ಮಂಡ್ಯ: ಸ್ಕೂಟರ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಮದ್ದೂರು ತಾಲೂಕಿನ ಕೊಪ್ಪದಲ್ಲಿ ನಡೆದಿದೆ. ಕೊಪ್ಪ ನಿವಾಸಿಗಳಾದ ಕಾವ್ಯ, ಮುತ್ತುರಾಜ್ ಮತ್ತು ಕೀರ್ತನಾ ಮೃತ ದುರ್ದೈವಿಗಳು. ಸ್ಕೂಟರ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಬಳಿಕ ಮೂವರ ಮೇಲೆ ಹರಿದಿದೆ. ಇದರಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಮೂವರು ಗಣೇಶ ಹಬ್ಬ ಮುಗಿಸಿ ಮುಂಜಾನೆ ಬೆಂಗಳೂರಿಗೆ ಹೋಗುತ್ತಿದ್ದರು. ಈ ವೇಳೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೊಪ್ಪ ಪೊಲೀಸರು …
Read More »ಗಣೇಶನ ಮೂರ್ತಿ ತರಲು ಹೋಗುತ್ತಿದ್ದಾಗ ಬೈಕ್ ಅಪಘಾತ – ಸವಾರ ದುರ್ಮರಣ
ಕಲಬುರಗಿ: ಗಣೇಶನ ಮೂರ್ತಿ ತರಲು ಹೋಗುತ್ತಿರುವಾಗ ಬೈಕ್ ಅಪಘಾತವಾಗಿ ಸವಾರ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಕಲಬುರಗಿ ನಗರದ ಹೀರಾಪುರ ರಸ್ತೆಯ ಫ್ಲೈ ಓವರ್ ಮೇಲೆ ನಡೆದಿದೆ. ಕೊಟನೂರು ಬಡಾವಣೆಯ ಪ್ರಶಾಂತ್ ಬಿರಾದರ್ (23) ಮೃತ ಯುವಕ. ಕಳೆದ ರಾತ್ರಿ ಸ್ನೇಹಿತರೊಡನೆ ಗಣೇಶ ಮೂರ್ತಿ ತರಲು ಹೋಗುತ್ತಿದ್ದರು. ಈ ವೇಳೆ ಪಕ್ಕದ ಬೈಕ್ ಟಚ್ ಆಗಿ ಕೆಳಗೆ ಬಿದ್ದು ಇಬ್ಬರು ಸವಾರರ ತಲೆಗೆ ಗಂಭೀರ ಗಾಯವಾಗಿದೆ. ಇಬ್ಬರ ಪೈಕಿ …
Read More »ಗಣೇಶ ಚತುರ್ಥಿ ಸಂಭ್ರಮದಲ್ಲೇ ಬೆಳಗಾವಿಯಲ್ಲಿ ದುರಂತ – ಒಂದೇ ಕುಟುಂಬದ ನಾಲ್ವರು ಸಜೀವ ದಹನ!
ಬೆಳಗಾವಿ: ಗಣೇಶ ಹಬ್ಬದ ಸಂಭ್ರಮದಲ್ಲಿದ್ದ ಬೆಳಗಾವಿಯಲ್ಲಿ ತಡರಾತ್ರಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದೆ. ನಗರದ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾವ್ಹಾಟ್ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಡರಾತ್ರಿ ಮನೆಯಲ್ಲಿ ಎಲ್ಲರೂ ನಿದ್ರಿಸುತ್ತಿದ್ದ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ಆವರಿಸಿದೆ. ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟ್ಟು …
Read More »ಹೆಬ್ಬಾಳ್ಕರ್ ಪುತ್ರನಿಗೆ ಮಹತ್ವದ ಹೊಣೆ – ಗೋವಾ ಚುನಾವಣಾ ಮಾಧ್ಯಮ ಸಂಯೋಜಕರಾಗಿ ನೇಮಕ
ಬೆಳಗಾವಿ: ಮುಂಬರುವ ಗೋವಾ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್ ಚುನಾವಣಾ ಮಾಧ್ಯಮ ಮತ್ತು ಪ್ರಚಾರ ತಂತ್ರಗಾರಿಕೆಗಾಗಿ ನಾಲ್ವರು ಪ್ರಮುಖ ಸಂಯೋಜಕರನ್ನು ನೇಮಿಸಿದೆ. ಈ ಪೈಕಿ ಬೆಳಗಾವಿಯ ಯುವ ಕಾಂಗ್ರೆಸ್ ಮುಖಂಡ ಮಾಜಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರಿಗೆ ಮಹತ್ವದ ಜವಾಬ್ದಾರಿ ವಹಿಸಲಾಗಿದೆ. ಎಐಸಿಸಿ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ ಖೇರಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ. ಮುಂಬರುವ …
Read More »ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ನರಗುಂದ ಬಂದ್
ಗದಗ: ಬರ ಘೋಷಣೆ, ಬರ ಪರಿಹಾರ, ಬೆಳೆ ವಿಮೆ ಪರಿಹಾರ, ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ಘೋಷಿಸುವಂತೆ ಆಗ್ರಹಿಸಿ ಜಿಲ್ಲೆಯ ನರಗುಂದ ಪಟ್ಟಣ ಬಂದ್‌ಗೆ ಇಂದು (ಸೆ.12) ಕರೆ ನೀಡಲಾಗಿದೆ. ಗದಗ ಜಿಲ್ಲೆಯ ವಿವಿಧ ರೈತ ಸಂಘಟನೆಗಳು, ಮಲಪ್ರಭಾ ಅಚ್ಚುಕಟ್ಟು ಪ್ರದೇಶ ವೇದಿಕೆ ಸೇರಿದಂತೆ ಅನೇಕ ಸಂಘಟನೆಗಳು ಒಟ್ಟಾಗಿ ನರಗುಂದ ಬಂದ್‌ಗೆ ಕರೆ ನೀಡಿವೆ. ಸದ್ಯ ಬಸ್ ಸಂಚಾರ, ವ್ಯಾಪಾರ, ವಹಿವಾಟು, ಅಂಗಡಿ ಬಂದ್ ಮಾಡಲಾಗಿದೆ. ಹುಬ್ಬಳ್ಳಿ-ನರಗುಂದ-ವಿಜಯಪುರ-ಸೊಲ್ಲಾಪುರ ರಾಷ್ಟ್ರೀಯ …
Read More »ಗೌರಿಯ ಪೂಜೆಗೆ ಬೇಕೇ ಬೇಕು ಈ ವಿಶೇಷ ಪುಷ್ಪ – ಅದ್ಯಾವುದು ಗೊತ್ತಾ?
ಗಣೇಶ ಹಬ್ಬದಲ್ಲಿ ಗಣೇಶನ ಪೂಜೆಗಿಂತ ಮೊದಲು ತಾಯಿ ಗೌರಿಯ ಪೂಜೆ ಮಾಡಲಾಗುತ್ತದೆ. ಹೆಣ್ಣುಮಕ್ಕಳು ಗೌರಿಯ ಮೂರ್ತಿಯನ್ನು ಅಲಂಕರಿಸಿ ಪೂಜಿಸುವುದು ವಾಡಿಕೆ. ಗೌರಿಯ ಪೂಜೆಗೆ ವಿಶೇಷವಾಗಿ ಗೌರಿ ಹೂವು ಬೇಕೇ ಬೇಕು. ಕಾಡಿನಲ್ಲಿ ಬೆಳೆಯುವ ಗೌರಿ ಹೂವನ್ನು ( ಹಿರಿಯರು ಮನೆಗೆ ತರುತ್ತಾರೆ. ಎತ್ತರಕ್ಕೆ ಎಲ್ಲೆಲ್ಲೋ ಬೆಳೆಯುವ ಗೌರಿ ಹೂವು ನೋಡಲು ಬಲು ಸುಂದರವಾಗಿರುತ್ತದೆ. ಆದರೆ ಕೈಗೆಟುಕದಂತಿರುತ್ತದೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಬೆಳೆಯುವ ಈ ಗಿಡದಲ್ಲಿ ಮಳೆಗಾಲದ ಅಗಸ್ಟ್-ಸೆಪ್ಟಂಬರ್, ಅಂದರೆ ಶ್ರಾವಣ-ಭಾದ್ರಪದ ಮಾಸದಲ್ಲಿ …
Read More »ಸಾಲು ಸಾಲು ರಜೆ – ಊರಿನತ್ತ ಜನರ ದಂಡು; ನವಯುಗ ಟೋಲ್ ಬಳಿ ಟ್ರಾಫಿಕ್ ಜಾಮ್
ಬೆಂಗಳೂರು: ವೀಕೆಂಡ್ ಮತ್ತು ಗಣೇಶ ಹಬ್ಬದ ಸಾಲು ಸಾಲು ರಜೆಗಳಿಂದಾಗಿ ಬೆಂಗಳೂರಿನಿಂದ ಸಾವಿರಾರು ಜನ ತಮ್ಮ ತಮ್ಮ ಊರುಗಳತ್ತ ಜನ ಹೊರಟಿದ್ದಾರೆ. ಇದರಿಂದ ಪ್ರಮುಖ ಮಾರ್ಗಗಳಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಶನಿವಾರ, ಭಾನುವಾರ ಮತ್ತು ಸೋಮವಾರ ಗಣೇಶ ಹಬ್ಬ ಹಿನ್ನೆಲೆ ಜನ ಊರುಗಳತ್ತ ಹೊರಟಿದ್ದಾರೆ. ಗೋವರ್ಧನ್, ಮೈಸೂರು ರೋಡ್, ಟಿನ್ ಫ್ಯಾಕ್ಟರಿ, ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಭಾರೀ ಜನ ಸೇರಿದ್ದಾರೆ. ನವಯುಗ ಟೋಲ್ ಬಳಿ …
Read More »ಟ್ರೆಂಡ್ ಗೀಳಿಗೆ ಬಿದ್ದು ಟ್ರ್ಯಾಪ್ ಆಗ್ಬೇಡಿ – 80s ಫೋಟೊ ಟ್ರೆಂಡ್ ಬಗ್ಗೆ ಪೊಲೀಸರ ಎಚ್ಚರಿಕೆ!
ನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮಾದನಾಯಕನಹಳ್ಳಿ ಪೊಲೀಸರು ಸೂಚಿಸಿದ್ದಾರೆ. ಫೋಟೋ ಎಡಿಟಿಂಗ್ ಹೆಸರಿನಲ್ಲಿ ಸೈಬರ್ ವಂಚಕರು ಸಾರ್ವಜನಿಕರನ್ನ ವಂಚಿಸುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಜನಜಾಗೃತಿ ಮೂಡಿಸಿದ್ದಾರೆ. 80ರ ದಶಕದ ಫೋಟೋಗಳ ಮಾದರಿಯಲ್ಲಿ ತಮ್ಮ ಫೋಟೋಗಳನ್ನ ಎಡಿಟ್ ಮಾಡಿಸಿಕೊಳ್ಳಲು ಸಾರ್ವಜನಿಕರು ವಿವಿಧ ಆ್ಯಪ್‌ಗಳು ಹಾಗೂ ಆನ್‌ಲೈನ್ ಲಿಂಕ್‌ಗಳನ್ನು ಬಳಸುತ್ತಿದ್ದಾರೆ. ಆದರೆ, ಇಂತಹ ಸಂದರ್ಭದಲ್ಲಿ ಅಪರಿಚಿತ …
Read More »ಪರಪುರುಷನೊಂದಿಗೆ ಲವ್ವಿಡವ್ವಿ – ಹಾಸಿಗೆ ಹಿಡಿದ ಪತಿ ಕೊಂದು ಹೃದಯಾಘಾತ ಅಂತ ನಾಟಕವಾಡಿದ್ದ ಹೈನಾತಿ
ಬೆಂಗಳೂರು: ಪ್ರೀತಿ ಎಂಬುದು ಮಾಯೆ.. ಈ ಪ್ರೀತಿಗೆ ಕಣ್ಣಿಲ್ಲ ಅಂತಾರೆ ನಿಜ, ಆದ್ರೆ ಕೆಲವೊಮ್ಮೆ ಪ್ರೀತಿಗೆ ಹೃದಯವೂ ಇರೋದಿಲ್ಲ, ಅದು ತನ್ನ ಪ್ರೇಮಿಯನ್ನ ಬಿಟ್ಟು ಉಳಿದವರಿಗಾಗಿ ಕಲ್ಲಿನಷ್ಟೇ ಕಠೋರವಾಗಿರುತ್ತೆ. ಇದಕ್ಕೆ ಈಗ ಬೆಂಗಳೂರಿನಲ್ಲಿ ನಡೆದಿರೋ ಕೊಲೆ ಪ್ರಕರಣವೇ ಸಾಕ್ಷಿಯಾಗಿದೆ. ಪ್ರಿಯಕರ ಹಾಗೂ ತನ್ನ ತಾಯಿ ಜೊತೆ ಸೇರಿ ಪಾರ್ಶ್ವವಾಯು ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ಪತಿಯನ್ನ ಕೊಲೆ ಮಾಡಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಿತ್ತಗನೂರಿನ ಯಲ್ಲಪ್ಪ ಗಾರ್ಡನ್ …
Read More »ಬೇರೆ ಯಾವುದೇ ದೇಶದಲ್ಲಿ ಹೀಗೆ ನಡೆಯೋದಿಲ್ಲ – ಸತೀಶ್ ಜಾರಕಿಹೊಳಿ ಪರ ವಿಜಯ್ ಮಲ್ಯ ಬ್ಯಾಟಿಂಗ್
ನವದೆಹಲಿ: ಕಾಂಗ್ರೆಸ್‌ನ ಪ್ರಭಾವಿ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ ಶಾಕ್ ಕೊಟ್ಟಿದೆ. ಜಾರಕಿಹೊಳಿ ಅವರ ಕುಟುಂಬಕ್ಕೆ ಸೇರಿದ 21 ಸ್ಥಳಗಳಲ್ಲಿ ಇಡಿ ಶೋಧಕಾರ್ಯಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪ್ರಕಟಣೆ ಮೂಲಕ ಹಂಚಿಕೊಂಡಿದ್ದು, ಲೋಕೋಪಯೋಗಿ ಇಲಾಖೆಯಲ್ಲೂ ಅವ್ಯವಹಾರ ನಡೆದಿರೋದನ್ನ ಬಹಿರಂಗಪಡಿಸಿದೆ. ಈ ಮಾಹಿತಿಯನ್ನ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಉದ್ಯಮಿ ವಿಜಯ್ ಮಲ್ಯ , ಸತೀಶ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದಾರೆ. ʻಜಾರಿ ನಿರ್ದೇಶನಾಲಯ …
Read More »
Laxmi News 24×7