ಚಿಕ್ಕೋಡಿ : ವಿಜಯಪುರ ಮತ್ತು ಬಾಗಲಕೋಟೆಯಲ್ಲಿ ಸ್ವಾಮೀಜಿಯಿಂದ ನಿರ್ಬಂಧ ಹಿನ್ನೆಲೆ. ರಾಯಬಾಗದಲ್ಲಿ ಕಾಡಸಿದ್ದೇಶ್ವರ ಸ್ವಾಮೀಜಿ ಭಕ್ತವೃಂದದಿಂದ ಪ್ರತಿಭಟನೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಭಕ್ತವೃಂದರು. ಸ್ವಾಮೀಜಿ ಮೇಲೆ ವಿಧಿಸಿದ ನಿರ್ಬಂಧ ವಾಪಾಸ್ಸು ಪಡೆಯುವಂತೆ ಆಗ್ರಹಿಸಿ ನಡೆದ ಪ್ರತಿಭಟನೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಪ್ರತಿಭಟನೆ. ಕನ್ಹೇರಿ ಮಠದ ಸ್ವಾಮೀಜಿಯವರಿಗೆ ನಿರ್ಭಂಧ ಹೇರಿರುವ ರಾಜ್ಯ ಸರ್ಕಾರ.
Read More »ಸಕ್ರೆಬೈಲು ಆನೆ ಬಾಲಣ್ಣನ ಕಿವಿ ಕತ್ತರಿಸಿದ ವೈದ್ಯರ ತಂಡ: ಚಿಕಿತ್ಸೆ ಕುರಿತು ಡಿಎಫ್ಒ ಹೇಳಿದ್ದಿಷ್ಟು
ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರದ ಬಾಲಣ್ಣ ಎಂಬ ಹೆಸರಿನ ಸಾಕಾನೆಯ ಬಲ ಕಿವಿಯನ್ನು ಬೆಂಗಳೂರಿನ ವೈದ್ಯರ ತಂಡವು ಕಟ್ ಮಾಡಿದೆ. ಆನೆಗೆ ಕಿವಿಯ ಬಳಿ ಸಣ್ಣದೊಂದು ಗಾಯವಾಗಿತ್ತು. ಗಾಯಕ್ಕೆ ಸಕಾಲಕ್ಕೆ ಚಿಕಿತ್ಸೆ ಸಿಗದ ಕಾರಣ ಅದು ದೊಡ್ಡದಾಗಿತ್ತು. ಹಾಗಾಗಿ ಕಿವಿಯನ್ನೇ ಕತ್ತರಿಸಲಾಗಿದೆ. ಕಳೆದ ತಿಂಗಳು ಶಿವಮೊಗ್ಗದಲ್ಲಿ ನಡೆದಿದ್ದ ಅದ್ಧೂರಿ ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಬಾಲಣ್ಣ ಹೆಜ್ಜೆ ಹಾಕಿ ಎಲ್ಲರ ಗಮನ ಸೆಳೆದಿತ್ತು. ಬೆಂಗಳೂರು ವೈದ್ಯರಿಂದ ಸೂಕ್ತ ಚಿಕಿತ್ಸೆ: ಚಿಕಿತ್ಸೆ ಸಂದರ್ಭದಲ್ಲಿ ಬಾಲಣ್ಣ ಆನೆಯ …
Read More »ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಕೂಡ ಇರಲ್ಲಾ:,ಶೆಟ್ಟರ್
ಚಾಮರಾಜನಗರ: ಇದೇ ರೀತಿ ಆಂತರಿಕ ಕಲಹ ಮುಂದುವರೆದ್ರೆ ಈ ಸರ್ಕಾರ ಇರುವುದಿಲ್ಲ, 5 ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಕೂಡ ಇರಲ್ಲಾ, ಸರ್ಕಾರನೂ ಇರಲ್ಲಾ ಎಂದು ಮಾಜಿ ಸಿಎಂ, ಬೆಳಗಾವಿ ಹಾಲಿ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಆಂತರಿಕ ಫೈಟ್ ಜೋರಿದೆ, ಎರಡೂವರೆ ವರ್ಷ ಅಧಿಕಾರ ಹಂಚಿಕೆಗೆ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟೇ ಬಂದಿದ್ದಾರೆ. …
Read More »ಶಿಂಗಾರಕೊಪ್ಪ ಏತ ನೀರಾವರಿ ಯೋಜನೆಯಡಿ ರೂ. 57 ಲಕ್ಷ ವೆಚ್ಚದಲ್ಲಿ ಸೇವಾ ರಸ್ತೆ ಕಾಮಗಾರಿಗೆ ಚಾಲನೆ
ಸವದತ್ತಿ: ಶಿಂಗಾರಕೊಪ್ಪ ಏತ ನೀರಾವರಿ ಯೋಜನೆಯಡಿ ರೂ. 57 ಲಕ್ಷ ವೆಚ್ಚದಲ್ಲಿ ಸೇವಾ ರಸ್ತೆ ಕಾಮಗಾರಿಗೆ ಚಾಲನೆ ಸವದತ್ತಿ: ಕರ್ನಾಟಕ ನೀರಾವರಿ ನಿಗಮ ನಿಯಮಿತದ (KNNL) ವತಿಯಿಂದ ಸವದತ್ತಿ ತಾಲೂಕಿನ ಮಹತ್ವಕಾಂಕ್ಷಿ ಶಿಂಗಾರಕೊಪ್ಪ ಏತ ನೀರಾವರಿ ಯೋಜನೆಯಡಿಯಲ್ಲಿ ರೈತರಿಗೆ ಅನುಕೂಲವಾಗುವ ಸೇವಾ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು. ಸವದತ್ತಿ ಶಾಖಾ ಕಾಲುವೆಯ ಕಿಲೋಮೀಟರ್ (ಕಿ.ಮೀ) 3 ಮತ್ತು 4 ರ …
Read More »ಅಪ್ಪನನ್ನೇ ಹೊಡೆದು ನದಿಗೆ ತಳ್ಳಿ ಕೊಂದ ಮಗ
ಬೆಂಗಳೂರು : ತಾಯಿಯನ್ನ ಅವಾಚ್ಯವಾಗಿ ನಿಂದಿಸುತ್ತಿದ್ದವನನ್ನ ಆಕೆಯ ಮಗ ಹತ್ಯೆ ಮಾಡಿರುವ ಘಟನೆ ಸೋಮವಾರ ಉಲ್ಲಾಳ ಉಪನಗರದಲ್ಲಿ ವರದಿಯಾಗಿದೆ. ಕಬ್ಬಿಣದ ರಾಡ್‍ನಿಂದ ತಲೆಗೆ ಹೊಡೆದು ಅವಿನಾಶ್ (36) ಎಂಬಾತನನ್ನ ಹತ್ಯೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಆರೋಪಿ ಕಾರ್ತಿಕ್ (26)ನನ್ನ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಡಿಸಿಪಿ ಪ್ರತಿಕ್ರಿಯೆ ಹೀಗಿದೆ: ಈ ಕುರಿತು ಬೆಂಗಳೂರು ನೈಋತ್ಯ ವಿಭಾಗದ ಡಿಸಿಪಿ ಅನಿತಾ ಬಿ ಹದ್ದಣ್ಣನವರ್ ಮಾತನಾಡಿ, ಕಾರ್ತಿಕ್‌ನ ಸಂಬಂಧಿಯಾಗಿದ್ದ …
Read More »ನವೆಂಬರ್ ಕ್ರಾಂತಿ ಮಾಡಲು ಹೈಕಮಾಂಡ್ ಬಿಡಲ್ಲ: ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು: ನವೆಂಬರ್ ಕ್ರಾಂತಿ ಎಲ್ಲ ಆಗಲ್ಲ. ಕ್ರಾಂತಿ ಆಗಲು ಹೈಕಮಾಂಡ್ ಬಿಡಬೇಕಲ್ವಾ?. ಹೈಕಮಾಂಡ್ ಹಾಗೆಲ್ಲ ಮಾಡೋಕೆ ಬಿಡಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ನಗರದಲ್ಲಿಂದು ಮಾತನಾಡಿದ ಅವರು, ಇನ್ನೊಂದು 20-30 ದಿನ ಇದೆ ಅಷ್ಟೇ. ಏನಾಗುತ್ತದೆ ನೋಡೋಣ ಎಂದರು. ಇದೇ ವೇಳೆ, ಏಕನಾಥ್ ಶಿಂಧೆ ಒಬ್ಬರೇ, ಪವಾರ್ ಕೂಡ ಒಬ್ಬರೇ. ಇನ್ನೊಬ್ಬ ಏಕನಾಥ್ ಶಿಂಧೆ, ಪವಾರ್ ಹುಟ್ಟಿಕೊಳ್ಳಲು ಆಗಲ್ಲ ಎಂದರು. ನಾವೇನು ಸಿಎಂ ಸ್ಥಾನ ಕೇಳಿಲ್ಲ: ಅಹಿಂದ ನಾಯಕತ್ವದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, …
Read More »ಅಕ್ಟೋಬರ್ 28ರಿಂದ ಸೋಯಾ, ಸೂರ್ಯಕಾಂತಿ, ಹೆಸರು ಖರೀದಿ ಆರಂಭ: ಸಚಿವ ಶಿವಾನಂದ ಪಾಟೀಲ
ಬೆಂಗಳೂರು: ಬೆಂಬಲ ಬೆಲೆಯಲ್ಲಿ ಅಕ್ಟೋಬರ್ 28ರಿಂದ (ಮಂಗಳವಾರ) ಸೋಯಾಬಿನ್, ಸೂರ್ಯಕಾಂತಿ ಮತ್ತು ಹೆಸರುಕಾಳು ಖರೀದಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ರೈತರಿಗೆ ಸಿಹಿ ಸುದ್ದಿಯನ್ನು ತಿಳಿಸಿದ್ದಾರೆ. ಎಲ್ಲೆಡೆ ಈಗಾಗಲೇ ಖರೀದಿ ಕೇಂದ್ರಗಳನ್ನು ತೆರೆದು ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ. ಸೋಯಾಬಿನ್ ಖರೀದಿಗೆ ಒಟ್ಟು 206 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, 19,325 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಬೀದರ್ ಜಿಲ್ಲೆಯಲ್ಲಿ 116 ಖರೀದಿ …
Read More »ಕ್ರೀಡಾಳುಗಳಿಗೆ ಒಲಿಂಪಿಕ್ ತರಬೇತಿಗೆ ಸರ್ಕಾರದಿಂದ 10ಲಕ್ಷ ರೂಪಾಯಿ ನೀಡುತ್ತೇವೆ: ಸಿಎಂ
ಮಂಗಳೂರು: ರಾಜ್ಯ ಕ್ರೀಡಾಪಟುಗಳಿಗೆ ಮತ್ತು ಕ್ರೀಡಾ ಕ್ಷೇತ್ರದಲ್ಲಿನ ಸಾಧಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಹಿ ಸುದ್ದಿಯೊಂದನ್ನು ತಿಳಿಸಿದ್ದಾರೆ. ಜನಸಂಖ್ಯೆಯಲ್ಲಿ ನಂಬರ್ ಒನ್ ಆಗಿರುವ ಭಾರತ ಒಲಿಂಪಿಕ್ ಪದಕದಲ್ಲೂ ನಂಬರ್ ಒನ್ ಆಗಬೇಕು. ಅದಕ್ಕಾಗಿ ನಮ್ಮ ಸರ್ಕಾರ ಕ್ರೀಡೆಗೆ ಸದಾ ಪ್ರೋತ್ಸಾಹ ನೀಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಉರ್ವದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ “ಚೀಫ್ ಮಿನಿಸ್ಟರ್ – ಮಂಗಳೂರು ಇಂಡಿಯಾ ಇಂಟರ್ ನ್ಯಾಷನಲ್ ಚಾಲೆಂಜ್ 2025 ಪಂದ್ಯಾವಳಿ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. …
Read More »18 ಕೋಟಿಯ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ
ಯಮಕನಮರಡಿ ವಿಧಾನಸಭಾ ಕ್ಷೇತ್ರದ ಹಳೆ ವಂಟಮೂರಿ ಸಮೀಪದಲ್ಲಿ ಇಂದು ಅಂದಾಜು ರೂ. 18 ಕೋಟಿಯ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಯೋಜನೆಯಡಿ ಪಾಶ್ಚಾಪೂರ ರೈಲ್ವೆ ನಿಲ್ದಾಣದಿಂದ ಹಳೆ ವಂಟಮೂರಿ – ಕಲ್ಲಟ್ಟಿ – ಜಾರಕಿಹೊಳಿ – ಬೀರನಹೊಳಿ – ಕಾಟಾಬಳ್ಳಿ ಮೂಲಕ ರಾಷ್ಟ್ರೀಯ ಹೆದ್ದಾರಿ-4 ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗುತ್ತಿದೆ.ಈ ರಸ್ತೆ ಯೋಜನೆಯಿಂದ …
Read More »ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ: ನಿಖಿಲ್ ಕುಮಾರಸ್ವಾಮಿ
ರಾಮನಗರ : ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತೀವ್ರ ವಾಗ್ದಾಳಿ ನಡೆಸಿದರು. ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಡಿ. ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಸರ್ಕಾರ ಖಾತಾ ಪರಿವರ್ತನೆ ಹೆಸರಿನಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ಆದಾಯ …
Read More »
Laxmi News 24×7