Uncategorized

ಅಧಿಕಾರ ಹಂಚಿಕೆ ವಿಚಾರ ಜನರ ಸಮಸ್ಯೆಯಲ್ಲ: ಸಚಿವ ಸಂತೋಷ್ ಲಾಡ್

ಹಾವೇರಿ : ಅಧಿಕಾರ ಹಂಚಿಕೆ ವಿಚಾರ ಜನರ ಸಮಸ್ಯೆಯಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಿಳಿಸಿದ್ದಾರೆ. ಹಾವೇರಿ ಜಿಲ್ಲೆ ಹಿರೇಕೆರೂರರಲ್ಲಿ ಮಾತನಾಡಿದ ಅವರು, ಈ ರೀತಿಯ ಹೇಳಿಕೆಗಳಿಗೆ ಸಂಪೂರ್ಣ ತೆರೆ ಎಳೆಯಬೇಕಾಗಿದೆ. ಈ ಕುರಿತಂತೆ ಸಿಎಂ ಮಾತನಾಡುತ್ತಾರೆ. ನಾನಂತೂ ಇದರ ಬಗ್ಗೆ ಮಾತನಾಡುವುದಿಲ್ಲ ಎಂದರು. ಜನರ ಮೇಲೆ ಪರಿಣಾಮ ಬೀರುವ ವಿಷಯಗಳ ಬಗ್ಗೆ ಮಾತನಾಡೋಣಾ. ಅಧಿಕಾರ ಹಂಚಿಕೆ, ಬಣ ರಾಜಕೀಯ ಪಕ್ಷ ನೋಡಿಕೊಳ್ಳುತ್ತೆ. ಹೈಕಮಾಂಡ್ ತಾಕೀತು ಮಾಡಿದ ನಂತರ, …

Read More »

ರಾಮದುರ್ಗ ತಾಲೂಕಿನ ತುರನೂರ ಗ್ರಾಮದಲ್ಲಿ ಸರಣಿ ಸಾವು 45 ದಿನದಲ್ಲಿ ಒಂದೇ ಗ್ರಾಮದ 30 ಜನ ಸಾವು;

ಬೆಳಗಾವಿ: ಒಬ್ಬರಲ್ಲ, ಇಬ್ಬರಲ್ಲ, ಒಂದೂವರೆ ತಿಂಗಳಲ್ಲಿ ಬರೋಬ್ಬರಿ 30 ಜನರ ಅಕಾಲಿಕ ಮರಣ. ಈ ದಿಢೀರ್​ ಸಾವುಗಳಿಗೆಕಾರಣವೇ ಗೊತ್ತಿಲ್ಲ. ಹೌದು,ಜಿಲ್ಲೆಯ ರಾಮದುರ್ಗ ತಾಲೂಕಿನ ತುರನೂರ ಗ್ರಾಮದಲ್ಲಿ ಸರಣಿ ಸಾವು ಸಂಭವಿಸುತ್ತಿರುವುದರಿಂದ ಊರಿನ ಜನರು ಆತಂಕಕ್ಕೊಳಗಾಗಿದ್ದಾರೆ. ಕಳೆದ 45 ದಿನಗಳ ಅಂತರದಲ್ಲಿ 30 ಜನ ಸಾವನ್ನಪ್ಪಿದ್ದಾರೆ. ಈ ಸರಣಿ ಸಾವಿನಿಂದಾಗಿ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ. ಗ್ರಾಮಸ್ಥರು ಏನಂತಾರೆ? : ಈ ಸಾವುಗಳಿಗೆ ಗ್ರಾಮದ ದುರ್ಗಾದೇವಿಗೆ ಪೂಜೆ ಸಲ್ಲಿಸುವಾಗ ದೇವಿ ಮೂರ್ತಿಯು ವಿರೂಪಗೊಂಡಿರುವುದು ಕಾರಣ …

Read More »

ಬೆಂಗಳೂರಲ್ಲಿ ಸರ್ಕಾರಿ ಅಧಿಕಾರಿ ಬರ್ಬರ ಕೊಲೆ.

ಬೆಂಗಳೂರು: ಮನೆಗೆ ನುಗ್ಗಿ ಮಹಿಳಾ ಅಧಿಕಾರಿಗೆ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ತಡರಾತ್ರಿ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕಿಯಾಗಿದ್ದ ಪ್ರತಿಮಾ (37) ಕೊಲೆಯಾದವರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಪತಿಯಿಂದ ದೂರವಾಗಿದ್ದ ಪ್ರತಿಮಾ ಒಬ್ಬಂಟಿಯಾಗಿ ದೊಡ್ಡಕಲ್ಲಸಂದ್ರದ ಅಪಾರ್ಟ್ಮೆಂಟ್​ವೊಂದರಲ್ಲಿ ವಾಸಿಸುತ್ತಿದ್ದರು. ಗಂಡ ಮತ್ತು ಮಗ ತೀರ್ಥಹಳ್ಳಿಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. ಶನಿವಾರ ರಾತ್ರಿ 8 …

Read More »

ಬೆಂಗಳೂರಿನಿಂದ ವಿಜಯಪುರ, ಬೆಳಗಾವಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲು

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ವಿಜಯಪುರ ಮತ್ತು ಬೆಳಗಾವಿಗೆ ವಿಶೇಷ ರೈಲುಗಳ ವ್ಯವಸ್ಥೆಯನ್ನು ಕಲ್ಪಿಸುತ್ತಿದೆ. ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್​ನಿಂದ ವಿಜಯಪುರ ಮತ್ತು ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರು ಪ್ರಯೋಜನ ಪಡೆದುಕೊಳ್ಳಬೇಕೆಂದು ನೈಋತ್ಯ ರೈಲ್ವೆ ಮನವಿ ಮಾಡಿದೆ‌. ರೈಲು ಸಂಖ್ಯೆ 06231/06232 ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ (ಒಂದು ಟ್ರಿಪ್): ರೈಲು ಸಂಖ್ಯೆ 06231 ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10ರಂದು …

Read More »

ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅರಭಾವಿ ಶಾಸಕ ಮೂಡಲಗಿ : ರೈತ ಸಮುದಾಯಕ್ಕೆ ಅನುಕೂಲ ಕಲ್ಪಿಸಿಕೊಡಲು ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಹಶೀಲ್ದಾರ ಕಛೇರಿಯ ಸಭಾಗೃಹದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಸವದತ್ತಿ ತಾಲೂಕಿನ ತಲ್ಲೂರ ಗ್ರಾಮದಲ್ಲಿ

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.     ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ತಲ್ಲೂರ ಗ್ರಾಮದಲ್ಲಿ ಶ್ರೀ ಬಸವಣ್ಣ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು.       ಸೌಭಾಗ್ಯ ಲಕ್ಷ್ಮಿ …

Read More »

ಸ್ಮಶಾನಕ್ಕಾಗಿ 2 ಎಕರೆ ನಿವೇಶನ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಗೋಕಾಕ : ಸಾರ್ವಜನಿಕ ಅನುಕೂಲಕ್ಕಾಗಿ ಎಲ್ಲ ಸಮುದಾಯದವರ ಹಿತದೃಷ್ಟಿಯಿಂದ ಸ್ಮಶಾನಕ್ಕಾಗಿ 2 ಎಕರೆ ಜಮೀನನ್ನು ಸರ್ಕಾರದಿಂದ ಖರೀದಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಿಲ್ಲಾಧಿಕಾರಿಗಳನ್ನು ಕೋರಿದರು. ತಾಲೂಕಿನ ಬೆಟಗೇರಿ ಗ್ರಾಮದ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಿಸಿ ಮಾತನಾಡಿದ ಅವರು, ಗ್ರಾಮಕ್ಕೆ ಅಗತ್ಯವಿರುವ ಸ್ಮಶಾನ ನಿವೇಶನವನ್ನು ದೊರಕಿಸಿಕೊಡುವುದಾಗಿ ತಿಳಿಸಿದರು. ಈ ಸಂಬಂಧ ಬೆಳಗಾವಿ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ಬೆಟಗೇರಿ ಗ್ರಾಮದ ಸಾರ್ವಜನಿಕರ ಬೇಡಿಕೆಗಳಿಗೆ ತಕ್ಷಣವೇ …

Read More »

ಮನೋಜ್ ಜಾರಂಗೆ, ಮಹಾರಾಷ್ಟ್ರ ಸಿಎಂ ಭಿನ್ನ ಹೇಳಿಕೆ: ಮರಾಠ ಮೀಸಲಾತಿ ಗಡುವಿನ ಬಗ್ಗೆ ಮೂಡಿದ ಗೊಂದಲ

​( ಮಹಾರಾಷ್ಟ್ರ): ಸರ್ಕಾರದ ನಿಯೋಗ ಮರಾಠಾ ಮೀಸಲಾತಿ ಬಗ್ಗೆ ಅದಷ್ಟು ಬೇಗ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ ಎಂದು ಭರವಸೆ ನೀಡಿದ ಹಿನ್ನೆಲೆ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಪಾಟೀಲ್ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ಮೊಟಕುಗೊಳಿಸಿದ್ದಾರೆ. ಅವರು ಮಹಾರಾಷ್ಟ್ರ ಸರ್ಕಾರಕ್ಕೆ ಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳಲು ಡಿಸೆಂಬರ್ 24ರ ತನಕ ಗಡುವು ನೀಡಿದ್ದಾರೆ. ಸದ್ಯ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದೆಡೆ, ಮರಾಠ ಮೀಸಲಾತಿಗೆ ಮನೋಜ್ ಜಾರಂಗೆ …

Read More »

ಢವಳೇಶ್ವರ ಗ್ರಾಮಸ್ಥರ ಒಗ್ಗೂಡಿಕೆ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ

ಢವಳೇಶ್ವರ ಗ್ರಾಮಸ್ಥರ ಒಗ್ಗೂಡಿಕೆ ಕಾರ್ಯ ಶ್ಲಾಘನೀಯವಾದದ್ದು : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಉಳಿಮುಟ್ಟದ ರಂಗೇಶ್ವರ, ಶಿವ ದೇವಾಲಯ ಹಾಗೂ ಲಕ್ಷ್ಮೀ ದೇವಸ್ಥಾನಗಳನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಕಾರ್ಯಕ್ರಮದಲ್ಲಿ ಶ್ರೀಶೈಲ ಪೀಠದ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಭಾಗಿ ಮೂಡಲಗಿ : ಢವಳೇಶ್ವರ ಗ್ರಾಮದಲ್ಲಿ ಎಲ್ಲರೂ ಭಕ್ತಿ ಭಾವದಿಂದ ಸುಮಾರು ಮೂರುವರೆ ಕೋಟಿ ರೂ. ವೆಚ್ಚದಲ್ಲಿ ರಂಗೇಶ್ವರ, ಶಿವ ಮತ್ತು ಲಕ್ಷ್ಮೀ …

Read More »

‘ಕನ್ನಡ’ ಫಿಲ್ಮ್​ ಚೇಂಬರ್​ನಲ್ಲಿ ಧ್ವಜಾರೋಹಣ ನೆರವೇರಿಸಿದ ನಟಿ ಲೀಲಾವತಿ

‘ಕನ್ನಡ’ ಫಿಲ್ಮ್​ ಚೇಂಬರ್​ನಲ್ಲಿ ಧ್ವಜಾರೋಹಣ ನೆರವೇರಿಸಿದ ನಟಿ ಲೀಲಾವತಿ ಇಂದು ಕರ್ನಾಟಕದಲ್ಲಿ ‘ರಾಜ್ಯೋತ್ಸವ’ದ ಸಂಭ್ರಮ ಮನೆ ಮಾಡಿದೆ. ಕನ್ನಡ ಚಿತ್ರರಂಗದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುವರ್ಣ ವರ್ಷವನ್ನು ಆಚರಿಸಲಾಯಿತು. ಫಿಲ್ಮ್​ ಚೇಂಬರ್​ ಅಧ್ಯಕ್ಷ ಎನ್​.ಎಂ ಸುರೇಶ್​, ಉಪಾಧ್ಯಕ್ಷೆ ಪ್ರಮೀಳಾ ಜೋಷಾಯ್, ನಿರ್ಮಾಪಕರ ಸಂಘದ ಉಮೇಶ್ ಬಣಕಾರ್, ಕಾರ್ಯದರ್ಶಿ ಭಾ.ಮಾ ಗೀರಿಶ್ ಸಮ್ಮುಖದಲ್ಲಿ ಹಿರಿಯ ನಟಿ ಅಭಿನೇತ್ರಿ ಲೀಲಾವತಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಅವರಿಗೆ …

Read More »