ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ವಿದೇಶಕ್ಕೆ ತೆರಳಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 10ರೊಳಗೆ ದೇಶಕ್ಕೆ ಬಂದು ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನುರಿತ ವಕೀಲರ ಸಲಹೆಯ ಮೇರೆಗೆ ಪ್ರಜ್ವಲ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಬೆಂಗಳೂರು, ಮೇ 4: ಅಶ್ಲೀಲ ವಿಡಿಯೋ ಪ್ರಕರಣಕ್ಕೆ (Prajwal Video Case) ಸಂಬಂಧಿಸಿ ಸದ್ಯ ವಿದೇಶದಲ್ಲಿದ್ದುಕೊಂಡೇ ವಕೀಲರ ಸಲಹೆ ಪಡೆಯುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. …
Read More »ಪ್ರಜ್ವಲ್ ರೇವಣ್ಣನ ಮುಂದೆ ಉಮೇಶ್ ರೆಡ್ಡಿಯೂ ಶೂನ್ಯ: ಮಾಜಿ ಸಂಸದ ಶಿವರಾಮೇಗೌಡ
ಮಂಡ್ಯ: ಪ್ರಜ್ವಲ್ ರೇವಣ್ಣನ ಮುಂದೆ ಉಮೇಶ್ ರೆಡ್ಡಿ ಕೂಡ ಶೂನ್ಯ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ. ಪ್ರಜ್ವಲ್ ಇಷ್ಟೆಲ್ಲ ಮಾಡುತ್ತಿದ್ದರೂ ಅವರ ಅಪ್ಪ, ಅಮ್ಮ ಕತ್ತೆ ಕಾಯುತ್ತಿದ್ದರಾ? ಒಂದು ಕಡೆ ಅಪ್ಪ, ಮತ್ತೊಂದು ಕಡೆ ಮಗ ಈ ರೀತಿ ಮಾಡಿ ದೊಡ್ಡ ಗೌಡರನ್ನು ಚಿಂತೆ ಮಾಡುವ ಪರಿಸ್ಥಿತಿಗೆ ತಂದಿದ್ದಾರೆ.ಅವರು ಮಾಡಿರುವ ಪಾಪ ಅವರೇ ಅನುಭವಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ದೇವರಾಜೇಗೌಡ ಪೆನ್ ಡ್ರೈವ್ ಬಿಡುವ ಹೇಳಿಕೆ ಕೊಟ್ಟಿದ್ದರು. …
Read More »ನೇಹಾ ಹತ್ಯೆ ಆರೋಪಿ ಫಯಾಜ್‍ಗೆ ಗಲ್ಲು ಶಿಕ್ಷೆ ನೀಡುವಂತೆ’ ಸಹಿ ಸಂಗ್ರಹ ಅಭಿಯಾನ
ಔರಾದ್: ‘ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಮಾಡಿದ ಆರೋಪಿ ಫಯಾಜ್‍ಗೆ ಗಲ್ಲು ಶಿಕ್ಷೆ ನೀಡುವಂತೆ’ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಸಹಿ ಸಂಗ್ರಹ ಅಭಿಯಾನ ನಡೆಸಿದರು. ಪಟ್ಟಣದ ಇಕ್ರಾ ಪಿಯು ಕಾಲೇಜಿನಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ ರಾಕ್ಲೆ ‘ಸಿಐಡಿ ತನಿಖೆಯಿಂದ ನೊಂದ ಕುಟುಂಬಸ್ಥರಿಗೆ ನ್ಯಾಯ ಸಿಗುವುದಿಲ್ಲ.ಇದನ್ನು ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸಬೇಕು’ ಎಂದು ಆಗ್ರಹಿಸಿದರು. …
Read More »ಗರ್ಭಿಣಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಇಬ್ಬರಿಗೆ ಗಲ್ಲು ಶಿಕ್ಷೆ
ವಿಜಯಪುರ: 9 ತಿಂಗಳ ಗರ್ಭಿಣಿಯನ್ನು ಕೊಲೆ ಮಾಡಿದ್ದ ಮರ್ಯಾದಾ ಹತ್ಯೆ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಹಾಗೂ ಇತರ ಐವರಿಗೆ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ವಿಜಯಪುರ ಜಿಲ್ಲಾ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. 2017ರಲ್ಲಿ ಗರ್ಭಿಣಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಇಬ್ಬರಿಗೆ ಗಲ್ಲು ಶಿಕ್ಷೆ ಮತ್ತು ಇತರೆ ಐವರು ಅಪರಾಧಿಗಳಿಗೆ …
Read More »ಮಾಜಿ ಮಿನಿಸ್ಟರ್ ರೇವಣ್ಣ ವಿರುದ್ಧ ದಾಖಲಾಯ್ತು ಕಿಡ್ನ್ಯಾಪ್ ಕೇಸ್ !
ಹಾಸನ (Hassan) ಜಿಲ್ಲೆಯ ರಾಜಕಾರಣದಲ್ಲಿ ತಮ್ಮನ್ನು ಬಿಟ್ಟು ಬೇರೆ ಯಾರೂ ಇಲ್ಲ ಎನ್ನುವಂತಿದ್ದ ದೇವೇಗೌಡರ (Devegowda) ಕುಟುಂಬಕ್ಕೆ ಸಿಡಿಲು ಬಡಿದಿದೆ. ಹೆಚ್.ಡಿ ರೇವಣ್ಣ (HD Revanna) ಪುತ್ರ ಪ್ರಜ್ವಲ್ ರೇವಣ್ಣ (Prajwal revanna) ಅವರದ್ದು ಎನ್ನಲಾದ ವಿಡಿಯೋಗಳು ವೈರಲ್ (viral) ಆದ ಬಳಿಕ ಎಸ್‌ಐಟಿ ತನಿಖೆ ಶುರುವಾಗಿದೆ. ಈ ನಡುವೆ ನಿರೀಕ್ಷಣಾ ಜಾಮೀನು ಕೋರಿ ರೇವಣ್ಣ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಇಂದು ಕೋರ್ಟ್ (court) ತೀರ್ಪು ನೀಡುವ ಸಾಧ್ಯತೆ …
Read More »ಒಂದು ಮತ; ಐದು ವರ್ಷ ಪುಕ್ಕಟೆ ಕೆಲಸ- ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ
ವಿಜಯಪುರ: ರಾಜ್ಯ ರಾಜಕೀಯದಲ್ಲಿ ‘ಅಜಾತ ಶತ್ರು’ ಎಂದೇ ಗುರುತಿಸಿಕೊಂಡಿರುವ ದಲಿತ ನಾಯಕ, ಬಿಜೆಪಿ ಲೋಕಸಭೆ ಅಭ್ಯರ್ಥಿ ರಮೇಶ ಜಿಗಜಿಣಗಿ ಏಳನೇ ಬಾರಿಗೆ ಸಂಸತ್ ಭವನ ಪ್ರವೇಶಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ರಾಜ್ಯ ಮಾತ್ರವಲ್ಲದೇ, ರಾಷ್ಟ್ರ ರಾಜಕಾರಣದಲ್ಲೂ ಛಾಪು ಮೂಡಿಸಿರುವ ರಮೇಶ ಜಿಗಜಿಣಗಿ ಅವರು ಈ ಬಾರಿ ಗೆಲುವು ದಾಖಲಿಸಿದರೆ ಬಹುತೇಕ ಹೊಸ ಇತಿಹಾಸ ನಿರ್ಮಾಣವಾಗಲಿದೆ.ತಮ್ಮ ಸರಳ, ಸಜ್ಜನಿಕೆ, ಮೃದುಭಾಷೆ, ಹಮ್ಮು,ಬಿಮ್ಮು, ಗತ್ತು, ಗೈರತ್ತು ಇಲ್ಲದ ನಡೆಯಿಂದಲೇ ಜನರನ್ನು ಸೆಳೆಯುವ ಹಾಗೂ …
Read More »ರಾಯಚೂರಿನಲ್ಲಿ ತಾಪಮಾನ ಹೆಚ್ಚಲು ಕಾಂಗ್ರೆಸ್ ಅಭ್ಯರ್ಥಿ ಕಾರಣ: ಅಮರೇಶ್ವರ್ ನಾಯಕ್
ರಾಯಚೂರು: ರಾಯಚೂರಿನಲ್ಲಿ ತಾಪಮಾನ ಹೆಚ್ಚಳವಾಗಿರುವುದರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ್ ನಾಯಕ್ (G. Kumar Nayak) ಪಾತ್ರವಿದೆ ಎಂದು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ್ ನಾಯಕ್ (Raja Amareshwar Nayak) ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಟಿಪಿಎಸ್ ಹಾಗೂ ವೈಟಿಪಿಎಸ್, ಪವರ್ ಗ್ರಿಡ್‌ನಿಂದ ನಮಗೆ ಶಾಖ ಹೆಚ್ಚಾಗಿದೆ.ಜಿಲ್ಲೆಗೆ ವೈಟಿಪಿಎಸ್ ತಂದವರು ಈಗಿನ ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ್ ನಾಯಕ್. ಇದು ಜಿ. ಕುಮಾರ್ ನಾಯಕ್ ಜನರಿಗೆ ಕೊಟ್ಟಂತ ಕಾಣಿಕೆ. ಕುಮಾರ್ ನಾಯಕ್ …
Read More »ಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್
ಭೀಕರ ಅಪಘಾತದಲ್ಲಿ ಗಾಯಗೊಂಡ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಬೆಂಗಳೂರು, ಮೇ. 03 : ಬೆಂಗಳೂರಿನ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಏಪ್ರಿಲ್ 23 ರಂದು ಗಂಭೀರವಾದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಅವರ ಎಸ್‌ಯುವಿ ಮೂರು ಬಾರಿ ಪಲ್ಟಿ ಹೊಡೆದಿದೆ ಎಂದು ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷರೂ ಆಗಿದ್ದ …
Read More »ಸಾಲಗಾರನ ಪತ್ನಿಯ ಒತ್ತೆ ಇಟ್ಟುಕೊಂಡ ಬ್ಯಾಂಕ್
ಸೇಲಂ: ಸಾಲ ಕಟ್ಟದವನ ಪತ್ನಿಯನ್ನು ಬ್ಯಾಂಕ್ ಒತ್ತೆ ಇರಿಸಿಕೊಂಡ ಆಘಾತಕಾರಿ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ಸಂಜೆ ಆರು ಗಂಟೆಯ ನಂತರ ಸಾಲದ ಹಣ ಮರುಪಾವತಿಗೆ ಹಣಕಾಸು ಸಂಸ್ಥೆಗಳು ಒತ್ತಾಯಿಸುವಂತಿಲ್ಲ ಎನ್ನುವ ನಿಯಮಗಳ ಹೊರತಾಗಿಯೂ ಖಾಸಗಿ ಬ್ಯಾಂಕ್ ಸಿಬ್ಬಂದಿ ಸಾಲ ಮಾಡಿದ್ದ ಪತಿ ಕಂತಿನ ಹಣ ಪಾವತಿಸಿಲ್ಲವೆಂದು ಆತನ ಪತ್ನಿಯನ್ನು ಒತ್ತೆ ಇಟ್ಟುಕೊಂಡಿದ್ದಾರೆ. ಸೇಲಂ ಜಿಲ್ಲೆಯ ವಳಪ್ಪಾಡಿಯ IDFC ಬ್ಯಾಂಕ್ ನಲ್ಲಿ ಸಿಬ್ಬಂದಿ ಈ ರೀತಿ ಮಾಡಿದ್ದಾರೆ. ಪ್ರಶಾಂತ್ ಎಂಬಾತ …
Read More »ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ
ಬೆಂಗಳೂರು: ವಿವಾಹಿತ ಮಹಿಳೆಯನ್ನು ಮದುವೆಯಾಗುವಂತೆ ಪೀಡಿಸಿದಲ್ಲದೆ, ಅದನ್ನು ನಿರಾಕರಿಸಿದಕ್ಕೆ ಆಕೆಯ ಮನೆಗೆ ಬೆಂಕಿ ಇಟ್ಟ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆ.ಜಿ.ಹಳ್ಳಿ ನಿವಾಸಿ ಅಬಾರ್ಜ್ (24) ಬಂಧಿತ ಆರೋಪಿ. ಕೆ.ಜಿ.ಹಳ್ಳಿಯಲ್ಲಿ ಸಣ್ಣ- ಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿ ಹಾಗೂ ದೂರುದಾರ ವಿವಾಹಿತ ಮಹಿಳೆ ದೂರದ ಸಂಬಂಧಿಗಳಾಗಿದ್ದಾರೆಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಟೈಲರಿಂಗ್ ಕೆಲಸ ಮಾಡುತ್ತಿರುವ ಪತಿ ಹಾಗೂ ಮೂವರು ಮಕ್ಕಳ ಜತೆ ಸಾರಾಯಿಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಈ ಮಧ್ಯೆ ಆರೋಪಿ, …
Read More »