ಕೊಪ್ಪಳ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಕೇಂದ್ರ ಸರ್ಕಾರವು ಅಸಹಕಾರ ತೋರುತ್ತಿದೆ ಎಂದು ಹಿಂದುಳಿದ ವರ್ಗಗಳ ಖಾತೆ ಸಚಿವ ಶಿವರಾಜ ತಂಗಡಗಿ ಅವರು ಹೇಳಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ವಿಚಾರದಲ್ಲಿ ಸರ್ಕಾರ ಈಗಾಗಲೇ ತನಿಖೆ ಆರಂಭಿಸಿದೆ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದು ವಿದೇಶದಿಂದ ಕರೆತಂದು ಬಂಧಿಸಲು ಕೇಂದ್ರ ಸಹಕಾರ ಕೊಡಬೇಕಿದೆ. ಅವರಿಂದಲೇ ನಮಗೆ ಸಹಕಾರ ಸಿಗುತ್ತಿಲ್ಲ ಎಂದರು. ರಾಜ್ಯ ಕಾಂಗ್ರೆಸ್ ಸರಕಾರ ಪತನವಾಗಲಿದೆ …
Read More »ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಚೆನ್ನೈ: ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಭಾಗಗಳಲ್ಲಿ ಶುಕ್ರವಾರ ಭಾರೀ ಮಳೆಯಾಗಿದೆ. ತಮಿಳುನಾಡಿನಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ತಾಪಮಾನವು ಒಂದೆರಡು ಡಿಗ್ರಿಗಳಷ್ಟು ಕಡಿಮೆಯಾಗಿದೆ. ಕನ್ಯಾಕುಮಾರಿ ಜಿಲ್ಲೆಯ ಮೈಲಾಡಿಯಲ್ಲಿ 7 ಸೆಂ.ಮೀ ಮಳೆಯಾಗಿದ್ದರೆ, ತಿರುಚೆಂದೂರು, ವಾಲ್ಪಾರೈ ಮತ್ತು ನನ್ನಿಲಂನಲ್ಲಿ ತಲಾ 6 ಸೆಂ.ಮೀ, ಕಡಲೂರು ಮತ್ತು ಕೊಯಮತ್ತೂರಿನಲ್ಲಿ ತಲಾ 5 ಸೆಂ.ಮೀ ಮತ್ತು ಚೆಂಗಲ್ಪಟ್ಟು ನಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಕುರ್ಟಾಲಂನಲ್ಲಿ 16 ವರ್ಷದ ಬಾಲಕ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದಾಗ ಏಕಾಏಕಿ ಭಾರೀ …
Read More »ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್‌ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜೂಜು (ಇಸ್ಪೀಟ್) ಆಡಿಸಲು 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಪಿಎಸ್‌ಐ ಮತ್ತು ಕಾನ್ ಸ್ಟೆಬಲ್ ಬಿದ್ದಿದ್ದಾರೆ. ತಡಸ ಪೊಲೀಸ್ ಠಾಣೆಯ ಪಿಎಸ್‌ಐ ಶರಣಬಸಪ್ಪ ಕಾಂದೆ ಮತ್ತು ಕಾನ್ ಸ್ಟೆಬಲ್ ಸುರೇಶ ಮಾನೋಜಿ ಬಂಧಿತರು. ಜೂಜು ಆಡಿಸುವ ಸಂಬಂಧ ಪ್ರಭಾಕರ ಈರಪ್ಪ ಬೆಟ್ಟದೂರ ಅವರಿಗೆ 5 ಲಕ್ಷ ಲಂಚದ ಬೇಡಿಕೆ ಇಟ್ಟು, ಮಧ್ಯವರ್ತಿ ಕಿರಣ …
Read More »ಪ್ರಿಯಾಂಕಾ ಗೆಲುವು ಖಚಿತ: ಸತೀಶ ಜಾರಕಿಹೊಳಿ
ಹುಕ್ಕೇರಿ: ‘ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಗೆಲ್ಲುವುದರಲ್ಲಿ ಯಾವುದೇ ಸಂದೇಹವಿಲ್ಲ. ಅವರು ಗೆದ್ದ ನಂತರ ನಮ್ಮ ಜವಾಬ್ದಾರಿಯೂ ಹೆಚ್ಚಾಗಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಕಳೆದ 30 ವರ್ಷಗಳಿಂದ ನಾವು ಜನರ ಸಂಪರ್ಕದಲ್ಲಿ ಇದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡುತ್ತಿದ್ದೇವೆ. ಆದರೆ ಪ್ರಿಯಂಕಾ ಜಾರಕಿಹೊಳಿ ಗೆದ್ದ ಮೇಲೆ …
Read More »ಬೆಳಗಾವಿ ಜಿಲ್ಲೆಯ 200 ಕೆರೆಗಳಲ್ಲಿ ಹನಿ ನೀರೂ ಇಲ್ಲ
ಬೆಳಗಾವಿ: ‘ನಮ್ಮೂರಾಗಿನ ಎರಡ ಕೆರ್‍ಯಾಗ ನಮ್ಮ ದನಗೋಳಿಗೆ ನೀರ ಕುಡಸತಿದ್ವಿರಿ. ಆದ್ರ ಹೋದ ವರ್ಷ ಮಳಿರಾಯ ಕೈಕೊಟ್ಟ. ಹಂಗಾಗಿ ಒಂದ ಕೆರ್‍ಯಾಗ ಸ್ವಲ್ಪ ನೀರ ಉಳಿದೇತ್ರಿ. ಒಂದ ಪೂರ್ತಿ ಬತ್ತಿಹೋಗೇತ್ರಿ. ಈಗ ದನಗೋಳಿಗೆ ಕುಡ್ಯಾಕ ನೀರ ಹುಡುಕೋದ ನಮಗ್ ಕೆಲ್ಸ ಆಗೇತ್ರಿ. ಕೆರಿ ಮಗ್ಗಲದಾಗ ಇರೋ ಹೊಲದಾಗಿನ ಬೆಳಿಗೋಳ ಒಣಗಾತಾವ್ರಿ…’ ಬೈಲಹೊಂಗಲ ತಾಲ್ಲೂಕಿನ ಚಿಕ್ಕಬಾಗೇವಾಡಿಯಲ್ಲಿ ಹಿರೇಬಾಗೇವಾಡಿ-ಸವದತ್ತಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡು ಇರುವ ಕೆರೆದಂಡೆ ಮೇಲೆ ಕುಳಿತಿದ್ದ ಕೃಷಿಕ ವೆಂಕನಗೌಡ ಪಾಟೀಲ ‘ಪ್ರಜಾವಾಣಿ’ …
Read More »ಬೆಳಗಾವಿ: ಚಲಿಸುತ್ತಿದ್ದ ರೈಲಿನಲ್ಲಿ ಕೊಲೆ; ತನಿಖೆಗೆ ನಾಲ್ಕು ವಿಶೇಷ ತಂಡಗಳ ರಚನೆ
ಬೆಳಗಾವಿ: ‘ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕನೊಬ್ಬ ಚಾಕುವಿನಿಂದ ಇರಿದು ಒಬ್ಬರನ್ನು ಕೊಲೆ ಮಾಡಿದ ಮತ್ತು ನಾಲ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ತನಿಖೆಗಾಗಿ ರೈಲ್ವೆ ಪ್ರೋಟೆಕ್ಷನ್ ಫೋರ್ಸ್(ಆರ್‌ಪಿಎಫ್), ಗ್ರೇಟರ್ ರೈಲ್ವೆ ಪೊಲೀಸ್(ಜಿಆರ್‌ಪಿ) ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡ ರಚಿಸಲಾಗಿದೆ’ ಎಂದು ರೈಲ್ವೆ ಪೊಲೀಸ್ ಡಿಐಜಿ ಎಸ್.ಡಿ. ಶರಣಪ್ಪ ಹೇಳಿದರು. ಖಾನಾಪುರ ತಾಲ್ಲೂಕಿನಲ್ಲಿ ಗುರುವಾರ ನಡೆದ ಈ ಘಟನೆಯಲ್ಲಿ ಹಲ್ಲೆಗೆ ಒಳಗಾಗಿ, ಇಲ್ಲಿನ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯವನ್ನು …
Read More »ತಹಶೀಲ್ದಾರ್‌ಗೆ ನೋಟಿಸ್ ನೀಡಿದ ಒಂಬತ್ತು ಗ್ರಾಮಗಳ ರೈತರು
ಬೆಳಗಾವಿ : ಕುಲವಳ್ಳಿ ಸೇರಿ ಒಂಬತ್ತು ಗ್ರಾಮಗಳ ರೈತರು ನೀಡಿದ ಅರ್ಜಿಗಳ ಬಗ್ಗೆ ಕ್ರಮ ಕೈಗೊಳ್ಳದ ನಿರ್ಣಯದಿಂದ ಬೇಸತ್ತ ರೈತರು, ತಹಶೀಲ್ದಾರ್ ರವೀಂದ್ರ ಹಾದಿಮನಿ ಅವರಿಗೆ ಶುಕ್ರವಾರ ನೋಟಿಸ್ ನೀಡಿದ್ದಾರೆ. ‘ಹೈಕೋರ್ಟ್‌ನಿಂದ ಸಾಗುವಳಿ ಹಕ್ಕಿನ ಆದೇಶವನ್ನು 60 ರೈತರು ಪಡೆದಿದ್ದಾರೆ. ಅವರ ಹೆಸರುಗಳನ್ನು ಗೇಣಿ ಮತ್ತು ಪಹಣಿ ಪತ್ರಿಕೆಯ ಸಾಗುವಳಿದಾರ ಕಾಲಂನಲ್ಲಿ ನೋಂದಣಿ ಮಾಡಬೇಕು’ ಎಂದು ರೈತರು ಆಗ್ರಹಿಸಿದರು. ರೈತ ಮುಖಂಡ ಬಿಷ್ಟಪ್ಪ ಶಿಂದೆ ಮಾತನಾಡಿ, ‘ರಾಜ್ಯ ಸರ್ಕಾರ ಸರ್ವೆ ಮಾಡಿಸಿ …
Read More »KSRTC ಬಸ್ ಚಾಲಕ ಮೊಬೈಲ್‌ನಲ್ಲಿ ಮಾತು: ಸಂಸ್ಥೆ ಗಮನಕ್ಕೆ ತಂದ ADGP ಅಲೋಕ್ ಕುಮಾರ್
ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯವರನ್ನು (KSRTC) ಒತ್ತಾಯಿಸಿದ್ದಾರೆ. ಈ ಕುರಿತು ಅವರು ಮೈಸೂರು-ಬೆಂಗಳೂರು-ಎಕ್ಸ್‌ಪ್ರೆಸ್ ವೇನಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ವಾಹನ ಚಾಲಕರು ನಮ್ಮ ಕಣ್ಣಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ನಮ್ಮ ಎಲ್ಲ ಸಿಸಿಟಿವಿಗಳು ಅವುಗಳ ಕೆಲಸವನ್ನು …
Read More »ರೈಲಿನಲ್ಲಿ ಮತ್ತೊಬ್ಬ ಮಹಿಳೆ ಕೊಲೆಗೆ ಯತ್ನಿಸಿದ ಅಂಜಲಿ ಹಂತಕ!
ದಾವಣಗೆರೆ: ಹುಬ್ಬಳ್ಳಿ ಬೆಂಡಿಗೇರಿಯ ಅಂಜಲಿ ಎಂಬ ಯುವತಿಯನ್ನು ಕೊಂದು (Anjali Murder Case) ತಲೆ ತಪ್ಪಿಸಿಕೊಂಡಿದ್ದ ಆರೋಪಿ ಗಿರೀಶ್, ರೈಲಿನಲ್ಲಿ ಮತ್ತೊಬ್ಬ ಮಹಿಳೆಯ ಕೊಲೆಗೆ (Murder attempt) ಯತ್ನಿಸಿದ್ದ ಎಂದು ಗೊತ್ತಾಗಿದೆ. ಕೊಲೆ ಯತ್ನಕ್ಕೆ (Hubli crime) ಒಳಗಾದ ಮಹಿಳೆ ಈ ಕುರಿತು ದಾವಣಗೆರೆಯಲ್ಲಿ ದೂರು (FIR) ನೀಡಿದ್ದಾರೆ. ಅಂಜಲಿ ಕೊಲೆ ಆರೋಪಿ ಗಿರೀಶ್ ಮೇಲೆ ಮತ್ತೊಂದು ಎಫ್‌ಐಆರ್ ದಾವಣಗೆರೆ ರೈಲ್ವೇ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಗದಗ ಮೂಲದ ಲಕ್ಷ್ಮೀ …
Read More »ಕಾನೂನುಬದ್ಧವಾಗಿ ನೀವು ಎಷ್ಟು ಮದ್ಯವನ್ನು ಮನೆಯಲ್ಲಿ ಸಂಗ್ರಹಿಸಬಹುದು ?
ಮನೆಯಲ್ಲಿ ಸ್ನೇಹಿತರೊಂದಿಗೆ ಪಾರ್ಟಿ ಮಾಡುವ ಮದ್ಯಪ್ರಿಯರು ಇದಕ್ಕಾಗಿ ಸಾಕಷ್ಟು ಮದ್ಯ ಖರೀದಿಸುತ್ತಾರೆ. ಆದರೆ ನಿಯಮ ಮೀರಿ ಮನೆಯಲ್ಲಿ ಹೆಚ್ಚು ಮದ್ಯ ಇಟ್ಟುಕೊಳ್ಳುವುದು ಕಾನೂನು ಬಾಹಿರ. ಹಾಗಾಗಿ ಯಾವುದೇ ಕಾನೂನು ತೊಂದರೆಯಿಲ್ಲದೆ ನೀವು ಮನೆಯಲ್ಲಿ ಎಷ್ಟು ಮದ್ಯವನ್ನು ಇಟ್ಟುಕೊಳ್ಳಬಹುದು ಎಂಬುದರ ಸಂಪೂರ್ಣ ಮಾರ್ಗದರ್ಶನದ ವಿವರ ಇಲ್ಲಿದೆ. ದೆಹಲಿ: ನಿವಾಸಿಗಳು ಮನೆಯಲ್ಲಿ 18 ಲೀಟರ್ ಮದ್ಯವನ್ನು (ಬಿಯರ್ ಮತ್ತು ವೈನ್ ಸೇರಿದಂತೆ) ಇಟ್ಟುಕೊಳ್ಳಬಹುದು ಆದರೆ 9 ಲೀಟರ್ ಗಳಿಗಿಂತ ಹೆಚ್ಚು ರಮ್, ವಿಸ್ಕಿ, ವೋಡ್ಕಾ …
Read More »