Uncategorized

‘ನನ್ನ ಪತಿ ಸಾವಿಗೆ ನ್ಯಾಯ ಸಿಗಬೇಕು’: ಮೃತ ಹೆಡ್ ಕಾನ್ಸ್​ಟೇಬಲ್ ಪತ್ನಿ ನಿರ್ಮಲಾ ಆಗ್ರಹ

ಕಲಬುರಗಿ: ಅಕ್ರಮ ಮರಳು ಸಾಗಾಟ ತಡೆಯಲು‌ ಹೋಗಿದ್ದ ಹೆಡ್ ಕಾನ್ಸ್​ಟೇಬಲ್ ಸಾವು ಪ್ರಕರಣಕ್ಕೆ ಸಂಬಂಧ ಆರೋಪಿ ಟ್ರ್ಯಾಕ್ಟರ್ ಚಾಲಕನನ್ನು ಪೊಲೀಸರು ಬಂಧಿಸಿದ್ಧಾರೆ. ಸಿದ್ದಣ್ಣ ಬಂಧಿತ ಆರೋಪಿ. ಗುರುವಾರ ಮಧ್ಯರಾತ್ರಿ ಹೆಡ್‌ ಕಾನ್ಸ್‌ಟೇಬಲ್ ಮೈಸೂರು ಅಲಿಯಾಸ್ ಮಯೂರ್ ಚವ್ಹಾಣ್ (51) ಅಕ್ರಮ ಮರಳು ಸಾಗಾಟದ ಟ್ರ್ಯಾಕ್ಟರ್ ಚಕ್ರದಡಿ ಸಿಲುಕಿ ಸಾವನ್ನಪ್ಪಿದ್ದರು. ಇದೊಂದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಮನೆ ಯಜಮಾನನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನನ್ನ ಪತಿ ಸಾವಿಗೆ …

Read More »

ಪಠ್ಯ ಪರಿಷ್ಕರಣೆ ಬಗ್ಗೆ ಬೊಮ್ಮಾಯಿ, ಸುನೀಲ್ ಕುಮಾರ್, ತೇಜಸ್ವಿ ಸೂರ್ಯ ಕಿಡಿ

ಬೆಂಗಳೂರು: ”ರಾಜ್ಯದಲ್ಲಿ ‌ಮುಂಗಾರು ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನಿರಿನ ಹಾಹಾಕಾರ ಉಂಟಾಗಿದೆ, ಅಂತರ್ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ ಜನರಿಗೆ ಈ ಸರ್ಕಾರ ಶಾಪವಾಗಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು, ”ರಾಜ್ಯದಲ್ಲಿ ಕಾಂಗ್ರೆಸ್ …

Read More »

ಕೌಟುಂಬಿಕ ಕಲಹದಿಂದ ಗಾಯಗೊಂಡಿದ್ದ ಅತ್ತೆ ಸಾವು.. ಸೊಸೆ ವಿರುದ್ಧ ಕೊಲೆ ಕೇಸ್ ದಾಖಲು

ಬೆಳಗಾವಿ : ಕೌಟುಂಬಿಕ ಕಲಹದಲ್ಲಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಮಂಗಳವಾರ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ. ಈ ಮಹಿಳೆಯ ಸಾವಿಗೆ ಸೊಸೆ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸ್ವತಃ ಮೃತ ಮಹಿಳೆಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾರೆ. ಬೈಲಹೊಂಗಲ ಪಟ್ಟಣದ ಮಹೆಬೂಬಿ ಯಾಕೂಶಿ (53) ಎಂಬವರು ನಿನ್ನೆ(ಮಂಗಳವಾರ) ಮೃತಪಟ್ಟಿದ್ದರು. ಈ ಸಂಬಂಧ ಸೊಸೆ ಮೆಹರೂನಿ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸುಬಾನ್​ ಯಾಕೂಶಿ ಪೊಲೀಸರಿಗೆ ದೂರು ನೀಡಿದ್ದಾರೆ. …

Read More »

ಲೈಂಗಿಕ ಕಿರುಕುಳ ಆರೋಪ ಪ್ರಾಂಶುಪಾಲ ಅಮಾನತು

ಬಳ್ಳಾರಿ: ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿದ್ದ ಎಎಸ್ ಎಂ ಮಹಿಳಾ ಕಾಲೇಜಿನ ಪ್ರಾಂಶುಪಾಲ ಶರಣಪ್ಪ ಅವರನ್ನು ವೀರಶೈವ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಮಹಿಳಾ ವಿದ್ಯಾಲಯದ ಉಪನ್ಯಾಸಕಿ ಮೇಲೆ ಲೈಂಗಿಕ ಕಿರುಕುಳ, ದೌರ್ಜನ್ಯ, ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಕಾಲೇಜು ಉಪನ್ಯಾಸಕಿ ನಗರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿ, ಕ್ರಮಕ್ಕೆ ಒತ್ತಾಯಿಸಿದ್ದರು. ಈ ಕುರಿತು ವೀರಶೈವ ವಿದ್ಯಾವರ್ಧಕ ಸಂಘದ ಕಚೇರಿಯಲ್ಲಿ …

Read More »

ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾದ ಲೈನ್‌ಮ್ಯಾನ್

ಧಾರವಾಡ: ಕರ್ತವ್ಯದಲ್ಲಿದ್ದಾಗಲೇ ವಿದ್ಯುತ್ ಸ್ಪರ್ಶಿಸಿ ಲೈನ್‌ಮ್ಯಾನ್ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಬೇಲೂರಿನಲ್ಲಿ ನಡೆದಿದೆ. ಶಿಬಾರಗಟ್ಟಿ ಗ್ರಾಮದ ನಿಜಗುಣಿ ಗಿರಿಯಪ್ಪನವರ (28) ಎಂಬುವವರೇ ಸಾವಿಗೀಡಾದ ಲೈನ್‌ಮ್ಯಾನ್. ಇಂದು ಬೇಲೂರಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಿಜಗುಣಿ ಅವರಿಗೆ ವಿದ್ಯುತ್ ಸ್ಪರ್ಶಿಸಿ ಸಾವಿಗೀಡಾಗಿದ್ದಾರೆ. ಸದ್ಯ ನಿಜಗುಣಿ ಅವರ ಶವವನ್ನು ಧಾರವಾಡ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದ್ದು, ಗರಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More »

ಬಾಡಿಗೆದಾರರಿಗೂ 200 ಯೂನಿಟ್​ ವಿದ್ಯುತ್​ ಉಚಿತ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿನ ಬಾಡಿಗೆ ಮನೆಗಳಲ್ಲಿ ವಾಸಿಸುವವರೂ ಸೇರಿದಂತೆ ಎಲ್ಲ ಗೃಹಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು. ಕಾಂಗ್ರೆಸ್​ ಸರ್ಕಾರ ಘೋಷಿಸಿರುವ ಉಚಿತ ವಿದ್ಯುತ್​ ನೀಡುವ ಗೃಹಜ್ಯೋತಿ ಯೋಜನೆಯಿಂದ ಬಾಡಿಗೆದಾರರು ವಂಚಿತರಾಗಲಿದ್ದಾರೆ ಎಂಬ ಆಪಾದನೆ ಕೇಳಿ ಬಂದ ಹಿನ್ನೆಲೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ. ಬಾಡಿಗೆದಾರರೂ ಸೇರಿದಂತೆ ಗೃಹಬಳಕೆಯ ಎಲ್ಲರಿಗೂ ಗೃಹಜ್ಯೋತಿ ಯೋಜನೆಯ ಲಾಭ ಸಿಗಲಿದೆ. ಸರ್ಕಾರ ಘೋಷಿಸಿದಂತೆ 200 ಯೂನಿಟ್​ವರೆಗೆ ಬಾಡಿಗೆದಾರರೂ ಬಿಲ್​ ಪಾವತಿ …

Read More »

ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿರುವುದು ಅತ್ಯಂತ ನೋವು ತಂದಿದೆ.:ಸಚಿವ ಬಿ ನಾಗೇಂದ್ರ

ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗ ಮಾಡಿರುವುದು ಅತ್ಯಂತ ನೋವು ತಂದಿದೆ. ವಿಜಯನಗರ ಜಿಲ್ಲೆಯ ಜನಪ್ರತಿನಿಧಿಗಳು ಮತ್ತೆ ಒಂದು ಮಾಡೋಕೆ ಒಪ್ಪಿದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಯುವಜನ ಸೇವಾ, ಕ್ರೀಡೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಅವರು ಹೇಳಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಈ ಕುರಿತು ಮಾತನಾಡಿದ ಅವರು, ವಿಶ್ವ ಪ್ರಸಿದ್ಧ ಹಂಪಿ, ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯ ಸೇರಿದಂತೆ ಇತರ ಪ್ರೇಕ್ಷಣೀಯ ಸ್ಥಳಗಳು ನಮ್ಮ ಜಿಲ್ಲೆಯಿಂದ …

Read More »

ನಮ್ಮ ಸಮಾಜಕ್ಕೆ ಒತ್ತು ಕೊಡದೇ ಇರುವುದರಿಂದ ಮುಂಬರುವ ಲೋಕಸಭೆ ಚುನಾವಣೆ ಮೇಲೆ ಪ್ರಭಾವ ಬೀರುತ್ತದೆ ಎಂದು ವಿನಯ್ ಕುಲಕರ್ಣಿ

ಬೆಳಗಾವಿ : ರಾಜ್ಯದಲ್ಲಿ ವಿರೇಂದ್ರ ಪಾಟೀಲರ ನಂತರ ಇಷ್ಟೊಂದು ದೊಡ್ಡ ಬಹುಮತ ಕಾಂಗ್ರೆಸ್ ಪಕ್ಷಕ್ಕೆ ಸಿಕ್ಕಿದೆ. ಹೀಗಾಗಿ ಹಿಂದೆ ಮಾಡಿದ ತಪ್ಪು ಮತ್ತೆ ಪುನರಾವರ್ತನೆ ಆಗಬಾರದು ಎಂದು ತಮ್ಮದೇ ಪಕ್ಷದ ನಾಯಕರಿಗೆ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಪ್ರವಾಸಿ‌ ಮಂದಿರದಲ್ಲಿ‌ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಕಳೆದ ಚುನಾವಣೆಗಳಲ್ಲಿ ನಮ್ಮ ಸಮಾಜದಿಂದ ಕಾಂಗ್ರೆಸ್ ಪಕ್ಷಕ್ಕೆ ಮತಗಳು ಕಡಿಮೆ ಸಂಖ್ಯೆಯಲ್ಲಿ ಬರುತ್ತಿದ್ದವು. ಆದರೆ …

Read More »

ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಗೆ ವಿದೇಶಿ ಬೆಂಬಲ : ಶೋಭಾ ಕರಂದ್ಲಾಜೆ

ಉಡುಪಿ: ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಗೆ ವಿದೇಶಿ ಬೆಂಬಲ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗಂಭೀರ ಆರೋಪ ಮಾಡಿದ್ದಾರೆ.   ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ”ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಗಳಿಗೆ ವಿದೇಶಿ ಫಂಡಿಂಗ್ ಇದ್ದೇ ಇರುತ್ತದೆ. ಪ್ರತಿಭಟನೆಗೆ ಬೆಂಬಲ ನೀಡುತ್ತಿರುವ ವಿದೇಶಿ ವ್ಯಕ್ತಿಯು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ದೇಶವನ್ನು …

Read More »

ಪತಿಯ ಆಯಸ್ಸು ವೃದ್ಧಿಗಾಗಿ ಕಾರವಾರದಲ್ಲಿ ವಟ ಸಾವಿತ್ರಿ ವ್ರತಾಚರಣೆ

ಭರತಖಂಡದಲ್ಲಿ ಪ್ರಸಿದ್ಧ ಪತಿವ್ರತೆಯರಲ್ಲಿ ಸಾವಿತ್ರಿ ಆದರ್ಶಪ್ರಾಯಳು. ಸತ್ಯವಾನ್​ ಸಾವಿತ್ರಿಯನ್ನು ಸೌಭಾಗ್ಯದ ಪ್ರತೀಕವೆಂದೇ ಪರಿಗಣಿಸಲಾಗುತ್ತದೆ. ಇಂದಿಗೂ ಹೆಚ್ಚಿನ ಮಹಿಳೆಯರು ವಟ ಸಾವಿತ್ರಿ ವ್ರತವನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಾರೆ. ಶನಿವಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಿಳೆಯರು ವಟ ಸಾವಿತ್ರಿ ವ್ರತವನ್ನು ಆಚರಿಸಿದ್ದಾರೆ. ಪತಿಯ ಆಯುಷ್ಯ ಮತ್ತು ಆರೋಗ್ಯಕ್ಕಾಗಿ ಅವರು ಪ್ರಾರ್ಥಿಸಿದರು. ಜೇಷ್ಠ ಹುಣ್ಣಿಮೆಯ ದಿನ ಕಾರವಾರದಲ್ಲಿ ಸ್ತ್ರೀಯರು ವಟ ಸಾವಿತ್ರಿ ವ್ರತವನ್ನು ಆಚರಿಸಿದರು. ಬೆಳಗ್ಗೆಯಿಂದಲೇ ಕಾರವಾರದ ಸುತ್ತಮುತ್ತಲ ಆಲದ ಮರಗಳ ಸಮೀಪ …

Read More »