Breaking News

Uncategorized

ಶಾಸಕ ಹೆಚ್​ ಡಿ ರೇವಣ್ಣ ಮತ್ತು ಕಾಂಗ್ರೆಸ್​​ ಅಭ್ಯರ್ಥಿ ಶ್ರೇಯಸ್​ ಪಾಟೀಲ್​ಗೆ ಹೈಕೋರ್ಟ್​ ಸಮನ್ಸ್​ ಜಾರಿ ಮಾಡಿದೆ.

ಬೆಂಗಳೂರು: ಹಣ ಮತ್ತು ಕೊಳಿ ಮಾಂಸ ಹಂಚಿ ಚುನಾವಣೆ ಗೆದ್ದರುವುದಾಗಿ ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಇದೇ ವೇಳೆ, ಕಾಂಗ್ರೆಸ್​ ಅಭ್ಯರ್ಥಿ ಶ್ರೇಯಸ್ ಪಾಟೀಲ್​​ಗೂ ಸಮನ್ಸ್ ಜಾರಿ ಮಾಡಲಾಗಿದೆ. ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟಂಬರ್ 4 ಕ್ಕೆ ಮುಂದೂಡಿದೆ. ರೇವಣ್ಣ …

Read More »

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ 31 ಮತ ಪಡೆದು ಆಯ್ಕೆ

ಚಿಕ್ಕೋಡಿ: ರಾಜ್ಯದಲ್ಲೇ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದಿರುವ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಚ್ಚರಿಯ ಎಂಬಂತೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದು, ಸ್ಥಳೀಯ ಶಾಸಕರು ಹಾಗೂ ಕಾಂಗ್ರೆಸ್ ವಲಯಕ್ಕೆ ಭಾರಿ ನಿರಾಸೆ ಮೂಡಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ 31 ಮತ ಪಡೆದು …

Read More »

ರಾಜ್ಯಸಭೆ ಮಂಗಳವಾರ ತನ್ನ ಶಾಸಕಾಂಗ ಸಭೆಯಲ್ಲಿ ಆರು ಮಸೂದೆಗಳನ್ನು ಪಟ್ಟಿ

ನವದೆಹಲಿ: ರಾಜ್ಯಸಭೆ ಮಂಗಳವಾರ ತನ್ನ ಶಾಸಕಾಂಗ ಸಭೆಯಲ್ಲಿ ಆರು ಮಸೂದೆಗಳನ್ನು ಪಟ್ಟಿ ಮಾಡಿದೆ. ಅವುಗಳಲ್ಲಿ ಎರಡನ್ನು ಮಂಡಿಸಲಾಗುವುದು ಮತ್ತು ನಾಲ್ಕನ್ನು ಸಚಿವರ ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಪಟ್ಟಿ ಮಾಡಲಾಗಿದೆ. ಅವುಗಳಲ್ಲಿ ವಕೀಲರ (ತಿದ್ದುಪಡಿ) ಮಸೂದೆ 2023 ಮತ್ತು ಪ್ರೆಸ್ ಮತ್ತು ನಿಯತಕಾಲಿಕಗಳ ನೋಂದಣಿ ಮಸೂದೆ 2023 ಅನ್ನು ಮಂಡಿಸಲು ಪಟ್ಟಿ ಮಾಡಲಾಗಿದೆ. ಮಧ್ಯಸ್ಥಿಕೆ ಮಸೂದೆ, 2021, ಬಹು – ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ 2023, ಜೈವಿಕ ವೈವಿಧ್ಯ (ತಿದ್ದುಪಡಿ) …

Read More »

ಪೊಲೀಸ್, ಅರಣ್ಯ ಇಲಾಖೆಯಿಂದ ಜಂಟಿ ಕಾರ್ಯಾಚರಣೆ ನಡೆಸಿ, ಶ್ರೀಗಂಧ ಮರಗಳ್ಳರ ಬಂಧಿಸಲಾಗಿದೆ. ಬಂಧಿತರಿಂದ 8.75 ಲಕ್ಷ ರೂ. ಮೌಲ್ಯದ ವಿವಿಧ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ.

ಬೀದರ್​: ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆಯ ಜಂಟಿ ಕಾರ್ಯಾಚರಣೆಯ ಮೂಲಕ ಜಿಲ್ಲೆಯಲ್ಲಿ ವಿವಿಧ ಠಾಣೆಗಳಲ್ಲಿ ಮತ್ತು ಅರಣ್ಯ ಇಲಾಖೆಯಲ್ಲಿ ದಾಖಲಾದ ಶ್ರೀಗಂಧ ಮರಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 8,75,000 ರೂ. ಮೌಲ್ಯದ ವಿವಿಧ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್. ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಭಾಲ್ಕಿ ಅಂಬೆಸಾಂಗಾವಿ ಗ್ರಾಮದ …

Read More »

ರಾಜ್ಯದಲ್ಲಿ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟ ಮತ್ತು ಹಲವು ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ಕಾನೂನು ವಿದ್ಯಾರ್ಥಿಗಳಿಂದ ಪಿಐಎಲ್​

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಿಗೆ ಕಲ್ಪಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟದ ಜೊತೆಗೆ ದಿನನಿತ್ಯ ಆವಾಂತರಗಳಿಗೆ ಕಾರಣವಾಗುತ್ತಿದೆ ಎಂದು ಆಕ್ಷೇಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರಿನ ವಿವಿಧ ಕಾನೂನು ಕಾಲೇಜುಗಳ ಕಾನೂನು ವಿದ್ಯಾರ್ಥಿಗಳಾದ ಅಶ್ವಿನ್ ಶಂಕರ್ ಭಟ್, ನೇಹಾ ವೆಂಕಟೇಶ್ ಹಾಗೂ ಯಾಶಿಕಾ ಸರವಣ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಸಾರಿಗೆ ಇಲಾಖೆ, ಕೆಎಸ್‌ಆರ್‌ಟಿ, ಬಿಎಂಟಿಸಿ, ಎನ್‌ಡಬ್ಲ್ಯೂ ಕೆಎಸ್‌ಆರ್‌ಟಿ, ಕೆಕೆಆರ್‌ಟಿಸಿ ಈ ನಾಲ್ಕು …

Read More »

ಟೋಬಿ’ ಸಿನಿಮಾದ ಟ್ರೇಲರ್​ ಆಗಸ್ಟ್​ 4 ರಂದು ಸಂಜೆ 4 ಗಂಟೆ 5 ನಿಮಿಷಕ್ಕೆ ಬಿಡುಗಡೆ

ಟೋಬಿ’ ಸಿನಿಮಾದ ಟ್ರೇಲರ್​ ಆಗಸ್ಟ್​ 4 ರಂದು ಸಂಜೆ 4 ಗಂಟೆ 5 ನಿಮಿಷಕ್ಕೆ ಬಿಡುಗಡೆಯಾಗಲಿದೆ. ಸ್ಯಾಂಡಲ್​ವುಡ್​ನಲ್ಲಿ ನಟ ಮತ್ತು ನಿರ್ದೇಶಕನಾಗಿ ವಿಶೇಷ ರೀತಿಯಲ್ಲಿ ಗುರುತಿಸಿಕೊಂಡವರು ರಾಜ್​ ಬಿ ಶೆಟ್ಟಿ. ಅವರ ಮುಂಬರುವ ಬಹುನಿರೀಕ್ಷಿತ ಚಿತ್ರ ‘ಟೋಬಿ’. ಕುರುಚಲು ಗಡ್ಡ, ಮೂಗಿಗೆ ದೊಡ್ಡ ಮೂಗುತಿ, ತಲೆ ಹಾಗೂ ಮೂಗಿನಲ್ಲಿ ರಕ್ತದ ಕಲೆಯಿಂದ ಕೂಡಿರುವ ಗಾಯ.. ಇದುವೇ ಟೋಬಿ ಸಿನಿಮಾದ ಫಸ್ಟ್ ಲುಕ್​ ವಿಶೇಷ. ಇತ್ತೀಚೆಗಷ್ಟೇ ಸಿನಿಮಾದ ಶೀರ್ಷಿಕೆ, ಮೋಷನ್​ ಪೋಸ್ಟರ್​, …

Read More »

ಮೆಹ್ರಮ್ ಇಲ್ಲದೆ 4 ಸಾವಿರ ಮುಸ್ಲಿಂ ಮಹಿಳೆಯರ ಹಜ್ ಯಾತ್ರೆ: ಮೋದಿ ಮೆಚ್ಚುಗೆ

ನವದೆಹಲಿ: ಈ ವರ್ಷ ನಾಲ್ಕು ಸಾವಿರಕ್ಕೂ ಹೆಚ್ಚು ಮುಸ್ಲಿಂ ಮಹಿಳೆಯರು ಮೆಹ್ರಮ್ (ಪುರುಷರ ನೆರವಿಲ್ಲದೆ) ಇಲ್ಲದೆ ಹಜ್ ಯಾತ್ರೆ ಕೈಗೊಂಡಿರುವುದು ಅತಿ ದೊಡ್ಡ ಪರಿವರ್ತನೆಯಾಗಿದೆ. ಕಳೆದ ಕೆಲವು ವರ್ಷಗಳಿಂದ ತಮ್ಮ ಸರ್ಕಾರವು ಹಜ್ ನೀತಿಯಲ್ಲಿ ಮಾಡಿದ ಬದಲಾವಣೆಗಳಿಂದ ಹೆಚ್ಚು ಹೆಚ್ಚು ಜನರು ವಾರ್ಷಿಕ ಯಾತ್ರೆಗೆ ಹೋಗಲು ಅವಕಾಶವನ್ನು ಪಡೆಯುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇಂದು ರೆಡಿಯೋದಲ್ಲಿ ಪ್ರಸಾರವಾದ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮೋದಿ, ಪುರುಷರ ನೆರವಿಲ್ಲದೆ …

Read More »

ಹಾಸ್ಟೆಲ್ ಅಥವಾ ಪಿಜಿ ಕೊಠಡಿಗಳಲ್ಲಿ ವಾಸಿಸುವ ಜನರ ಜೇಬಿಗೆ ಕತ್ತರಿ

ಹಾಸ್ಟೆಲ್ ಅಥವಾ ಪಿಜಿ ಕೊಠಡಿಗಳಲ್ಲಿ ವಾಸಿಸುವ ಜನರ ಜೇಬಿಗೆ ಕತ್ತರಿ ಬೀಳುತ್ತಿದೆ. ಏಕೆಂದರೆ, ಇನ್ನು ಮುಂದೆ ಹಾಸ್ಟೆಲ್-ಪಿಜಿ ಬಾಡಿಗೆಗೆ ಶೇ 12ರಷ್ಟು ಜಿಎಸ್‌ಟಿ ಅನ್ವಯಿಸಲಿದೆ. ಹೌದು. “ಪಾವತಿಸಿದ ಬಾಡಿಗೆಗೆ ಶೇ 12ರಷ್ಟು ಜಿಎಸ್‌ಟಿ ಅನ್ವಯವಾಗುವುದರಿಂದ ವಿದ್ಯಾರ್ಥಿಗಳು ಹಾಸ್ಟೆಲ್ ಸೌಕರ್ಯಕ್ಕಾಗಿ ಹೆಚ್ಚಿನ ಹಣ ಪಾವತಿಸಲೇಬೇಕಾಗುತ್ತದೆ. ಹಾಸ್ಟೆಲ್‌ಗಳು ವಸತಿ ಘಟಕಗಳಲ್ಲ, ಆದ್ದರಿಂದ ಸರಕು ಮತ್ತು ಸೇವಾ ತೆರಿಗೆಯಿಂದ (ಜಿಎಸ್‌ಟಿ) ವಿನಾಯಿತಿ ನೀಡುವುದಿಲ್ಲ” ಎಂದು ಅಥಾರಿಟಿ ಆಫ್ ಅಡ್ವಾನ್ಸ್ ರೂಲಿಂಗ್ ಎರಡು ಪ್ರತ್ಯೇಕ ಪ್ರಕರಣಗಳಿಗೆ …

Read More »

ಮಳೆ ಹೆಚ್ಚಿರುವ ಕಾರಣ ಇಂದಿನಿಂದ ಕೊಡಚಾದ್ರಿ ಬೆಟ್ಟಕ್ಕೆ ಪ್ರವೇಶ ನಿಷೇಧ

ಶಿವಮೊಗ್ಗ: ಮುಂಗಾರು ಮಳೆ ಹೆಚ್ಚಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಪ್ರಮುಖ ಜಲಪಾತ, ಸಫಾರಿ ಮತ್ತು ಚಾರಣ ತಾಣಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಕುದುರೆಮುಖದ ವನ್ಯಜೀವಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದ ಪ್ರಸಿದ್ಧ ಧಾರ್ಮಿಕ ಹಾಗೂ ಚಾರಣ ತಾಣವಾದ ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಯ ಗಡಿಭಾಗವಾದ ಕೊಡಚಾದ್ರಿ ಬೆಟ್ಟಕ್ಕೂ ಪ್ರವೇಶ ನಿಷೇಧಿಸಲಾಗಿದೆ. ಮುಂಗಾರು ಮಳೆ ತೀವ್ರಗೊಂಡಿದ್ದು, ‌ಜಲಪಾತಗಳ ವೀಕ್ಷಣೆಗೆ ಹೆಚ್ಚಿನ ಪ್ರವಾಸಿಗರು ಬರುವ ಸಾಧ್ಯತೆ ಇದೆ. ಪ್ರವಾಸಿಗರು …

Read More »

ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು (ದಕ್ಷಿಣ ಕನ್ನಡ): ಅಕ್ರಮವಾಗಿ ಪಿಸ್ತೂಲ್​ ಅನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದ ಹಳೆಯ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮಿಯಾಪದವು, ಚಿಗುರುಪಾದೆಯ ಅಬ್ಬಾಸ್ ಯಾನೆ ಬೆಡಿ ಅಬ್ಬಾಸ್ (61) ಮತ್ತು ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಪೈವಳಿಕೆಯ ಯಶವಂತ್ ಕುಮಾರ್ (45) ಬಂಧಿತರು. ಪಿಸ್ತೂಲ್​ ಹಿಡಿದುಕೊಂಡು ತಿರುಗಾಡುತ್ತಿದ್ದ ಆರೋಪಿಗಳು: ಈ ಇಬ್ಬರು ಆರೋಪಿಗಳು ಮಂಗಳೂರು ತಾಲೂಕು ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಬೈಕ್​ನಲ್ಲಿ ಯಾವುದೇ …

Read More »