ನವದೆಹಲಿ : ಮಧುಮೇಹ, ಹೃದಯ ಮತ್ತು ಯಕೃತ್ತಿನ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಾಮಾನ್ಯವಾಗಿ ಬಳಸುವ 41 ಔಷಧಿಗಳು ಮತ್ತು ಆರು ಸೂತ್ರೀಕರಣಗಳ ಬೆಲೆಯನ್ನ ಸರ್ಕಾರ ಕಡಿಮೆ ಮಾಡಿದೆ. ಆಂಟಾಸಿಡ್ಗಳು, ಮಲ್ಟಿವಿಟಮಿನ್ಗಳು ಮತ್ತು ಪ್ರತಿಜೀವಕಗಳು ಅಗ್ಗವಾಗಲಿವೆ ಎಂದು ಔಷಧೀಯ ಇಲಾಖೆ ಮತ್ತು ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (NPPA) ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ವಿವಿಧ ಔಷಧಿಗಳ ಕಡಿಮೆ ಬೆಲೆಯ ಮಾಹಿತಿಯನ್ನ ತಕ್ಷಣದಿಂದ ಜಾರಿಗೆ ಬರುವಂತೆ ವಿತರಕರು ಮತ್ತು ಸ್ಟಾಕಿಸ್ಟ್ಗಳಿಗೆ ರವಾನಿಸಲು ಫಾರ್ಮಾ …
Read More »RCB vs CSK: ಎರಡೂ ತಂಡಗಳಿಗೆ ಪ್ರಮುಖ ಆಲ್ರೌಂಡರ್ಗಳು ಅಲಭ್ಯ; ಹೇಗಿರಲಿದೆ ಪ್ಲೇಯಿಂಗ್ 11
ಐಪಿಎಲ್ 2024ರ ಪಂದ್ಯಾವಳಿಯಲ್ಲಿ ರಣ ರೋಚಕ ಪಂದ್ಯವೆಂದೇ ಬಿಂಬಿಸಲಾಗುತ್ತಿರುವ ಆರ್ಸಿಬಿ ಮತ್ತು ಸಿಎಸ್ಕೆ ನಡುವಿನ ಪಂದ್ಯ ಮೇ 18ರಂದು ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯವನ್ನು ಆಯೋಜಿಸಲಾಗುತ್ತಿದೆ. ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಅವರನ್ನು ಮೈದಾನದಲ್ಲಿ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಎಂಎಸ್ ಧೋನಿ ಅವರು ಕೊನೆಯ ಬಾರಿಗೆ ಚಿನ್ನಸ್ವಾಮಿ ಆಡುತ್ತಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಎರಡೂ ತಂಡಗಳ ಅಭಿಮಾನಿಗಳು ಮೈದಾನದಲ್ಲಿ ಪಂದ್ಯ ನೋಡಲು ಕಾತರರಾಗಿದ್ದಾರೆ. ಪ್ಲೇ ಆಫ್ …
Read More »ಸ್ಕಾಟ್ಲೆಂಡ್ ಜೆರ್ಸಿ ಮೇಲೆ ರಾರಾಜಿಸಿದ ‘ನಂದಿನಿ’ ಲೋಗೋ; CM ಸಿದ್ದು ಸಂತಸ
ಬೆಂಗಳೂರು: ಈ ಬಾರಿಯ ಟಿ20 ವಿಶ್ವಕಪ್ ನಲ್ಲಿ (T20 World Cup) ಕನ್ನಡ ರಾರಾಜಿಸಲಿದೆ. ಹೌದು, ಈ ಬಾರಿ ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್ ಗೆ KMF ನಂದಿನಿ ಸ್ಪಾನ್ಸರ್ ಶಿಪ್ ಪಡೆದುಕೊಂಡಿದೆ. ಸದ್ಯ ನಂದಿನಿ ಲೋಗೋ ಇರುವ ಅಧಿಕೃತ ಜೆರ್ಸಿಯನ್ನು ಸ್ಕಾಟ್ಲೆಂಡ್ (Scotland) ಬಿಡುಗಡೆ ಮಾಡಿದೆ. ಈ ಕುರಿತ ಫೋಟೋಗಳನ್ನು X ನಲ್ಲಿ ಅಧಿಕೃತವಾಗಿ ಸ್ಕಾಟ್ಲೆಂಡ್ ಕ್ರಿಕೆಟ್ ಸಂಸ್ಥೆ ಮಾಹಿತಿ ಹಂಚಿಕೊಂಡಿದೆ. ಜೆರ್ಸಿಯ ಭುಜ ಮೇಲೆ ಕೆಎಂಎಫ್ ಲೋಗೋ ರಾರಾಜಿಸುತ್ತಿದ್ದು, …
Read More »ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಮಾಜಿ ಪ್ರಧಾನಿ H.D. ದೇವೇಗೌಡ ತೀರ್ಮಾನ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಮೇ 18ರಂದು 91 ವರ್ಷ ಪೂರೈಸಿ 92ನೇ ವಸಂತಕ್ಕೆ ಕಾಲಿಡಲಿದ್ದು, ಆದರೆ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ತೀರ್ಮಾನಿಸಿದ್ದಾರೆ. ಈ ಕುರಿತಂತೆ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಅಭಿಮಾನಿಗಳು ಹಾಗೂ ಜಾತ್ಯತೀತ ಜನತಾದಳ ಪಕ್ಷದ ಕಾರ್ಯಕರ್ತರಲ್ಲಿ ನನ್ನ ವಿನಂತಿ. ಇದೇ ತಿಂಗಳ 18 ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ …
Read More »ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ
ಆರೋಪಿಯ ಬಂಧಿಸದಿರುವುದು ಪೊಲೀಸರ ವೈಫಲ್ಯಕ್ಕೆ ಸಾಕ್ಷಿ: ದಿಂಗಾಲೇಶ್ವರ ಸ್ವಾಮೀಜಿ ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿಯನ್ನು ಈವರೆಗೂ ಬಂಧಿಸಿಲ್ಲ. ಇದು ಪೊಲೀಸ್ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿ ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ಬಾಮೀಜಿ ಹೇಳಿದರು. ಗುರುವಾರ ಅಂಜಲಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಪಿಯ ಬೆದರಿಕೆ ಕುರಿತು ಅಂಜಲಿ ಅವರ ಸಹೋದರಿ ಪೊಲೀಸರ ಗಮನಕ್ಕೆ ತಂದಿದ್ದಳು. ರಕ್ಷಣೆ ನೀಡುವಂತೆ ಕೋರಿದ್ದಳು. ಪೊಲೀಸರು ಆಗಲೇ ಎಚ್ಚೆತ್ತುಕೊಂಡಿದ್ದರೆ …
Read More »ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ
ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ ಬೀದರ್: ಬಿಜೆಪಿಯವರಿಗೆ ಹೇಳಿಕೊಳ್ಳಲು ಯಾವುದೇ ವಿಷಯವಿಲ್ಲ. ಸರ್ಕಾರಿ ಸೌಮ್ಯದ ಸಂಸ್ಥೆಗಳನ್ನು ಖಾಸಗೀಕರಣ ಮಾಡಿ ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನ ಪರಿಷತ್ ನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದ್ದು, ಬಿಜೆಪಿ ಸ್ವೀಪ್ ಆಗಲಿದೆ. ರಾಜ್ಯದ ಎಲ್ಲೆಡೆ …
Read More »ಅಂಜಲಿ ಕೊಲೆಗೆ ಪೊಲೀಸರೇ ಕಾರಣ: ಬಸವರಾಜ ಬೊಮ್ಮಾಯಿ
ಗದಗ: ಅಂಜಲಿ ಕೊಲೆ ಬೆದರಿಕೆ ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ. ರಾಜ್ಯದಲ್ಲಿ ಪೊಲೀಸರನ್ನು ರಾಜಕೀಯ ವಿರೋಧಿಗಳ ದಮನಕ್ಕಾಗಿ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಗದಗನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣ ಕುರಿತು.ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಈ ಪ್ರಕರಣದಲ್ಲಿ ಸಂಪೂರ್ಣವಾಗಿ ಪೊಲೀಸರ ವೈಫಲ್ಯವಿದೆ. ನೇಹಾ ತರನಾಗಿ ಕೊಲೆ …
Read More »ಹುಬ್ಬಳ್ಳಿ, ಶಿರಸಿಯಲ್ಲಿ ಧಾರಾಕಾರ ಮಳೆ
ಹುಬ್ಬಳ್ಳಿ: ಧಾರವಾಡ, ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಧಾರಾಕಾರ ಮಳೆಯಾಯಿತು. ಮಳೆಯಿಂದ ಉಂಟಾದ ತಂಪಾದ ವಾತಾವರಣ ಜನರಿಗೆ ಖುಷಿ ಕೊಟ್ಟಿತು. ಧಾರವಾಡ ನಗರ ಸೇರಿ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್, ಬ್ಯಾಹಟ್ಟಿ ಸೇರಿ ವಿವಿಧ ಗ್ರಾಮಗಳಲ್ಲಿ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ. ಮಳೆಯಿಂದ ಹುಬ್ಬಳ್ಳಿಯ ಸ್ಟೇಷನ್ ರಸ್ತೆ, ಕೊಯಿನ್ ರಸ್ತೆ ಜಲಾವೃತಗೊಂಡಿತು. ಜನರು ಅದರಲ್ಲೇ ಪ್ರಯಾಸಪಟ್ಟು ಸಾಗಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಕಾರವಾರ, ಅಂಕೋಲಾ, …
Read More »ಬೆಳೆ ಪರಿಹಾರಕ್ಕೆ ಆಗ್ರಹ: ರೈತರಿಂದ ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಬೀಗ
ಕಾಗವಾಡ: ಬರ ಪರಿಹಾರಕ್ಕೆ ಆಗ್ರಹಿಸಿ ತಾಲ್ಲೂಕಿನ ಶಿರಗುಪ್ಪಿ ಗ್ರಾಮದ ರೈತರು ಗ್ರಾಮ ಲೆಕ್ಕಾಧಿಕಾರಿ ಕಚೇರಿಗೆ ಬೀಗ ಜಡಿದು ಮಂಗಳವಾರ ಪ್ರತಿಭಟನೆ ನಡೆಸಿದರು. ‘ಗ್ರಾಮದಲ್ಲಿ ಒಂದು ಸಾವಿರಕ್ಕೂ ಅಧಿಕ ರೈತರಿದ್ದೇವೆ. ಕೇವಲ ಶೇ 10% ರಷ್ಟು ರೈತರಿಗೆ ಮಾತ್ರ ಬರ ಪರಿಹಾರ ನೀಡಲಾಗಿದೆ. ಈ ಕುರಿತು ಗ್ರಾಮ ಲೆಕ್ಕಾಧಿಕಾರಿಗಳನ್ನು ವಿಚಾರಿಸಿದರೆ ಹಾರಿಕೆಯ ಉತ್ತರ ನೀಡುತ್ತಿದ್ದಾರೆ’ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು. ‘ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿ, ಎಲ್ಲರಿಗೂ …
Read More »ಬರಪೀಡಿತ ಪ್ರದೇಶ ಘೋಷಣೆಗೆ ಮನವಿ’
ಮೂಡಲಗಿ: ಮೂಡಲಗಿ ತಾಲ್ಲೂಕಿನ ಹೊಸಯರಗುದ್ರಿ ಗ್ರಾಮವನ್ನು ‘ಬರಪೀಡಿತ ಪ್ರದೇಶ’ ಎಂದು ಸರ್ಕಾರವು ಘೋಷಿಸಬೇಕು ಎಂದು ರೈತರು ಮಂಗಳವಾರ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು. ರಾಜ್ಯದ ಹಲವು ತಾಲ್ಲೂಕುಗಳ ಗ್ರಾಮಗಳ ರೈತರಿಗೆ ಬರಪೀಡಿತ ಪ್ರದೇಶವೆಂದು ಘೋಷಿಸಿ ಬರಪರಿಹಾರವನ್ನು ರೈತರ ಖಾತೆಗಳಿಗೆ ಜಮಾ ಮಾಡಿದೆ. ಆದರೆ ಮೂಡಲಗಿ ತಾಲ್ಲೂಕಿನಲ್ಲಿ ಬರಗಾಲ ಇದ್ದರೂ ಕೇವಲ 13 ಗ್ರಾಮಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿದೆ. ಹೊಸಯರಗುದ್ರಿ ಬರಗಾಲ ತಾಂಡವಾಡುತ್ತಿದ್ದರೂ ಬರಪಿಡಿತ ಎಂದು ಗುರುತಿಸಿಲ್ಲ. ಬರಪೀಡಿತ ಬಗ್ಗೆ ಸಮೀಕ್ಷೆ …
Read More »