Breaking News

Uncategorized

ಇಂದಿನಿಂದ ಸಾರಿಗೆ, ಪೊಲೀಸ್ ಇಲಾಖೆಗಳಲ್ಲಿ ಬಾಕಿ ಇರುವ ಉಲ್ಲಂಘನಾ ಕೇಸ್​ಗಳ ದಂಡ ಪಾವತಿಗೆ ಶೇ.50ರಷ್ಟು ವಿನಾಯಿತಿ: ಡಿ.12ರವರೆಗೆ ಮಾತ್ರ ಅವಕಾಶ

ಬೆಂಗಳೂರು: ಸಂಚಾರಿ ಇ-ಚಲನ್​​ನಲ್ಲಿ ದಾಖಲಾಗಿರುವ ಸಂಚಾರ ಉಲ್ಲಂಘನೆ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ ಬಾಕಿ ಇರುವ ದಂಡ ಪಾವತಿಸಲು ಶೇಕಡಾ 50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಆಗಸ್ಟ್ 23ರಿಂದ ಸೆಪ್ಟೆಂಬರ್​ 12ರವರೆಗೆ ಇ-ಚಲನ್​ನಲ್ಲಿ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇಕಡಾ 50ರಷ್ಟು ದಂಡಪಾವತಿಗೆ ವಿನಾಯಿತಿ ನೀಡಿತ್ತು. ಇದಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಹೀಗಾಗಿ, ಟ್ರಾಫಿಕ್ ವೈಯಲೇಷನ್ ಕೇಸ್​​ಗಳಿಗೆ ರಿಯಾಯಿತಿ ದರದಲ್ಲಿ ದಂಡ ಕಟ್ಟಲು ಮತ್ತೆ ಅವಕಾಶ …

Read More »

ಗೋಕಾಕ ನಗರದಲ್ಲಿ ನಡೆದಿದ್ದ ಬೃಹತ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು ಯಶಸ್ವಿ

ಕುಖ್ಯಾತ ಮನೆಗಳ್ಳರ ಬಂಧನ: ₹33 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಜಪ್ತಿ ಗೋಕಾಕ ನಗರದಲ್ಲಿ ನಡೆದಿದ್ದ ಬೃಹತ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೆಳಗಾವಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಮೂವರು ಕುಖ್ಯಾತ ಮನೆಗಳ್ಳರನ್ನು ಬಂಧಿಸಿ, ಭಾರೀ ಪ್ರಮಾಣದ ಚಿನ್ನಾಭರಣ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಗೋಕಾಕ ಶಹರದ ಲಕ್ಷ್ಮೀ ಬಡಾವಣೆಯ ಸಚೀನ ಆಶೋಕ ಗೊಂದಳಿ ಎಂಬುವರ ಮನೆಯ ಬೀಗ ಮುರಿದು ಒಳನುಗ್ಗಿದ್ದ ಕಳ್ಳರು, ಟೇಜರಿ ಬಾಗಿಲು ಒಡೆದು ಸುಮಾರು 330 …

Read More »

ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆಯಿತು.

ಉಡುಪಿ: ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ಬುಧವಾರ ರಾತ್ರಿ ನಡೆಯಿತು. ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ (51) ಮೃತಪಟ್ಟವರು. ಇವರು ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರನ ಪಾತ್ರ ಮಾಡುತ್ತಿದ್ದರು. ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ನಿಧನರಾಗಿದ್ದಾರೆ. ಮಂದಾರ್ತಿ ಮೇಳದಲ್ಲಿ ಇವರ ತಂದೆಯೂ ವೇಷಧಾರಿಯಾಗಿದ್ದರು. ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಈಶ್ವರ ಗೌಡ …

Read More »

ಲೋಕೋಪಯೋಗಿ ಇಲಾಖೆಯ ರಾಜ್ಯ ಎಸ್‌.ಸಿ/ಎಸ್‌.ಟಿ ಗುತ್ತಿಗೆದಾರರಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತುಸಭೆ

ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ಲೋಕೋಪಯೋಗಿ ಇಲಾಖೆಯ ರಾಜ್ಯ ಎಸ್‌.ಸಿ/ಎಸ್‌.ಟಿ ಗುತ್ತಿಗೆದಾರರ   ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು   ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಚರ್ಚೆ ನಡೆಸಲಾಯಿತು.

Read More »

ಖಾನಾಪೂರ ತಹಶೀಲ್ದಾರರಾಗಿ ಮಂಜುಳಾ ಕೆ. ನಾಯಕ್ ನೇಮಕ ; ದುಂಡಪ್ಪ ಕೋಮಾರ್ ವರ್ಗಾವಣೆ

ಖಾನಾಪೂರ :- ಖಾನಾಪೂರ ತಾಲೂಕಿನಲ್ಲಿ ಆಡಳಿತಾತ್ಮಕ ಬದಲಾವಣೆ ಸಂಭವಿಸಿದ್ದು, ತಾಲೂಕಿನ ತಹಶೀಲ್ದಾರ್ ದುಂಡಪ್ಪ ಕೋಮಾರ್ ಅವರನ್ನು ವರ್ಗಾಯಿಸಲಾಗಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಮಯ್ಯ ಅವರು ಈ ಸಂಬಂಧ ಆದೇಶಗಳನ್ನು ಹೊರಡಿಸಿದ್ದು, ಅವರ ಸ್ಥಾನಕ್ಕೆ ಶ್ರೀಮತಿ ಮಂಜುಳಾ ಕೆ. ನಾಯಕ್ ಅವರನ್ನು ಖಾನಾಪೂರದ ಹೊಸ ತಹಶೀಲ್ದಾರರಾಗಿ ನೇಮಕ ಮಾಡಲಾಗಿದೆ. ಈ ಕ್ರಮಕ್ಕೆ ಕಾರಣವಾದದ್ದು ಒಂದು ಕೃಷಿ ಸಂಬಂಧಿತ ಪ್ರಕರಣ. ಆ ಸಂಬಂಧಿತ ಪ್ರಕರಣದಲ್ಲಿ ಉಚ್ಚ ನ್ಯಾಯಾಲಯವು ಸರ್ವೇ ಕಾರ್ಯವನ್ನು ನಡೆಸುವಂತೆ ಸ್ಪಷ್ಟ ಆದೇಶ …

Read More »

ಇದೇ ಮೊದಲ ಬಾರಿಗೆ ಬೆಳಗಾವಿ ನಗರದಲ್ಲಿ ನ್ಯೂಸ್ 18 ಕನ್ನಡ ಸುದ್ದಿವಾಹಿನಿ ವತಿಯಿಂದ ಕರುನಾಡ ಹಬ್ಬ

ಇದೇ ಮೊದಲ ಬಾರಿಗೆ ಬೆಳಗಾವಿ ನಗರದಲ್ಲಿ ನ್ಯೂಸ್ 18 ಕನ್ನಡ ಸುದ್ದಿವಾಹಿನಿ ವತಿಯಿಂದ ಕರುನಾಡ ಹಬ್ಬ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆಯೋಜನೆ ಮಾಡಿರುವ ಕನ್ನಡ ಹಬ್ಬದಲ್ಲಿ ಮನೋರಂಜನೆಯ ಜೊತೆಗೆ ವೈವಿಧ್ಯಮಯ ತಿಂಡಿ, ತಿನಿಸು ಒಂದೇ ಸೂರಿನಡಿ ಸಿಗಲಿದೆ. ಹೆಸರಾಂತ ಕಲಾವಿದರು ಕರುನಾಡ ಹಬ್ಬದಲ್ಲಿ ನಿಮ್ಮನ್ನು ರಂಜಿಸಲಿದ್ದಾರೆ. ನೀವು ಬನ್ನಿ ನಿಮ್ಮ ಕುಟುಂಬಸ್ಥರು ಸ್ನೇಹಿತರನ್ನು ಕರೆ ತಂದು ಕನ್ನಡ ಹಬ್ಬ ಯಶಸ್ವಿಗೊಳಿಸಿ. ಕರುನಾಡ ಹಬ್ಬದ ಭಾಗವಾಗಿನಾಡಗೀತೆ ಗಾಯನಅಡಿಗೆ …

Read More »

ವ್ಯಕ್ತಿ ಮೇಲೆ ಹಲ್ಲೆ ಆರೋಪ: ಪೊಲೀಸ್ ಇನ್ಸ್​ಪೆಕ್ಟರ್ ವಿರುದ್ಧ ತನಿಖೆಗೆ ಹೈಕೋರ್ಟ್ ಆದೇಶ

ಬೆಂಗಳೂರು: ವ್ಯಕಿಯೊಬ್ಬರ ಮೇಲೆ ಭೀಕರವಾಗಿ ಹಲ್ಲೆ ನಡೆಸಿದ ಆರೋಪ ಸಂಬಂಧ ಸಂಡೂರು ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಮಹೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಬೇಕು ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಹೈಕೋರ್ಟ್ ನಿರ್ದೇಶಿಸಿದೆ. ತನ್ನ ಮೇಲೆ ಭೀಕರವಾಗಿ ಹಲ್ಲೆ ನಡೆಸಿರುವ ಸಂಡೂರು ಠಾಣೆ ಪೊಲೀಸ್ ಇನ್ಸ್​ಪೆಕ್ಟರ್ ಮಹೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ಮಾಡಲು ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶಿಸಬೇಕು ಎಂದು ಕೋರಿ ಬಳ್ಳಾರಿ ಜಿಲ್ಲೆಯ …

Read More »

ಬೆಳಗಾವಿಯಲ್ಲಿ ಬೆಂಕಿ ಕಾಯಿಸಿಕೊಳ್ಳುವಾಗ ಆವರಿಸಿದ ದಟ್ಟ ಹೊಗೆ: ಉಸಿರುಗಟ್ಟಿ ಮೂವರು ಯುವಕರ ದುರ್ಮರಣ

ಬೆಳಗಾವಿ: ಕೊರೆಯುವ ಚಳಿ ಹಿನ್ನೆಲೆ ರೂಮಿನಲ್ಲಿ ಇದ್ದಿಲಿನ ಬೆಂಕಿ ಕಾಯಿಸುತ್ತಾ ಮಲಗಿದ್ದ ನಾಲ್ವರು ಯುವಕರ ಪೈಕಿ ಮೂವರು ಯುವಕರು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ. ಸೋಮವಾರ ರಾತ್ರಿ ರೂಮಿನಲ್ಲಿ ಇದ್ದಿಲಿನ ಬೆಂಕಿ ಇಟ್ಟುಕೊಂಡು ಮಲಗಿದ್ದರು‌. ನಿದ್ರೆಗೆ ಜಾರಿದಾಗ ರೂಮಿನಲ್ಲಿ ದಟ್ಟ ಹೊಗೆ ಆವರಿಸಿದೆ. ಈ ವೇಳೆ ಉಸಿರಾಟದ ಸಮಸ್ಯೆ ಉಂಟಾಗಿ ಸಾವಾಗಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿದು ಬಂದಿದೆ. ಅಮನ್ ನಗರದ ನಿವಾಸಿಗಳಾದ ರಿಹಾನ್ …

Read More »

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

* *ನವೆಂಬರ್ 28ರ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು* * *ತುಮಕೂರು ಜಿಲ್ಲಾ ಮಟ್ಟದ ಪೂರ್ವ ಬಾವಿ ಸಭೆಯಲ್ಲಿ ಸಚಿವರ ಕರೆ* *ತುಮಕೂರು:* ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ …

Read More »

ಸೌದಿ ಅರೇಬಿಯಾದಲ್ಲಿ ಬಸ್ ದುರಂತ ಹುಬ್ಬಳ್ಳಿ ಅಬ್ದುಲ್ ಘಣಿ ಸಾವು

ಹುಬ್ಬಳ್ಳಿ:ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ತನ್ನ ಕುಟುಂಬವನ್ನು ಬಿಟ್ಟು ದುಬೈಗೆಂದು ದುಡಿಯಲು ಹೋಗಿದ್ದರು. ಸ್ವಲ್ಪ ದಿನಗಳ ಮಟ್ಟಿಗೆ ರಜೆ ಹಾಕಿ ತನ್ನ ಹುಟ್ಟೂರು ಅಂದ್ರೆ ಹುಬ್ಬಳ್ಳಿಗೆ ಬರುತ್ತಿದ್ದರು. ಬರುವಾಗ ತನ್ನ ಸ್ನೇಹಿತರ ಜೊತೆ ಸೌದಿ ಅರೇಬಿಯಾದ ಮೆಕ್ಕಾಗೆ ಹೋಗುವಾಗ, ಬಸ್ ನಲ್ಲಿದ್ದ 42 ಜನರು ಸಜೀವ ದಹನವಾಗಿ ದಾರುಣ ಮರಣ ಹೊಂದಿದ್ದಾರೆ. ಅದರಲ್ಲಿ ಹುಬ್ಬಳ್ಳಿಯ ಗಣೇಶಪೇಟಗ್ ನಿವಾಸಿ ಅಬ್ದುಲ್ ಗನಿ ಶಿರಹಟ್ಟಿ ಕೂಡ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯಲ್ಲಿ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. …

Read More »