ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕಾವುಂಡ ಪಾಳ್ಯಂ ವಿಧಾನಸಭಾ ಕ್ಷೇತ್ರದ ವಿವಿಧ ಪ್ರದೇಶಗಳಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಕಾಂಗ್ರೆಸ್ ಅಭ್ಯರ್ಥಿ ಸೂರ್ಯಪ್ರಕಾಶ್ ಪರ ಪ್ರಚಾರ ನಡೆಸಿದರು. ತೆಲಂಗಾಣದ ಜಲ ಸಂಪನ್ಮೂಲ ಸಚಿವರಾದ ಉತ್ತಮ್‌ಕುಮಾರ್ ರೆಡ್ಡಿ ಜೊತೆಗೂಡಿ, ಕಾವುಂಡ ಪಾಳ್ಯಂ ಕ್ಷೇತ್ರದ ಜಲ್ಲಿಕೊರೈ, ಸುಬ್ರಹ್ಮಣ್ಯ ಪಾಳ್ಯಂ, ವಾಲೆಟ್ ನಗರ, ಕೆಎನ್‌ಜಿ ಪುದುರ್ ಪ್ರದೇಶಗಳಲ್ಲಿ ಮತಯಾಚಿಸಿದರು. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ …
Read More »ಇಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ
ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರಿಂದು (ಏ.15) ಆದಿಚುಂಚನಗಿರಿಗೆ ಭೇಟಿ ನೀಡಲಿದ್ದು, 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ದೆಹಲಿಯಿಂದ ಪ್ರಧಾನಿ ಮೋದಿಯವರು 10:05ಕ್ಕೆ ಹೆಚ್‌ಎಎಲ್‌ಗೆ ಆಗಮಿಸಲಿದ್ದು, ಬಳಿಕ ಅಲ್ಲಿಂದ 10:50ಕ್ಕೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯ ತಪೋವನದ ಹೆಲಿಪ್ಯಾಡ್‌ಗೆ ಬಂದಿಳಿಯಲಿದ್ದಾರೆ. ಈ ವೇಳೆ ಮೋದಿಗೆ ಶ್ರೀ ಮಠದವರು ಅದ್ದೂರಿಯಾಗಿ ಸ್ವಾಗತಿಸಲಿದ್ದಾರೆ. ಮೊದಲು ಮೋದಿ ಗೋರಕ್ಷಕನಾಥ ತಪಸ್ಸು ಮಾಡಿ, ಜ್ವಾಲಾಪೀಠಕ್ಕೆ ಭೇಟಿ …
Read More »ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ
ಬೆಂಗಳೂರು: ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಶಿಸ್ತು ಪಾಲಿಸಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷವಾದರೂ ಶಿಸ್ತು ಬಹಳ ಮುಖ್ಯ. ಆದರೆ ಜಮೀರ್ ಅಹ್ಮದ್ ಪಕ್ಷದ ಶಿಸ್ತನ್ನು ಪಾಲಿಸಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ಪಡೆದುಕೊಂಡೇ ಅಭ್ಯರ್ಥಿ ಆಯ್ಕೆ ಮಾಡಿದ್ದೆವು. ನಂತರ ನಾವು ಎಲ್ಲಾ ನಾಯಕರೊಂದಿಗೆ ನಿತ್ಯ ಸಂಪರ್ಕದಲ್ಲಿದ್ದೆವು. ನಮ್ಮ ನಾಯಕರ ವರದಿಗಳ ಆಧಾರದ ಮೇಲೆ, ತಮ್ಮದೇ ಆದ ವಿವಿಧ ಮೂಲಗಳಿಂದ …
Read More »ಪವರ್ ಪ್ಲಾಂಟ್ ದುರಂತ: ಬಾಯಿಲರ್ ಸ್ಫೋಟಕ್ಕೆ 10 ಕಾರ್ಮಿಕರು ಬಲಿ
ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ಸಿಂಗಿತಾರಿ ಗ್ರಾಮದಲ್ಲಿರುವ ವೇದಾಂತ ಪವರ್ ಪ್ಲಾಂಟ್‌ನಲ್ಲಿ ಇಂದು (ಏಪ್ರಿಲ್ 14) ಮಧ್ಯಾಹ್ನ ಭೀಕರ ಬಾಯಿಲರ್ ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ 10 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ನಂತರ ಉಂಟಾದ ಆತಂಕ ಮತ್ತು ಕಾಲ್ತುಳಿತದಲ್ಲಿ ಸುಮಾರು 30-40 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ರಾಯಗಢದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
Read More »ಮೇ 1 ರಿಂದ ಮಹಾರಾಷ್ಟ್ರದಲ್ಲಿ ಆಟೋ, ಟ್ಯಾಕ್ಸಿ ಚಾಲಕರಿಗೆ ಮರಾಠಿ ಕಡ್ಡಾಯ – ಇಲ್ಲದಿದ್ದರೆ ಲೈಸೆನ್ಸ್ ರದ್ದು
ಮುಂಬೈ: ರಾಜ್ಯದ ಎಲ್ಲಾ ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಮರಾಠಿ ಭಾಷಾ ಜ್ಞಾನವನ್ನು ಕಡ್ಡಾಯಗೊಳಿಸಲಾಗಿದೆ. ಚಾಲಕರು ಕಡ್ಡಾಯವಾಗಿ ಮರಾಠಿ ಓದಲು, ಬರೆಯಲು ಮತ್ತು ಮಾತನಾಡಲು ತಿಳಿದಿರಬೇಕು, ಇಲ್ಲದಿದ್ದರೆ ಅವರ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ. ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಅವರು ಈ ನಿಯಮವನ್ನು ಮಹಾರಾಷ್ಟ್ರ ದಿನವಾದ ಮೇ 1 ರಿಂದ ರಾಜ್ಯಾದ್ಯಂತ ಕಡ್ಡಾಯವಾಗಿ ಜಾರಿಗೊಳಿಸುವುದಾಗಿ ಪುನರುಚ್ಚರಿಸಿದ್ದಾರೆ. ಪ್ರತಾಪ್ ಸರ್ನಾಯಕ್ ಅವರು ಮಾತನಾಡಿ, ಮಹಾರಾಷ್ಟ್ರ ದಿನಾಚರಣೆಯ ಜೊತೆಜೊತೆಗೆ …
Read More »ಆಸ್ಪತ್ರೆಯಲ್ಲಿ ಸಿರಿಂಜ್ ಮರುಬಳಕೆ – ಪಾಕ್‌ನ 331 ಮಕ್ಕಳಿಗೆ HIV ಸೋಂಕು
ಇಸ್ಲಾಮಾಬಾದ್: ಪಾಕಿಸ್ತಾನ ಆಸ್ಪತ್ರೆಯಲ್ಲಿ ಸಿರಿಂಜ್ ಮರುಬಳಕೆಯಿಂದ 331 ಮಕ್ಕಳಿಗೆ ಹೆಚ್‌ಐವಿ (HIV) ಸೋಂಕು ತಗುಲಿರುವ ಆಘಾತಕಾರಿ ವಿಚಾರ ತನಿಖೆಯಿಂದ ಬಹಿರಂಗಗೊಂಡಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಅಸುರಕ್ಷಿತ ಇಂಜೆಕ್ಷನ್ ಪದ್ಧತಿಗಳು ಮುಂದುವರೆದಿವೆ. ಮಕ್ಕಳಲ್ಲಿ ಹೆಚ್‌ಐವಿ ಪ್ರಕರಣಗಳು ಹೆಚ್ಚಾದ ನಂತರ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ರಹಸ್ಯ ದೃಶ್ಯಾವಳಿಗಳು ಮತ್ತು ಅಧಿಕೃತ ದತ್ತಾಂಶವನ್ನು ಆಧರಿಸಿದ ಸಂಶೋಧನೆಗಳು, THQ ಟೌನ್ಸಾ ಆಸ್ಪತ್ರೆಯಲ್ಲಿ ಸೋಂಕು ನಿಯಂತ್ರಣದಲ್ಲಿನ ವ್ಯವಸ್ಥಿತ ವೈಫಲ್ಯಗಳನ್ನು ಸೂಚಿಸುತ್ತವೆ. ಅಲ್ಲಿ …
Read More »ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
ಮುಂಬೈ: ಸಂಗೀತ ಲೋಕದ ದಿಗ್ಗಜ ಹಾಗೂ ಐಕಾನಿಕ್ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸರ್ಕಾರಿ ಗೌರವದೊಂದಿಗೆ ನಡೆಯಿತು. ಆಶಾ ಭೋಸ್ಲೆ ಪುತ್ರ ಆನಂದ್ ಭೋಸ್ಲೆ, ಸಹೋದರ-ಸಹೋದರಿ ಉಷಾ ಮಂಗೇಶ್ಕರ್ ಮತ್ತು ಹೃದಯನಾಥ್ ಮಂಗೇಶ್ಕರ್ ಸೇರಿದಂತೆ ಕುಟುಂಬದ ಸದಸ್ಯರು ಅಂತಿಮ ವಿಧಿಗಳ ವೇಳೆ ಹಾಜರಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಸುನೇತ್ರಾ ಪವಾರ್, ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ …
Read More »ಶ್ರೀರಂಗಪಟ್ಟಣ ತಾಲೂಕಿನ ಗ್ರಾಪಂನಲ್ಲಿ 2 ಕೋಟಿಗೂ ಅಧಿಕ ಅಕ್ರಮ
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ 21 ಗ್ರಾಮ ಪಂಚಾಯಿತಿಗಳು ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆ ಹಣದಲ್ಲಿ 2,83,34,944 ರೂ. ಹಣವನ್ನು ಗ್ರಾಮ ಪಂಚಾಯಿತಿ ನಿಧಿಗೆ ಜಮೆ ಮಾಡದೇ ಅಧಿಕಾರಿಗಳೇ ದುರುಪಯೋಗಪಡಿಸಿಕೊಂಡಿರುವ ಪ್ರಕರಣ ಲೋಕಾಯುಕ್ತ ತನಿಖೆಯಿಂದ ಬಹಿರಂಗೊಂಡಿದೆ. 1994-95ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಸ್ಥಳೀಯ ಲೆಕ್ಕ ಪರಿಶೋಧನಾ ವರದಿಗಳ ಪ್ರಕಾರ ಗ್ರಾಮ ಪಂಚಾಯಿತಿಗಳು ಜನರಿಂದ ಪಡೆದ ತೆರಿಗೆ ಹಣವನ್ನು ಗ್ರಾಮ ಪಂಚಾಯಿತಿ ನಿಧಿಗೆ ಜಮಾ ಮಾಡದಿರುವುದು ಕಂಡುಬಂದಿದೆ. ಈ ಹಣವನ್ನು ಅಧಿಕಾರಿಗಳೇ ದುರ್ಬಳಕೆ …
Read More »ಬೆಳಗಾವಿಯಲ್ಲಿ ಕ್ರಾಂತಿಸೂರ್ಯ ಮಹಾತ್ಮ ಫುಲೆ ಅವರ 200ನೇ ಜಯಂತಿ ಸಂಭ್ರಮ: ಸಮಾನತೆಯ ಸಂದೇಶ ಸಾರಿದ ಗಣ್ಯರು
ಬೆಳಗಾವಿಯ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ಇಂದು ಮಹಾತ್ಮ ಜ್ಯೋತಿರಾವ್ ಫುಲೆ ಅವರ 200ನೇ ಜಯಂತಿಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಸಾಮಾಜಿಕ ಸಮಾನತೆ ಮತ್ತು ಸ್ತ್ರೀ ಶಿಕ್ಷಣದ ಹರಿಕಾರನಿಗೆ ನಗರದ ಗಣ್ಯರು ಪುಷ್ಪ ನಮನ ಸಲ್ಲಿಸಿ, ಅವರ ವಿಚಾರಧಾರೆಗಳನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪಾಯುಕ್ತರಾದ ಉದಯಕುಮಾರ್ ತಳವಾರ್ ಅವರು ಮಹಾತ್ಮ ಫುಲೆ ಅವರ ಭಾವಚಿತ್ರಕ್ಕೆ ಹಾರಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಂದು ಸಾವಿತ್ರಿಬಾಯಿ …
Read More »ಬೆಳಗಾವಿ: ಶಿಕ್ಷಕರ ಸಂಘದ ಚುನಾವಣೆಯಲ್ಲಿ ಅಕ್ರಮದ ಆರೋಪ; ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಶಿಕ್ಷಕರ ಮತದಾರರ ಪಟ್ಟಿ ಮತ್ತು ಚುನಾವಣಾ ಅಧಿಕಾರಿ ಲಭ್ಯವಿಲ್ಲದ ಕಾರಣ ಚುನಾವಣೆಗೆ ತಡೆ ನೀಡಬೇಕು ಎಂದು ಶಿಕ್ಷಕರು ಶನಿವಾರ ಮಾರ್ಕೆಟ್ ಪೊಲೀಸ್ ಠಾಣೆಗೆ ದೂರು ನೀಡಿದರು. ಅವಧಿ ಮತದಾರರ ಯಾದಿಯನ್ನು ಸಾಮಾನ್ಯ ಶಿಕ್ಷರಾದ ನಮಗೆ ಏ.14ರವರೆಗೂ ಒದಗಿಸಿರುವುದಿಲ್ಲ ಹಾಗೂ ಚುನಾವಣಾ ದಿನಾಂಕ ಪ್ರಕಟವಾದರೂ ಕೂಡ ಸಾಮಾನ್ಯ ಶಿಕ್ಷಕರಿಗೆ ತಿಳಿಸದೆಯೇ ಚುನಾವಣೆಯ ದಿನಾಂಕ 19 ರಂದು ನಡೆಸುವುದಾಗಿ ಪ್ರಕಟಿಸಿ ಗೊಂದಲ ಸೃಷ್ಟಿ ಮಾಡಿದ್ದಾರೆ …
Read More »
Laxmi News 24×7