Breaking News

Uncategorized

ಶಾಸಕನನ್ನ ಹೊತ್ತು ಕುಣಿದ ಪೊಲೀಸರು; ವಿಡಿಯೋ ವೈರಲ್ ಬೆನ್ನಲ್ಲೇ ಇಬ್ಬರು ಸಿಬ್ಬಂದಿ ವರ್ಗಾವಣೆ

ಶಿವಮೊಗ್ಗ: ಪೊಲೀಸ್ ಠಾಣೆಯಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಶಾಸಕರನ್ನೇ ಹೊತ್ತು ಕುಣಿದ ಪೊಲೀಸ್ ಸಿಬ್ಬಂದಿಯನ್ನ ಶಿಸ್ತುಕ್ರಮದ ಭಾಗವಾಗಿ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ಶಿವಮೊಗ್ಗ ಜಿಲ್ಲಾ‌ ಪೊಲೀಸ್ ವರಿಷ್ಠಾಧಿಕಾರಿ ಈ‌ ಆದೇಶ ಹೊರಡಿಸಿದ್ದಾರೆ. ನಗರದ ಕೋಟೆ ಶ್ರೀ ಭೀಮೇಶ್ವರ ದೇವಾಲಯದ ಬಳಿ ಸಾಗುತ್ತಿದ್ದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಶಾಸಕ ಚನ್ನಬಸಪ್ಪ ಅವರು ಭಾಗಿಯಾಗಿದ್ದರು. ಈ ವೇಳೆ ಶಾಸಕರನ್ನ ಹೊತ್ತು ಕುಣಿದ ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಗಣೇಶ್ …

Read More »

ಅಮಾವಾಸ್ಯೆ ದಿನ ಒಡವೆಗೆ ಪೂಜೆ ನೆಪದಲ್ಲಿ ವಂಚನೆ – ನಕಲಿ ಜ್ಯೋತಿಷಿ ನಂಬಿ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳೆದುಕೊಂಡ ಮಹಿಳೆ

ಬೆಂಗಳೂರು: ಚೌಡೇಶ್ವರಿ ದೇವಿಗೆ ಪೂಜೆ ಮಾಡುವ ನೆಪದಲ್ಲಿ ನಕಲಿ ಜ್ಯೋತಿಷಿ  ಮಹಿಳೆಯೊಬ್ಬರಿಂದ ಬರೋಬ್ಬರಿ 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ  ನಡೆದಿದೆ. ಬ್ಯಾಟರಾಯನಪುರ  ನಿವಾಸಿ 62 ವರ್ಷದ ಶಾಂತಮ್ಮ ವಂಚನೆಗೊಳಗಾದ ಮಹಿಳೆ. ವಿಕ್ಟೋರಿಯಾ ಆಸ್ಪತ್ರೆಯ ಫುಟ್‌ಪಾತ್‌ನಲ್ಲಿ ಜ್ಯೋತಿಷ್ಯ ಹೇಳುತ್ತಿದ್ದ ವೆಂಕಟೇಶ್ ವಂಚಿಸಿದ ಖತರ್ನಾಕ್ ಜ್ಯೋತಿಷಿ. ಆರೋಗ್ಯ ಸಮಸ್ಯೆ ಹಿನ್ನೆಲೆ ಶಾಂತಮ್ಮ ಆಗಾಗ ವಿಕ್ಟೋರಿಯಾ ಆಸ್ಪತ್ರೆಗೆ ತೆರಳುತ್ತಿದ್ದರು. ಇದೇ ವೇಳೆ ಜ್ಯೋತಿಷಿ ವೆಂಕಟೇಶ್‌ನನ್ನು ಭೇಟಿಯಾಗಿದ್ದರು. ತಮ್ಮ …

Read More »

ತುಮಕೂರಿನಲ್ಲಿ ಹಿಟ್ & ರನ್ – ನವದಂಪತಿ ಸಾವು

ತುಮಕೂರು: ಹಿಟ್ & ರನ್‌ಗೆ ನವದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ  ತಾಲೂಕಿನ ದ್ವಾರಾಳು ಸೇತುವೆ ಮೇಲೆ ನಡೆದಿದೆ. ದರ್ಶನ್ (25), ಉಷಾರಾಣಿ (21) ಮೃತ ದಂಪತಿ. ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದ ದಂಪತಿ ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಮಂಗಳವಾರ ಬೈಕ್‌ನಲ್ಲಿ ಬೆಂಗಳೂರಿನ ಮಾರ್ಗದತ್ತ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟರೆ, …

Read More »

ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು

ಲಾಡ್ಜ್‌ನಲ್ಲಿ  ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ  ಜಿಲ್ಲೆ ಸಕಲೇಶಪುರ  ತಾಲೂಕಿನ ವಳಲಹಳ್ಳಿ ಕೂಡಿಗೆಯಲ್ಲಿ ನಡೆದಿದೆ. ವರ್ಷ (23) ಮೃತ ಯುವತಿ. ಬೆಂಗಳೂರಿನ ನಾಗಸಂದ್ರದ ನಿವಾಸಿ ವರ್ಷ ಶುಕ್ರವಾರ ಪ್ರಿಯಕರ ರಘು ಹಾಗೂ ಸ್ನೇಹಿತ ದರ್ಶನ್ ಜೊತೆ ಟ್ರಿಪ್‌ಗೆಂದು ಬಂದಿದ್ದಳು. ಈ ಮೂವರು ಶನಿವಾರ, ಭಾನುವಾರ ಹಾಗೂ ಸೋಮವಾರ ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಫಾಲ್ಸ್ ಸೇರಿದಂತೆ ಹಲವೆಡೆ ಸುತ್ತಾಡಿದ್ದರು. ಅಲ್ಲದೇ ವಳಲಹಳ್ಳಿ ಕೂಡಿಗೆಯಲ್ಲಿರುವ ಲಾಡ್ಜ್‌ನಲ್ಲಿ ಒಂದೇ ರೂಂನಲ್ಲಿ ಮೂವರು ತಂಗಿದ್ದರು. …

Read More »

ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ ತೂಕ-ಅಳತೆ ಅಕ್ರಮ

ಬೆಂಗಳೂರು: ಹೋಟೆಲ್, ಬೇಕರಿ ಬಳಿಕ ಈಗ ಪೆಟ್ರೋಲ್ ಬಂಕ್‌ಗಳಿಗೆ ಸರ್ಕಾರ ಬಿಸಿ ಮುಟ್ಟಿಸಿದೆ. ರಾಜ್ಯದ 5,946 ಪೆಟ್ರೋಲ್ ಬಂಕ್‌ಗಳ ಪೈಕಿ, 805 ಬಂಕ್‌ಗಳ ಪರೀಕ್ಷೆ ನಡೆಸಲಾಗಿದ್ದು, 768 ಬಂಕ್‌ಗಳು ತೂಕ-ಅಳತೆಯಲ್ಲಿ ಅಕ್ರಮ ಮಾಡಿರೋದು ಗೊತ್ತಾಗಿದೆ. ಬಂಕ್‌ಗಳ ವಂಚನೆ ಬಗ್ಗೆ ದೂರು ನೀಡಲು 18005991100 ಸಹಾಯವಾಣಿ ಆರಂಭಿಸಲಾಗಿದೆ. ಬಂಕ್‌ಗಳ ಮುಂದೆ ಟೋಲ್ ನಂಬರ್ ಪ್ರದರ್ಶಿಸುವುದು ಕಡ್ಡಾಯವಾಗಿದೆ. ಈ ಮಧ್ಯೆ, ಬೆಂಗಳೂರಿನಲ್ಲಿ ಪೊಲೀಸರು ಜಪ್ತಿ ಮಾಡಿರುವ ವಾಹನಗಳನ್ನ ತೆರವು ಮಾಡುವ ಕಾರ್ಯಕ್ಕೆ ಸರ್ಕಾರ …

Read More »

ನಾಗರಹೊಳೆ ಸುತ್ತ 7.5 ಕಿಮೀ ವರೆಗೆ ಪರಿಸರ ಸೂಕ್ಷ್ಮ ವಲಯ: ಕೇಂದ್ರದಿಂದ ಕರಡು ಅಧಿಸೂಚನೆ

ನವದೆಹಲಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಸುತ್ತಮುತ್ತಲಿನ 573.95 ಚದರ ಕಿಲೋಮೀಟರ್ ಪ್ರದೇಶವನ್ನು ಗುರುತಿಸಿ, ಅಲ್ಲಿ ಕೆಲವು ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಎರಡನೇ ಬಾರಿಗೆ ಪರಿಸರ ಸೂಕ್ಷ್ಮ ವಲಯ ಕುರಿತ ಕರಡು ಅಧಿಸೂಚನೆಯನ್ನು ಹೊರಡಿಸಿದೆ. 843.96 ಚದರ ಕಿಲೋಮೀಟರ್ ವಿಸ್ತೀರ್ಣದ ಹುಲಿ ಸಂರಕ್ಷಿತ ಪ್ರದೇಶದ ಸುತ್ತಮುತ್ತಲಿನ ಭಾಗಗಳಲ್ಲಿ ವಾಣಿಜ್ಯ ಚಟುವಟಿಕೆಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಈ ಕರಡು ಪ್ರತಿಯನ್ನು ಹೊರತಂದಿದೆ. …

Read More »

50 ಲಕ್ಷ ಲಂಚ ಪಡೆಯುವಾಗ ‘ಲೋಕಾ’ ಬಲೆಗೆ ಬಿದ್ದ ತಹಸೀಲ್ದಾರ್‌

ಧಾರವಾಡ: 50 ಲಕ್ಷ ರೂ. ಲಂಚ ಪಡೆಯುವಾಗ ತಹಸೀಲ್ದಾರ್‌ವೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಧಾರವಾಡ ತಹಸೀಲ್ದಾರ್ ಸಚ್ಚಿದಾನಂದ ಕುಚನೂರ್ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಭೂಮಿ ಸಿ ಖರಾಬ್ ತೆಗೆಯಲು ಒಂದು‌ ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮುಧೋಳ್ ಮೂಲದ ಡೆವಲಪರ್ ಮಂಜುನಾಥ ಅಂಗಡಿ ಎಂಬಾತನ ಬಳಿ 1 ಕೋಟಿಗೆ‌ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 50 ಲಕ್ಷ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಧಾರವಾಡ ತಾಲೂಕಿನ ಯರಿಕೊಪ್ಪ ಬಳಿ …

Read More »

ಯುವತಿಯ ಕಿಡ್ನ್ಯಾಪ್‌ಗೆ ಯತ್ನ – ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ರಾಜಸ್ಥಾನ ಗ್ಯಾಂಗ್

ಬೆಂಗಳೂರು: ಏಕಾಏಕಿ ಮನೆಗೆ ನುಗ್ಗಿ ವಿವಾಹಿತೆಯನ್ನು ಕಿಡ್ನ್ಯಾಪ್‌ ಮಾಡಿ, ಎಸ್ಕೇಪ್ ಆಗಲು ಯತ್ನಿಸಿದ ಗ್ಯಾಂಗ್ ಎದುರಿಗೆ ಬಂದವರ ಮೇಲೆಲ್ಲಾ ಕಾರು ಹರಿಸಿದ ಘಟನೆ ಬೆಂಗಳೂರಿನಲ್ಲಿ  ನಡೆದಿದೆ. ರಾಜಸ್ಥಾನ ಮೂಲದ ಯುವತಿಯನ್ನು ಮಾರಕಾಸ್ತ್ರಗಳಿಂದ ಬೆದರಿಸಿ, ಅಪಹರಿಸಿದ್ದಾರೆ. ಕಿಡ್ನ್ಯಾಪ್‌ಗೆ ಯತ್ನಿಸಿದ ಮೂವರು ಕೂಡ ರಾಜಸ್ಥಾನದವರೆಂದು ತಿಳಿದುಬಂದಿದೆ. ಇತ್ತೀಚಿಗೆ ವ್ಯಕ್ತಿಯೋರ್ವ ರಾಜಸ್ಥಾನ ಮೂಲದ ಯುವತಿಯನ್ನು ಪ್ರೀತಿಸಿ, ಮದುವೆಯಾಗಿ ಕಳೆದ 15 ದಿನದ ಹಿಂದಷ್ಟೇ ಅಗ್ರಹಾರ ದಾಸರಹಳ್ಳಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು ಎಂದು ತಿಳಿದುಬಂದಿದೆ. …

Read More »

ಚವ್ಹಾಟ ಗಲ್ಲಿ ಬೆಂಕಿ ಅವಘಡ ಪ್ರಕರಣ: ಚಿಕಿತ್ಸೆ ಫಲಿಸದೆ ತಂದೆ-ಮಗ ಸಾವು, ಮೃತರ ಸಂಖ್ಯೆ 6ಕ್ಕೆ ಏರಿಕೆ

ಬೆಳಗಾವಿ: ಗಣೇಶೋತ್ಸವ ಹಬ್ಬದ ದಿನವೇ ಬೆಂಕಿ ಅವಘಡ ಸಂಭವಿಸಿ ಬೆಳಗಾವಿ ನಗರದ ಚವ್ಹಾಟ ಗಲ್ಲಿಯಲ್ಲಿ ನಾಲ್ವರು ಮೃತಪಟ್ಟು, ಮೂವರು ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಗಾಯಗೊಂಡಿದ್ದ ತಂದೆ-ಮಗ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಬೆಳಗಾವಿ ನಗರದ ಚವ್ಹಾಟ ಗಲ್ಲಿ ಬಳಿಯ ಢೋರ್ ಗಲ್ಲಿಯಲ್ಲಿ ಸೋಮವಾರ ಮಧ್ಯ ರಾತ್ರಿ ಭೀಕರ ಬೆಂಕಿ ಅವಘಡ ಸಂಭವಿಸಿತ್ತು. ಬೆಂಕಿಯ ಕೆನ್ನಾಲೆಯಲ್ಲಿ ಬೆಂದು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ …

Read More »

ಬೆಳೆಹಾನಿಗೆ ತ್ವರಿತ ಪರಿಹಾರ ಒದಗಿಸಲು ಸಚಿವ ಸತೀಶ್ ಜಾರಕಿಹೊಳಿ ಸೂಚನೆ

ಬೆಳಗಾವಿ: ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆ, ಕೃಷಿ, ಬೆಳೆ ವಿಮೆ, ನೀರಾವರಿ, ಜಾನುವಾರುಗಳಿಗೆ ಮೇವು ಸಂಗ್ರಹಣೆ ಸಂಬಂಧಿಸಿದಂತೆ ಅಗತ್ಯವಿರುವ ಸೌಲಭ್ಯಗಳ ಕುರಿತು ಅಧಿಕಾರಿಗಳು ಮುನ್ನೆಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಮಳೆ ಕೊರತೆಯಿಂದ ಬೆಳೆ ಹಾನಿಯಂತಹ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಅರ್ಹ ರೈತರಿಗೆ ನಿಯಮಾನುಸಾರ ಪರಿಹಾರ ಒದಗಿಸಬೇಕು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಸುವರ್ಣ ವಿಧಾನ ಸೌಧದ ಸೆಂಟ್ರಲ್ ಹಾಲ್ ನಲ್ಲಿ ಬುಧವಾರ (ಸೆ.16) ನಡೆದ 2026-27ನೇ …

Read More »