ಇದೀಗ ಕೆಪಿಎಸ್ಸಿಗೆ ಕಾಯಕಲ್ಪ ನೀಡಲು ಮುಂದಾಗಿದೆ. ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕೆಪಿಎಸ್ಸಿ ಕಾಯ್ದೆ 1959’ಕ್ಕೆ (KPSC Act) ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ನಿರ್ಧರಿಸಿದೆ. ಪಿಎಸ್ಸಿ ತಿದ್ದುಪಡಿ …

Read More »

7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು, ಮಾರ್ಚ್​ 6: ಬೆಂಗಳೂರು (Bangalore) ಸೇರಿದಂತೆ ಕರ್ನಾಟಕದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ (Lokayukta Raid) ನಡೆದಿದೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ DPAR ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​ ಹೆಚ್​.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಕೋಲಾರದಲ್ಲಿರುವ ಬೆಸ್ಕಾಂ ಎಇಇ …

Read More »