Breaking News

Uncategorized

ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು

ಬೆಳಗಾವಿ: ಬಿಜೆಪಿ ಶಾಸಕರು, ಮುಖಂಡರು ಹಾಗೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಹಲ್ಲೆ ನಡೆಸಿದ ಘಟನೆ ಖಂಡಿಸಿ ಇಂದು ಬಿಜೆಪಿ ಬೆಳಗಾವಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.‌ ಪ್ರತಿಭಟನೆಯ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು. ಬಳಿಕ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ, ನೂಕಾಟ, ತಳ್ಳಾಟ ಉಂಟಾಗಿ ಕೆಲ ಕ್ಷಣ ಬಿಗುವಿನ ವಾತಾವರಣ …

Read More »

ಬೆಳಗಾವಿಯಲ್ಲಿ ನಂಬರ್ ಪ್ಲೇಟ್ ಇಲ್ಲದ ವಾಹನ ಓಡಿಸಿದ್ರೆ ಹುಷಾರ್

ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಬೆಳಗಾವಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ನೊಂದಣಿ ಸಂಖ್ಯೆ ಹೊಂದಿಲ್ಲದ, ದೋಷಪೂರಿತ ನೊಂದಣಿ ಸಂಖ್ಯೆ ಹೊಂದಿದ ದ್ವಿಚಕ್ರ ವಾಹನ ಬಳಸುತ್ತಿರುವುದನ್ನು ಗಮನಸಿ ನೊಂದಣಿ ಸಂಖ್ಯೆಗಳಿಲ್ಲದ ದ್ವಿಚಕ್ರ ವಾಹನಗಳ ವಿರುದ್ಧ ಬೆಳಗಾವಿ ಪೊಲೀಸರು  ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನೊಂದಣಿ ಸಂಖ್ಯೆಗಳಿಲ್ಲದ/ ನೊಂದಣಿ ಸಂಖ್ಯೆ ಮರೆಮಾಚಿದ/ ಮುಂದೆ ಅಥವಾ ಹಿಂದೆ ಯಾವುದಾದರೂ ಒಂದು ನೊಂದಣಿ ಸಂಖ್ಯೆ ಇಲ್ಲದಂತೆ ಮಾಡಿದ ಒಟ್ಟು 105 ದ್ವಿಚಕ್ರ ವಾಹನಗಳನ್ನು ತಡೆಹಿಡಿದು ಅವುಗಳ …

Read More »

ಇಬ್ಬರು ಅಪ್ರಾಪ್ತ ಬೈಕ್ ಕಳ್ಳರನ್ನು ಬಂಧಿಸಿದ ಪೊಲೀಸರು

ಬೆಳಗಾವಿ: ಬೈಕ್ ಕಳ್ಳತನ ಪ್ರಕರಣವನ್ನು ತನಿಖೆ ನಡೆಸಿದ ಬೆಳಗಾವಿ ಉದ್ಯಮಬಾಗ ಪೊಲೀಸರು ಇಬ್ಬರು ಅಪ್ರಾಪ್ತ ಬೈಕ್ ಕಳ್ಳರನ್ನು ಬಂಧಿಸಿ, ಎರಡು ಬಕ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಉದ್ಯಮಬಾಗ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಮಹಾಂತೇಶ ವಿ ಹೊಸಪೇಟಿ ನೇತೃತ್ವದಲ್ಲಿ ಇಬ್ಬರು ಅಪ್ರಾಪ್ತ ಬಾಲಕರನ್ನು ವಿಚಾರಣೆಗೊಳಪಡಿಸಿದಾಗ, ಬಾಲಕರು ಬೈಕ್‌ಗಳನ್ನು ಕಳ್ಳತನ ಮಾಡಿದ್ದರ ಬಗ್ಗೆ ಒಪ್ಪಿಕೊಂಡಿರುತ್ತಾರೆ. ಈ ಪ್ರಕರಣದಲ್ಲಿ ಒಟ್ಟು 65,000 ರೂ ಮೌಲ್ಯದ 2 ಬೈಕ್ ವಶಪಡಿಸಿಕೊಂಡು ಬಾಲಕರ ವಿರುದ್ಧ ನಿಯಮಾನುಸಾರ …

Read More »

ಮಾದಕ ವಸ್ತುಗಳು ದೇಶದ ಅಭಿವೃದ್ಧಿಗೆ ಮಾರಕ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ಮಾದಕ ವಸ್ತುಗಳು ದೇಶದ ಅಭಿವೃದ್ಧಿಗೆ ಮಾರಕ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್

ಬೆಳಗಾವಿ: ಮಾದಕ ವಸ್ತುಗಳು ದೇಶದ ಅಭಿವೃದ್ಧಿಗೆ ಮಾರಕವಾಗಿದ್ದು, ದೇಶದ ಯುವಜನತೆಯನ್ನು ಮಾದಕ ವಸ್ತುಗಳ ವ್ಯಸನಗಳಿಂದ ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ಅವರು ಹೇಳಿದರು. ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು …

Read More »

ಯುವ ಪೀಳಿಗೆ ಅಜ್ಞಾನ-ದುಶ್ಚಟಗಳಿಂದ ದೂರವಿದ್ದು ಉತ್ತಮ ಶಿಕ್ಷಣ ಪಡೆಯಬೇಕು: ಎಂ. ಎಂ. ಕಾಂಬಳೆ

ಬೆಳಗಾವಿ: ಬಡತನದಲ್ಲಿ ಹುಟ್ಟಿ ಬಡತನದಲ್ಲಿ ಬೆಳೆದು ಉತ್ತಮ ಶಿಕ್ಷಣವನ್ನು ಪಡೆದು ದೇಶದಲ್ಲಿರುವ ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಹೋರಾಡಿದ ಮಹಾನ್ ವ್ಯಕ್ತಿ ಡಾ. ಬಾಬಾಸಾಹೇಬ ಅಂಬೇಡ್ಕ‌ರ್ ಎಂದು ಬೆಳಗಾವಿಯ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಎಂ. ಎಂ. ಕಾಂಬಳೆ ಅವರು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಸರ್ಕಾರಿ ಸರದಾರ್ಸ ಪದವಿಪೂರ್ವ ಕಾಲೇಜು ಬೆಳಗಾವಿ ಇವರ ಸಯುಂಕ್ತ ಆಶ್ರಯದಲ್ಲಿ ಶುಕ್ರವಾರ (ಜುಲೈ 24) ರಂದು ಜರುಗಿದ ಭಾರತ …

Read More »

ಓದುವುದರ ಮುಖಾಂತರ ವ್ಯಕ್ತಿತ್ವವನ್ನು ಎತ್ತರಕ್ಕೆ ಬೆಳೆಸಲು ಸಾಧ್ಯ

ಬೆಳಗಾವಿ: ಕಾಲೇಜು ಶಿಕ್ಷಣ ಕಲಿಯುವ ಇಂದಿನ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಬದಿಗೊತ್ತಿ ಓದುವುದರ ಕಡೆಗೆ ಒಲವು ತೋರಿಸಬೇಕು, ಅಂದಾಗ ಮಾತ್ರ ಶಿಕ್ಷಣವು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಎತ್ತರಕ್ಕೆ ಬೆಳೆಸಲು ಸಾಧ್ಯ ಎಂದು ಬೈಲಹೊಂಗಲ ನಗರಸಭೆ ಪೌರಾಯುಕ್ತರಾದ ಭಾಗ್ಯಶ್ರೀ ಹುಗ್ಗಿ ಅವರು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ಹಾಗೂ ಸರ್ಕಾರಿ ಪದವಿ ಪೂರ್ವ ವಿದ್ಯಾಲಯ ಬೈಲಹೊಂಗಲ ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 23 2026(ಗುರುವಾರ) ಜರುಗಿದ ಭಾರತ ರತ್ನ ಡಾ. …

Read More »

ಮಗುವಿನ ಪೋಷಕರ ಪತ್ತೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನವಿ ಮಗುವಿನ ಪೋಷಕರ ಪತ್ತೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನವಿ

ಬೆಳಗಾವಿ : ನಾಲ್ಕೂವರೆ ವರ್ಷದ ಹಿಂದೆ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮಗುವನ್ನು ಬಿಟ್ಟು ಹೋದ ಮಹಿಳೆಯೊಬ್ಬಳು ನಾಪತ್ತೆಯಾಗಿದ್ದು, ಮಗುವಿನ ಪೋಷಕರ ಪತ್ತೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನವಿ ಮಾಡಿದ್ದಾರೆ. ಇಂದಿರಾ ಮಾರುತಿ ಬಾಗಾಡಿ ಇವಳಿಗೆ ವೈಷ್ಣವಿ (ವಯಸ್ಸು:4 ವರ್ಷ 7 ತಿಂಗಳು) ಎಂಬ ಹೆಣ್ಣು ಮಗುವಿದ್ದು, ತನ್ನ ಮಗುವನ್ನು ರಕ್ಷಣೆ ಮತ್ತು ಪೋಷಣೆ ಮಾಡಲಿಕ್ಕೆ ಸಾಧ್ಯವಾಗದೇ ಮಗುವಿನೊಂದಿಗೆ ದಿನಾಂಕ:೨೧-೧೨-೨೦೨೧ ರಂದು ಬೆಳಗಾವಿಯ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರಾಗಿ …

Read More »

ರಾಜ್ಯದಲ್ಲಿ ಭಾರೀ ಅಕ್ರಮ – ಸರ್ಕಾರಕ್ಕೆ 768 ಕೋಟಿ ನಷ್ಟ, ತನಿಖಾ ವರದಿ ಬಹಿರಂಗ

ಕೋಲಾರ: ಸರ್ಕಾರಿ ನೌಕರರ ಸಂಘದ ಮಾಜಿ ಜಿಲ್ಲಾಧ್ಯಕ್ಷರ ಮನೆ ಮೇಲೆ ಲೋಕಾಯುಕ್ತ  ದಾಳಿ ಮಾಡಿದ್ದ ಪ್ರಕರಣದ ತನಿಖಾ ವರದಿಯನ್ನು ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. 768 ಕೋಟಿ ರೂ. ಸರ್ಕಾರಕ್ಕೆ ನಷ್ಟವಾಗಿದ್ದು, ಅಕ್ರಮದ ತನಿಖಾ ವರದಿಯನ್ನು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಸರ್ವೇ ಸೂಪರ್ ವೈಸರ್ ಹಾಗೂ ಕೋಲಾರ (Kolar) ಮಾಜಿ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಬಾಬು ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ 435 …

Read More »

ಬಿಡದಿಗೆ ಹೊರಟಿದ್ದ ನೂರಾರು ರೈತರನ್ನ ಕೊಡಗಿನ ಗಡಿಭಾಗದಲ್ಲೇ ತಡೆದ ಪೊಲೀಸರು

ಮಡಿಕೇರಿ: ಬಿಡದಿ ಟೌನ್‌ಶಿಪ್ ವಿರುದ್ಧದ ಹೋರಾಟದಲ್ಲಿ ಭಾಗವಹಿಸಲು ತೆರಳುತ್ತಿದ್ದ ಕೊಡಗಿನ ರೈತರನ್ನ ಜಿಲ್ಲೆಯ ಗಡಿಭಾಗದಲ್ಲೇ ಪೊಲೀಸರು ತಡೆದಿದ್ದಾರೆ. ಪೋನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದಲ್ಲಿ ನಡೆದ ಈ ಬೆಳವಣಿಗೆ ಕೆಲಕಾಲ ಉದ್ವಿಗ್ನ ವಾತಾವರಣಕ್ಕೆ ಕಾರಣವಾಯಿತು. ಪೊಲೀಸರ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು  ತಿತಿಮತಿ – ಗೋಣಿಕೊಪ್ಪ ಮುಖ್ಯರಸ್ತೆಯಲ್ಲೇ ಕುಳಿತು ಪ್ರತಿಭಟನೆ ಆರಂಭಿಸಿದರು. ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ …

Read More »

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ – 15 ಲಕ್ಷ ಮೌಲ್ಯದ ಮದ್ಯ ಮಣ್ಣುಪಾಲು

ಹಾಸನ: ಇಲ್ಲಿನ ದೊಡ್ಡಪುರ ಗ್ರಾಮದ ಬಳಿ ಬಿಯರ್  ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಸುಮಾರು 15 ಲಕ್ಷ ರೂ. ಮೌಲ್ಯದ ಮದ್ಯ ಮಣ್ಣುಪಾಲಾಗಿದೆ. ಹಾಸನ  ನಗರದ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿರುವ ವುಡ್ ಪಿಕರ್ ಕಂಪನಿಯಿಂದ ಕೊಪ್ಪಳಕ್ಕೆ 1100 ಬಿಯರ್ ಬಾಟಲ್ ತುಂಬಿದ ಲಾರಿ ತೆರಳುತ್ತಿತ್ತು. ದೊಡ್ಡಪುರ ಗ್ರಾಮದ ಬಳಿ ಲಾರಿಯ ಟೈಯರ್ ಬ್ಲಾಸ್ಟ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ಪಲ್ಟಿಯಾಗಿದೆ. ಲೆಜೆಂಡ್, ರಾಯಲ್, ಪವರ್ ಕೂಲ್, ಸನ್ನಿ ಬೀಚಸ್ …

Read More »