Uncategorized

ಹನುಮಾನ್ ನಗರದ ಗ್ಲಾಸ್ ಹೌಸ್ ನಲ್ಲಿ ಝೀ ಕನ್ನಡ ಸರಿಗಮಪ ಖ್ಯಾತಿಯ ದಿಯಾ ಹೆಗಡೆಗೆ ಸನ್ಮಾನ

ಬೆಳಗಾವಿ: ಬೆಳಗಾವಿ ಹನುಮಾನ್ ನಗರದ ಗ್ಲಾಸ್ ಹೌಸ್ ನಲ್ಲಿ ಭಾನುವಾರ ತುಂಬಿದ ಸಭಾಗೃಹದಲ್ಲಿ ಝೀ ಕನ್ನಡ ಸರಿಗಮಪ ಖ್ಯಾತಿಯ ದಿಯಾ ಹೆಗಡೆಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಬೆಳಗಾವಿ ನಾಗರಿಕರು, ಹನುಮಾನ್ ಪ್ರಸಾದ ಸಮಿತಿಯ ಪದಾಧಿಕಾರಿ ಗಳಾದ ರಾಹುಲ್ ಮೇತ್ರಿ, ಡಿ.ಸಿ. ದೇಶಪಾಂಡೆ, ಅಳಗುಂಡಗಿ ಮತ್ತು ಶ್ರೀ ಲಲಿತಾ ಆರಾಧನಾ ಮಂಡಳಿಯ ಪ್ರತಿಮಾ ಅಂಬೇಕರ್, ಭಾವನಾ ಕುಲ್ಕರ್ಣಿ, ಸುನೀತಾ ಮಾನೆ, ಸಾವಿತ್ರೀ ಪಾಟೀಲ್, ದೀಪಾ ದೇಶಪಾಂಡೆ, ಸಂಧ್ಯಾ ಭಟ್ ಸನ್ಮಾನಿಸಿದರು.   ಶಿವಪುತ್ರ …

Read More »

ನಮ್ಮ ಸಂಸ್ಕøತಿ ನಮ್ಮ ಹೆಮ್ಮೆ ಶಾಸಕ ವಿಶ್ವಾಸ ವೈದ್ಯ

ಯರಗಟ್ಟಿ : ಸಮೀಪದ ಮುನವಳ್ಳಿ ಪಟ್ಟಣದಲ್ಲಿ ನಾಡಹಬ್ಬ ಮಹೋತ್ಸವದ ಅಂಗವಾಗಿ ಸಾಯಂಕಾಲ ಜರುಗಿದ ಡಾನ್ಸ್ ಮುನವಳ್ಳಿ ಡಾನ್ಸ್ ನೃತ್ಯ ಸ್ಪರ್ಧೆ, ಕಾಮಿಡಿ ಶೋ, ಲವ್ ಏ ರಿಯಾ ಚಲನಚಿತ್ರದ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆ ಸಮಾರಂಭದ ಉದ್ಘಾಟನೆಯನ್ನು ಶಾಸಕ ವಿಶ್ವಾಸ ವಸಂತ ವೈದ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕಲಾವಿದರಲ್ಲಿರುವ ಪ್ರತಿಭೆ ಅನಾವರಣಗೊಳ್ಳಲು, ಸಾಧನೆ ಮಾಡಿದ ಸಾಧಕರನ್ನು ಪ್ರೋತ್ಸಾಹಿಸಲು ಇಂಥ ವೇದಿಕೆಗಳು ಅವಕಾಶ ಕಲ್ಪಿಸುತ್ತವೆ ಎಂದರು.   ಸಾನಿಧ್ಯವನ್ನು ಶ್ರೀ ಮುರುಘೆಂದ್ರ …

Read More »

ಬೆಳಗಾವಿ ಮಹಾನಗರ ಪಾಲಿಕೆ ಮೇಲೆ ಸೂಪರ್ ಸೀಡ್ ತೂಗುಗತ್ತಿ

ಬೆಳಗಾವಿ: ಒಂದು ಕಡೆ ತಮ್ಮದೇ ಸರ್ಕಾರದ ವಿರುದ್ಧ ಸಚಿವ ಸತೀಶ್​ ಜಾರಕಿಹೊಳಿ ಮುನಿಸು ದೊಡ್ಡ ಸಂಚಲನ ಸೃಷ್ಟಿಸಿದರೆ, ಮತ್ತೊಂದೆಡೆ ಬೆಳಗಾವಿ ಮಹಾನಗರ ಪಾಲಿಕೆ ಸೂಪರ್ ಸೀಡ್​ಗೆ ಹುನ್ನಾರ ನಡೆದಿದೆಯಾ ಎಂಬ ಅನುಮಾನ‌ ಮೂಡಿದೆ. ಇದರಿಂದ ಇಂದು ನಡೆಯಲಿರುವ ಪಾಲಿಕೆ‌ ಸಾಮಾನ್ಯ ಸಭೆಯತ್ತ ಎಲ್ಲರ ಚಿತ್ತ ನೆಟ್ಟಿದೆ. ಹೀಗೊಂದು‌ ಅನುಮಾನ‌ ದಟ್ಟವಾಗಲು ಕಾರಣ, ಪಾಲಿಕೆ ಮೆಯರ್ ಶೋಭಾ ಸೋಮನಾಚೆ ಅವರು. ಅಕ್ಟೋಬರ್ 17 ರಂದು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಲಿಖಿತ ದೂರು ನೀಡಿದ್ದಾರೆ. …

Read More »

ಮತ್ತೆ ಚಲಾವಣೆಗೆ ಬರುತ್ತಾ 1,000 ರೂಪಾಯಿ ನೋಟು?: ಹೀಗೊಂದು ವದಂತಿ

ನವದೆಹಲಿ: ಏಳು ವರ್ಷಗಳ ಹಿಂದೆ ರದ್ದಾದ 1,000 ರೂಪಾಯಿ ಮುಖಬೆಲೆಯ ನೋಟುಗಳು ಮತ್ತೆ ಚಲಾವಣೆಗೆ ಬರಲಿವೆ ಎಂಬ ಸುದ್ದಿ ಹರಿದಾಡುತ್ತಿದೆ. ಇದರೊಂದಿಗೆ ಭಾರತೀಯ ರಿಸರ್ವ್​​ ಬ್ಯಾಂಕ್​ (ಆರ್​ಬಿಐ) ಹಳೆಯ ನೋಟನ್ನು ಮತ್ತೆ ಪರಿಚಯಿಸುವ ಆಲೋಚನೆಯಲ್ಲಿಲ್ಲ ಎಂದೂ ವರದಿಯಾಗಿದೆ.   2016ರಲ್ಲಿ ನವೆಂಬರ್​ನಲ್ಲಿ ಕೇಂದ್ರ ಸರ್ಕಾರ 500 ಹಾಗೂ 1,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಅಮಾನ್ಯ ಎಂದು ಘೋಷಿಸಿತ್ತು. ಆರ್​ಬಿಐ 500 ರೂ.ಗಳ ಹೊಸ ನೋಟುಗಳು ಹಾಗೂ 2000 ರೂ. ಬೆಲೆಯ ನೋಟುಗಳನ್ನು …

Read More »

ನಗರ ಪ್ರದೇಶಗಳಲ್ಲಿನ‌ ಅನಧಿಕೃತ ಆಸ್ತಿಗಳಿಗೆ ಬಿ ಖಾತೆ ನೀಡಲು ಸರ್ಕಾರ ಮುಂದಾಗಿದೆ.

ಬೆಂಗಳೂರು: ಹೆಚ್ಚಿನ ಆದಾಯ ಸಂಗ್ರಹದ ನಿಟ್ಟಿನಲ್ಲಿ ನಗರ ಪ್ರದೇಶಗಳಲ್ಲಿನ‌ ಅನಧಿಕೃತ ಆಸ್ತಿಗಳಿಗೆ ಬಿ ಖಾತೆ ನೀಡಲು ಸರ್ಕಾರ ಮುಂದಾಗಿದೆ. ಇದರಿಂದ ಸುಮಾರು 2,000 ಕೋಟಿ ರೂ. ಆದಾಯ ಸಂಗ್ರಹವಾಗಲಿದೆ ಎಂದು ಅಂದಾಜಿಸಲಾಗಿದೆ. ಬಿಬಿಎಂಪಿ ಹೊರತುಪಡಿಸಿ ನಗರಪಾಲಿಕೆ, ನಗರಸಭೆ ಮತ್ತು ಪುರಸಭೆಯ ವ್ಯಾಪ್ತಿ ಅಕ್ರಮ ಬಡಾವಣೆಯಲ್ಲಿ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಿಸಿ ಸೌಲಭ್ಯ ಪಡೆಯುತ್ತಿರುವ ಮಾಲೀಕರಿಗೆ ನಿರ್ವಹಣಾ ಶುಲ್ಕ ವಿಧಿಸುವ ಕುರಿತಂತೆ ಗುರುವಾರ ನಡೆದ ಸಂಪುಟ ಉಪಸಮಿತಿಯಲ್ಲಿ ತೀರ್ಮಾನಿಸಲಾಯಿತು. ಅರಣ್ಯ, ಜೀವಿಶಾಸ್ತ್ರ …

Read More »

ಒಂದೂವರೆ ವರ್ಷದ ಮಗನನ್ನು ಕೆರೆಗೆ ಎಸೆದುಕೊಂದ ಪಾಪಿ ತಂದೆ

ಮೈಸೂರು : ಒಂದೂವರೆ ವರ್ಷದ ಮಗನನ್ನು ತಂದೆಯೇ ಕೆರೆಗೆ ಎಸೆದು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮಾಕೋಡು ಗ್ರಾಮದಲ್ಲಿ ನಡೆದಿದೆ. ಮಾಕೋಡು ಗ್ರಾಮದ ಗಣೇಶ್​ ಎಂಬಾತನೇ ಮಗನನ್ನು ಕೊಂದಿರುವ ಪಾಪಿ ತಂದೆ. ಪ್ರಕರಣ ಸಂಬಂಧ ಪಿರಿಯಾಪಟ್ಟಣ ಪೊಲೀಸರು ಗಣೇಶ್​ನನ್ನು ಬಂಧಿಸಿದ್ದಾರೆ. 2014ರಲ್ಲಿ ದೇವನಹಳ್ಳಿ ತಾಲೂಕಿನ ದೊಡ್ಡಸನ್ನೆ ಗ್ರಾಮದ ಲಕ್ಷ್ಮಿ ಎಂಬುವವರನ್ನು ಗಣೇಶ್ ಮದುವೆಯಾಗಿದ್ದ. ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ದಂಪತಿ ವಾಸವಿದ್ದರು. ಈ ದಂಪತಿಗೆ ಹಾರಿಕಾ ಮತ್ತು …

Read More »

ಬೆಂಗಳೂರು ನಗರದಲ್ಲಿ ಪಟಾಕಿ ನಿಷೇಧಕ್ಕೆ ಚಿಂತನೆ: ಗೃಹಸಚಿವ ಡಾ ಜಿ ಪರಮೇಶ್ವರ್

ಬೆಂಗಳೂರು: ಅತ್ತಿಬೆಲೆ‌ ಪಟಾಕಿ ದುರಂತಕ್ಕೆ ನಾಲ್ಕೂ‌ ಇಲಾಖೆಗಳ ನಿರ್ಲಕ್ಷ್ಯವೇ ಕಾರಣವಾಗಿದೆ. ಹೀಗಾಗಿ ಇರುವ ಕಾಯಿದೆಗಳಿಗೆ ಇನ್ನೂ ಹೆಚ್ಚಿನ‌ ಶಕ್ತಿ ನೀಡಿ ಅಗ್ನಿ ದುರಂತ ಹಾಗೂ ಪಟಾಕಿ ಅವಘಡಗಳಿಗೆ ಅಂತ್ಯ ಹಾಡುವಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು. ಪಟಾಕಿ ದುರಂತ ರಾಜ್ಯಕ್ಕೊಂದು ಪಾಠ, ಇದರಿಂದ 17 ಮಂದಿ ಈ …

Read More »

ಸರ್ಕಾರಿ ಬಸ್ -ಟಾಟಾ ಸುಮೋ ನಡುವೆ ಡಿಕ್ಕಿ: ಐದು ಜನ ಸ್ಥಳದಲ್ಲೇ ಸಾವು

ಗದಗ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಟಾಟಾ ಸುಮೋ ನಡುವೆ ಡಿಕ್ಕಿಯಾಗಿ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೂ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ನರೇಗಲ್ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ.   ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೂಲಗಳ ಪ್ರಕಾರ, ಕಲಬುರಗಿಯಿಂದ ಗಜೇಂದ್ರಗಡ ಮಾರ್ಗವಾಗಿ ಶಿರಹಟ್ಟಿ ಫಕ್ಕಿರೇಶ್ವರ ಮಠಕ್ಕೆ ಟಾಟಾ ಸುಮೋ ಹೊರಟಿತ್ತು. ಗದಗದಿಂದ ಗಜೇಂದ್ರಗಡಕ್ಕೆ ಬಸ್ ಹೊರಟಿತ್ತು. ಮುಖಾಮುಖಿ ಡಿಕ್ಕಿ ಪರಿಣಾಮ ಬಸ್​ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ …

Read More »

ಕೋಟಿ ಕೋಟಿ ಹಣ ಪತ್ತೆ ಕೇಸ್ ಇಡಿಗೆ ವಹಿಸಿ: ಯಡಿಯೂರಪ್ಪ ಆಗ್ರಹ

ಬೆಂಗಳೂರು: ಗುತ್ತಿಗೆದಾರರ ನಿವಾಸದಲ್ಲಿ ಪತ್ತೆಯಾದ ಕೋಟಿ ಕೋಟಿ ನಗದು ಹಣ ಪ್ರಕರಣವನ್ನು ಇಡಿ ಮತ್ತು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ. ಡಾಲರ್ಸ್ ಕಾಲೊನಿಯಲ್ಲಿರುವ ಖಾಸಗಿ ನಿವಾಸ ದವಳಗಿರಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐಟಿ ದಾಳಿಯಲ್ಲಿ ಹಣ ಸಿಕ್ಕಿದ್ದ ಪ್ರಕರಣದಲ್ಲಿ ತನಿಖೆ ಬಳಿಕ ಹಣದ ಮೂಲ ಗೊತ್ತಾಗಲಿದೆ. ಚುನಾವಣೆಗೆ ಹಣ ಸಂಗ್ರಹ ಮಾಡಿರೋದು ನಿಜ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ …

Read More »

ಉತ್ತರ ಕರ್ನಾಟಕದ ಎರಡು ಪ್ರಮುಖ ಉತ್ಸವಗಳಿಗೆ ಮೈಸೂರು ದಸರಾ ಮಾದರಿಯಲ್ಲಿ ಸಕಾಲಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು.ಕೋರಿಕೆ

ಸನ್ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ, ವಿಧಾನಸೌಧ ಬೆಂಗಳೂರು. ವಿಷಯ- ಉತ್ತರ ಕರ್ನಾಟಕದ ಎರಡು ಪ್ರಮುಖ ಉತ್ಸವಗಳಿಗೆ ಮೈಸೂರು ದಸರಾ ಮಾದರಿಯಲ್ಲಿ ಸಕಾಲಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು.   ನಮ್ಮ ಬೇಡಿಕೆ ಕಿತ್ತೂರು ಉತ್ಸವಕ್ಕೆ ಐದು ಕೋಟಿ,ಬೆಳಗಾವಿ ರಾಜ್ಯೋತ್ಸವಕ್ಕೆ ಎರಡು ಕೋಟಿ ಅನುದಾನ ನೀಡುವ ಕೋರಿಕೆ ಸನ್ಮಾನ್ಯರೇ. ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಇತಿಹಾಸದ ಗತವೈಭವವನ್ನು ಬಿಂಬಿಸುವ ಕಿತ್ತೂರು ಉತ್ಸವಕ್ಕೆ ಐದು ಕೋಟಿ ರೂ ಅನುದಾನ, ಹಾಗೂ ಬೆಳಗಾವಿ ನಗರದಲ್ಲಿ ನಡೆಯುವ …

Read More »