Breaking News

Uncategorized

ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ – ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ FIR

ಮೈಸೂರು: ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್  ವಿರುದ್ಧ ಎಫ್ಐಆರ್ ದಾಖಲಾಗಿದೆ. 55 ಲಕ್ಷ ಹಿಂದಿರುಗಿಸದ ಆರೋಪ ವಿಶ್ವನಾಥ್‌ ಮೇಲಿದೆ. ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ವಿಧಾನ ಪರಿಷತ್ ಸದಸ್ಯ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿದ್ದಾರೆ ಎಂದು ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ವಿಶ್ವನಾಥ್ ಇರುವಾಗ ಹಣ ಕೇಳಲು …

Read More »

ಸದ್ಯಕ್ಕಿಲ್ಲ ಜಿಬಿಎ ಚುನಾವಣೆ – ಮತ್ತೆ 2 ತಿಂಗಳು ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ರಾಜ್ಯ ಸರ್ಕಾರವು ಚುನಾವಣೆ ವಿಳಂಬಗೊಳಿಸಲು ಯತ್ನಿಸುತ್ತಿದೆ ಎಂದು ಕಟುವಾಗಿ ಟೀಕಿಸಿದ ಸುಪ್ರೀಂ ಕೋರ್ಟ್‌, ಆಗಸ್ಟ್‌ 31ರೊಳಗೆ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿ ಬರುವ ಐದೂ ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿ ಬರುವ ಐದು ಪಾಲಿಕೆಗಳಿಗೆ ಚುನಾವಣೆ ಮುಂದೂಡಿಕೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌, ನ್ಯಾಯಮೂರ್ತಿಗಳಾದ ಜೋಯಮಲ್ಯ ಬಾಗ್ಚಿ ಮತ್ತು ವಿಪುಲ್‌ …

Read More »

ಬೆಂಗ್ಳೂರಲ್ಲಿ ಬೃಹತ್ ಡ್ರಗ್ಸ್ ಜಾಲ ಪತ್ತೆ – 35 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, ಎಂಟು ಜನ ಅರೆಸ್ಟ್

ಬೆಂಗಳೂರು: ಹೆಬ್ಬಾಳ ಪೊಲೀಸರು  ದೆಹಲಿ ಮೂಲದ ಬೃಹತ್ ಡ್ರಗ್ಸ್‌ ಜಾಲವೊಂದನ್ನ ಭೇದಿಸಿ, ಎಂಟು ಆರೋಪಿಗಳನ್ನು ಬಂಧಿಸಿ, ಬರೋಬ್ಬರಿ 35 ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ  ಮಾದಕ ವಸ್ತುಗಳನ್ನು ತಂದು ಮಾರಾಟ ಮಾಡ್ತಿದ್ದ ಗ್ಯಾಂಗ್‌ವೊಂದನ್ನು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಒಟ್ಟು ಎಂಟು ಜನ ಆರೋಪಿಗಳನ್ನು ಅರೆಸ್ಟ್ ಮಾಡಿ, ಒಂದೇ ಗ್ಯಾಂಗ್‌ನಿಂದ ಸುಮಾರು 35 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮಾದಕ ವಸ್ತುಗಳ …

Read More »

6,000 ಕೋಟಿ ಹೂಡಿಕೆಗೆ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಒಲವು: ಎಂ.ಬಿ ಪಾಟೀಲ್‌

ಬೆಂಗಳೂರು: ವೈಮಾಂತರಿಕ್ಷ ಹಾಗೂ ರಕ್ಷಣಾ ವಲಯದ ಬೆಂಗಳೂರು ಮೂಲದ ಆ್ಯಕ್ಸಿಸ್‌ಕೇಡ್ಸ್‌ ಏರೊಸ್ಪೇಸ್‌ ಇನ್‌ಫ್ರಾಸ್ಟ್ರಕ್ಚರ್‌ ಪ್ರೈವೇಟ್‌ ಲಿಮಿಟೆಡ್‌, ರಾಜ್ಯದಲ್ಲಿ 6,000 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌  ತಿಳಿಸಿದ್ದಾರೆ. ಬುಧವಾರ (ಮೇ 20) ಖನಿಜ ಭವನದಲ್ಲಿ ಕಂಪನಿಯ ಉನ್ನತಾಧಿಕಾರಿಗಳ ಜೊತೆಗೆ ನಡೆದ ವಿಸ್ತೃತ ಸಮಾಲೋಚನೆಯ ನಂತರ ಸಚಿವರು ಈ ಮಾಹಿತಿ ನೀಡಿದ್ದಾರೆ. 200 ಎಕರೆ ಪ್ರದೇಶದಲ್ಲಿ ವೈಮಾಂತರಿಕ್ಷ, ರಕ್ಷಣೆ, ಸೆಮಿಕಂಡಕ್ಟರ್‌ ಹಾಗೂ …

Read More »

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶ ಇಲ್ಲ: ಈಶ್ವರ ಖಂಡ್ರೆ

ಬೆಂಗಳೂರು: ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ ಮಾಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ  ಸೂಚನೆ ನೀಡಿದ್ದಾರೆ. ದುಬಾರೆ ಆನೆ ಶಿಬಿರದಲ್ಲಿ ನಿನ್ನೆ ಎರಡು ಸಾಕಾನೆಗಳ ಕಾಳಗದ ವೇಳೆ ಪ್ರವಾಸಿ ಮಹಿಳೆ ಮೃತಪಟ್ಟ ಆಘಾತಕಾರಿ ಘಟನೆ ಹಿನ್ನೆಲೆಯಲ್ಲಿ ಸಫಾರಿಗಳಲ್ಲಿ ಪ್ರವಾಸಿಗರ ಸುರಕ್ಷತೆಗೂ ಹೆಚ್ಚಿನ ಗಮನ ಹರಿಸುವಂತೆ ಅರಣ್ಯ ಸಚಿವರು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. …

Read More »

ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (SIR) ಕಾರ್ಯಾಗಾರಕ್ಕೆ ಚಾಲನೆ; ಕರ್ತವ್ಯ ಲೋಪವೆಸಗಿದರೆ ಅಮಾನತು

ಬೆಳಗಾವಿ: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (SIR) ಕಾರ್ಯಾಗಾರಕ್ಕೆ ಚಾಲನೆ; ಕರ್ತವ್ಯ ಲೋಪವೆಸಗಿದರೆ ಅಮಾನತು ಅಸ್ತ್ರದ ಎಚ್ಚರಿಕೆ ನೀಡಿದ ಜಂಟಿ ಮುಖ್ಯ ಚುನಾವಣಾಧಿಕಾರಿ • ಬೆಳಗಾವಿಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಕಾರ್ಯಾಗಾರ • ಸುವರ್ಣ ವಿಧಾನಸೌಧದಲ್ಲಿ ವಿಭಾಗ ಮಟ್ಟದ ತರಬೇತಿ ಆರಂಭ • ಅರ್ಹ ಮತದಾರರನ್ನು ಕೈಬಿಟ್ಟರೆ ಕಠಿಣ ಕ್ರಮ: ಚುನಾವಣಾಧಿಕಾರಿ ಎಚ್ಚರಿಕೆ • ಜೂನ್ 20 ರಿಂದ ಮನೆ ಮನೆ ಸಮೀಕ್ಷೆ ಆರಂಭ ಬೆಳಗಾವಿಯ ಸುವರ್ಣ ವಿಧಾನಸೌಧದ …

Read More »

ಪಾಲಿಕೆ ಬಿಜೆಪಿ ಸದಸ್ಯರ ವಿರುದ್ಧ ವಿಜಯೇಂದ್ರಗೆ ವಿವಿಧ ಕನ್ನಡ ಸಂಘಟನೆಗಳ ದೂರು

ಬೆಳಗಾವಿ: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತಾರೂಢ ಬಿಜೆಪಿ ಮೇಯರ್, ಉಪಮೇಯರ್‌ಗೆ ಸೂಕ್ತ  ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಶುಕ್ರವಾರ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ವಿವಿಧ ಕನ್ನಡ ಸಂಘಟನೆಗಳ ಕಾರ್ಯರ್ತರು ಮನವಿ ಸಲ್ಲಿಸಿದರು. ಮಹಾನಗರ ಪಾಲಿಕೆ ಪರಿಷತ್ ಸಭೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಬೇಕು ಎಂದು ಒತ್ತಾಯಿಸಿ ಮಾರ್ಚ್ 26ರಿಂದ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿಕೊಂಡು ಬರುತ್ತಿವೆ. …

Read More »

ಪಾಲಿಕೆ ವಿರುದ್ಧ ಹೋರಾಟ ಮುಂದುವರಿಸಲು ವಿವಿಧ ಕನ್ನಡ ಸಂಘಟನೆಗಳ ನಿರ್ಧಾರ

ಬೆಳಗಾವಿ:ಇಲ್ಲಿನ ಮಹಾನಗರ ಪಾಲಿಕೆಯ ಸರ್ವಸಾಧಾರಣ ಸಭೆಯಲ್ಲಿ ಕರ್ನಾಟಕದ ಪರ ಗೊತ್ತುವಳಿಯನ್ನು ಅಂಗೀಕರಿಸುವವರೆಗೆ ಹೋರಾಟ ಮುಂದುವರೆಸಲು ಶನಿವಾರ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ವಿವಿಧ ಕನ್ನಡ  ಸಂಘಟನೆಯ ಪದಾಧಿಕಾರಿಗಳ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದಾರೆ.  ಕರ್ನಾಟಕ ಪರ ಗೊತ್ತುವಳಿಯನ್ನು ಪಾಸು ಮಾಡುವುದಾಗಿ ಕನ್ನಡ ಸಂಘಟನೆಗಳಿಗೆ ನೀಡಿದ ಭರವಸೆಯ ವಿರುದ್ಧ ನಡೆದುಕೊಂಡ ಮಹಾಪೌರರು ಹಾಗೂ ಉಪಮಹಾಪೌರರು ಕನ್ನಡಿಗರ ಕಣ್ಣಿಗೆ ಮಣ್ಣೆರಚುವಂತ ನಿರ್ಣಯವನ್ನು ಕೈಕೊಂಡಿದ್ದಾರೆ. ನಗರಾಭಿವೃದ್ಧಿ ಕಾರ್ಯದರ್ಶಿಗೆ ಪತ್ರ ಬರೆಯುವ ನಿರ್ಣಯ ಕೈಕೊಂಡ ಮೂಲಕ ಕರ್ನಾಟಕದ ಕನ್ನಡಿಗರಿಗೆ …

Read More »

ಬೆಳಗಾವಿ ನಗರದ ‘ಸ್ವಚ್ಛ ಶನಿವಾರ’ ಅಭಿಯಾನಕ್ಕೆ ಜಿಪಂ ಆವರಣದಲ್ಲಿ ಚಾಲನೆ

ಬೆಳಗಾವಿ : ಜಿಲ್ಲೆಯಾದ್ಯಂತ ‘ಸ್ವಚ್ಛ ಶನಿವಾರ’ ಅಭಿಯಾನಕ್ಕೆ ಜಿಪಂ, ತಾಪಂ ಹಾಗೂ ಗ್ರಾಪಂ ವ್ಯಾಪ್ತಿಯ ವಿವಿಧ ಇಲಾಖೆಯ ಕಚೇರಿ ಆವರಣದಲ್ಲಿ  ಅಧಿಕಾರಿ, ಸಿಬ್ಬಂದಿ ವಗರ್ಷ ಸ್ವಯಂ ಪ್ರೇರಿತವಾಗಿ ಸ್ವಚ್ಛಗೊಳಿಸುವ ಅಭಿಯಾನಕ್ಕೆ ಉತ್ತಮ  ಸ್ಪಂದನೆ ವ್ಯಕ್ತವಾಯಿತು. ಶನಿವಾರ ಜಿಲ್ಲೆಯಾದ್ಯಂತ ಆರಂಭಗೊಂಡ ಸ್ವಚ್ಛತಾ ಅಭಿಯಾನದಲ್ಲಿ  ಅಧಿಕಾರಿ, ಸಿಬ್ಬಂದಿ ವರ್ಗ ಕೈಯಲ್ಲಿ ಜಾಡು ಹಿಡಿದುಕೊಂಡು ಸರ್ಕಾರಿ  ಕಚೇರಿ ಪರಿಸರವನ್ನು ಸ್ವಚ್ಛಗೊಳಿಸಿದರು. ಕಚೇರಿಯ ದಾಖಲೆಗಳನ್ನು ಸಮರ್ಪಕವಾಗಿ ಜೋಡಿಸುವುದು, ನೋಟಿಸ್ ಬೋರ್ಡ್ ಸ್ವಚ್ಛತೆ, ನೀರಿನ ಟ್ಯಾಂಕ್ ನಿರ್ವಹಣೆ ಹಾಗೂ …

Read More »

ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

ಮಂಗಳೂರು: ವಸ್ತುಗಳನ್ನು ಸಾಗಿಸುತ್ತಿದ್ದಾಗ ಏಕಾಏಕಿ ಲಿಫ್ಟ್‌ ಕುಸಿದು ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ  ಕುಂಟಿಕಾನ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಬೆಳಲು ನಿವಾಸಿ ನೌಫಾಲ್ (28) ಸಾವನ್ನಪ್ಪಿದ್ದಾರೆ. ಇನ್‌ಸ್ಟಾ ಮಾರ್ಟ್‌ ಸಪ್ಲೈ ಪಾಯಿಂಟ್‌ನಲ್ಲಿ ದಿನಸಿ ವಸ್ತುಗಳನ್ನು ಲಿಫ್ಟ್‌ನಲ್ಲಿ ಸಾಗಿಸುತ್ತಿದ್ದರು. ಈ ವೇಳೆ ದುರ್ಘಟನೆಯಾಗಿದೆ. ವಸ್ತುಗಳನ್ನು ಸಾಗಿಸುತ್ತಿದ್ದ ವೇಳೆ ಏಕಾಏಕಿ ಲಿಫ್ಟ್ ಕುಸಿದಿದೆ. ಲಿಫ್ಟ್‌ನಲ್ಲಿ ಸಿಲುಕಿ ನೌಫಾಲ್ ಸಾವಿಗೀಡಾಗಿದ್ದಾರೆ. ದುರಂತದ ದೃಶ್ಯ ಸಿಸಿ ಕ್ಯಾಮರಾದಲ್ಲಿ‌ ಸೆರೆಯಾಗಿದೆ. ಕದ್ರಿ ಪೊಲೀಸರು ಸ್ಥಳಕ್ಕೆ …

Read More »