Breaking News

Uncategorized

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುವ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, ಒಟ್ಟು 337 ಮಂದಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಶುಕ್ರವಾರ ಒಂದೇ ದಿನ ಬರೋಬ್ಬರಿ 137 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದರು. ಇದರಲ್ಲಿ 122 ಪುರುಷ ಅಭ್ಯರ್ಥಿಗಳು 132 ಹಾಗೂ 15 ಮಹಿಳಾ ಅಭ್ಯರ್ಥಿಗಳು 19 ನಾಮ ಪತ್ರಗಳನ್ನು ಸಲ್ಲಿಸಿದ್ದಾರೆ. ಒಟ್ಟಾರೆ ಎರಡನೇ ಹಂತಕ್ಕೆ 309 ಪುರುಷರು 450 ಹಾಗೂ 28 …

Read More »

ಬೈಲಹೊಂಗಲ: ಗುರು ಸಿದ್ಧಾರೂಢಮಠದ ಅದ್ಧೂರಿ ರಥೋತ್ಸವ

ಬೈಲಹೊಂಗಲ: ಸಮೀಪದ ಹಾರೂಗೊಪ್ಪ ಗ್ರಾಮದ ಗುರು ಸಿದ್ಧಾರೂಢಮಠದ ಜಾತ್ರಾ ಮಹೋತ್ಸವದ ಮಹಾರಥೋತ್ಸವ ಭಕ್ತರ ಹರ್ಷೋದ್ಘಾರ ನಡುವೆ ಬುಧವಾರ ಸಂಜೆ ವಿಜೃಂಭಣೆಯಿಂದ ನೆರವೇರಿತು. ಬೆಳಗ್ಗೆಯಿಂದ ರಾತ್ರಿಯವರೆಗೆ ಅಪಾರ ಸಂಖ್ಯೆಯಲ್ಲಿ ಭಕ್ತರು ಮಠಕ್ಕೆ ಬಂದು ಗುರು ಸಿದ್ದಾರೂಢರ ಪ್ರತಿಮೆಗೆ ಶ್ರದ್ಧೆ, ಭಕ್ತಿಯಿಂದ ಕೈ ಮುಗಿದು‌ ಪ್ರಾರ್ಥನೆ ಸಲ್ಲಿಸಿದರು. ಮಹಾರಥೋತ್ಸವ ವಿವಿಧ ಪುಷ್ಪಮಾಲೆ, ಬಾಳೆ, ಮಾವಿನ ತೋರಣ, ಬಣ್ಣದ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿತು. ಭಕ್ತರು ಹರಹರ ಮಹಾದೇವ, ಗುರು ಸಿದ್ಧಾರೂಢ ಮಹಾರಾಜಕೀ ಜೈ ಎಂದು ಘೋಷಣೆ …

Read More »

ನೇಹಾ ಹಿರೇಮಠ ಹತ್ಯೆ ಪ್ರಕರಣ; ಎಬಿವಿಪಿ, ವಿವಿಧ ಕಾಲೇಜು ವಿದ್ಯಾರ್ಥಿಗಳಿಂದ ಭುಗಿಲೆದ್ದ ಪ್ರತಿಭಟನೆ; ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಖಂಡಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಎಬಿವಿಪಿ ಕಾರ್ಯಕರ್ತರು, ವಿವಿಧ ಕಾಲೇಜು ವಿದ್ಯಾರ್ಥಿಗಳು ನೇಹಾ ಹತ್ಯೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಡೆಸಿದ್ದಾರೆ.   ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರು ಹಾಗೂ ಹುಬ್ಬಳ್ಳಿಯ ಬೇರೆ ಬೇರೆ ಕಾಲೇಜು ವಿದ್ಯಾರ್ಥಿಗಳು ಜಮಾವಣೆಗೊಂಡಿದ್ದು, ಕೊಲೆ ಆರೋಪಿ ಫಯಾಜ್ ಗೆ ಕಠಿಣ ಶಿಕ್ಷೆ ನೀಡಿ, ನೇಹಾ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. …

Read More »

ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

ಗದಗ: ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಎಸ್‌ಪಿ ಬಿ.‌ಎಸ್. ನೇಮಗೌಡ ಪ್ರತಿಕ್ರಿಯಿಸಿದ್ದು, ಮಧ್ಯರಾತ್ರಿ ನಾಲ್ಕು ಜನರಾದ ಪ್ರಕಾಶ ಬಾಕಳೆ ಮಗ ಕಾರ್ತಿಕ್, ಸಂಬಂಧಿಕರಾದ ಪರಶುರಾಮ್, ಲಕ್ಷ್ಮೀ, ಆಕಾಂಕ್ಷಾ ಹತ್ಯೆ ಆಗಿದೆ. ಕುಟುಂಬಸ್ಥರು ಹೇಳುವ ಪ್ರಕಾರ ರಾತ್ರಿ 2 ರಿಂದ 3 ಗಂಟೆ ಆಗಿದೆ ಎನ್ನಲಾಗಿದ್ದು, ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವುದು ಕಂಡು ಬರುತ್ತಿದೆ. ಯಾರು ಎಂಬುದು ಗೊತ್ತಾಗಿಲ್ಲ. ಪರಿಶೀಲನೆ ಮುಂದುವರೆದಿದೆ ಎಂದು ತಿಳಿಸಿದರು. ಮುಂದುವರೆದು ಮಾತನಾಡಿ, ಆದಷ್ಟು ಬೇಗ ದಸ್ತಗಿರಿ ಮಾಡುತ್ತೇವೆ. …

Read More »

ಕ್ಯಾನ್ಸರ್‌ ರೋಗಿಗಳಿಗೆ ಸಿಹಿಸುದ್ದಿ: 72 ಲಕ್ಷ ರೂ. ನ Cancer ಔಷಧ ಇನ್ಮುಂದೆ 3 ಲಕ್ಷಕ್ಕೆ ಸಿಗುತ್ತೆ

ನವದೆಹಲಿ : ಕ್ಯಾನ್ಸರ್‌ ರೋಗಿಗಳಿಗೆ ಝೈಡಸ್‌ ಕಂಪನಿ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಹೌದು 72 ಲಕ್ಷ ರು.ತಗಲುತ್ತಿದ್ದ ಔಷಧಿ ಇನ್ನು ಕೇವಲ 3 ಲಕ್ಷ ರು.ಗಳಿಗೆ ಲಭ್ಯವಾಗಲಿದೆ ಎಂದು ಝೈಡಸ್‌ ಲೈಫ್‌ಸೈನ್ಸಸ್‌ ಔಷಧ ಕಂಪನಿ ಮಾಹಿತಿ ನೀಡಿದೆ. ಔಷಧ ತಯಾರಿಸಿದ್ದ ಮೂಲ ಕಂಪನಿಯ ಪೇಟೆಂಟ್‌ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಮೂಲ ಔಷದಧ ಜೆನೆರಿಕ್‌ ಮಾದರಿ ಬಿಡುಗಡೆ ಮಾಡಲಾಗಿದೆ ಎಂದು ಝೈಡಸ್‌ ಕಂಪನಿ ನೀಡಿದೆ.   ಭಾರತದಲ್ಲಿ ಪ್ರತಿ ವರ್ಷ 14 …

Read More »

ಇಂದಿನಿಂದ 21 ರಾಜ್ಯಗಳಲ್ಲಿ ಮೊದಲ ಹಂತದ ಮತದಾನ ಆರಂಭ:

ನವದೆಹಲಿ: ಎಂಟು ಕೇಂದ್ರ ಸಚಿವರು, ಇಬ್ಬರು ಮಾಜಿ ಮುಖ್ಯಮಂತ್ರಿಗಳು ಮತ್ತು ಮಾಜಿ ರಾಜ್ಯಪಾಲರು ಸೇರಿದಂತೆ 1,600 ಕ್ಕೂ ಹೆಚ್ಚು ಅಭ್ಯರ್ಥಿಗಳು ಇಂದು ತಮ್ಮ ಚುನಾವಣಾ ಭವಿಷ್ಯವನ್ನು ಪರೀಕ್ಷಿಸಲು ಸಜ್ಜಾಗಿದ್ದಾರೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಆದಾಗ್ಯೂ, ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನ ಮಾಡಲು ಹೋಗುವ ಕೆಲವು …

Read More »

ಡಿಸಿಎಂ ಡಿಕೆಶಿ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಮೇ.27ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆಗೆ ಸರ್ಕಾರದ ಸಮ್ಮತಿ ಪಡೆದಿದ್ದನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿಯನ್ನು ಇದೀಗ ಹೈಕೋರ್ಟ್ ವಿಚಾರಣೆ ನಡೆಸಿದೆ. ಇಂದು ಈ ಪ್ರಕರಣದ ಕುರಿತಂತೆ ಹೈಕೋರ್ಟ್ ನಲ್ಲಿ, ನ್ಯಾ ಕೆ. ಸೋಮಶೇಖರ್ ನ್ಯಾ ಉಮೇಶ್ ಎಂ ಅಡಿಗರಿದ್ದ ಪೀಠದಲ್ಲಿ ವಿಚಾರಣೆ ನಡೆಸಲಾಯಿತು.ಸಿಬಿಐ ಪರ ವಿಶೇಷ ಅಭಿವೊಜಕ ಪ್ರಸನ್ನ ಕುಮಾರ್ ವಾದ ಮಂಡಿಸಿದ್ದು, …

Read More »

ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ವಿರುದ್ದ ತೊಡೆ ತಟ್ಟಿರುವ ಶಿರಹಟ್ಟಿ ಮಠದ ದಿಂಗಾಲೇಶ್ವರ ಸ್ವಾಮೀಜಿ ಅವರು ತಮ್ಮ ಅಪಾರ ಭಕ್ತಗಣದ ಮೆರವಣಿಗೆ ನಡೆಸಿ ಧಾರವಾಡ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದರು. ನಂತರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಧರ್ಮ ಸಮನ್ವಯ ಸಾರುವ ಉದ್ದೇಶದೊಂದಿವೆ ನಾಮಪತ್ರ ಸಲ್ಲಿಸಿದ್ದೇವೆ. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮಾಧ್ಯಮಗಳ ಮೂಲಕ ಹೇಳಿದ್ದೇನೆ. ಯಾರ ವಿರುದ್ಧ ಮಾತನಾಡುತ್ತಿದ್ದೇನೋ ಅವರು ತೊಂದರೆ ಕೊಡುತ್ತಿದ್ದಾರೆ. …

Read More »

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ

ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದೆ. ಚಿಕ್ಕೋಡಿ ಅಭಿವೃದ್ಧಿಯೆಡೆಗೆ ಮೊದಲ ಹೆಜ್ಜೆಯಿದು! ಈ ಸುದೀರ್ಘ ಪಯಣದಲ್ಲಿ ನಿಮ್ಮ ಬೆಂಬಲ ಸದಾ ನನ್ನೊಂದಿಗಿರಲಿ. ಈ ವೇಳೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ರವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಡಿಸಿಎಂ ಹಾಗೂ ಅಥಣಿ ಶಾಸಕರಾದ ಶ್ರೀ ಲಕ್ಷ್ಮಣ ಸವದಿ, ಹಿರಿಯರು ಹಾಗೂ ವಿಧಾನ ಪರಿಷತ್ …

Read More »

ನೀರಿಲ್ಲದಿದ್ದರೇನು..? ಬಿಯರ್ ಇದೆಯಲ್ಲ.. : ಬೆಂಗಳೂರಲ್ಲಿ ಬಿಯರ್‌ಗೆ ಫುಲ್ ಡಿಮ್ಯಾಂಡ್!

ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ಹೆಚ್ಚಾಗುತ್ತಿದ್ದು, ಬಿಯರ್‌ಗೂ ಬೇಡಿಕೆ ಹೆಚ್ಚಾಗಿದೆ. ಮದ್ಯಪ್ರಿಯರು ಹಾಟ್​ ಡ್ರಿಂಕ್ಸ್​ ಗುಡ್‌ಬೈ ಹೇಳಿ ಕೋಲ್ಡ್​ ಬಿಯರ್​ ಸೇವನೆಗೆ ಮುಂದಾಗಿದ್ದಾರೆ. ರಾಜ್ಯದಲ್ಲಿ ಕಳೆದ 15 ದಿನಗಳಲ್ಲಿ ಬರೋಬ್ಬರಿ 23.5 ಲಕ್ಷ ಕಾರ್ಟನ್‌ ಬಾಕ್ಸ್ ಬಿಯರ್ ಮಾರಾಟವಾಗಿದೆ.ಕಳೆದ ವರ್ಷಕ್ಕಿಂತ ಈ ವರ್ಷ ಬಿಯರ್ ಮಾರಾಟದಲ್ಲಿ ಏರಿಕೆಯಾಗಿದ್ದು, ದಾಖಲೆ ಬರೆದಿದೆ. ಈ ವರ್ಷ ಶೇ.61ರಷ್ಟು ಮಾರಾಟ ಹೆಚ್ಚಾಗಿದೆ. ಕಳೆದ ಏಪ್ರಿಲ್‌ನಲ್ಲಿ 38.6 ಲಕ್ಷ ಬಾಕ್ಸ್‌ ಬಿಯರ್‌ ಮಾರಾಟವಾಗಿತ್ತು. …

Read More »