Uncategorized

ಕನ್ನಡ ರಾಜ್ಯೋತ್ಸವ ಕಳೆಗಟ್ಟಿದೆ. ಕುಂದಾನಗರಿ ಬೆಳಗಾವಿಯಲ್ಲಿ ಸಂಭ್ರಮ ಜೋರಾಗಿದೆ.

ಬೆಳಗಾವಿ: ಕನ್ನಡ ರಾಜ್ಯೋತ್ಸವ ಕಳೆಗಟ್ಟಿದೆ. ಕುಂದಾನಗರಿ ಬೆಳಗಾವಿಯಲ್ಲಿ ಸಂಭ್ರಮ ಜೋರಾಗಿದೆ. ರಾಜ್ಯೋತ್ಸವಕ್ಕೆ ಟೀಶರ್ಟ್​ಗಳ ಖರೀದಿ ಭರಾಟೆ ಹೆಚ್ಚಾಗಿದ್ದು, ಕನ್ನಡ ನಾಡು, ನುಡಿ ಕುರಿತು ಜಾಗೃತಿ ಜೊತೆ ಕನ್ನಡಾಭಿಮಾನ ಮೂಡಿಸುವ ಟೀಶರ್ಟ್​ಗಳ ಖರೀದಿಗೆ ಕನ್ನಡಮ್ಮನ ಕಂದಮ್ಮಗಳು ಮುಗಿ ಬಿದ್ದಿದ್ದಾರೆ. ಬೆಳಗಾವಿಯಿಂದ ಲಂಡನ್​ಗೂ ಟೀಶರ್ಟ್ ಕಳಿಸಿದ್ದು ವಿಶೇಷವಾಗಿದೆ. ಇಡೀ ರಾಜ್ಯದಲ್ಲಿ ರಾಜ್ಯೋತ್ಸವ ಆಚರಣೆ ಒಂದೆಡೆಯಾದರೆ, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಚರಿಸುವ ರಾಜ್ಯೋತ್ಸವ ತುಂಬಾ ವಿಶೇಷವಾಗಿಯೇ ಇರುತ್ತದೆ. ಅಷ್ಟೊಂದು ಸಂಭ್ರಮ, ಸಡಗರದಿಂದ ಇಲ್ಲಿ ರಾಜ್ಯೋತ್ಸವ ಆಚರಿಸಲಾಗುತ್ತದೆ‌. …

Read More »

ಟಾಟಾ ಮೋಟಾರ್ಸ್​ಗೆ ₹766 ಕೋಟಿ ನೀಡುವಂತೆ ಪಶ್ಚಿಮಬಂಗಾಳ ಸರ್ಕಾರಕ್ಕೆ ಆದೇಶ

ನವದೆಹಲಿ: ಟಾಟಾ ಮೋಟಾರ್ಸ್​ ಮತ್ತು ಪಶ್ಚಿಮಬಂಗಾಳ ಸರ್ಕಾರದ ನಡುವಿನ ಸಿಂಗೂರ್​ ಘಟಕ ವ್ಯಾಜ್ಯ ಕಡೆಗೂ ಇತ್ಯರ್ಥ ಕಂಡಿದೆ. ನ್ಯಾನೋ ಕಾರು ಉತ್ಪಾದನಾ ಘಟಕವನ್ನು ಸ್ಥಳಾಂತರಿಸಿದ್ದಕ್ಕಾಗಿ ಉಂಟಾದ ನಷ್ಟವನ್ನು ಭರಿಸಲು ಕೋರಿದ್ದ ಟಾಟಾ ಮೋಟಾರ್ಸ್​ಗೆ, ಸಿಎಂ ಮಮತಾ ಬ್ಯಾನರ್ಜಿ ಅವರ ಸರ್ಕಾರ 766 ಕೋಟಿ ರೂಪಾಯಿ ಪರಿಹಾರವಾಗಿ ನೀಡಬೇಕು ಎಂದು ಮಧ್ಯಸ್ಥಿಕೆ ನ್ಯಾಯಮಂಡಳಿಯು ಸೋಮವಾರ ಆದೇಶಿಸಿದೆ.     ಪಶ್ಚಿಮಬಂಗಾಳದ ಸಿಂಗೂರಿನಲ್ಲಿ ಟಾಟಾ ಮೋಟಾರ್ಸ್​ ಕಂಪನಿಯು ನ್ಯಾನೋ ಕಾರು ಉತ್ಪಾದನಾ ಘಟಕ ಸ್ಥಾಪನೆಗೆ …

Read More »

ಆಧಾರ್ ಮೂಲಕ ಸೈಬರ್ ಬಳಸಿ ಲಕ್ಷಾಂತರ ರೂಪಾಯಿ ವಂಚನೆ.. ಬಿಹಾರದ ಮೂವರು ಆರೋಪಿಗಳ ಬಂಧನ

ಮಂಗಳೂರು: ಆಧಾರ್ ಮೂಲಕ ಸೈಬರ್ ಬಳಸಿ ವಿವಿಧ ಬ್ಯಾಂಕ್​ಗಳಿಂದ ಲಕ್ಷಾಂತರ ರೂಪಾಯಿ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಪ್ರಕರಣದಡಿ AEPS (Aadhar Enabled Payment System) ಬಿಹಾರದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.   ಬಿಹಾರ ರಾಜ್ಯದ ಸುಪೌಲ್ ನ ದೀಪಕ್ ಕುಮಾರ್ ಹೆಂಬ್ರಮ್ (33) ಅರಾರಿ ಜಿಲ್ಲೆಯ ವಿವೇಕ್ ಕುಮಾರ್ ಬಿಶ್ವಾಸ್ (24) ಮದನ್ ಕುಮಾರ್ (23) ಬಂಧಿತರು. 6 ತಿಂಗಳಿನ ಅವಧಿಯಲ್ಲಿ ಮಂಗಳೂರು ನಗರದ ಸಬ್‌ ರಿಜಿಸ್ಟ್ರಾರ್ …

Read More »

ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ ಆರೋಪ

ಮಂಗಳೂರು: ಬರಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ತೋರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.   ಮಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣದಲ್ಲಿ ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಬರ ಪರಿಹಾರಕ್ಕೆ ಕೇಂದ್ರ ಸರ್ಕಾರ ಇವತ್ತಿನವರೆಗೆ ಒಂದು ರೂಪಾಯಿ ಕೊಟ್ಟಿಲ್ಲ. ನಾವು ಎರಡು ಬಾರಿ ಮನವಿ ಕೊಟ್ಟೆವು. ಬರ ಪರಿಹಾರ ವೀಕ್ಷಣೆ ಮಾಡಲು ಕೇಂದ್ರದ ತಂಡ ಬಂದಿದೆ. ಪರಿಶೀಲನೆ ಮಾಡಿ 136 ತಾಲೂಕುಗಳಲ್ಲಿ 116 ತಾಲೂಕುಗಳು ಬರಪೀಡಿತ …

Read More »

ಸರ್ಕಾರ ಬೀಳಿಸುವ ಬಿಜೆಪಿ ಷಡ್ಯಂತ್ರ ಫಲಿಸಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : ಸರ್ಕಾರ ಬೀಳಿಸಲು ಬಿಜೆಪಿ ರೂಪಿಸುತ್ತಿರುವ ಷಡ್ಯಂತ್ರ ಫಲಿಸುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಶನಿವಾರ ಹೈದರಾಬಾದ್​ಗೆ ತೆರಳುವ ಮೊದಲು ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದ ಶಾಸಕ ರವಿ ಗಣಿಗ ಅವರ ಬಿಜೆಪಿಯ ಆಮಿಷದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಈ ಷಡ್ಯಂತ್ರದ ಬಗ್ಗೆ ನಮಗೆ ಗೊತ್ತಿದೆ. ಇದರ ಹಿಂದೆ ದೊಡ್ಡ, ದೊಡ್ಡ ನಾಯಕರು ಇದ್ದಾರೆ. ಆದರೆ, ಇದರಿಂದ ಏನೂ ಆಗುವುದಿಲ್ಲ ಎಂದು …

Read More »

ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗದ ನಾಯಕ ಮುಖ್ಯಮಂತ್ರಿ: ಅಮಿತ್​ ಶಾ

ಹೈದರಾಬಾದ್​ (ತೆಲಂಗಾಣ): ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಜನತೆ ಅಧಿಕಾರಕ್ಕೆ ತಂದರೆ ಹಿಂದುಳಿದ ವರ್ಗದ ನಾಯಕನನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಘೋಷಿಸಿದ್ದಾರೆ. ಇಂದು ಸೂರ್ಯಪೇಟ್​ ಜಿಲ್ಲೆಯಲ್ಲಿ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಪಾಲ್ಗೊಂಡರು.       ”ನಾನು ತೆಲಂಗಾಣದ ಜನತೆಗೆ ಒಂದು ಮಾತು ಹೇಳ ಬಯಸುತ್ತೇನೆ. ನೀವು ಬಿಜೆಪಿಗೆ ಆಶೀರ್ವಾದ ಮಾಡಿ, ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತಂದರೆ, …

Read More »

“ಒಲಿಂಪಿಕ್ಸ್​ ಕ್ರೀಡಾಕೂಟ ಆತಿಥ್ಯ ವಹಿಸಲು ಭಾರತ ಸಿದ್ಧ”: ಗೋವಾದಲ್ಲಿ ರಾಷ್ಟ್ರೀಯ ಕ್ರೀಡಾಕೂಟ ಉದ್ಘಾಟಿಸಿದ ಪ್ರಧಾನಿ ಮೋದಿ

ಪಣಜಿ (ಗೋವಾ): ಮೊದಲ ಬಾರಿಗೆ ಗೋವಾದ ಪಣಜಿಯಲ್ಲಿ ನಡೆಯುತ್ತಿರುವ 37ನೇ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟವನ್ನು ಪ್ರಧಾನಿ ನರೇಂದ್ರ ಮೋದಿ ಗುರುವಾರ ಉದ್ಘಾಟಿಸಿದರು. ದಕ್ಷಿಣ ಗೋವಾದ ಮಾರ್ಗಾವೊದಲ್ಲಿರುವ ಪಂಡಿತ್​ ಜವಾಹರ್​ಲಾಲ್​ ನೆಹರು ಕ್ರೀಡಾಂಗಣದಲ್ಲಿ ಅ.​ 26ರಿಂದ ನ.​ 9ರವರೆಗೆ ನಡೆಯಲಿರುವ ಕ್ರೀಡಾಕೂಕ್ಕೆ ದೇಶದ ಅಥ್ಲೀಟ್​ಗಳು ಹಸ್ತಾಂತರಿಸಿದ ಆಟಗಳನ್ನು ಪ್ರತಿನಿಧಿಸುವ ಜ್ಯೋತಿ(Infinity Flame) ಯನ್ನು ಸ್ವೀಕರಿಸುವ ಮೂಲಕ ಮೋದಿ ಚಾಲನೆ ನೀಡಿದರು. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, “ಇಂದು ಭಾರತದ ಸಂಕಲ್ಪ ಹಾಗೂ …

Read More »

ಚಿಕ್ಕಬಳ್ಳಾಪುರ ರಸ್ತೆ ಅಪಘಾತ: ಮೃತರ ಸಂಖ್ಯೆ 13ಕ್ಕೆ ಏರಿಕೆ.

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆ ಆಗಿದೆ. ಇಂದು ಮುಂಜಾನೆ ತಾಲೂಕಿನ ಚಿತ್ರಾವತಿ ಬಳಿಯ ಆರ್​​ಟಿಒ ಕಚೇರಿ‌ ಸಮೀಪ ಹೆದ್ದಾರಿ ಬದಿ ನಿಂತಿದ್ದ ಸಿಮೆಂಟ್ ಬಲ್ಕರ್​ ಲಾರಿಗೆ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಸುಮೊ ಡಿಕ್ಕಿಯಾಗಿತ್ತು. ಅಪಘಾತದಲ್ಲಿ ಸ್ಥಳದಲ್ಲೇ 12 ಮಂದಿ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತರಲ್ಲಿ 8 ಜನ ಪುರುಷರು, 4 ಮಹಿಳೆಯರು, ಒಂದು …

Read More »

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬೆಂಗಳೂರು: ಅಕ್ಟೋಬರ್ 28 ಮತ್ತು 29ರಂದು ನಡೆಯಲಿರುವ ವಿವಿಧ ನಿಗಮ ಮಂಡಳಿಗಳ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಷರತ್ತುಬದ್ಧ ಅನುಮತಿ ನೀಡಿದೆ. ಹಾಗಾಗಿ ಹಿಜಾಬ್​ ಧರಿಸಿಯೇ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಬಹುದಾಗಿದೆ. ಆದರೆ ಕೆಲ ಷರತ್ತುಗಳನ್ನು ವಿಧಿಸಿದ್ದು, ಕಟ್ಟುನಿಟ್ಟಾಗಿ ಷರತ್ತು ಪಾಲಿಸಲು ಸೂಚನೆ ನೀಡಿದೆ. ಸೂಚನೆಗಳೇನು?: ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಕೊಠಡಿಗೆ ಪ್ರವೇಶ ಕಲ್ಪಸಲು ಸೂಚಿಸಿದ್ದರೂ ಪರೀಕ್ಷೆ ಆರಂಭವಾಗುವುದಕ್ಕೆ ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ …

Read More »

ಕಿತ್ತೂರು ಉತ್ಸವದಲ್ಲಿ ಕುಸ್ತಿ ಪಂದ್ಯಾವಳಿ

ಬೆಳಗಾವಿ: ಚನ್ನಮ್ಮನ ಕಿತ್ತೂರು ಉತ್ಸವದಲ್ಲಿ ಆಯೋಜಿಸಿರುವ ಕುಸ್ತಿ ಪಂದ್ಯಾವಳಿ ಕಣ್ಮನ ಸೆಳೆಯಿತು. ರಾಜ್ಯ, ಹೊರ ರಾಜ್ಯ, ಹೊರ ದೇಶಗಳ ಕುಸ್ತಿಪಟುಗಳು ತಮ್ಮ ಪಟ್ಟುಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಜನರು ಶಿಳ್ಳೆ, ಚಪ್ಪಾಳೆಗಳ ಮೂಲಕ ಪೈಲ್ವಾನರನ್ನು ಹುರಿದುಂಬಿಸಿದರು. ಪಟ್ಟಣದ ಕೆಇಬಿ ಗ್ರಿಡ್ ಮೈದಾನದಲ್ಲಿ ಆಯೋಜಿಸಿದ್ದ ಪುರುಷರ ಹಾಗೂ ಮಹಿಳೆಯರ ಅಂತರರಾಷ್ಟ್ರೀಯ ಜಂಘೀ ನಿಖಾಲಿ ಕುಸ್ತಿ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದ ವಿಭಾಗದಲ್ಲಿ ಹರಿಯಾಣ ರಾಜ್ಯದ ಉಮೇಶ ಚೌಧರಿ ಮಥುರಾ ವಿರುದ್ಧ ಇರಾನ್ …

Read More »