ಶಿಗ್ಗಾವಿ: ‘ಗ್ರಾಮೀಣ ಜೀವನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಅವಶ್ಯವಾಗಿದೆ. ಅದರಿಂದ ಭವಿಷ್ಯದ ಭದ್ರತೆ ಕಾಣಲು ಸಾಧ್ಯವಿದೆ. ಹೀಗಾಗಿ ಶಾಲಾ, ಕಾಲೇಜುಗಳ ಹಂತದಲ್ಲಿ ಈ ಯೋಜನೆ ಜಾರಿಗೆ ತರಲಾಗಿದೆ’ ಎಂದು ಕೂಡಲದ ಗುರುಮಹೇಶ್ವರ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಬಂಕಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ದತ್ತು ಗ್ರಾಮ ಚಂದಾಪುರ ಗ್ರಾಮದಲ್ಲಿ ಶುಕ್ರವಾರ ನಡೆದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ‘ವಿದ್ಯಾರ್ಥಿಗಳಿಗೆ …
Read More »ಹಾನಗಲ್: ಬಿತ್ತನೆ ಬೀಜದ ಪ್ಯಾಕೇಟ್‌ಗೂ ಬಂತು ಕ್ಯೂಆರ್ ಕೋಡ್
ಹಾನಗಲ್: ಬಿತ್ತನೆ ಬೀಜಗಳ ನಕಲಿ ಹಾವಳಿ ತಡೆಯುವ ನಿಟ್ಟಿನಲ್ಲಿ ಮುಂಗಾರು ಪೂರ್ವದಿಂದಲೇ ಕೃಷಿ ಇಲಾಖೆ ಬಿತ್ತನೆ ಬೀಜಗಳ ಪ್ಯಾಕೇಟ್ ಮೇಲೆ ಕ್ಯೂಆರ್ ಕೋಡ್ ಸ್ಕ್ಯಾನ್ ಕಡ್ಡಾಯಗೊಳಿಸಿದೆ. ರೈತರಿಗೆ ಪ್ರಮಾಣೀಕೃತ ಬೀಜಗಳ ವಿತರಣೆ ಮತ್ತು ಅಕ್ರಮ ದಾಸ್ತಾನು ತಡೆಗಟ್ಟುವ ಉದ್ದೇಶ ಹೊಂದಲಾಗಿದೆ. ಕೃಷಿ ಇಲಾಖೆ ಬಿತ್ತನೆ ಬೀಜಗಳನ್ನು ಸಂಗ್ರಹಿಸಿಕೊಂಡು ತಾಲ್ಲೂಕಿನ 9 ಕೇಂದ್ರಗಳ ಮೂಲಕ ವಿತರಣೆ ಆರಂಭಿಸಿದೆ. ಸಹಾಯಧನದ ವಿತರಣಾ ಕೇಂದ್ರಗಳಿಗೆ ರೈತರು ಆಗಮಿಸಿ ಬೀಜ ಖರೀದಿಯಲ್ಲಿ ತೊಡಗಿದ್ದಾರೆ. ಬೀಜ ವಿತರಣೆ …
Read More »ಶ್ಯಾಡಗುಪ್ಪಿ ಗ್ರಾಮದಲ್ಲಿ ಜ್ವರ ಉಲ್ಬಣ: 8 ಡೆಂಗಿ ಪ್ರಕರಣ ದಾಖಲು
ಹಾನಗಲ್: ತಾಲ್ಲೂಕಿನ ಶ್ಯಾಡಗುಪ್ಪಿ ಗ್ರಾಮದಲ್ಲಿ ಜ್ವರಬಾಧೆ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆ ವರದಿ ಪ್ರಕಾರ ಈ ಗ್ರಾಮದಲ್ಲಿ 8 ಡೆಂಗಿ ಪ್ರಕರಣಗಳು ದಾಖಲಾಗಿವೆ. ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಒಂದು ತಿಂಗಳ ಅವಧಿಯಲ್ಲಿ 54 ಜ್ವರದ ಪ್ರಕರಣಗಳು ದಾಖಲಾಗಿವೆ. ಗ್ರಾಮಸ್ಥರು ಜ್ವರದ ಭೀತಿಗೆ ತಲ್ಲಣಗೊಂಡಿದ್ದಾರೆ. ಜ್ವರದ ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಸಮೀಪದ ಅಕ್ಕಿಆಲೂರಿಗೆ ತೆರಳಿ ರಕ್ತ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಪ್ಲೆಟ್‌ಲೆಟ್ ಕಡಿಮೆಯಾದ ವರದಿ ಕೈಸೇರುತ್ತಲೇ ಉಳ್ಳವರು ದುಬಾರಿ ವೆಚ್ಚದ ಖಾಸಗಿ …
Read More »ಬಳ್ಳಾರಿ: ತುಮಟಿ, ವಿಠಲಾಪುರ, ಮಲಪನಗುಡಿಯಲ್ಲಿ ಜಂಟಿ ಸಮೀಕ್ಷೆ
ಬಳ್ಳಾರಿ: ಬಳ್ಳಾರಿ ಜಿಲ್ಲೆಯಲ್ಲಿ ಹಾದು ಹೋಗಿರುವ ಕರ್ನಾಟಕ ಮತ್ತು ಆಂಧ್ರಪ್ರದೇಶ ಮಧ್ಯದ ಅಂತರರಾಜ್ಯ ಗಡಿಯಲ್ಲಿನ ಏಳು ಗಣಿ ಗುತ್ತಿಗೆಗಳ ಜಂಟಿ ಸಮೀಕ್ಷೆ ಕಾರ್ಯ ಬುಧವಾರ ಆರಂಭವಾಯಿತು. ಮೊದಲ ದಿನದ ಸಮೀಕ್ಷೆ ಸಂಡೂರಿನ ತುಮಟಿ, ವಿಠಲಾಪುರ ಮತ್ತು ಆಂಧ್ರ ಪ್ರದೇಶದ ಮಲಪನಗುಡಿಯಲ್ಲಿ ಬರುವ ಮೆಹಬೂಬ್ ಟ್ರಾನ್ಸ್‌ಪೋರ್ಟ್ ಕಂಪನಿಯ (ಎಂಬಿಟಿ) ಗಣಿಯಿಂದ ಆರಂಭವಾಯಿತು. ಇದಕ್ಕೆ ಹೊಂದಿಕೊಂಡಂತಿರುವ ಹಿಂದ್ ಟ್ರೇಡರ್ಸ್ (ಎಚ್‌ಟಿ) ಮತ್ತು ಟಿ. ನಾರಾಯಣ ರೆಡ್ಡಿ (ಟಿಎನ್‌ಆರ್) ಗಣಿ ಗುತ್ತಿಗೆದಾರರ ಪರ ಪ್ರತಿನಿಧಿಗಳು ಮತ್ತು …
Read More »ತಳಿರು ತೋರಣಗಳಿಂದ ವಿದ್ಯಾರ್ಥಿಗಳ ಸ್ವಾಗತಕ್ಕೆ ಸಿದ್ಧತೆ
ಹರಿಹರ: ಮೇ 31ರಿಂದ 1ರಿಂದ 10ನೇ ತರಗತಿಯ ಶಾಲೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನಾದ್ಯಂತ ಎಲ್ಲಾ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸೂಚಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಹನುಮಂತಪ್ಪ ತಿಳಿಸಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ 53 ಸರ್ಕಾರಿ ಕಿರಿಯ, 81 ಸರ್ಕಾರಿ ಹಿರಿಯ ಪ್ರಾಥಮಿಕ, 19 ಸರ್ಕಾರಿ ಪ್ರೌಢಶಾಲೆಗಳು, ತಲಾ 25 ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ, 20 ಅನುದಾನ ರಹಿತ ಕಿರಿಯ ಪ್ರಾಥಮಿಕ, 42 …
Read More »ಬಾಲಕನಿಂದ ವ್ಹೀಲಿಂಗ್; ವಾಹನ ಜಪ್ತಿ
ಬೆಂಗಳೂರು: ಕೆ.ಜಿ.ಹಳ್ಳಿ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡುವವರನ್ನು ಪತ್ತೆ ಹಚ್ಚಲು ಕೈಗೊಂಡ ವಿಶೇಷ ಕಾರ್ಯಾಚರಣೆಯಲ್ಲಿ ಓರ್ವ ಬಾಲಕನನ್ನು ಪತ್ತೆಮಾಡಿದ್ದು, ವಾಹನವನ್ನು ಜಪ್ತಿಮಾಡಲಾಗಿದೆ. ಬುಧವಾರ ಠಾಣಾ ಸಿಬ್ಬಂದಿ ಗಸ್ತಿನಲ್ಲಿರುವಾಗ ಹೆಚ್.ಬಿ.ಆರ್. ಲೇಔಟ್ ಮುಖ್ಯರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಬಾಲಕನ ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ‘ವಿಚಾರಣೆಯಲ್ಲಿ ಸವಾರ ಅಪ್ರಾಪ್ತ ವಯಸ್ಕನೆಂದು ತಿಳಿದು ಬಂದಿದ್ದು, ಸಂಚಾರ ಪೊಲೀಸರು ಸವಾರನ ಪೋಷಕರು/ ವಾಹನ ಮಾಲೀಕರ ವಿರುಧ್ಧ ಪ್ರಥಮ ವರ್ತಮಾನ ವರದಿ (ಎಫ್.ಐ.ಆರ್) …
Read More »ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ನೀಡುವ ಶಕ್ತಿ ಯೋಜನೆಯಿಂದ ಜಿಎಸ್‌ಟಿಗೆ ಕೊಡುಗೆ
ಬೆಂಗಳೂರು, ಮೇ 29: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯು ಕರ್ನಾಟಕದ ಜಿಎಸ್‌ಟಿ ಸಂಗ್ರಹಕ್ಕೆ ಕೊಡುಗೆ ನೀಡುತ್ತಿದೆ ಮತ್ತು ಕಾರ್ಮಿಕ ಬಲದಲ್ಲಿ ಮಹಿಳಾ ಭಾಗವಹಿಸುವಿಕೆಯನ್ನು ಹೆಚ್ಚಿಸುತ್ತಿದೆ ಎಂದು ರಾಜ್ಯ ಹಣಕಾಸು ನೀತಿ ಸಂಸ್ಥೆ (ಎಫ್‌ಪಿಐ) ನಡೆಸಿದ ಅಧ್ಯಯನದಿಂದ ತಿಳಿದು ಬಂದಿದೆ. ಕಳೆದ ವರ್ಷ, ಶಕ್ತಿ ಯೋಜನೆಯನ್ನು ಪ್ರಾರಂಭಿಸಿದಾಗಿನಿಂದ ಈ ವರ್ಷದ ಮಾರ್ಚ್‌ವರೆಗೆ, ಕರ್ನಾಟಕದ ಜಿಎಸ್‌ಟಿ ಸಂಗ್ರಹವು ಸಂಭಾವ್ಯವಾಗಿ 309.64 ಕೋಟಿ ರೂಪಾಯಿಗಳಷ್ಟು ಹೆಚ್ಚಾಗಿದೆ. ಏಕೆಂದರೆ ಮಹಿಳೆಯರು ಉಳಿಸುವ ಹಣವನ್ನು …
Read More »ಅಕ್ರಮವಾಗಿ ಸಾಗಿಸುತ್ತಿದ್ದ ‘ಸ್ಪಿರಿಟ್’ ವಾಹನದ ಮೇಲೆ ‘CCB’ ದಾಳಿ : 2 ಲಕ್ಷ ಮೌಲ್ಯದ ಸ್ಪಿರಿಟ್ ಜಪ್ತಿ
ಧಾರವಾಡ : ಧಾರವಾಡದ ಬಳಿ ಅಕ್ರಮವಾಗಿ ಸ್ಪಿರಿಟ್ ಅನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ದಾಳಿಯ ವೇಳೆ ಅಂದಾಜು 2 ಲಕ್ಷ ಮೌಲ್ಯದ 350 ಲೀಟರ್ ಸ್ಪಿರಿಟ್ ಅನ್ನು ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹೌದು ಟವೇರಾ ವಾಹನದಲ್ಲಿ ಧಾರವಾದದಿಂದ ಹುಬ್ಬಳ್ಳಿಗೆ ಸಾಗಿಸುತ್ತಿದ್ದಾಗ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಿಸಿಬಿ ಪೊಲೀಸರ ದಾಳಿಯ ವೇಳೆ ವಾಹನದಲ್ಲಿ ಇದ್ದಂತಹ ಇಬ್ಬರು ಪರಾರಿಯಾಗಿದ್ದಾರೆ. ಜಪ್ತಿ ಮಾಡಿದಂತ ಸ್ಪಿರಿಟ್ ಅನ್ನು …
Read More »ಕರ್ನಾಟಕ ರಾಜ್ಯ ಹಣಕಾಸು ಹಣಕಾಸು ಸಂಸ್ಥೆ ಮೇಲೆ ಲೋಕಾ ದಾಳಿ :ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಡೆಪ್ಯೂಟಿ ಮ್ಯಾನೇಜರ್
ಧಾರವಾಡ : ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಳಿಯ ವೇಳೆ 8 ಸಾವಿರ ಲಂಚ ಪಡೆಯುವಾಗ ಡೆಪ್ಯೂಟಿ ಮ್ಯಾನೇಜರ್ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಅಗಿ ಬಲೆಗೆ ಬಿದ್ದಿದ್ದಾನೆ. ಹೌದು ಧಾರವಾಡ ನಗರದ ರಾಯಪುರ ಬಡಾವಣೆಯಲ್ಲಿರುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಕಚೇರಿಯ ಮೇಲೆ 8 ಸಾವಿರ ಲಂಚ ಪಡೆಯುವಾಗ ಬೆಳಗ್ಗೆ ಬಿದ್ದ ಅಧಿಕಾರಿ ಡೆಪ್ಯೂಟಿ ಮ್ಯಾನೇಜರ್ ರಮೇಶ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ . …
Read More »ಸಾಣಿಕೊಪ್ಪದಲ್ಲಿ ಹೆಜ್ಜೆ-ಹೆಜ್ಜೆಗೂ ಸಮಸ್ಯೆ
ಬೈಲಹೊಂಗಲ: ರಸ್ತೆಬದಿ ಬಿದ್ದಿರುವ ಕಸದ ರಾಶಿ. ತ್ಯಾಜ್ಯ ಪದಾರ್ಥಗಳಿಂದ ತುಂಬಿ ತುಳುಕುವ ಚರಂಡಿಗಳು. ರಸ್ತೆಯಲ್ಲೇ ಹರಿಯುವ ಕೊಳಚೆ ನೀರು. ಹಿರೇಬಾಗೇವಾಡಿ-ಸವದತ್ತಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ತಾಲ್ಲೂಕಿನ ಸಾಣಿಕೊಪ್ಪದಲ್ಲಿ ಒಂದು ಸುತ್ತು ಹಾಕಿಬಂದರೆ, ಇಂಥ ದೃಶ್ಯ ಕಣ್ಣಿಗೆ ಬೀಳುತ್ತವೆ. ಚಿವಟಗುಂಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಒಳಪಟ್ಟಿರುವ ಈ ಗ್ರಾಮದಲ್ಲಿ 400 ಮನೆಗಳಿವೆ. 2,200 ಜನಸಂಖ್ಯೆ ಇದೆ. ರಾಜ್ಯ ಹೆದ್ದಾರಿ ಹಾಯ್ದು ಹೋಗಿದ್ದರೂ, ಈ ಊರು ಅಭಿವೃದ್ಧಿಗೆ ತನ್ನನ್ನು ತೆರೆದುಕೊಂಡಿಲ್ಲ. ಕನಿಷ್ಠ ಮೂಲಸೌಲಭ್ಯಕ್ಕಾಗಿ ಗ್ರಾಮಸ್ಥರ …
Read More »
Laxmi News 24×7