ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಮಾನನಷ್ಟ ಮೊಕದ್ದಮೆ ಕೇಸಲ್ಲಿ ನ್ಯಾಯಾಲಯ ಜನಾರ್ದನ ರೆಡ್ಡಿಗೆ ಸಮನ್ಸ್ ಜಾರಿ ಮಾಡಿದೆ. ತಮಿಳುನಾಡು ಸಂಸದ ಸಸಿಕಾಂತ್ ಸೆಂಥಿಲ್ ನೀಡಿದ್ದ ಮಾನನಷ್ಟ ಕೇಸ್ ಅಲ್ಲಿ ಸಮನ್ಸ್ ಜಾರಿಯಾಗಿದೆ. ಪ್ರಕರಣ ಸಂಬಂದ ಕಾಗ್ನಿಜೆನ್ಸ್ ತೆಗೆದುಕೊಂಡ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕ್ರಿಮಿನಲ್ ಕೇಸ್ ದಾಖಲಿಸಿಕೊಂಡು ಸಮನ್ಸ್ ಜಾರಿಗೊಳಿಸಿದೆ. ನ್ಯಾ.ಸಂದೀಪ್ ಪಾಟೀಲ್ ಅವರಿಂದ ಸಮನ್ಸ್ ಜಾರಿಯಾಗಿದ್ದು, ಧರ್ಮಸ್ಥಳ ವಿರುದ್ಧದ ಷಡ್ಯಂತ್ರದ ಹಿಂದೆ ಸೆಸಿಕಾಂತ್ ಸೆಂಥಿಲ್ …
Read More »ಎಸ್‌ಐಆರ್ 3 ತಿಂಗಳು ವಿಸ್ತರಿಸಿ – ದೇವನೂರು, ಗುಹಾ ಸಲ್ಲಿಸಿದ್ದ PIL ವಜಾ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅವಧಿಯನ್ನ ಒಂದರಿಂದ ಮೂರು ತಿಂಗಳವರೆಗೆ ವಿಸ್ತರಣೆ ಕೋರಿ ಸಾಹಿತಿ ದೇವನೂರು ಮಹಾದೇವ ಹಾಗೂ ಇತಿಹಾಸ ತಜ್ಞ ರಾಮಚಂದ್ರ ಗುಹಾ ಸೇರಿದಂತೆ ಇನ್ನಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ಕೆ.ಎಸ್.ಹೇಮಲತಾ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಎಸ್‌ಐಆರ್ ಅವಧಿ ವಿಸ್ತರಣೆ ಕೇಂದ್ರ ಚುನಾವಣೆ ಆಯೋಗಕ್ಕೆ ಬಿಟ್ಟ ವಿಚಾರ. …
Read More »ತಮಿಳುನಾಡಿಗೆ ನೀರು ಬಿಡಲು ಆದೇಶ; ಸರ್ವಪಕ್ಷ ಸಭೆ ಕರೆಯಲಿ: ಆರ್. ಅಶೋಕ್
ಬೆಂಗಳೂರು : ತಮಿಳುನಾಡಿಗೆ 3500 ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನದಿ ನೀರು ಹಂಚಿಕೆ ಪ್ರಾಧಿಕಾರ ಆದೇಶ ಮಾಡಿರೋದು ರಾಜ್ಯ ಸರ್ಕಾರದ ವೈಫಲ್ಯ. ಕೂಡಲೇ ಸರ್ವ ಪಕ್ಷಗಳ ಸಭೆ ಕರೆಯಬೇಕೆಂದು ವಿಪಕ್ಷ ನಾಯಕ ಅಶೋಕ್ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು. ಸಿಎಂ ಡಿಕೆ ಶಿವಕುಮಾರ್ ರಾಜ್ಯದ ಪರವಾಗಿ ಸರಿಯಾಗಿ ವಾದ ಮಾಡಿಲ್ಲ. ನೀರಾವರಿ ಸಚಿವ ರಾಮಲಿಂಗಾ …
Read More »ರಾಜ್ಯ ಸರ್ಕಾರ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸಬಾರದು: ಗಣಿಗ ರವಿಕುಮಾರ್ ಆಗ್ರಹ
ಮಂಡ್ಯ: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್, ರಾಜ್ಯ ಸರ್ಕಾರವು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸಬಾರದು ಎಂದು ಆಗ್ರಹ ಮಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆ ಹಾಗೂ ರೈತರಿಗೆ ಕುಡಿಯಲು ಮತ್ತು ಕೃಷಿಗೆ ನೀರಿಲ್ಲದ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ CWRC ಯಾವ ಆಧಾರದ ಮೇಲೆ ನೀರು ಬಿಡುವಂತೆ ಆದೇಶಿಸಿದೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ನಮ್ಮ …
Read More »ನನ್ನ ಬಗ್ಗೆ ಸುಳ್ಳು ಆರೋಪ – ಪ್ರಿಯಾಂಕಾ ಕ್ಷಮೆಗೆ ಜೋಶಿ ಆಗ್ರಹ
ನವದೆಹಲಿ: ನನ್ನ ಬಗ್ಗೆ ಸುಳ್ಳು ಆರೋಪ ಮಾಡಿದ ಪ್ರಿಯಾಂಕ್ ವಾದ್ರಾಲೋಕಸಭೆಯಲ್ಲಿ ಕ್ಷಮೆ ಕೇಳಬೇಕೆಂದು ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ(ಆಗ್ರಹಿಸಿದ್ದಾರೆ. ಅತ್ಯಾಚಾರಿಗಳ ಬಿಡುಗಡೆಯನ್ನು ಬೆಂಬಲಿಸಿದ್ದ ವ್ಯಕ್ತಿಯನ್ನು ನರೇಂದ್ರ ಮೋದಿ ಅವರು ದೇಶದ ಶಿಕ್ಷಣ ಸಚಿವರನ್ನಾಗಿ ನೇಮಿಸಿದ್ದಾರೆ. ಈ ಮೂಲಕ ದೇಶದ ಕೋಟ್ಯಂತರ ಹೆಣ್ಣುಮಕ್ಕಳಿಗೆ ಪ್ರಧಾನಿ ಏನು ಸಂದೇಶ ನೀಡುತ್ತಿದ್ದಾರೆ ಎಂದು ಪ್ರಿಯಾಂಕಾ ಲೋಕಸಭೆಯಲ್ಲಿ ಪ್ರಶ್ನಿಸಿದ್ದರು. ಪ್ರಿಯಾಂಕಾ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ ಜೋಶಿ, ಪ್ರಿಯಾಂಕಾ ಅವರು ತಾವು ನೀಡಿದ ಹೇಳಿಕೆಗಳನ್ನು ದೃಢೀಕರಿಸಬೇಕು. …
Read More »NEETಗಿಂತ KPSC ಹಗರಣಕ್ಕೆ ಉತ್ತರ ಕೊಡಿ: ಲೋಕಸಭೆಯಲ್ಲಿ ಡಿಕೆಶಿಗೆ ತೇಜಸ್ವಿ ಪ್ರಶ್ನೆ
ನವದೆಹಲಿ: ಮುಖ್ಯಮಂತ್ರಿಗಳು ದೆಹಲಿಗೆ ಬಂದು NEET ಹಗರಣದ ವಿರುದ್ಧ ಪ್ರತಿಭಟನೆ ಮಾಡುತ್ತಾರೆ. ಆದರೆ KPSC ಹಗರಣದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ಮಾಡುತ್ತಿದ್ದಾರೆ. ಅವರ ನೋವು ಮುಖ್ಯಮಂತ್ರಿಗಳಿಗೆ ಕಾಣುತ್ತಿಲ್ಲವೇ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರಶ್ನಿಸಿದರು. ಲೋಕಸಭೆಯಲ್ಲಿ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ತಡೆ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡುವ ವೇಳೆ ಮುಖ್ಯಮಂತ್ರಿಗಳಿಗೆ ಕನ್ನಡದಲ್ಲೇ ಪ್ರಶ್ನಿಸಿದ ಅವರು, ʼ10 …
Read More »FIR ಹಿಂಪಡೆಯದಿದ್ದರೆ ಮತ್ತೆ ದೇಶವ್ಯಾಪಿ ಪ್ರತಿಭಟನೆ: CJP ಹೊಸ ವಾರ್ನಿಂಗ್
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಕ್ರೋಚ್ ಜನತಾ ಪಕ್ಷ ಮತ್ತೊಮ್ಮೆ ರಾಷ್ಟ್ರವ್ಯಾಪಿ ಹೋರಾಟದ ಎಚ್ಚರಿಕೆ ನೀಡಿದೆ. ಸುಪ್ರೀಂ ಕೋರ್ಟ್ ಎಫ್‌ಐಆರ್‌ಗಳ ತನಿಖೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ, ಸರ್ಕಾರ ಪ್ರತಿಭಟನಾಕಾರರ ವಿರುದ್ಧ ಪ್ರಕರಣಗಳನ್ನು ಆಯುಧವಾಗಿ ಬಳಸಬಹುದು ಎಂದು ಸಂಘಟನೆ ಆತಂಕ ವ್ಯಕ್ತಪಡಿಸಿದೆ. ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಶಾಂತಿಯುತ ಪ್ರತಿಭಟನಾಕಾರರ …
Read More »ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸಲು ಆದೇಶ – ಮಂಡ್ಯದ ರೈತರಿಂದ ಪ್ರತಿಭಟನೆ ಎಚ್ಚರಿಕೆ; ಪೊಲೀಸರು ಅಲರ್ಟ್
ಮಂಡ್ಯ: ಕಾವೇರಿ ಕೊಳ್ಳದ ರೈತರಿಗೆ ಮತ್ತೊಮ್ಮೆ ಆತಂಕ ಎದುರಾಗಿದೆ. ಮಳೆಯಿಲ್ಲದೇ ಈಗಾಗಲೇ ಹಳೆ ಮೈಸೂರು ಭಾಗದಲ್ಲಿ ಬರದ ಪರಿಸ್ಥಿತಿ ತಲೆದೋರಿದೆ. ಇದರ ನಡುವೆಯೂ ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದ್ದು, ಮಂಡ್ಯದ ರೈತರಲ್ಲಿ ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ. ಒಂದೆಡೆ ಮಳೆಯಿಲ್ಲದೆ ಬೆಳೆಗಳು ಒಣಗುತ್ತಿದ್ದರೆ, ಮತ್ತೊಂದೆಡೆ ತಮಿಳುನಾಡಿಗೆ ನೀರು ಹರಿಸುತ್ತಿರುವುದು ರೈತರ ಕೆಂಗಣ್ಣಿಗೆ ಗುರಿಯಾಗಿದೆ. ಸಿಡಿದೆದ್ದಿರುವ ಮಂಡ್ಯ …
Read More »ಖೋದಾನಪುರ ಬಾರ್ ಬಂದ್‌ಗೆ ಆಗ್ರಹ
ಬೆಳಗಾವಿ: ಚನ್ನಮ್ಮನ ಕಿತ್ತೂರು ತಾಲೂಕಿನ ಖೋದಾನಪುರ ಗ್ರಾಮದ ಬಳಿಯ ಶ್ರೀ ಸಾಯಿ ಸ್ಪೋರ್ಟ್ಸ್ ಕ್ಲಬ್ ಹೆಸರಿನಲ್ಲಿ ನಡೆಸುತ್ತಿರುವ ಬಾರ್ ಬಂದ್ ಮಾಡಲು ಆಗ್ರಹಿಸಿ ಖೋದಾನಪುರ ಗ್ರಾಮಸ್ಥರು ಸೋಮವಾರ ಅಬಕಾರಿ ಇಲಾಖೆ ಕಚೇರಿ ಎದುರು ಪ್ರತಿಭಟಿಸಿದರು. ಕರ್ನಾಟಕ ಬಹುಜನ ಚಳವಳಿ ಸಂಘದ ನೇತೃತ್ವದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು, ಏಳು ದಿನಗಳೊಳಗೆ ಬಂದ್ ಮಾಡದಿದ್ದರೆ ಮಹಿಳೆಯರು, ವಿದ್ಯಾರ್ಥಿಗಳು ಸೇರಿ ಬಾರ್ ಎದುರೇ ಹೋರಾಟ ಆರಂಭಿಸುವುದಾಗಿ ಎಚ್ಚರಿಕೆ ನೀಡಿದರು. ಯುವಕರು ಅತಿಯಾದ ಮದ್ಯ …
Read More »ಗೋವಿಗೆ ರಾಷ್ಟ್ರಮಾತೆ ಸ್ಥಾನಮಾನ ನೀಡಲು ಆಗ್ರಹ
ಬೆಳಗಾವಿ: ಗೋವನ್ನು ರಾಷ್ಟ್ರಮಾತೆಯನ್ನಾಗಿ ಘೋಷಿಸಲು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟಿಸಲಾಯಿತು. ಚನ್ನಮ್ಮ ವೃತ್ತದಿಂದ ಗೋವು ಸಮೇತ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಆಗಮಿಸಿ ಗೋಮಾತೆ ಅಭಿಮಾನದ ಪ್ರಯುಕ್ತ ಜಿಲ್ಲೆಯಲ್ಲಿ ಎರಡನೇ ಹಂತದಲ್ಲಿ ಸಂಗ್ರಹಿಸಿದ ಒಟ್ಟು 1.80 ಲಕ್ಷ ಸಹಿ ಸಂಗ್ರಹದ ಪ್ರತಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಯಿತು. ಸವದತ್ತಿ ತಾಲೂಕು ಶಿಂದೋಗಿ ನಿತ್ಯಾನಂದ ಆಶ್ರಮದ ಮುಕ್ತಾನಂದ ಸ್ವಾಮೀಜಿ ಮಾತನಾಡಿ, ಈಗಾಗಲೇ ಒಂದು ಹಂತದ ಅಭಿಯಾನ ಪೂರ್ಣಗೊಂಡಿದೆ. ದೇಶವ್ಯಾಪ್ತಿಯಲ್ಲಿ ಎರಡನೇ ಹಂತದ ಸಹಿ …
Read More »
Laxmi News 24×7