ಮಂಗಳೂರ: ಶಾಸಕರು ಕೃಷಿ ಅಧ್ಯಯನಕ್ಕಾಗಿ ವಿದೇಶ ಪ್ರವಾಸಕ್ಕೆ ಹೋಗ್ತಿರಬಹುದು, ಗೊತ್ತಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಪ್ರತಿಕ್ರಿಯಿಸಿ, ಅವರು ಯಾಕೆ ಹೋಗ್ತಿದ್ದಾರೆ ಎನ್ನುವುದು ಗೊತ್ತಿಲ್ಲ. ಆಸ್ಟ್ರೇಲಿಯಾ ಸೇರಿದಂತೆ ಎಲ್ಲಾ ಕಡೆ ಕೃಷಿ ಇದೆ. ಬಹುಶಃ ಕೃಷಿ ಅಧ್ಯಯನಕ್ಕೆ ಇರಬಹುದು. ಅವರ ಹಣದಲ್ಲಿ ಅವರು ಎಲ್ಲಿಗೆ ಬೇಕಾದರೂ ಹೋಗಬಹುದು. ಹಾಗಂತ, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಯಾವ ಕದನವೂ …
Read More »ಪ್ರತಿಷ್ಟಿತ ವಿವಿ ವಿದ್ಯಾರ್ಥಿನಿ ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವು!
ಚಿಕ್ಕಬಳ್ಳಾಪುರ: ಪ್ರತಿಷ್ಟಿತ ವಿಶ್ವವಿದ್ಯಾಲಯ ವಿದ್ಯಾರ್ಥಿನಿಯೊಬ್ಬಳು 14ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ಸರ್ಜಾಪುರ ಮೂಲದ ನಯನಾ (20) ಮೃತಪಟ್ಟಿರುವ ದುರ್ದೈವಿ. ಕಾಲೇಜು ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಮೃತ ನಯನಾ ದೊಡ್ಡಬಳ್ಳಾಪುರ ಹೊರವಲಯದ ನಾಗದೇನಹಳ್ಳಿ ಬಳಿ ಇರುವ ಗೀತಂ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಪದವಿ ವ್ಯಾಸಂಗ ಮಾಡುತ್ತಿದ್ದಳು. 14ನೇ ಮಹಡಿಯಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದು, ಆತ್ಮಹತ್ಯೆ …
Read More »ಗ್ರಾಮ ಪಂಚಾಯತ್ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ರೈತ
ವಿಜಯನಗರ: ಮನೆ ಕಟ್ಟಲು ಪರವಾನಗಿ ನೀಡದ ಹಿನ್ನೆಲೆಯಲ್ಲಿ ರೈತೊಬ್ಬ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಮ ಪಂಚಾಯತ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕಡಬಗೆರೆ ಪಂಚಾಯತ್ ವ್ಯಾಪ್ತಿಯ ಪವನಪುರ ಗ್ರಾಮದ ನಿವಾಸಿ ಕೆ. ಬಸವರಾಜ್ ಎಂಬವರು ಗ್ರಾ.ಪಂ. ಕಚೇರಿಯಲ್ಲೇ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮನೆ ನಿರ್ಮಾಣಕ್ಕಾಗಿ ಇ-ಸೊತ್ತು ಹಾಗೂ ಪರವಾನಗಿ ನೀಡುವಂತೆ ಹಲವಾರು ಬಾರಿ ಅರ್ಜಿ ಸಲ್ಲಿಸಿದ್ದರೂ …
Read More »ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು – ಮೃತದೇಹ ಪತ್ತೆ
ಚಿಕ್ಕಮಗಳೂರು: ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದ ಇಬ್ಬರು ಯುವಕರ ಮೃತದೇಹ ಇಂದು ಪತ್ತೆಯಾಗಿದೆ. ಮೂಲತಃ ಕೊಡಗು ಜಿಲ್ಲೆಯ ಅಭಿಷೇಕ್ (27) ಹಾಗೂ ಯೋಗೀಶ್ (17) ಕಳಸದಲ್ಲಿ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಕಳಸ ತಾಲೂಕಿನ ಬಾಳೆಹೊಳೆ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿ ಭದ್ರಾ ನದಿಯ ಆಳದ ಪರಿಚಯವಿಲ್ಲದ ಕಾರಣ ಇಬ್ಬರೂ ಸಾವನ್ನಪ್ಪಿದ್ದರು. ಪೊಲೀಸರು ಸಂಜೆವರೆಗೂ ಮೃತ ದೇಹ ಹುಡುಕಿ …
Read More »ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ (ವರ್ಚುವಲ್) ಸಭೆ
ABArK ಅಡಿ ಎಲ್ಲ ಆಸ್ಪತ್ರೆಗಳಲ್ಲಿ ಬಾಕಿ ಇರುವ ಕೇಸ್ ಗಳನ್ನು SAST ನಲ್ಲಿ ದಾಖಲಿಸುವಂತೆ ಸೂಚಿಸಲಾಯಿತು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಲಭ್ಯವಿರುವ ಔಷಧಗಳು, ಔಷಧಗಳ ಟೆಂಡರ್ ಪ್ರಕ್ರಿಯೆಗಳ ಕುರಿತು ಚರ್ಚಿಸಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಔಷಧಗಳು ಮತ್ತು ಅಗತ್ಯ ವೈದ್ಯಕೀಯ ಸಲಕರಣೆಗಳು ಲಭ್ಯವಿರಬೇಕು, ಕೊರತೆ ಕಂಡುಬಂದರೆ ತಕ್ಷಣ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಯಿತು. ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹರ್ಷ ಗುಪ್ತಾ, ಆಯುಕ್ತರಾದ …
Read More »ಮಹಾಶಿವರಾತ್ರಿ ಆಚರಣೆ ಯಾಕೆ ಗೊತ್ತಾ?
ಮಹಾಶಿವರಾತ್ರಿಯನ್ನು ದೇಶಾದ್ಯಂತ ಶ್ರದ್ಧಾ-ಭಕ್ತಿಗಳಿಂದ ಆಚರಿಸಲಾಗುತ್ತದೆ. ಪಂಚಾಂಗದ ಪ್ರಕಾರ ಪ್ರತಿ ಮಾಸದಲ್ಲಿ ಶಿವರಾತ್ರಿ ಇರುತ್ತದೆ. ಇದಕ್ಕೆ ಮಾಸ ಶಿವರಾತ್ರಿ ಎಂದೂ, ವರ್ಷಕ್ಕೆ ಒಮ್ಮೆ ಬರುವ ಶಿವರಾತ್ರಿಯನ್ನು ಮಹಾಶಿವರಾತ್ರಿ ಎನ್ನಲಾಗುತ್ತದೆ. ಪ್ರತಿ ವರ್ಷ ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಮಹಾಶಿವರಾತ್ರಿ ಆಚರಣೆ ಮಾಡಲಾಗುತ್ತದೆ. ಶಿವರಾತ್ರಿ ಭಗವಾನ್ ಶಿವನಿಗೆ ಅತ್ಯಂತ ಪ್ರಿಯವಾದ ದಿನವಾಗಿದೆ. ಈ ದಿನವನ್ನು ತ್ರಿಮೂರ್ತಿಗಳಲ್ಲಿ ಒಬ್ಬನಾದ ಶಿವನಿಗೆ ಅರ್ಪಿಸಲಾಗಿದೆ. ಮಹಾಶಿವರಾತ್ರಿಯನ್ನ ಶಿವ ಮತ್ತು ಪಾರ್ವತಿ ಮದುವೆಯಾದ ಶುಭ ದಿನ ಎನ್ನಲಾಗುತ್ತದೆ. …
Read More »ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ
ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ದುರದುಂಡಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ …
Read More »16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಪರಾಧಿ ಅರೆಸ್ಟ್
ಚಾಮರಾಜನಗರ: ಅಪಘಾತ ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ 1 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಹದಿನಾರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಪರಾಧಿಯನ್ನ ಚಾಮರಾಜನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ನಂಜನಗೂಡು ಪಟ್ಟಣ ನೀಲಕಂಠ ನಗರದ ಸಫಿ ಬಿನ್ ಸೈಯದ್ ಮಹಮ್ಮದ್ ಎಂಬ ಆಟೋ ಚಾಲಕ 2010 ರಿಂದ ಪೊಲೀಸರ ಕೈಗೂ ಸಿಗದೆ, ನ್ಯಾಯಾಲಯಕ್ಕೂ ಹಾಜರಾಗದೇ ತಲೆಮರೆಸಿಕೊಂಡಿದ್ದನು. ಸಫಿಗೆ ಅಪಘಾತ ಪ್ರಕರಣವೊಂದರಲ್ಲಿ ಚಾಮರಾಜನಗರ ಜೆಎಂಎಫ್‌ಸಿ ನ್ಯಾಯಾಲಯ 2010 ರಲ್ಲಿ 1 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. …
Read More »ಪುಲ್ವಾಮಾ ದಾಳಿಗೆ 7 ವರ್ಷ
ಪ್ರತಿ ವರ್ಷ ಪ್ರೇಮಿಗಳ ದಿನವನ್ನಾಗಿ ಆಚರಿಸುವ ಪ್ರತಿಯೊಬ್ಬರಿಗೂ ಇದು ಭಾರತದ ಇತಿಹಾಸದಲ್ಲೇ ಅತ್ಯಂತ ಕರಾಳ ದಿನ ಅನ್ನೋದು ಮತ್ತೆ ಮತ್ತೆ ನೆನಪಿಗೆ ಬರುತ್ತೆ. ಏಕೆಂದ್ರೆ ಇದೇ ದಿನ ಸರಿಯಾಗಿ 6 ವರ್ಷಗಳ ಹಿಂದೆ ಭಾರತೀಯ ಸೇನೆ ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಇಡೀ ಭಾರತವೇ ಶೋಕಾಚರಣೆ ಆಚರಿಸಿ, ಮರುಕ ವ್ಯಕ್ತಪಡಿಸಿತ್ತು. ಈಗಲೂ ಪ್ರತಿ ವರ್ಷ ಫೆಬ್ರವರಿ 14, ಭಾರತೀಯರ ಪಾಲಿಗೆ ಮರೆಯಲಾಗದ ದಿನ, ಕರಾಳ …
Read More »ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ
ರಾಯಚೂರು: ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಒಂದೂವರೆ ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ ಹೇಳಿದರು. ಶುಕ್ರವಾರ (ಫೆ.13) ನಗರದ ಹೊರವಲಯದ ಯರಮರಸ್ ಬಳಿಯ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಒಟ್ಟು 322 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯು …
Read More »
Laxmi News 24×7