Breaking News

Uncategorized

ಓವರ್ ಟೇಕ್‌ ಭರದಲ್ಲಿ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸವಾರ: ಬಿಎಂಟಿಸಿ ಬಸ್ ಹರಿದು ಸಾವು

ಬೆಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಬಿಎಂಟಿಸಿ ಬಸ್​​ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸವಾರನ ಮೇಲೆ ಬಸ್ ಹರಿದಿದೆ. ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಅಟ್ಟೂರಿನ ಮದರ್ ಡೈರಿ ಬಳಿ ದುರಂತ ಸಂಭವಿಸಿದ್ದು, ಅವಘಡದಲ್ಲಿ ಸ್ಕೂಟರ್ ಸವಾರ ಭರತ್ ರೆಡ್ಡಿ ಸಾವನ್ನಪ್ಪಿದ್ದಾರೆ. ಅಪಘಾತಕ್ಕೀಡಾದ ಸ್ಕೂಟಿಎಂಜಿನಿಯರಿಂಗ್‌ ಮುಗಿಸಿದ್ದ ಭರತ್, ಸಿವಿಲ್‌ ಕಂಟ್ರಾಕ್ಟರ್ …

Read More »

ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿತರ ಪಟ್ಟಿ ಹೆಚ್ಚಾಗುತ್ತಿದೆ.

ಧಾರವಾಡ: ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿದೆ. ಇನ್ನೇನಿದ್ರು ಲೋಕಸಭಾ ಚುನಾವಣೆ ಮೇಲೆ ಎಲ್ಲ ಪಕ್ಷಗಳ ಕಣ್ಣುಗಳು ನೆಟ್ಟಿವೆ. ಜೊತೆಗೆ ಎಲ್ಲ ಪಕ್ಷಗಳಲ್ಲಿಯೂ ಟಿಕೆಟ್​ಗಾಗಿ ಆಕಾಂಕ್ಷಿತರು ಈಗಲೇ ತಮ್ಮ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಹಾಗೆಯೇ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್​ಗಾಗಿ ಕೂಡ ಆಕಾಂಕ್ಷಿಗಳು ಬಹಿರಂಗವಾಗಿಯೇ ಸ್ಪರ್ಧಿಸುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಈಗಿನಿಂದಲೇ ಸಂಸತ್ ಚುನಾವಣೆಗೆ ಸಿದ್ಧತೆಗಳು ಶುರುವಾಗಿವೆ. ಹೀಗಾಗಿ ಸಹಜವಾಗಿ ಆಕಾಂಕ್ಷಿಗಳು ಮುನ್ನಲೆಗೆ ಬರುತ್ತಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿಯೂ ಸ್ಪರ್ಧೆಗಿಳಿಯಲು …

Read More »

70 ವರ್ಷಗಳ ಹಳೆಯ ಸಂಸ್ಕೃತ ಮಹಾವಿದ್ಯಾಲಯದಲ್ಲಿ ಮೊದಲ ಬಾರಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗೆ ಪ್ರವೇಶ

ಉತ್ತರಕಾಶಿ (ಉತ್ತರಾಖಂಡ): ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿರುವ ಶ್ರೀ ವಿಶ್ವನಾಥ ಸಂಸ್ಕೃತ ಮಹಾವಿದ್ಯಾಲಯದಲ್ಲಿ 70 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗೆ ಪ್ರವೇಶ ನೀಡಲಾಗಿದೆ. ಮತ್ತೊಂದೆಡೆ, ಎರಡು ದಶಕಗಳ ನಂತರ ವಿದ್ಯಾರ್ಥಿನಿಯರು ಸಹ ಮಹಾವಿದ್ಯಾಲಯಕ್ಕೆ ಮರಳಿದ್ದಾರೆ. ಉತ್ತರಕಾಶಿ ಪ್ರತ್ಯೇಕ ಜಿಲ್ಲೆ ರಚನೆಯಾಗುವ ಮೊದಲು ಬ್ರಾಹ್ಮಣ ವರ್ಗದ ವಿದ್ಯಾರ್ಥಿಗಳಿಗಾಗಿ 1953ರಲ್ಲಿ ಶ್ರೀ ವಿಶ್ವನಾಥ ಸಂಸ್ಕೃತ ಮಹಾವಿದ್ಯಾಲಯ ಸ್ಥಾಪಿಸಲಾಗಿದೆ. ದಿವಂಗತ ಬ್ರಹ್ಮಸ್ವರೂಪಾನಂದ ಅವರು ಆಗ ಕಾಲದಲ್ಲಿ 5ರಿಂದ 8 ವಿದ್ಯಾರ್ಥಿಗಳೊಂದಿಗೆ ಈ …

Read More »

ಅ.10ಕ್ಕೆ ಎಲ್ಲ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ತಮಿಳುನಾಡು – ಕರ್ನಾಟಕ ಗಡಿ ಬಂದ್: ವಾಟಾಳ್ ನಾಗರಾಜ್

ಬೆಂಗಳೂರು : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಅಕ್ಟೋಬರ್ 10 ರಂದು ಎಲ್ಲ ರಾಷ್ಟ್ರೀಯ ಹೆದ್ದಾರಿಗಳನ್ನು ಮತ್ತು ಅತ್ತಿಬೆಲೆ ಬಳಿಯ ತಮಿಳುನಾಡು – ಕರ್ನಾಟಕ ಗಡಿ ಬಂದ್ ಮಾಡಲಾಗುವುದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಅಕ್ಟೋಬರ್ 5ರಂದು ಕೆಆರ್​ಎಸ್​ಗೆ ಮೆರವಣಿಗೆ ನಡೆಸಲಿದ್ದೇವೆ. ಅಕ್ಟೋಬರ್ 10ಕ್ಕೆ ಎಲ್ಲ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಿದ್ದೇವೆ. ಅಂದು ಬೆಳಗ್ಗೆ 11 ಗಂಟೆಗೆ ಅತ್ತಿಬೆಲೆಯ ತಮಿಳುನಾಡು ಗಡಿ ಬಂದ್ …

Read More »

ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ ಆಗಿದ್ದು ಸತ್ಯ, ಹೆಚ್. ವಿಶ್ವನಾಥ್​ಗೆ ಹುಚ್ಚಾಸ್ಪತ್ರೆಗೆ ಕಳುಹಿಸಿ -ಶಾಸಕ ಶಾಮನೂರು

ದಾವಣಗೆರೆ, ಅ.02: ರಾಜ್ಯ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತಿಲ್ಲ ಎಂದು ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (shamanur shivashankarappa) ಅವರು ನೀಡಿದ್ದ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿಎಂ ಸಿದ್ದರಾಮಯ್ಯನವರು (Siddaramaiah), ನಮ್ಮ ಸರ್ಕಾರದಲ್ಲಿ 7 ಮಂದಿ ಲಿಂಗಾಯತರೇ ಸಚಿವರಿದ್ದಾರೆ. ನಮ್ಮ ಸರ್ಕಾರ ಯಾವ ಸಮುದಾಯಕ್ಕೂ ಅನ್ಯಾಯ ಮಾಡಿಲ್ಲ. ನನ್ನ …

Read More »

ಬೆಳಗಾವಿ: ಇದು ಮಹಾತ್ಮ ಗಾಂಧೀಜಿ ಕಾಲಿಟ್ಟ ಊರು. ಖಾದಿ ಇಲ್ಲಿನ ಜನರ ಉಸಿರು. ಇಲ್ಲಿನ ಮನೆ – ಮನದಲ್ಲೂ ಪಠಿಸುತ್ತಿದೆ ಗಾಂಧಿ ಮಂತ್ರ.

ಬೆಳಗಾವಿ: ಇದು ಮಹಾತ್ಮ ಗಾಂಧೀಜಿ ಕಾಲಿಟ್ಟ ಊರು. ಖಾದಿ ಇಲ್ಲಿನ ಜನರ ಉಸಿರು. ಇಲ್ಲಿನ ಮನೆ – ಮನದಲ್ಲೂ ಪಠಿಸುತ್ತಿದೆ ಗಾಂಧಿ ಮಂತ್ರ. ಅಷ್ಟಕ್ಕೂ ಆ ಗಾಂಧಿ ಗ್ರಾಮ ಯಾವುದು? ರಾಷ್ಟ್ರಪಿತ ಅಲ್ಲಿಗೆ ಬಂದಿದ್ದೇಕೆ? ಎಷ್ಟು ದಿನ ತಂಗಿದ್ದರು? ಎಂಬುದನ್ನು ತಿಳಿಯುವ ಕುತೂಹಲವೇ. ಹಾಗಾದರೆ ಓದಿ ಈ ಅಪರೂಪದ ಊರಿನ ಹೆಸರು ಹುದಲಿ. ಬೆಳಗಾವಿಯಿಂದ 22 ಕಿ.ಮೀ. ಅಂತರದಲ್ಲಿರುವ ಇದು ಕ್ರಾಂತಿಯ ನೆಲ, ಸ್ವಾತಂತ್ರ್ಯ ಹೋರಾಟಗಾರರ ತವರು, ಖಾದಿಗೆ ಪುನಶ್ಚೇತನ ನೀಡಿದ …

Read More »

ಮುಧೋಳ ರನ್ನ ಸಕ್ಕರೆ ಕಾರ್ಖಾನೆ ಪುನಃಶ್ಚೇತನಕ್ಕೆ ಟೆಂಡರ್ ಕರೆಯಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಅಲ್ಪಾವಧಿ ಟೆಂಡರ್ ಕರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಗೃಹ ಕಚೇರಿ ಕಷ್ಣಾದಲ್ಲಿ ನಡೆದ ಸಭೆಯಲ್ಲಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2023-24ನೇ ಸಾಲಿಗೆ ಕಬ್ಬು ಅರೆಯುವ ಕಾರ್ಯವನ್ನು ಲೀಸ್ ಮೂಲಕ ಪುನರಾರಂಭಿಸುವ ಕುರಿತು ಚರ್ಚಿಸಿದರು. ಈ ವೇಳೆ ಮಾತನಾಡಿ, ಕಬ್ಬು ಅರೆಯುವ ಕಾರ್ಯ ಪ್ರಾರಂಭವಾಗಬೇಕು. ಪುನಶ್ಚೇತನದಿಂದ ರೈತರಿಗೂ ಅನುಕೂಲ ಆಗಬೇಕು. ಅಲ್ಪಮಟ್ಟದ ಹೂಡಿಕೆಗೆ ಸಿದ್ಧವಿರುವ ಸಂಸ್ಥೆಗಳು …

Read More »

ಜಂಬೂಸವಾರಿಗೆ ಗಜಪಡೆ ಸಿದ್ಧತೆ

ಮೈಸೂರು : ವಿಶ್ವವಿಖ್ಯಾತಿ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಅಭಿಮನ್ಯು ನೇತೃತ್ವದ ಗಜಪಡೆಯ ತಾಲೀಮು ನಡೆಸಲಾಗುತ್ತಿದೆ. ಜೊತೆಗೆ ವಿಶೇಷ ಆಹಾರ ಹಾಗೂ ಭಾರ ಹೊರುವ ತಾಲೀಮನ್ನು ನಡೆಸಲಾಗುತ್ತಿದ್ದು, ಈ ಸಿದ್ಧತೆ ಬಗ್ಗೆ ಡಿಸಿಎಫ್ ಸೌರವ್ ಕುಮಾರ್ ಅವರು ಈಟಿವಿ ಭಾರತಕ್ಕೆ ನೀಡಿದ ಸಂದರ್ಶನದಲ್ಲಿ ವಿವರಿಸಿದ್ದಾರೆ. ದಸರಾ ಜಂಬೂಸವಾರಿಗೆ ಗಜಪಡೆ ತಾಲೀಮು ಸೇರಿದಂತೆ ಎಲ್ಲಾ ರೀತಿಯಲ್ಲೂ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ 5 ಆನೆಗಳಿಗೆ ಭಾರ ಹಾಕಿ ತಾಲೀಮು ನಡೆಸಿದ್ದು, ಈ ವೇಳೆ ಬರುವ …

Read More »

ನಾಳೆ ಕರ್ನಾಟಕ ಬಂದ್​​ಗೆ ಸಕಲ ಸಿದ್ಧತೆ ನಡೆದಿದೆ. ಕನ್ನಡ ಚಿತ್ರರಂಗದಿಂದ ಹೋರಾಟಕ್ಕೆ ಬೆಂಬಲ

ನಾಳೆ ಕರ್ನಾಟಕ ಬಂದ್​​ಗೆ ಸಕಲ ಸಿದ್ಧತೆ ನಡೆದಿದೆ. ಕನ್ನಡ ಚಿತ್ರರಂಗದಿಂದ ಹೋರಾಟಕ್ಕೆ ಬೆಂಬಲ ಸಿಕ್ಕಿದೆ. ಕಳೆದ ಮಂಗಳವಾರ ಕಾವೇರಿಗಾಗಿ ನಮ್ಮ ರಾಜ್ಯ ರಾಜಧಾನಿ ಬಂದ್ ಆಗಿತ್ತು. ನಾಳೆ ಕರ್ನಾಟಕ ಬಂದ್​​ಗೆ ಸಕಲ ಸಿದ್ಧತೆ ನಡೆದಿದೆ. ಕನ್ನಡ ಒಕ್ಕೂಟಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್​​ಗೆ ಚಿತ್ರರಂಗ ಕೈ ಜೋಡಿಸಿದೆ. ಹಿರಿಯ ನಟ ಡಾ. ಶಿವರಾಜ್​ಕುಮಾರ್ ನೇತೃತ್ವದಲ್ಲಿ ಇಡೀ ಚಿತ್ರರಂಗ ನಾಳೆಯ ಹೋರಾಟದಲ್ಲಿ ಭಾಗಿಯಾಗಲಿದೆ. ಶೂಟಿಂಗ್ ಜೊತೆ ಥಿಯೇಟರ್ ಕೂಡ ಕ್ಲೋಸ್ ಆಗಲಿವೆ. …

Read More »

ಬಿಜೆಪಿ-ಜೆಡಿಎಸ್​ ಮೈತ್ರಿ: ಜಾತ್ಯತೀತತೆ ಪ್ರಶ್ನಿಸಿದವರಿಗೆ ಹೆಚ್.​ಡಿ.ದೇವೇಗೌಡರಿಂದ ಖಡಕ್ ಉತ್ತರ!

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್​, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರ ಬೆನ್ನಲ್ಲೇ ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್.​ಡಿ.ದೇವೇಗೌಡರ ಜಾತ್ಯತೀತ ನಿಲುವಿನ (ಸೆಕ್ಯುಲರ್) ಬಗ್ಗೆ ಹಲವರು ಪ್ರಶ್ನೆ ಮಾಡುತ್ತಿದ್ದಾರೆ. ಈ ಕುರಿತಾಗಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೌಡರು ಖಡಕ್ ಉತ್ತರ ನೀಡಿದರು. ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಹೆಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ದೇವೇಗೌಡರು ಮಾತನಾಡುತ್ತಾ, “ನಾವು ಕಿಂಚಿತ್ತೂ ಕೂಡಾ ಸೆಕ್ಯುಲರ್ ವಿಚಾರ ತೆಗೆದು ಹಾಕುವ …

Read More »