Breaking News

Uncategorized

ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ನೀರಿನ ಹರಿವನ್ನು ಪರಿಶೀಲಿಸಿದ ರಾಹುಲ್ ಜಾರಕಿಹೊಳಿ

ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಕಾಲುವೆಗೆ ಹರಿಬಿಡಲಾಗುತ್ತಿರುವ ನೀರಿನ ಹರಿವನ್ನು ಇಂದು ರಾಯಬಾಗ ತಾಲೂಕಿನ ಮುಗಳಕೋಡ ಚೌಕಿ ಬಳಿ ಪರಿಶೀಲಿಸಿದರು. ಪ್ರಸ್ತುತ ಬೆಳಗಾವಿ ಹಾಗೂ ಬಾಗಲಕೋಟೆ, ಜಿಲ್ಲೆಯ ಜನ- ಜಾನುವಾರುಗಳಿಗೆ ನೀರಿನ ಅಭಾವ ಉಂಟಾಗಿದ್ದರಿಂದ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಮಂತ್ರಿ ಶ್ರೀ ಸತೀಶ ಜಾರಕಿಹೊಳಿಯವರ ನಿರ್ದೇಶನದ ಮೇರೆಗೆ , ಮೇ 25 ರಿಂದ ಜೂನ್‌ 4ರ ವರೆಗೆ 5.578 ಟಿಎಂಸಿ ನೀರನ್ನು ಹಿಡಕಲ್ …

Read More »

ಕನ್ಯಾಕುಮಾರಿಯಲ್ಲಿ ಪ್ರಚಾರ ಮುಗಿಯುತ್ತಿದ್ದಂತೆ ಕಡಲ ಮಧ್ಯೆ ‘ಮೋದಿ ಧ್ಯಾನ’

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ಕನ್ಯಾಕುಮಾರಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಮೇ 31 ರಂದು ವಿವೇಕಾನಂದ ರಾಕ್ ಮೆಮೋರಿಯಲ್ ನಲ್ಲಿ ಒಂದು ದಿನ ಧ್ಯಾನ ಮಾಡಬಹುದು. ಜೂನ್ 1 ರಂದು ಪ್ರಧಾನಿ ಧ್ಯಾನ ಮಾಡಲು ನಿರ್ಧರಿಸಿದರೆ, ಅವರು ಕನ್ಯಾಕುಮಾರಿಯಿಂದ ಹೊರಡುವ ಮೊದಲು ಎರಡನೇ ದಿನ ವಿವೇಕಾನಂದ ರಾಕ್ ಮೆಮೋರಿಯಲ್ನಲ್ಲಿ ಉಳಿಯುತ್ತಾರೆ ಎಂದು ತಿಳಿದು ಬಂದಿದೆ. ಅವರ ಭೇಟಿಗೂ ಪಕ್ಷಕ್ಕೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮಕ್ಕೂ …

Read More »

‘ವಾಟ್ಸಾಪ್’ಸ್ಟೇಟಸ್ ಅವಧಿ ಒಂದು ನಿಮಿಷಕ್ಕೆ ವಿಸ್ತರಣೆ..!

ವಿಶ್ವಾದ್ಯಂತ ಶತಕೋಟಿ ಬಳಕೆದಾರರನ್ನು ಹೊಂದಿರುವ ತ್ವರಿತ ಮೆಸೇಜಿಂಗ್ ಪ್ಲಾಟ್ಫಾರ್ಮ್ ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿದೆ. ಬಳಕೆದಾರರನ್ನು ಗಮನದಲ್ಲಿಟ್ಟುಕೊಂಡು ವಾಟ್ಸ್‌ಆಯಪ್ ಸ್ಟೇಟಸ್ನಲ್ಲಿ ಪ್ರಮುಖ ಬದಲಾವಣೆ ತಂದಿದೆ. ಅದರಂತೆ ಸ್ಟೇಟಸ್ ವಿಡಿಯೋ ಮಿತಿಯನ್ನು ಏರಿಕೆ ಮಾಡಿದೆ. ಈ ಹಿಂದೆ ಸ್ಟೇಟಸ್ ಸಮಯ ಮಿತಿ ಹೆಚ್ಚಿಸುವಂತೆ ಬಳಕೆದಾರರು ಬೇಡಿಕೆಯಿಟ್ಟಿದ್ದರು. ಇದೀಗ ಬಳಕೆದಾರರು ಬೇಡಿಕೆಯಂತೆ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಒಂದು ನಿಮಿಷದ ಕಾಲಾವಧಿಯನ್ನು ನಿಗದಿಪಡಿಸಲಾಗಿದೆ. ನಿಮಿಷದ ಧ್ವನಿ ಸಂದೇಶಗಳನ್ನು ಸ್ಟೇಟಸ್ ಅಪ್ಡೇಟ್ ಗಳಾಗಿ …

Read More »

ಶೀಘ್ರವೇ ‘ಅರಣ್ಯ ಇಲಾಖೆ’ಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ಹುದ್ದೆಗಳ ಭರ್ತಿಗೆ ಸರ್ಕಾರ ಕರಡು ಪ್ರಸ್ತಾವನೆ ಸಿದ್ಧಗೊಂಡಿದೆ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡು ವರ್ಷ ತುಂಬಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, ಅರಣ್ಯಇಲಾಖೆಯಲ್ಲಿ ಸುಮಾರು 6 ಸಾವಿರ ಹುದ್ದೆಗಳು …

Read More »

ವೀರ ಸಾವರ್ಕರ್’ ನಾಮಫಲಕಕ್ಕೆ ಮಸಿ!

ಬೆಂಗಳೂರು: ವೀರ ಸಾವರ್ಕರ್ ಜನ್ಮದಿನವಾದ (Veer Savarkar’s birthday) ಇಂದೇ ಸಾವರ್ಕರ್ ಹೆಸರಿರುವ ನಾಮಫಲಕಕ್ಕೆ (Savarkar’s name board) ಮಸಿ (Ink) ಬಳಿಯಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ (Bengaluru) ಯಲಹಂಕ ಮೇಲ್ಸೆತುವೆಯ (Yelahanka Flyover) ವೀರ ಸಾವರ್ಕರ್ ಬೋರ್ಡ್‌ಗೆ ಎನ್‌ಎಸ್‌ಯುಐ (NSUI) ಕಾರ್ಯಕರ್ತರು ಮಸಿ ಬಳಿದಿದ್ದಾರೆ. ಯಲಹಂಕದಲ್ಲಿ ಟ್ರಾಫಿಕ್ ಬ್ಲಾಕ್ ಮಾಡಿ, ಮೇಲ್ಸೇತುವೆ ಬೋರ್ಡ್‌ಗೆ ಎನ್‌ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿದ್ದಾರೆ. ಇನ್ನು ಮಸಿ ಬಳಿದ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ …

Read More »

ಶಾಲಾ, ಕಾಲೇಜು ಶಿಕ್ಷಕರ ನೇಮಕಾತಿ ಗುತ್ತಿಗೆ ರದ್ದು: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಿಬಿಎಂಪಿ ಶಾಲಾ, ಕಾಲೇಜು ಶಿಕ್ಷಕರ ನೇಮಕಾತಿ ಗುತ್ತಿಗೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಮೂಲಕ ತೀವ್ರ ಮುಜುಗರಕ್ಕೆ ಕಾರಣವಾಗಿದ್ದಂತ ಬಿಬಿಎಂಪಿ ಶಿಕ್ಷಕರ ನೇಮಕಾತಿ ಟೆಂಡರ್ ರದ್ದುಗೊಳಿಸಿ ಆದೇಶಿಸಿದೆ. ಮಾಜಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಈ ಹಿಂದೆಯೂ ಈ ವಿಚಾರವನ್ನು ರಾಜ್ಯದ ಉಪಮುಖ್ಯಮಂತ್ರಿಗಳ ಗಮನಕ್ಕೆ ಹಾಗೂ ಬಿಬಿಎಂಪಿಯ ಮುಖ್ಯ ಆಯುಕ್ತರ ಗಮನಕ್ಕೆ ತಂದಿದ್ದೆ. ಆಗ ಅದನ್ನು ಪರಿಶೀಲಿಸುವುದಾಗಿ ಹೇಳಿ …

Read More »

ಪೂರ್ವ ಮುಂಗಾರು ಮಳೆಯಿಂದ ಮಣ್ಣಿನಲ್ಲಿ ತೇವಾಂಶ ಹೆಚ್ಚಳ: ಖಾರಿಫ್ ಪೂರ್ವ ಬಿತ್ತನೆ ವಿಳಂಬ

ಬೆಂಗಳೂರು: ಮುಂಗಾರು ಪ್ರವೇಶಕ್ಕೆ ಮುನ್ನ ಕರ್ನಾಟಕದಲ್ಲಿ ಈ ವರ್ಷ ಸಾಕಷ್ಟು ವಿಳಂಬದ ನಂತರ ಖಾರಿಫ್ ಪೂರ್ವ ಬಿತ್ತನೆ ಆರಂಭವಾಗಿದೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆ ಸುರಿದು ಸಂಕಷ್ಟದಲ್ಲಿರುವ ರೈತರಿಗೆ ಸಮಾಧಾನ ತಂದಿದೆ. ಆದರೆ ಹಲವೆಡೆ ಮಣ್ಣಿನಲ್ಲಿ ತೇವಾಂಶ ಹೆಚ್ಚಾಗಿದ್ದು, ರೈತರ ಬೀಜ ಬಿತ್ತನೆ ಕಾರ್ಯ ನಿರೀಕ್ಷಿತ ಮಟ್ಟ ತಲುಪಿಲ್ಲ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ(KSNDMC) ಅಂಕಿಅಂಶಗಳ ಪ್ರಕಾರ, ಮೇ 1 ರಿಂದ ಇಲ್ಲಿಯವರೆಗೆ, ರಾಜ್ಯದಲ್ಲಿ ಸರಾಸರಿ …

Read More »

ಪರಿಷತ್ ಚುನಾವಣೆ: ಇಂದು ಸಿಎಂ ಡಿಸಿಎಂ ದೆಹಲಿಗೆ-

ಬೆಂಗಳೂರು ಮೇ 28: ಮೇಲ್ಮನೆ ಅಭ್ಯರ್ಥಿ ಘೋಷಣೆಗೆ ಇಂದು ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ವಿಮಾನದಲ್ಲೇ ಸಭೆ ನಡೆಯುವ ಸಾಧ್ಯತೆ ಇದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲು ಇಂದು ಬೆಳಗ್ಗೆ 11ಕ್ಕೆ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಗೆ ತೆರಳಲಿದ್ದಾರೆ. ಜೂನ್ 13 ರಂದು ವಿಧಾನಸಭೆಯಿಂದ ವಿಧಾನಪರಿಷತ್ತಿನ 11 …

Read More »

ರಾಮದುರ್ಗ | ಪೇಜಾವರ ವಿಶ್ವಪ್ರಸನ್ನ ತೀರ್ಥರ ಪುರಪ್ರವೇಶ: ಅದ್ದೂರಿ ಸ್ವಾಗತ

ರಾಮದುರ್ಗ: ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಸೋಮವಾರ ರಾಮದುರ್ಗ ಪಟ್ಟಣಕ್ಕೆ ಆಗಮಿಸಿದಾಗ ಬ್ರಾಹ್ಮಣ ಸಮಾಜದ ಪ್ರಮುಖರು ಅದ್ದೂರಿ ಸ್ವಾಗತ ಕೋರಿದರು. ಸಾರೋಟನಲ್ಲಿ ಆಸೀನರಾಗಿದ್ದ ಪೇಜಾವರ ಶ್ರೀಗಳನ್ನು ಮತ್ತು ವಿಶ್ವೇಶ ತೀರ್ಥರ ಭಾವಚಿತ್ರವನ್ನು ತೆರದ ಜೀಪಿನಲ್ಲಿ ಇಟ್ಟು ಭವ್ಯ ಮೆರವಣಿಗೆಯಲ್ಲಿ ಕರೆ ತರಲಾಯಿತು. ಮೆರವಣಿಗೆಯು ಇಲ್ಲಿನ ವೆಂಕಟೇಶ್ವರ ದೇವಸ್ಥಾನದಿಂದ ತೇರ ಬಜಾರ, ರಾಘವೇಂದ್ರ ರಥ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಸುಮಂಗಲೆಯರು ಪೂರ್ಣಕುಂಭ ಮೇಳೆ, ಡೊಳ್ಳು, ಜಾಂಜ್‌ ಪದಕಗಳ ಸದ್ದು ಮೊಳಗಿದವು. ಮಹಿಳೆಯರು …

Read More »

ವಿದ್ಯುತ್ ಕೇಬಲ್ ವೈರ್ ತುಳಿದು ರೈತ ಸಾವು

ಚನ್ನಮ್ಮನ ಕಿತ್ತೂರು: ಕೊಳವೆಬಾವಿಗೆ ಸಂಪರ್ಕ ಕಲ್ಪಿಸಿರುವ ತುಂಡಾಗಿದ್ದ ವಿದ್ಯುತ್ ಪ್ರವಹಿಸುತ್ತಿರುವ ಕೇಬಲ್ ವೈರ್ ಆಕಸ್ಮಿಕವಾಗಿ ತುಳಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಸೋಮವಾರ ಮೃತಪಟ್ಟಿದ್ದಾರೆ. ತಾಲ್ಲೂಕಿನ ಹಿರೇನಂದಿಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯ ಮಂಜುನಾಥ ನೀಲಪ್ಪ ದಾಸನಕೊಪ್ಪ (42) ಮೃತ ವ್ಯಕ್ತಿ.   ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಈ ಅವಘಡ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »