Breaking News

Uncategorized

ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಡಿ.ಕೆ.ಶಿವಕುಮಾರ್

ಬೆಂಗಳೂರು: ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ. ನಾನು ಏಳನೇ ತರಗತಿಯಿಂದ ಶಾಸಕನಾಗುವವರೆಗೂ ಅನೇಕ ಅಡಚಣೆಗಳನ್ನು ಎದುರಿಸಿ ಈಗ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿದ್ದೇನೆ. ಯುವಕರು ನಾಯಕರಾಗಲು ಮುಂದೆ ಬರಬೇಕು. ನಾಯಕನಾದವನು ನಾಯಕರನ್ನು ಸೃಷ್ಟಿಸಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್  ಯುವಕರಿಗೆ ಕರೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಉದ್ಘಾಟನೆ ಮಾಡಿ ಮಾತಾಡಿದ ಅವರು ತಮ್ಮ ಬಾಲ್ಯದ ಜೀವನ ಚುನಾವಣೆ ಹೋರಾಟದ ಬಗ್ಗೆ ಮಾತಾಡಿದರು. ಏಳನೇ ತರಗತಿ ಶಾಲಾ …

Read More »

ಹೋಬಳಿಗೊಂದು ವಸತಿ ಶಾಲೆ ನಿರ್ಮಾಣಕ್ಕೆ 650 ಕೋಟಿ ಮೀಸಲು: ಮುನಿಯಪ್ಪ

ಬೆಂಗಳೂರು: ಹೋಬಳಿಗೊಂದು ವಸತಿ ಶಾಲೆ  ನಿರ್ಮಾಣಕ್ಕೆ 650 ಕೋಟಿ ಮೀಸಲು ಇಡಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಮುನಿಯಪ್ಪ ತಿಳಿಸಿದರು. ವಿಧಾನಸೌಧದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಉದ್ಘಾಟನೆ ಮಾಡಿ ಮಾತಾಡಿದ ಅವರು, ಯುವಕರೇ ಈ ದೇಶದ ಶಕ್ತಿ ದೇಶದ ಪ್ರಜಾಪ್ರಭುತ್ವವನ್ನು ಉಳಿಸಲು ಮತ್ತು ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಮೌಲ್ಯಗಳನ್ನು ರಕ್ಷಿಸಲು ಯುವಪೀಳಿಗೆಯ ಜಾಗೃತಿ ಅತ್ಯಂತ ಮಹತ್ವದ್ದು ಎಂದರು. ಯುವ ಸಂಸತ್ ಹಾಗೂ ಚರ್ಚಾ …

Read More »

ಉಮರ್ ಖಾಲಿದ್ ರಾಷ್ಟ್ರೀಯವಾದಿ: ಬಿ.ಕೆ.ಹರಿಪ್ರಸಾದ್ ವಿವಾದ

ಬೆಂಗಳೂರು: ಉಮರ್ ಖಾಲಿದ್ ರಾಷ್ಟ್ರೀಯವಾದಿ ಅವರ ಬಗ್ಗೆ ಮಾತನಾಡುವ ನೈತಿಕತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ಗೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ. ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ನಲ್ಲಿ ಉಮರ್ ಖಾಲಿದ್ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ಎಬಿವಿಪಿ ವಿರೋಧ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ‌ನೀಡಿದ ಅವರು, ಉಮರ್ ಖಾಲಿದ್ ರಾಷ್ಟ್ರೀಯವಾದಿ. ಎಬಿವಿಪಿಗೆ ಉಮರ್ ಖಾಲಿದ್ ಬಗ್ಗೆ ಮಾತನಾಡಲು ಯಾವುದೇ ಹಕ್ಕಿಲ್ಲ ಅಂತ ಸಿಟ್ಟು ಹೊರಹಾಕಿದರು. ಎಬಿವಿಪಿ …

Read More »

ಗಣೇಶ ಮೆರವಣಿಗೆಯಲ್ಲಿ ಗಲಾಟೆ, ಕಲ್ಲುತೂರಾಟ – 19 ಜನರ ವಿರುದ್ಧ ಎಫ್‌ಐಆರ್

ಯಾದಗಿರಿ: ಗಣೇಶನ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ, ಬಳಿಕ ಮಾರಾಮಾರಿಯಾಗಿರುವ ಘಟನೆ ಯಾದಗಿರಿ  ನಗರದ ದುರ್ಗಾದೇವಿ ಮಂದಿರದ ಬಳಿ ನಡೆದಿದೆ. ಈ ಸಂಬಂಧ ಇದೀಗ 19 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಣೇಶೋತ್ಸವ ಮೆರವಣಿಗೆ ವೇಳೆ ಒಂದು ಗುಂಪಿನ ಯುವಕನ ಮೇಲೆ ಬೈಕ್ ಹಾದುಹೋಗಿದೆ. ಆಗ ಪರಸ್ಪರ ಮಾತಿಗೆ ಮಾತು ಬೆಳೆದು ಗಲಾಟೆ ಶುರುವಾಗಿದೆ. ಬಳಿಕ `ನಮ್ಮ ಏರಿಯಾದಲ್ಲಿ ಗಣೇಶ ಮೂರ್ತಿಯನ್ನು ಹೇಗೆ ಪ್ರತಿಷ್ಠಾಪನೆ ಮಾಡ್ತೀರಾ ನೋಡ್ತೀವಿ, …

Read More »

25 ವರ್ಷಗಳ ಜನಪರ ಸೇವೆ; ಮೋದಿಯವರ ಸಾಧನೆಗಳನ್ನು ತಿಳಿಸಲು ಸೇವಾ ಸಂಕಲ್ಪ ಅಭಿಯಾನ

ಬೆಂಗಳೂರು: ಭಾರತವು ಹಿಂದಿನ ಕೇಂದ್ರ ಸರ್ಕಾರದ ಆಡಳಿತದಲ್ಲಿ ಐದು ದುರ್ಬಲ ರಾಷ್ಟ್ರಗಳ ಸಾಲಿನಲ್ಲಿತ್ತು. ಇದೀಗ ಕಳೆದ ಸುಮಾರು 12 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಜೀ  ಅವರ ನಾಯಕತ್ವದಲ್ಲಿ ವಿಶ್ವದ ಐದು ಪ್ರಮುಖ ಆರ್ಥಿಕ ಶಕ್ತಿಗಳಲ್ಲಿ ಒಂದಾಗಿ ಮುನ್ನಡೆಯುತ್ತಿದೆ ಎಂದು ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಜೆ.ಪಿ.ನಡ್ಡಾ ಅವರು ವಿಶ್ಲೇಷಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ …

Read More »

ರಿಂಕು ಸಿಂಗ್ – ಸಂಸದೆ ಪ್ರಿಯಾ ಸರೋಜ್ ಮದುವೆ ಡೇಟ್ ಫಿಕ್ಸ್; ಡಿ.4ಕ್ಕೆ ಅದ್ಧೂರಿ ವಿವಾಹ

ಲಕ್ನೋ: ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ರಿಂಕು ಸಿಂಗ್ ಹಾಗೂ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್  ಅವರ ವಿವಾಹಕ್ಕೆ ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 4ರಂದು ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದು, ಉತ್ತರ ಪ್ರದೇಶದ ಲಕ್ನೋದಲ್ಲಿರುವ ರಾಮಾಡಾ ಹೋಟೆಲ್‌ನಲ್ಲಿ ವಿವಾಹ ಸಮಾರಂಭ ನಡೆಯಲಿದೆ ಎಂದು ವರದಿಯಾಗಿದೆ. ರಿಂಕು ಸಿಂಗ್ ಹಾಗೂ ಪ್ರಿಯಾ ಸರೋಜ್ ಅವರು 2025ರ ಜೂನ್ 8ರಂದು ಲಕ್ನೋದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಿಶ್ಚಿತಾರ್ಥ ಸಮಾರಂಭದಲ್ಲಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್ …

Read More »

ಬೆಂಗಳೂರಲ್ಲಿ ಧಾರಾಕಾರ ಮಳೆ; ದೊಮ್ಮಲೂರಿನಲ್ಲಿ ಗೋಡೆ ಕುಸಿದು 4 ಹಸು, 1 ಕರು ಸಾವು

ಬೆಂಗಳೂರು: ನಗರದಲ್ಲಿ ಸಂಜೆ ಸುರಿದ ಧಾರಾಕಾರ ಮಳೆಗೆ ದೊಮ್ಮಲೂರಿನಲ್ಲಿ ಗೋಡೆ ಕುಸಿದು ನಾಲ್ಕು ಹಸು ಹಾಗೂ ಒಂದು ಕರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಹಸುಗಳ ಮಾಲೀಕನಿಗೆ ಎರಡು ಕಾಲುಗಳ ಮುರಿತ ಆಗಿದೆ. ದೊಮ್ಮಲೂರು ಒಂದನೇ ಕ್ರಾಸ್‌ನಲ್ಲಿ ಆದ ದುರ್ಘಟನೆ ಇದಾಗಿದೆ. ಸಂಜೆ ಸುರಿದ ಮಳೆಗೆ ಮಿಲ್ಟ್ರಿ ಕಾಂಪೌಂಡ್ ಗೋಡೆ ಕುಸಿತವಾಯಿತು. ಹಸು ಮಾಲೀಕ ಮುನಿರಾಜುಗೆ ಕಾಲು ಮುರಿದಿದ್ದು, ಗಾಯಗಳಾಗಿವೆ. ಮತ್ತೊಂದು ಹಸು ಗಾಯಗೊಂಡು ನರಳಾಡಿದೆ. ಸಂಜೆ 6:30 ರ ಸುಮಾರಿಗೆ …

Read More »

8 ಜಿಲ್ಲೆಗಳಿಗೆ ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ ಹಾಗೂ ಮೈಸೂರು ಸೇರಿದಂತೆ ಒಟ್ಟು 8 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ಮಳೆಯ ಸಂದರ್ಭದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಬೆಂಗಳೂರು ನಗರ ಸೇರಿದಂತೆ …

Read More »

ಶೆಡ್ ನಲ್ಲಿ ವಾಸುತ್ತಿದ್ದವರಿಗೆ ಆದ್ಯತೆ ಮೇರೆಗೆ ಮನೆ ಮಂಜೂರು: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ನಗದ ಚವ್ಹಾಟ ಗಲ್ಲಿಯಲ್ಲಿ ನಾಲ್ವರು ಸಜೀವ ದಹನ ವಾಗಿದ್ದು, ಘಟನಾ ಸ್ಥಳಕ್ಕೆ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಕಿ ಅವಘಡದಿಂದ ದುರಂತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ಗಾಯಗೊಂಡಿರುವ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಬೆಂಕಿ ಅವಘಡದಿಂದ ಆಗಿದೆ. ಹೆಚ್ಚಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ. ಅವರ ವರದಿ ಏನು ಬರುತ್ತೆ …

Read More »

ಕಿತ್ತೂರ ಉತ್ಸವ ವಿಜೃಂಭಣೆಯ ಆಚರಣೆಗೆ ಸಚಿವ ಸತೀಶ ಜಾರಕಿಹೊಳಿ ಸೂಚನೆ

ಬೆಳಗಾವಿ:  ಅಕ್ಟೋಬರ 23, 24 ಹಾಗೂ 25 ರಂದು ಜರುಗಲಿರುವ 2026ರ ಕಿತ್ತೂರ ಉತ್ಸವದ ವಿಜೃಂಭಣೆಯ ಆಚರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ (ಸೆ.15) ಜರುಗಿದ ಕಿತ್ತೂರ ಉತ್ಸವ-2026 ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉತ್ಸವದ ಉದ್ಘಾಟನೆಗೆ ಮಾನ್ಯ ಮುಖ್ಯ ಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ಜೊತೆಗೆ …

Read More »