Uncategorized

ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ

ರಾಮನಗರ: ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ಸಾತನೂರು ಪೊಲೀಸರು ರಾಜಸ್ತಾನದಲ್ಲಿ ಬಂಧಿಸಿದ್ದಾರೆ. ಕನಕಪುರದ ಸಾತನೂರು ಬಳಿ ಜಾನುವಾರು ರಕ್ಷಣೆ ವೇಳೆ ವ್ಯಕ್ತಿಯೊಬ್ಬರು ಅನುಮಾನಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನವಾಗಿದೆ.   ಜಾನುವಾರು ವ್ಯಾಪಾರಿ ಇದ್ರೀಷ್ ಪಾಷ ಎಂಬುವವರು ಅನುಮಾನಸ್ಪದವಾಗಿ ಮೃತಪಟ್ಟಿದ್ದರು. ಘಟನೆ ಬಳಿಕ ಪುನೀತ್ ಕೆರೆಹಳ್ಳಿ ಹಾಗೂ ಸಹಚರರು ತಲೆಮರೆಸಿಕೊಂಡಿದ್ದರು. ಆರೋಪಿಗಳ ಬಂಧನಕ್ಕೆ …

Read More »

ನಮ್ಮ ಭಾಷೆಗಳು ಬೇರೆ-ಬೇರೆಯಾಗಿದ್ದರೂ ಭಾವ ಒಂದೇ: ಜಗತಾಪ

ಸೊಲ್ಲಾಪುರ: ಇದು ಗಡಿನಾಡು ಸಾಹಿತ್ಯ ಸಮ್ಮೇಳನ, ನಮ್ಮ ಗಡಿ ಸಂರಕ್ಷಣೆ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರದೇಶಗಳು ಬರಲೇಬೇಕು. ಅಲ್ಲದೆ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹೋಗುವ ಪ್ರದೇಶಗಳು ಹೋಗಲೇಬೇಕು. ಆಗ ಮಾತ್ರ ಎರಡು ರಾಜ್ಯಗಳ ಗಡಿ ಸಮಸ್ಯೆ ಬಗೆಹರಿಯುತ್ತದೆ. ಗಡಿನಾಡು ಕನ್ನಡಿಗರಾದ ನಾವೆಲ್ಲ ಬೇಲಿ ಮೇಲಿನ ಹೂಗಳಿದ್ದಂತೆ ಎಂದು ಮಾಜಿ ಸಚಿವೆ ಲೀಲಾದೇವಿ ಆರ್‌. ಪ್ರಸಾದ್‌ ಹೇಳಿದರು. ಕನ್ನಡ ಸಾಹಿತ್ಯ ಪರಿಷತ್‌ ಮಹಾರಾಷ್ಟ್ರ ಗಡಿನಾಡು ಘಟಕದ ವತಿಯಿಂದ ಜತ್ತ …

Read More »

ಶ್ರೀರಾಮುಲು ವಿರುದ್ಧ ಕೆಆರ್‌ಪಿಪಿ ಅಭ್ಯರ್ಥಿ ಸ್ಪರ್ಧೆ ಖಚಿತ: ಜನಾರ್ದನ ರೆಡ್ಡಿ

ಜಮಖಂಡಿ: ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ಶ್ರೀರಾಮುಲು ಯಾವ ಕ್ಷೇತ್ರದಿಂದ ಸ್ಪಧಿ ìಸುತ್ತಾರೋ ಆ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಕರ್ನಾಟಕ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ದನರೆಡ್ಡಿ ಹೇಳಿದರು.   ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯ ಮತಕ್ಷೇತ್ರದಲ್ಲಿ ಎಲ್ಲ ಸ್ಥಾನಗಳಲ್ಲಿ ನಮ್ಮ ಪಕ್ಷ ಗೆಲುವು ದಾಖಲಿಸಲಿದೆ. ರಾಜ್ಯದಲ್ಲಿ 30ಕ್ಕೂ ಹೆಚ್ಚು ಸ್ಥಾನ ಪಡೆಯಲು ಪ್ರಯತ್ನ ನಡೆಸಲಾಗುತ್ತಿದೆ. ಬಿಜೆಪಿ ತಮ್ಮನ್ನು ಈ ರೀತಿ ನಡೆಸಿಕೊಂಡಿರುವ …

Read More »

ಹೈಕಮಾಂಡ್ ಡಿ.ಕೆ. ಶಿವಕುಮಾರ್ `ಮುಖ್ಯಮಂತ್ರಿ’ ಆಗಲು ಒಪ್ಪಲ್ಲ : ಸಿದ್ದರಾಮಯ್ಯ ಹೊಸ ಬಾಂಬ್

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಆಗಲು ಹೈಕಮಾಂಡ್ ಒಪ್ಪುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯರ ಈ ಹೇಳಿಕೆ ರಾಜ್ಯ ಕಾಂಗ್ರೆಸ್ ನಲ್ಲಿ ಕೋಲಾಹಲ ಸೃಷ್ಟಿಸಿದೆ.   ಖಾಸಗಿ ಸುದ್ದಿವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಒಪ್ಪುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾನು ಡಿ.ಕೆ. ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು.ಇದು ನನ್ನ ಸಾರ್ವಜನಿಕ …

Read More »

ಈ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಅಂದ್ರು ‘ಕುಂದಾಪುರದ ವಾಜಪೇಯಿ’; ಸತತ 5 ಸಲ ದಾಖಲೆ ಅಂತರದಿಂದ ಗೆದ್ದಿದ್ದರೂ ಈ ನಿರ್ಧಾರ!

ಉಡುಪಿ: ಕುಂದಾಪುರದ ವಾಜಪೇಯಿ ಎಂದೇ ಹೆಸರಾಗಿರುವ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಸಲದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದಾರೆ. ಈ ಕುರಿತು ಅವರು ಅಧಿಕೃತ ಪ್ರಕಟಣೆಯನ್ನು ಕೂಡ ಹೊರಡಿಸಿದ್ದಾರೆ. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತವಾಗಿ ಒಟ್ಟು 5 ಅವಧಿಗೆ ನನ್ನನ್ನು ಬಹುನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ನನ್ನ ಕ್ಷೇತ್ರದ ಎಲ್ಲಾ ಜಾತಿ-ಧರ್ಮದ ಮತದಾರ ಬಾಂಧವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ವಇಚ್ಛೆಯಿಂದ ಸ್ಪರ್ಧಿಸದಿರಲು …

Read More »

ಬೆಳಗಾವಿ: ಶಾಸಕರ ಪುತ್ರನ ವಾಹನ ತಪಾಸಣೆ ಮಾಡದ ಸಿಬ್ಬಂದಿ ತರಾಟೆಗೆ

ಬೆಳಗಾವಿ: ಚೆಕ್‌ಪೋಸ್ಟ್‌ನಲ್ಲಿ ಶಾಸಕ ಶ್ರೀಮಂತ ಪಾಟೀಲ ಅವರ ಪುತ್ರ ಶ್ರೀನಿವಾಸ ಸಂಚರಿಸುತ್ತಿದ್ದ ವಾಹನವನ್ನು ತಪಾಸಣೆ ಮಾಡದೆ ಬಿಟ್ಟ ಅಧಿಕಾರಿಗಳನ್ನು ತಹಶೀಲ್ದಾರ್‌ ಎಂ.ಎನ್.ಬಳಿಗಾರ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಗವಾಡ-ಮೀರಜ್‌ ಚೆಕ್‌ಪೋಸ್ಟ್‌ನಲ್ಲಿ ಶನಿವಾರ ಪ್ರತಿ ವಾಹನ ತಪಾಸಣೆ ಮಾಡಲಾಗುತ್ತಿತ್ತು. ಆದರೆ, ಸಾಂಗ್ಲಿಯಿಂದ ಕಾಗವಾಡಕ್ಕೆ ಬರುತ್ತಿದ್ದ ಶಾಸಕರ ಪುತ್ರನ ವಾಹನವನ್ನು ತಪಾಸಣೆ ಮಾಡಿಲ್ಲ. ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಬಳಿಗಾರ ಸ್ಥಳಕ್ಕೆ ಧಾವಿಸಿ, ಚೆಕ್‌ಪೋಸ್ಟ್‌ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಪ್ರತಿ ವಾಹನ …

Read More »

ಬಸವಜಯ ಮೃತ್ಯುಂಜಯ ಸ್ವಾಮೀಜಿಯವರಿಗೆ ಬೆದರಿಕೆ;:

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ 2A ಮಿಸಲಾತಿಗಾಗಿ ಆಗ್ರಹಿಸಿ ಹೋರಾಟ ನಡೆಸಿದ್ದ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಧಮ್ಕಿ ಹಾಕಿ ಬೆದರಿಕೆಯೊಡ್ದುತ್ತಿದ್ದಾರೆ ಎಂದು ಎಂದು ಶಾಸಕ ಅರವಿಂದ್ ಬೆಲ್ಲದ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಅರವಿಂದ್ ಬೆಲ್ಲದ್, ಹೋರಾಟದಲ್ಲಿ ಭಾಗಿಯಾಗಿದ್ದ ಕೆಲ ರಾಜಕೀಯ ನಾಯಕರೇ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಈ ರೀತಿ ಧಮ್ಕಿ ಹಾಕಿದ್ದು ಯಾರು ಎಂಬುದು ನಮ್ಮ …

Read More »

ಅಂಕಲಗಿ ಪೂಜ್ಯರ ವಿಧಿವಶ – ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಗೋಕಾಕ್- ತಾಲೂಕಿನ ಸುಕ್ಷೇತ್ರ ಅಂಕಲಗಿ ಅಡವಿ ಸಿದ್ಧೇಶ್ವರ ಮಠದ ಪೀಠಾಧಿಪತಿಯಾಗಿದ್ದ ಗುರು ಸಿದ್ಧೇಶ್ವರ ಮಹಾಸ್ವಾಮಿಗಳ ನಿಧನಕ್ಕೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಅಂಕಲಗಿ ಮಠವು ಬೆಳಗಾವಿ ನಾಡಿನಲ್ಲಿ ವಿಶಿಷ್ಟ ಇತಿಹಾಸ, ಭವ್ಯ ಪರಂಪರೆಯನ್ನು ಹೊಂದಿದೆ. ಮಠದ ಸರ್ವತೋಮುಖ ಬೆಳವಣಿಗೆಗಳಲ್ಲಿ ಶ್ರೀ ಗಳ ಪಾತ್ರ ಗಣನೀಯವಾಗಿತ್ತು. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆಯನ್ನು ಸಲ್ಲಿಸಿದ್ದರು. ಭಕ್ತರ ಪಾಲಿಗೆ ಪೂಜ್ಯನೀಯವಾಗಿತ್ತು. …

Read More »

ಶಿವಲಿಂಗೇಗೌಡ ಶಾಸಕ ಸ್ಥಾನಕ್ಕೆ ರಾಜಿನಾಮೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ದಳಪತಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಜೆಡಿಎಸ್ ಹಿರಿಯ ಶಾಸಕ ಶಿವಲಿಂಗೇಗೌಡ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅರಸಿಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ 400ಕ್ಕೂ ಹೆಚ್ಚು ಕಾರ್ಯಕರ್ತರ ಜೊತೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಲಿಂಗೇಗೌಡ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ಅರಸಿಕೆರೆಯಿಂದ ಕೈ …

Read More »

ನಮ್ಮದು ಡೆಮಾಕ್ರಟಿಕ್ ಪಕ್ಷ, ಕಾಂಗ್ರೆಸನದ್ದು ಕುಟುಂಬ ಪಾರ್ಟಿ

ಬೆಳಗಾವಿ: ನಮ್ಮದು ಡೆಮಾಕ್ರಟಿಕ್‌ ಪಾರ್ಟಿ, ಅದರ ಅಡಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಆಗುತ್ತೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ಅಂತಿಮ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದ ಧರ್ಮನಾಥ ಭವನದಲ್ಲಿ ಶುಕ್ರವಾರ ಅಭ್ಯರ್ಥಿಗಳ ಆಯ್ಕೆ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷದ ರೀತಿ ನಮ್ಮದು ಪರಿವಾರದ ಪಾರ್ಟಿ ಅಲ್ಲ.ಕಾಂಗ್ರೆಸ್ ಪಾರ್ಟಿ ಸುಳ್ಳು ಆಶ್ವಾಸನೆ ಕೊಡುವುದರಲ್ಲಿ ಪರಿಣಿತರ ಪಕ್ಷ ಅದು ಎಂದರು. ಗ್ಯಾಸ್ ಸಿಡಿಲಿಂಡರ್ ಗೆ ಹಣ ಕೊಡ್ತೇವಿ, …

Read More »