ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎರಡನೇ ಬಾರಿ ವಜಾಗೊಳಿಸಿ ಆದೇಶಿಸಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಅರ್ಜಿ ವಜಾಗೊಳಿಸಿ ಆದೇಶಿಸಿದ್ದಾರೆ. ಆದೇಶದ ವಿಸ್ತೃತ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ. ಈ ಮೊದಲು ಜಾಮೀನು ಕೋರಿ ಪ್ರಜ್ವಲ್ ಎರಡನೇ …
Read More »ಭೀಮನ ಅಮಾವಾಸ್ಯೆ: ಝಗಮಗಿಸುತ್ತಿದೆ ಮಹದೇಶ್ವರ ಬೆಟ್ಟ
ಚಾಮರಾಜನಗರ: ಪ್ರಸಿದ್ಧ ಧಾರ್ಮಿಕ ಸ್ಥಳವಾದ ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ಇಡೀ ಕ್ಷೇತ್ರ ವಿದ್ಯುತ್ ದೀಪಗಳಿಂದ ಝಗಮಗಿಸುತ್ತಿದೆ. ಭೀಮನ ಅಮವಾಸ್ಯೆ ಪ್ರಯುಕ್ತ ದೇವಾಲಯ ಸೇರಿದಂತೆ ವಿವಿಧ ಕಡೆಗಳಲ್ಲಿ ವೈವಿಧ್ಯಮಯವಾಗಿ ದೀಪಾಲಂಕಾರ ಮಾಡಲಾಗಿದ್ದು ಭಕ್ತರ ಕಣ್ಮನ ಸೆಳೆಯುತ್ತಿದೆ. ಶ್ರಾವಣ ಮಾಸದ ಮೊದಲ ದಿನವಾಗಿದ್ದು, ಈ ದಿನ ಕ್ಷೇತ್ರದಲ್ಲಿ ವಿಶೇಷ ಪೂಜೆ ನಡೆಯಲಿದ್ದು, ಈಗಾಗಲೇ ಸಹಸ್ರಾರು ಮಂದಿ ಭಕ್ತರು ಬರುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ …
Read More »ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ
ಮಂಗಳೂರು: ಮಂಗಳೂರಿನ ಜೈಲಿನಲ್ಲಿ ವಿಚಾರಣಾಧೀನ ಕೈದಿಯಿಂದ 20 ಸಾವಿರ ರೂ. ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಇತರ ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (KCOCA)ಯ ವಿವಿಧ ಸೆಕ್ಷನ್ಗಳನ್ನು ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಸುಲಿಗೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ಈ ಕಾಯ್ದೆ ಜಾರಿಗೊಳಿಸಲಾಗಿದೆ. ಧನುಷ್ ಭಂಡಾರಿ, ದಿಲೇಶ್ ಬಂಗೇರ, …
Read More »ಎಲೆಕ್ಟ್ರಿಕ್ ಬೈಕ್ ನಿಂದ ಉಳಿಮೆ,ಚಿಕ್ಕೋಡಿ ರೈತನಿಂದ ವಿನೂತನ ಪ್ರಯೋಗ
ಎಲೆಕ್ಟ್ರಿಕ್ ಬೈಕ್ ನಿಂದ ಉಳಿಮೆ,ಚಿಕ್ಕೋಡಿ ರೈತನಿಂದ ವಿನೂತನ ಪ್ರಯೋಗ ಚಿಕ್ಕೋಡಿ:ಎತ್ತಿನ ಬದಲು ಎಲೆಕ್ಟ್ರಿಕ್ ಬೈಕ್ ಗೆ ಕುಂಟೆ ಜೋಡಿಸಿ ಕಳೆ ಹತೋಟಿಗೆ ಮುಂದಾಗುವ ಮೂಲಕ ರೈತರೊಬ್ಬರು ಗಮನ ಸೆಳೆದಿದ್ದಾರೆ.ಅಷ್ಟಕ್ಕೂ ಆ ರೈತ ಯಾರು ಅಂತೀರಾ ಹಾಗಾದ್ರೆ ಈ ಸ್ಟೋರಿ ನೋಡಿ ಸಕಾಲದಲ್ಲಿ ಕೃಷಿ ಕಾರ್ಮಿಕರು ಸಿಗದೇ ಇರುವುದು ಮತ್ತು ಎತ್ತಿನ ಲಭ್ಯತೆ ಇಲ್ಲದ ಕಾರಣ ರೈತ ಅಜಿತ್ ಭೀಮಪ್ಪ ನಿಡಗುಂದಿ ಹೀಗೆ ಬೆಳೆ ಆರೈಕೆ ಮಾಡಿದ್ದಾರೆ. ಕಬ್ಬೂರ ಪಟ್ಟಣದಿಂದ 2 …
Read More »ಅಪಘಾತ ಪ್ರವಣ ಕ್ಷೇತ್ರವಾಗುತ್ತಿದೆ ಬಡೇಕೊಳ್ಳಮಠ ಹತ್ತಿರದ ಹೆದ್ದಾರಿ…
ಅಪಘಾತ ಪ್ರವಣ ಕ್ಷೇತ್ರವಾಗುತ್ತಿದೆ ಬಡೇಕೊಳ್ಳಮಠ ಹತ್ತಿರದ ಹೆದ್ದಾರಿ… ಹೆದ್ದಾರಿ ಪ್ರಾಧಿಕಾರಕ್ಕೆ ಸಲಹೆಯ ಶಿಫಾರಸ್ಸು ಸಲ್ಲಿಸಿದ ಗೋಗಟೆ ಕಾಲೇಜ್… ಬೆಳಗಾವಿ ಕೆ.ಎಲ್.ಎಸ್ ಗೋಗಟೆ ಸಿವ್ಹಿಲ್ ಇಂಜಿನೀಯರಿಂಗ್ ವಿಭಾಗವು ಬೆಳಗಾವಿಯ ಬಡೆಕೊಳ್ಳಮಠ ಹತ್ತಿರದ ಹೆದ್ದಾರಿ ಇತ್ತೀಚೆಗೆ ಅಪಘಾತ ಪ್ರವಣ ಕ್ಷೇತ್ರವಾಗಿ ಪರಿಣಮಿಸಿದ ಹಿನ್ನೆಲೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕೆಲ ಸಲಹೆಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಲ್ಲಿಸಿದೆ. ಇದರ ವಿವರ ಹೀಗಿದೆ, ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಬಳಿಯ ಬಡೇಕೊಳ್ಳಮಠ ಕ್ರಾಸ್ ಬಳಿ ಇರುವ …
Read More »ಕಲಬುರಗಿ: ಹಗಲಿನಲ್ಲೇ ಮನೆಗಳಿಗೆ ಕನ್ನ ಹಾಕುತ್ತಿದ್ದ ಅಂತಾರಾಜ್ಯ ಕಳ್ಳ ಸೆರೆ: ₹11.07 ಲಕ್ಷ ಮೌಲ್ಯದ ವಸ್ತು ಜಪ್ತಿ
ಕಲಬುರಗಿ: ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಏಳು ಮನೆಗಳಲ್ಲಿ ಕಳ್ಳತನ ಮಾಡಿದ್ದ ಅಂತಾರಾಜ್ಯ ಕಳ್ಳನನ್ನು ವಿಶ್ವವಿದ್ಯಾಲಯ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಬಂಧಿತನನ್ನು ಹೈದರಾಬಾದ್ ನಿವಾಸಿ ಸೈಯದ್ ಹಮೀದ್ (47) ಎಂದು ಗುರುತಿಸಲಾಗಿದೆ. ಈತನಿಂದ 123 ಗ್ರಾಂ ಚಿನ್ನದ ಆಭರಣ ಸೇರಿ ಅಂದಾಜು 11.07 ಲಕ್ಷ ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. 2025ರ ಜೂನ್ …
Read More »ಸತೀಶ್ ಜಾರಕಿಹೊಳಿ ಅವರ ಹೆಗಲಿಗೆ ಗೋಕಾಕ ಜಿಲ್ಲಾ ರಚನೆಯ ಜವಾಬ್ದಾರಿ; ಗೋಕಾಕ ಜಿಲ್ಲಾ ರಚನಾ ಹೋರಾಟ ಸಮಿತಿ ಮನವಿ
ಗೋಕಾಕ ನೂತನ ಜಿಲ್ಲೆಗಾಗಿ ಆಗ್ರಹಿಸಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು. ಗೋಕಾಕ : ರಾಜ್ಯದಲ್ಲಿಯೇ ಎರಡನೇಯ ಅತೀ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ಜಿಲ್ಲೆ ರಚನೆಮಾಡುವಂತೆ ಆಗ್ರಹಿಸಿ ಮತ್ತು ಈ ಕುರಿತು ಮಾನ್ಯ ಮುಖ್ಯಮಂತ್ರಿಗಳಲ್ಲಿ ನಿಯೋಗವನ್ನು ಒಯ್ಯುವ ಕುರಿತು ಮನವಿ ಮಾಡಲು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿಯವರಿಗೆ ಗೋಕಾಕ ಜಿಲ್ಲಾ ಚಾಲನಾ ಸಮೀತಿಯ ಅಧ್ಯಕ್ಷರಾದ ಪೂಜ್ಯ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ಕಮಲದಿನ್ನಿ ಗ್ರಾಮದ ಶ್ರೀ ಮರುತೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …
Read More »ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವನ್ನು ನಾನು, ಡಿಸಿಎಂ ಪಾಲಿಸುತ್ತೇವೆ: ಸಿಎಂ
ಬೆಂಗಳೂರು: ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದರಾಗಿದ್ದು, ಆ ತೀರ್ಮಾನವನ್ನು ನಾನು ಮತ್ತು ಡಿ.ಕೆ. ಶಿವಕುಮಾರ್ ಅನುಸರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ನಗರದ ಶಾಂಗ್ರಿಲಾ ಹೋಟೆಲ್ನಲ್ಲಿ ಸುದ್ದಿಗೋಷ್ಠಿಯ ವೇಳೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ನಾಯಕ ಎಂದು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಬಿಂಬಿಸುತ್ತಿದೆ. ಆದರೆ, ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಸುದ್ದಿ ಇದೆಯಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆ ವಿಚಾರದಲ್ಲಿ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳಲಿದೆ. ಆ ನಿರ್ಣಯವನ್ನು ನಾನು ಮತ್ತು …
Read More »ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ
ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಬೆಳಗಾವಿಯಲ್ಲಿ ವಿದ್ಯಾರ್ಥಿನಿಯರ ಪ್ರತಿಭಟನೆ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು ಬುಧವಾರ ಬೆಳಗಾವಿಯ ಕಿತ್ತೂರು ಚನ್ನಮ್ಮ ವೃತ್ತದ ಹತ್ತಿರ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಷೇನ ನೇತೃತ್ದವಲ್ಲಿ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಹಾಗೂ ವಿದ್ಯಾರ್ಥಿನಿಗೆ ನ್ಯಾಯ ದೊರೆಯಬೇಕು …
Read More »