Breaking News

Uncategorized

ನೀತಿ ಸಂಹಿತೆ ಸಡಿಲಿಕೆ: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ; 2 ತಿಂಗಳ ಬಳಿಕ ಸಚಿವರು-ಅಧಿಕಾರಿಗಳೊಂದಿಗೆ ಸಭೆ!

ನೀತಿ ಸಂಹಿತೆ ಸಡಿಲಿಕೆ: ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ; 2 ತಿಂಗಳ ಬಳಿಕ ಸಚಿವರು-ಅಧಿಕಾರಿಗಳೊಂದಿಗೆ ಸಭೆ! ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯಗೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ್ದು, ಬರ ಪರಿಹಾರ, ಪೂರ್ವ ಮುಂಗಾರು ಮಳೆಯ ಬಿತ್ತನೆ ಚಟುವಟಿಕೆಗಾಗಿ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವ್ಯವಸ್ಥೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆ …

Read More »

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ; ಹೆಚ್ ಡಿ ದೇವೇಗೌಡ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್​​​ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡರ 91ನೇ ಹುಟ್ಟುಹಬ್ಬ. ಆ ಪ್ರಯುಕ್ತ ಬೆಂಗಳೂರಿನಲ್ಲಿ ವೆಂಕಟೇಶ್ವರ ದೇವಸ್ಥಾನಕ್ಕೆ ಹೋಗಿ ಅರ್ಚನೆ ಮಾಡಿಸಿದ ಬಳಿಕ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದ ವಿರುದ್ಧ ರಾಜಕೀಯ ಕುತಂತ್ರ ನಡೆದಿದೆ. ಪ್ರಜ್ವಲ್ …

Read More »

ಹುಬ್ಬಳ್ಳಿ: ಹತ್ಯೆಯಾದ ಅಂಜಲಿ ನಿವಾಸಕ್ಕೆ ಸಂತೋಷ್ ಲಾಡ್ ಭೇಟಿ, 2 ಲಕ್ಷ ರೂ. ಆರ್ಥಿಕ ನೆರವು

ಹುಬ್ಬಳ್ಳಿ: ಇತ್ತೀಚಿಗೆ ಭೀಕರವಾಗಿ ಹತ್ಯೆಯಾದ ಯುವತಿ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಕಾರ್ಮಿಕ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಇಂದು ಭೇಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಂಜಲಿ ಅವರ ಅಜ್ಜಿ ಗಂಗಮ್ಮ ಮತ್ತು ಸಹೋದರಿಯರಿಗೆ ಧೈರ್ಯ ಹೇಳಿದ ಲಾಡ್, ಸಂತೋಷ್ ಲಾಡ್ ಫೌಂಡೇಷನ್ ನಿಂದ ರೂ. 2 ಲಕ್ಷ ಚೆಕ್ ನೀಡಿದರು. ಅಂಜಲಿ ಪ್ರಕರಣ: ಆರೋಪಿ ಗಿರೀಶ್ ವಿಶ್ವ ಸಾವಂತ್ ಬಂಧನ ಕುರಿತು ಸಹೋದರಿ ಯಶೋಧ ಹೇಳಿದ್ದು ಹೀಗೆ… …

Read More »

ನೆಲಮಂಗಲ ಬಳಿ KSRTC ಬಸ್ ಭೀಕರ ಅಪಘಾತ: ನುಜ್ಜುಗುಜ್ಜಾದ ಬಸ್‌, 6 ಮಂದಿಗೆ ಗಾಯ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್’ವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮತ್ತು ನಿರ್ವಾಹಕ ಸೇರಿ 6 ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಅಡಕಮಾರನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆಯಲ್ಲಿ ಘಟನೆ ನಡೆದಿದ್ದು, 4 ಅಡಿ ಎತ್ತರದ ರಸ್ತೆ ವಿಭಜಕವನ್ನು ದಾಟಿ ಎದುರು ರಸ್ತೆಗೆ ಡಿವೈಡರ್‌ ಮೇಲೆ ಬಸ್‌ ಬಂದು ನಿಂತಿದೆ. …

Read More »

ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಸರ್ವೆಯರ್ ಹಾಗೂ ಖಾಸಗಿ ವ್ಯಕ್ತಿ

ವಿಜಯಪುರ: ಜಮೀನಿನ ತತ್ಕಾಲ್ ಪೋಡಿ ಮಾಡಲು ₹ 47,500 ಲಂಚ ಕೇಳಿದ್ದ ಸರ್ವೆಯರ್ ಮಲ್ಲಪ್ಪ ಜಂಬಗಿ, ಖಾಸಗಿ ಸಹಾಯಕ ಗುರುದತ್ತ ಬಿರಾದಾರ‌ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ನಾಲ್ಕು ಎಕರೆ ಜಮೀನಿನ ತತ್ಕಾಲ್ ಪೋಡಿ ಮಾಡಲು ಪ್ರಕಾಶ್ ಸಿಂಗ್ ಎಂಬುವರ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚಬತೆಗೆದುಕೊಳ್ಳುವಾಗ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ₹ 47,500 ನಗದು ವಶಪಡಿಸಿಕೊಂಡು ಸರ್ವೇಯರ್ ಮಲ್ಲಪ್ಪ ಹಾಗೂ ಸಹಾಯಕ ಗುರುದತ್ತನನ್ನು ಲೋಕಾಯುಕ್ತ ಎಸ್ಪಿ ಮಲ್ಲೇಶ, …

Read More »

ವಿಮಾನ ನಿಲ್ದಾಣ: ಕಲಬುರಗಿಯ ಜನರಿಗೆ ಎಎಐನಿಂದ ಸಿಹಿಸುದ್ದಿ

ಕಲಬುರಗಿ, ಮೇ 18: ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಕಲಬುರಗಿ ಜನರಿಗೆ ಸಿಹಿಸುದ್ದಿಯನ್ನು ನೀಡಿದೆ. ನಗರದ ಸೇಡಂ ರಸ್ತೆಯಲ್ಲಿ ಕಲಬುರಗಿ ವಿಮಾನ ನಿಲ್ದಾಣ ಇದ್ದು, 2022ರಲ್ಲಿ ಲೋಕಾರ್ಪಣೆಗೊಂಡಿದೆ. ವಿಮಾನ ನಿಲ್ದಾಣಗಳ ಪ್ರಾಧಿಕಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಇನ್‌ಸ್ಟ್ರುಮೆಂಟ್ ಲ್ಯಾಂಡಿಂಗ್ ಸ್ಟಿಸ್ಟಮ್ (ಐಎಲ್‌ಎಸ್) ಬಳಕೆಗೆ ಚಾಲನೆ ನೀಡಿದೆ. ಎಎಐ ಜಂಟಿ ಪ್ರಧಾನ ವ್ಯವಸ್ಥಾಪಕ (ಸಿಎನ್‌ಎಸ್) ಆರ್. ದಿವಾಕರ್ ಈ ಸೌಲಭ್ಯಕ್ಕೆ ಚಾಲನೆ ನೀಡಿದರು.ಸುಮಾರು 12.12 ಕೋಟಿ ರೂ. ವೆಚ್ಚ ಮಾಡಿ …

Read More »

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ್ಯಾಕ್ಟರ್ ಗೆ ಸಿಲುಕಿ ಬಾಲಕ ಸಾವು

ಮೈಸೂರು: ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ನಂಜನಗೂಡು (Nanjangudu) ತಾಲೂಕಿನ ದೇವರಸನಹಳ್ಳಿಯ ವರ್ಷದ ಬಾಲಕ ಭವಿಷ್ ದಾರುಣವಾಗಿ ಸಾವನ್ನಪ್ಪಿದ್ದಾರೆ. ತನ್ನ ತಾಯಿಯ ಜೊತೆ ಅಜ್ಜಿಯ ಮನೆಗೆಂದು ಭವಿಷ್ (8) ಬಂದಿದ್ದ ವೇಳೆಯಲ್ಲಿ ಈಘಟನೆ ನಡೆದಿದೆ. ಬಾಲಕನ ಒತ್ತಾಯಕ್ಕೆ ಟ್ರ್ಯಾಕ್ಟರ್ ಮೇಲೆ ಸೋದರಮಾವ ಕೂರಿಸಿದ್ದಾರೆ. ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್​ನಿಂದ ಆಯತಪ್ಪಿ ಬಾಲಕ ಕೆಳಗೆ ಬಿದ್ದು, ಟ್ರ್ಯಾಕ್ಟರ್​ನ ರೋಟರಿಗೆ ಸಿಲುಕಿದಾಗ ದೇಹ ತುಂಡಾಗಿ …

Read More »

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ

ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತನ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಆರು ತಿಂಗಳ ಹಿಂದೆಯೇ ವಿಶ್ವ ಎಂಬಾತ ಬಾಲಕಿ ಬೆನ್ನುಬಿದ್ದು, ಕಿರುಕುಳ ಕೊಟ್ಟು 55 ಗ್ರಾಂ ಚಿನ್ನಾಭರಣ, 8 ಸಾವಿರ ರೂ. ಇಸಿದುಕೊಂಡು ವಂಚಿಸಿದ್ದಾನೆ ಎಂದು ಆರೋಪಿಸಿ ಬಾಲಕಿಯ ತಂದೆ-ತಾಯಿಯು ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಆತನ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಸೆಕ್ಷನ್ 420, 504, 506 ಅಡಿಯಲ್ಲಿ …

Read More »

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಐಪಿಎಲ್ ಖುಷಿ ಕಿತ್ತುಕೊಂಡ ವರುಣ

ಬೆಂಗಳೂರು ಮೇ 18: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು ಮಧ್ಯಾಹ್ನ ವರುಣನ ಅರ್ಭಟ ಶುರುವಾಗಿದೆ. ಮುಂದಿನ ಕೆಲ ದಿನಗಳವರೆಗೆ ಮಳೆ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಗರದ ವಿಜಯನಗರ, ರಾಜಾಜಿನಗರ, ಮಾಗಡಿ ರಸ್ತೆ, ಮೈಸೂರು ರಸ್ತೆ, ಕೆಆರ್ ಮಾರುಕಟ್ಟೆ, ಗಾಂಧಿ ಬಜಾರ್ ಸೇರಿದಂತೆ ಹಲವೆಡೆ ಮಳೆ ತೀವ್ರಗೊಂಡಿದೆ. ಏಕಾಏಕಿ ಮಳೆ ಜೋರಾಗಿ ಸುರಿಯುತ್ತಿದ್ದು ಸಂಜೆವರೆಗೂ ಮಳೆಯಾಗುವ ಸಾಧ್ಯತೆ ಇದೆ. ಇಂದು ಬೆಳಗ್ಗೆ …

Read More »

ಯಾವ ನೋಟಿಸ್ ಗು ಬಗ್ಗದ ಪ್ರಜ್ವಲ್ : ಇದೀಗ ಕೋರ್ಟ್ ಮೂಲಕ ‘ವಾರೆಂಟ್’ ಜಾರಿಗೆ ‘SIT’ ಸಿದ್ಧತೆ

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೇಶದಿಂದ ದೇಶಕ್ಕೆ ಜಿಗಿಯುತ್ತ ತಲೆಮರಿಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಈಗ ಎಸ್‌ಐಟಿ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಕೋರ್ಟ್ ಮೂಲಕ ವಾರೆಂಟ್ ಜಾರಿ ಮಾಡುವ ಮುಖಾಂತರ ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ಗೆ ವಿಚಾರಣೆಗೆ ಹಾಜರಾಗುವಂತೆ ಹಲವಾರು ಬಾರಿ ನೋಟಿಸ್ ನೀಡಿದ್ದರು. ಅಲ್ಲದೆ …

Read More »