Breaking News

Uncategorized

ನಿಂತಿದ್ದ 2 ಖಾಸಗಿ ಬಸ್​ಗಳಿಗೆ ಬೆಂಕಿ ತಗುಲಿ ಸುಟ್ಟು ಕರಕಲು

ಕಲಬುರಗಿ: ಖಾಸಗಿ ಕಂಪನಿಗೆ ಸೇರಿದ ಎರಡು ಸ್ಲೀಪರ್ ಬಸ್​ಗಳಿಗೆ ಬೆಂಕಿ ತಗುಲಿ ಧಗಧಗಿಸಿ ಸುಟ್ಟು ಕರಗಲಾದ ಘಟನೆ ಕಲಬುರಗಿ ನಗರದ ಹಾಗರಗಾ ರಸ್ತೆಯ ಮಹೆಫಿಲ್​ ಎ ಖಾಸ್ ಡಾಬಾದ ಬಳಿ ಶನಿವಾರ ನಡೆದಿದೆ. ಅಕ್ಕಪಕ್ಕದಲ್ಲಿ ನಿಂತಿದ್ದ ಎರಡು ಬಸ್​ಗಳು ಬೆಂಕಿಯ ಕೆನ್ನಾಲೆಗೆಯಿಂದ ಸಂಪೂರ್ಣ ಸುಟ್ಟು ಕರಕಲಾಗಿವೆ. ಹೀಗಾಗಿ ದಟ್ಟವಾದ ಹೊಗೆ ಆವರಿಸಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನಂತರ ಅಗ್ನಿ ಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸುವ …

Read More »

ʼನಟಿ ಲೀಲಾವತಿ ಕಟ್ಟಿಸಿರೋ ಆಸ್ಪತ್ರೆಗೆ ಸರ್ಕಾರದಿಂದ ಸಲ್ಲಬೇಕಾದ ಸೂಕ್ತ ನೆರವು ಕೊಡಿಸ್ತೇವೆʼ

ಬೆಂಗಳೂರು: ಹಿರಿಯ ನಟಿ ಲೀಲಾವತಿ ಆಸ್ಪತ್ರೆ ಉದ್ಘಾಟನೆಗೆ ಬನ್ನಿ ಎಂದು ಕರೆದಿದ್ದಾರೆ, ಡೇಟ್ ಕೇಳಿದ್ದಾರೆ, ನಾನೇ ಡೇಟ್ ಕೊಡ್ತೇನೆ ಆಸ್ಪತ್ರೆಗೆ ಸಹಾಯ ಕೂಡ ಮಾಡ್ತೇನೆ ಎಂದು ಡಿಸಿಎಂ ಡಿಕೆಶಿವಕುಮಾರ್‌ ಹೇಳಿದ್ದಾರೆ. ಹಿರಿಯ ನಟಿ ಲೀಲಾವತಿ ಭೇಟಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಹಿರಿಯ ನಟಿ ಅವರಿಗೆ ಸೈಟ್ ಕೊಡ್ತೇವೆ, ಆಸ್ಪತ್ರೆ ಸಿಬ್ಬಂದಿ ಸರ್ಕಾರದಿಂದ ಕೇಳಿದ್ದಾರೆ. ಸೈಟ್ಕೂಡ ಹೋಲ್ಡ್ ಆಗಿದೆ, ಏನು ಅಂತ ನೋಡ್ತೇನೆ. ಸರ್ಕಾರದಿಂದ ಅವರಿಗೆ ಸಲ್ಲಬೇಕಾದ ಸೂಕ್ತ ನೆರವನ್ನು ಕೊಡಿಸುತ್ತೇವೆ …

Read More »

ನವೆಂಬರ್‌ 1 ರಂದು ಕರಾಳ ದಿನಾಚರಣೆಗೆ ಅನುಮತಿ ಇಲ್ಲ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ : ಮಹಾತ್ಮಾ ಪುಲೆ ಆರೋಗ್ಯ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಲು ನಿರ್ಣಯ ಕೈಗೊಂಡಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ಕುರಿತು ಕರ್ನಾಟಕ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗುತ್ತಿದೆ. ಬೆಳಗಾವಿಯ ಜಿ.ಪಂ.ಸಭಾಭವನದಲ್ಲಿ ಇಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಕನ್ನಡಪರ ಸಂಘಟನೆಗಳು ಮಹಾರಾಷ್ಟ್ರ ಸರ್ಕಾರದ ನಿರ್ಣಯ ಖಂಡಿಸಿದರು. ಕರ್ನಾಟಕದಲ್ಲಿ ಮಹಾರಾಷ್ಟ್ರ ಸರ್ಕಾರ ಆರೋಗ್ಯ ಯೋಜನೆ ಜಾರಿಗೊಳಿಸುತ್ತಿದೆ. …

Read More »

ಗೂಗಲ್​ ಸೈನ್​ಇನ್​ಗೆ ಕಡ್ಡಾಯವಾಗಲಿದೆ ಪಾಸ್​ ಕೀ.. ಏನಿದು ಹೊಸ ವಿಧಾನ?

ನವದೆಹಲಿ : ಬರುವ ದಿನಗಳಲ್ಲಿ ಗೂಗಲ್ ಸೇವೆಗಳಿಗೆ ಸೈನ್ ಇನ್ ಮಾಡಲು ಪಾಸ್​ವರ್ಡ್​ ಬದಲಾಗಿ ಪಾಸ್​ಕೀ ಬಳಕೆ ಕಡ್ಡಾಯವಾಗಲಿದೆ. ಪಾಸ್​ಕೀ (ಪಾಸ್ ವರ್ಡ್ ಗಳಿಗೆ ಪರ್ಯಾಯ) ಮೂಲಕವೇ ಸೈನ್​ ಇನ್ ಮಾಡುವುದು ಡೀಫಾಲ್ಟ್ ಸೈನ್ – ಇನ್ ಪ್ರಕ್ರಿಯೆ ಆಗಲಿದೆ ಎಂದು ಗೂಗಲ್ ಹೇಳಿದೆ. ಪಾಸ್ ಕೀ ಬಳಸಿ ಬಳಕೆದಾರರು ಬಯೋಮೆಟ್ರಿಕ್ ಸೆನ್ಸರ್ (ಫಿಂಗರ್ ಪ್ರಿಂಟ್ ಅಥವಾ ಮುಖ ಗುರುತಿಸುವಿಕೆಯಂತಹ), ಪಿನ್ ಅಥವಾ ಪ್ಯಾಟರ್ನ್​ಗಳ ಮೂಲಕ ಅಪ್ಲಿಕೇಶನ್ ಗಳು ಮತ್ತು ವೆಬ್ …

Read More »

ಬಿಜೆಪಿ ಶಾಸಕ ಅಭಯ್ ಪಾಟೀಲ ವಿರುದ್ಧ ಅವ್ಯವಹಾರ ಆರೋಪ: ತನಿಖೆ ಮಾಡಿಸುತ್ತೇವೆ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಇಲ್ಲಿನ ಶಹಾಪುರ ಬ್ಯಾಂಕ್ ಆಫ್ ಇಂಡಿಯಾದಿಂದ ಹಳೆ ಪಿ.ಬಿ.ರಸ್ತೆಯವರೆಗೆ ಮಾಡಿರುವ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶಿವಾಜಿ ಮಹಾರಾಜ ಉದ್ಯಾನದ ಬಳಿ ಬೆಳಗಾವಿ ನಾಗರಿಕರ ಹಿತರಕ್ಷಣಾ ಒಕ್ಕೂಟದಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಸ್ಥಳೀಯ ಶಾಸಕ ಅಭಯ್ ಪಾಟೀಲ ಭಾವಚಿತ್ರ ಇರುವ ಫಲಕಗಳನ್ನು ಪ್ರದರ್ಶಿಸಿದ ಪ್ರತಿಭಟನಾಕಾರರು, ಘೋಷಣೆ ಮೊಳಗಿಸಿದರು. ಮಾನವ ಸರಪಳಿ ನಿರ್ಮಿಸಿ, ಬುಟ್ಟಿಯಲ್ಲಿ ಮರಳು, ಕಡಿ, ನಕಲಿ ನೋಟುಗಳನ್ನು …

Read More »

ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್

ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್ ಮಹಾಲಕ್ಷ್ಮೀ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 6.80 ಕೋಟಿ ರೂ. ವ್ಯಯ : ಶಾಸಕ ರಮೇಶ ಜಾರಕಿಹೊಳಿ ಗೋಕಾಕ : ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಉಭಯ ಮಹಾಲಕ್ಷ್ಮೀ ದೇವಸ್ಥಾನಗಳನ್ನು ನವೀಕೃತಗೊಳಿಸಿ 2025 ರಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಇಡೀ ಜಿಲ್ಲೆಯೇ ಕಣ್ತುಂಬಿ ನೋಡುವಂತಹ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸೋಣ ಎಂದು ಮಹಾಲಕ್ಷ್ಮೀದೇವಿ ಜಾತ್ರಾ ಕಮೀಟಿ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ …

Read More »

ಹುಬ್ಬಳ್ಳಿ : ಬಾಲಕಿ ವಿದ್ಯಾಭ್ಯಾಸಕ್ಕೆ ನೆರವಾದ ಖ್ಯಾತ ಕ್ರಿಕೆಟಿಗ ಕೆ ಎಲ್ ರಾಹುಲ್

ಹುಬ್ಬಳ್ಳಿ : ಭಾರತ ತಂಡದ ಖ್ಯಾತ ಕ್ರಿಕೆಟ್​ ಆಟಗಾರ, ಕನ್ನಡಿಗ ಕೆ ಎಲ್​ ರಾಹುಲ್ ಹಲವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡಿದ್ದಾರೆ. ಇದೀಗ ಸುಡಗಾಡು ಸಿದ್ಧರ ಸಮುದಾಯದ ವಿದ್ಯಾರ್ಥಿನಿಯೋರ್ವಳ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವು ನೀಡಿರುವ ರಾಹುಲ್​, ವಿದ್ಯಾರ್ಥಿನಿ ಶಾಲೆಗೆ ಸೇರಲು ಸಹಕರಿಸಿದ್ದಾರೆ. ಈ ಹಿಂದೆ ಜಮಖಂಡಿಯ ವಿದ್ಯಾರ್ಥಿಯೊಬ್ಬನಿಗೆ ಹುಬ್ಬಳ್ಳಿಯ ಪ್ರತಿಷ್ಠಿತ ಕಾಲೇಜಿನಲ್ಲಿ ದಾಖಲಾಗಲು ರಾಹುಲ್​ ಹಣಕಾಸಿ‌ನ ನೆರವು ನೀಡಿದ್ದರು. ಧಾರವಾಡದ ಸಿದ್ದೇಶ್ವರ ಕಾಲೋನಿ ನಿವಾಸಿಯಾಗಿರುವ ಸೃಷ್ಟಿ ಕುಲಾವಿ ಎಂಬ ಬಾಲಕಿಯ ವಿದ್ಯಾಭ್ಯಾಸಕ್ಕೆ …

Read More »

ಕಾಂಗ್ರೆಸ್​ಗೆ ಲಿಂಗಾಯತ ಮತ ಬಂದಿದ್ದು ಕೇವಲ ಶೇ.20, ಆದರೂ 7 ಮಂತ್ರಿಗಿರಿ ನೀಡಲಾಗಿದೆ: ಪ್ರಕಾಶ್ ರಾಠೋಡ್

ಬೆಂಗಳೂರು: “ಲಿಂಗಾಯತರ ಕಡೆಯಿಂದ ಕಾಂಗ್ರೆಸ್‌ಗೆ ಬಂದಿರುವ ಮತಗಳು ಕೇವಲ ಶೇ.20ರಷ್ಟು ಮಾತ್ರ. ಹೀಗಿದ್ದರೂ ರಾಜ್ಯ ಸಂಪುಟದಲ್ಲಿ ಲಿಂಗಾಯತರಿಗೆ 7 ಸ್ಥಾನ ನೀಡಲಾಗಿದೆ” ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ್​ ಹೇಳಿದ್ದಾರೆ. ಲಿಂಗಾಯತ ಅಧಿಕಾರಿಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ಶಾಮನೂರು ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, “ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಕರ್ನಾಟಕದ ಪಾಲಿಗೆ ಪಕ್ಷದ ಆಸ್ತಿಯೂ ಆಗಿರುವ ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪನವರ ಹೇಳಿಕೆ …

Read More »

ಬೈಲಹೊಂಗಲ, ಸವದತ್ತಿ, ಯರಗಟ್ಟಿ, ರಾಮದುರ್ಗ ತಾಲೂಕುಗಳಲ್ಲಿ ಕೇಂದ್ರದ ಅಧಿಕಾರಿಗಳ ತಂಡ ಪ್ರವಾಸ ಕೈಗೊಂಡು ಬರ ಪರಿಸ್ಥಿತಿ ಅಧ್ಯಯನ ನಡೆಸಿತು.

ಬೆಳಗಾವಿ: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಐವರು ಅಧಿಕಾರಿಗಳ ತಂಡ ಇಂದು ಪರಿಶೀಲಿಸಿತು. ಇದಕ್ಕೂ ಮುನ್ನ ನಗರದ ಪ್ರವಾಸಿಮಂದಿರದಲ್ಲಿ ಬೆಳಗ್ಗೆ ಅಜಿತ್ ಕುಮಾರ್ ಸಾಹು ತಂಡ ಜಿಲ್ಲಾಧಿಕಾರಿ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿತು. ನಂತರ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿತು. ಮೊದಲಿಗೆ ಬೈಲಹೊಂಗಲ ತಾಲೂಕಿನ ನೇಸರಗಿ ಬಳಿಯ ನಾಗಪ್ಪ …

Read More »

ಪ್ರಯಾಣಿಕರನ್ನು ‘ಪಲ್ಲಕ್ಕಿ’ಯಲ್ಲಿ ಹೊತ್ತು ತಿರುಗಲಿದೆ ಕೆಎಸ್​ಆರ್​ಟಿಸಿ

ಬೆಂಗಳೂರು: ಪ್ರಯಾಣಿಕರನ್ನು ಅಂಬಾರಿಯಲ್ಲಿ ಹೊತ್ತು ರಾಜ್ಯದ ರಸ್ತೆಗಳಲ್ಲಿ ಸಂಚರಿಸಿದ್ದ ಕೆಎಸ್​ಆರ್​ಟಿಸಿ ಇದೀಗ ಪಲ್ಲಕ್ಕಿ ಮೂಲಕ ಪ್ರಯಾಣಿಕರನ್ನು ಹೊತ್ತು ಸಂಚರಿಸಲು ಸಿದ್ಧವಾಗಿದೆ. ‘ಸಂತೋಷವು ಪ್ರಯಾಣಿಸುತ್ತಿದೆ’ ಎನ್ನುವ ಟ್ಯಾಗ್ ಲೈನ್​ನೊಂದಿಗೆ ಸಾರಿಗೆ ನಿಗಮದ ಪಲ್ಲಕ್ಕಿ ರಸ್ತೆಗಿಳಿಯಲು ಸಜ್ಜಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಸ್ಲೀಪರ್ ಬಸ್​ಗಳಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಅದರಲ್ಲೂ ಹವಾನಿಯಂತ್ರಣ ರಹಿತ ಬಸ್​​ಗಳಿಗೆ ಪ್ರಯಾಣಿಕರು ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಅಂಬಾರಿ ಹೆಸರಿನಲ್ಲಿ ನಾನ್ ಎಸಿ ಸ್ಲೀಪರ್ ಸೇವೆ ಒದಗಿಸುತ್ತಿದ್ದ ಕೆಸ್​ಆರ್​ಟಿಸಿ ಇದೀಗ …

Read More »