Breaking News

Uncategorized

ಶ್ರೀರಾಮ ಬಿಜೆಪಿಯವರ ಆಸ್ತಿಯಲ್ಲ; ಪರಮೇಶ್ವರ್

ಬೆಂಗಳೂರು: ಶ್ರೀರಾಮ ಎಲ್ಲರಿಗೂ ಶ್ರೀರಾಮ. ಬಿಜೆಪಿಯವರು ಎಲ್ಲದರೂ ಖರೀದಿಸಿದ್ದಾರೆಯೇ. ಶ್ರೀರಾಮ ಈ ದೇಶದ ಸಂಸ್ಕೃತಿ, ಪರಂಪರೆಯ ಆಸ್ತಿ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ, ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಭಾನುವಾರ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರ ಜತೆ ಮಾತನಾಡಿದ ಡಾ. ಜಿ. ಪರಮೇಶ್ವರ ಅವರು, ಆಯೋಧ್ಯದಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಬಳಿಕ ರಾಮನ ಹೆಸರು ಟಾರ್ಗೆಟ್ ಆಗುತ್ತಿದೆ ಎಂದು ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿದರು. ನಾವು ಪದೇ ಪದೆ …

Read More »

ಐಷಾರಾಮಿ ಕಾರ್ ಬಿಟ್ಟು ರೈಲ್ವೆ ನಿಲ್ದಾಣದಲ್ಲಿ ಕಾದು ಕುಳಿತ ನಟ;

ಬೆಂಗಳೂರು: ಖ್ಯಾತ ನಟನೊಬ್ಬ ರೈಲ್ವೆ ನಿಲ್ದಾಣದಲ್ಲಿ ಜನಸಾಮಾನ್ಯರಂತೆ ತನ್ನ ರೈಲಿಗಾಗಿ ಕಾಯುತ್ತಿರುವ ವಿಡಿಯೋ ವೈರಲ್ ಆಗಿದೆ. ಖ್ಯಾತ ನಟ ಕೇರಳದ ಎರ್ನಾಕುಲಂ ರೈಲು ನಿಲ್ದಾಣದಲ್ಲಿ ಸಾಮಾನ್ಯ ವ್ಯಕ್ತಿಯಂತೆ ರೈಲಿಗಾಗಿ ಕಾಯುತ್ತಾ ಕುಳಿತಿರುವ ವಿಡಿಯೋ ವೈರಲ್ ಆಗಿದೆ. ತನ್ನ ಮುಖದ ಮೇಲೆ ಮಾಸ್ಕ್‌ ಹಾಕಿದ್ದರಿಂದ ಹತ್ತಿರದಲ್ಲಿದ್ದ ಜನರಿಗೆ ಚಿಕ್ಕ ಸುಳಿವು ಸಿಗದಂತೆ ಕುಳಿತಿದ್ದ ನಟನನ್ನು ಜನರೂ ಗುರುತಿಸುವಲ್ಲಿ ವಿಫಲರಾಗಿದ್ದಾರೆ.

Read More »

ಸೂಲಿಬೆಲೆಗೆ ಕಲಬುರಗಿ ಜಿಲ್ಲಾ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ಕೋರ್ಟ್

ಕಲಬುರಗಿ: ಕಲಬುರಗಿ ಜಿಲ್ಲೆಗೆ(Kalaburagi District) ಚಕ್ರವರ್ತಿ ಸೂಲಿಬೆಲೆ(chakravarthy sulibele) ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧವನ್ನು ಕಲಬುರಗಿ ಹೈಕೋರ್ಟ್ (Kalaburagi high Court) ತೆರವುಗೊಳಿಸಿದೆ. ಚಿತ್ತಾಪುರದಲ್ಲಿಂದು ನಮೋ ಬ್ರಿಗೆಡ್ ಆಯೋಜಿಸಿರುವ ಕಾರ್ಯಕ್ರಮಕ್ಕೆ ತಾಲೂಕ ಆಡಳಿತ ಅನುಮತಿ ನೀಡಿರಲಿಲ್ಲ. ಅಲ್ಲದೇ ಚಕ್ರವರ್ತಿ ಸೂಲಿಬೆಲೆ ಅವರಿಗೆ ಕಲಬುರಗಿ ಜಿಲ್ಲೆಗೆ ಎಂಟ್ರಿಯಾಗದಂತೆ ನಿರ್ಬಂಧ ವಿಧಿಸಲಾಗಿತ್ತು. ಆದ್ರೆ, ಇದನ್ನು ಪ್ರಶ್ನಿಸಿ ಚಕ್ರವರ್ತಿ ಸೂಲಿಬೆಲೆ, ಕಲಬುರಗಿ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಹೈಕೋರ್ಟ್, ಸೂಲಿಬೆಲೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಿ ಕಾರ್ಯಕ್ರಮಕ್ಕೆ ಭದ್ರತೆ …

Read More »

ಜಾತಿ ಗಣತಿ ವರದಿಗೆ ಬಾರಿ ಅಪಸ್ವರ: ಸಿದ್ದರಾಮಯ್ಯ ನಡೆಗೆ ಸ್ವಪಕ್ಷದ ಕೆಲ ನಾಯಕರು ಅಸಮಾಧಾನ

ಬೆಂಗಳೂರು, ಫೆಬ್ರವರಿ 29: ತೀವ್ರ ವಿರೋಧದ ನಡುವೆಯೂ ಜಾತಿಗಣತಿ ವರದಿ(Caste Census Report)ಇಂದು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಜಾತಿಗಣತಿ ವರದಿ ಸಲ್ಲಿಸಿದ್ದಾರೆ. ಇತ್ತ ಜಾತಿ ಗಣತಿ ವರದಿ ಸಲ್ಲಿಕೆ ಆಗುತ್ತಿದ್ದಂತೆ ಭಾರಿ ಅಪಸ್ವರ ಕೇಳಿಬಂದಿದ್ದು, ಸಿದ್ದರಾಮಯ್ಯ ನಡೆಗೆ ಸ್ವಪಕ್ಷದ ಶಾಸಕ ವಿನಯ್ ಕುಲಕರ್ಣಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಸೇರಿದಂತೆ ಕೆಲ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕ ಮತ್ತು …

Read More »

ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಬಡ ಮಹಿಳೆಯ ಸೀರೆ ಬಿಚ್ಚಿ ಹಲ್ಲೆ

ಬೆಳಗಾವಿ, ಫೆ.29: ವಂಟಮೂರಿ (Vantamuri) ಗ್ರಾಮದಲ್ಲಿ ಮಹಿಳೆ‌ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದ ಘಟನೆಯಂತೆಯೇ ಅದೇ ಬೆಳಗಾವಿಯಲ್ಲಿ (Belagavi) ಮತ್ತೊಂದು ಅಮಾನವೀಯ ಘಟನೆ ಬಹಿರಂಗವಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಒತ್ತುವರಿ ಪ್ರಶ್ನಿಸಿದ ಬಡ ಕುಟುಂಬದ ಮಹಿಳೆ ಸೀರೆ ಕಳಚಿ ಮಹಿಳೆ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮಹಿಳೆ ಅರೆ ಬೆತ್ತಲೆ ಮಾಡಿ ಪುತ್ರನ ಮೇಲೂ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಐನಾಪುರದ ಸುಭಾಷ್ ದಾನೊಳ್ಳಿ, ಸುರೇಶ …

Read More »

ಶೀಘ್ರದಲ್ಲೇ ಮತ್ತೊಂದು ಗ್ಯಾರಂಟಿ ಘೋಷಣೆ: ಲಕ್ಷ್ಮಿ ಹೆಬ್ಬಾಳ್ಕರ್

ಆಶಾ (asha) ಮತ್ತು ಅಂಗನವಾಡಿ (anganwadi) ಕಾರ್ಯಕರ್ತೆಯರಿಗಾಗಿ ಶೀಘ್ರದಲ್ಲೇ ರಾಜ್ಯ ಸರ್ಕಾರ ಆರನೇ ಗ್ಯಾರಂಟಿ (Sixth Guarantee) ಘೋಷಿಸಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ತಿಳಿಸಿದರು. ಮಾಗಡಿ ಕೋಟೆ (magadi kote) ಮೈದಾನದಲ್ಲಿ ಕಾಂಗ್ರೆಸ್ ಗ್ಯಾರಂಟಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ (cm) ಸಿದ್ದರಾಮಯ್ಯ (siddaramaiah), ಉಪಮುಖ್ಯಮಂತ್ರಿ (dcm) ಡಿ.ಕೆ. ಶಿವಕುಮಾರ್ (d.k. shivakumar) ಅವರೊಂದಿಗೆ ಚರ್ಚೆ ನಡೆಸಿ ಶೀಘ್ರದಲ್ಲೇ 6ನೇ ಗ್ಯಾರಂಟಿ …

Read More »

30 ಅಡಿ ಆಳದ ಬಾವಿಗೆ ಮೆಟ್ಟಿಲುಗಳೇ ಇಲ್ಲ! ಜೀವ ಭಯದಲ್ಲೇ ಜೀವ ಜಲ ತುಂಬಿಸಿಕೊಳ್ಳುವ ಅನಿವಾರ್ಯತೆ ಈ ಮಹಿಳೆಯರದ್ದು

ಚಿಕ್ಕೋಡಿ ತಾಲೂಕಿನ ಗೌಡೇನವಾಡಿ ಗ್ರಾಮದಲ್ಲಿ – 30 ಅಡಿ ಆಳದ ಬಾವಿಗೆ ಮೆಟ್ಟಿಲುಗಳೇ ಇಲ್ಲ! ಜೀವ ಭಯದಲ್ಲೇ ಜೀವ ಜಲ ತುಂಬಿಸಿಕೊಳ್ಳುವ ಅನಿವಾರ್ಯತೆ ಈ ಮಹಿಳೆಯರದ್ದು. ಶಾಸಕ ಗಣೇಶ್ ಹುಕ್ಕೇರಿಗೂ ಮನವಿ ಮಾಡಿದ್ದರೂ ಈ ವರೆಗೂ ನೀರು ಕೊಡಿಸುವ ಕೆಲಸ ಆಗಿಲ್ಲ.ಅದು ಕೃಷ್ಣಾ ನದಿಯ ಕೂಗಳತೆ ದೂರದಲ್ಲಿರುವ ಗ್ರಾಮ. ಇನ್ನೂರು ಮನೆಗಳಿರುವ ತೋಟದೂರಿನಲ್ಲಿ ಬೇಸಿಗೆ ಮುನ್ನವೇ ನೀರಿಗಾಗಿ (drinking water) ಹಾಹಾಕಾರ ಶುರುವಾಗಿದೆ. ಜೀವ ಜಲಕ್ಕಾಗಿ ಜನ ಜೀವ ಕೈಯಲ್ಲಿ ಹಿಡಿದುಕೊಂಡು ಬಾವಿಗಿಳಿದು …

Read More »

ಶವ ಇಟ್ಟು ಪ್ರತಿಭಟನೆ: ಅತಿಕ್ರಮಣ ತೆರವು

ಚಿಕ್ಕೋಡಿ: ‘ಅತಿಕ್ರಮಿಸಿದ ಜಾಗವನ್ನು ತೆರವು ಮಾಡಬೇಕು’ ಎಂದು ಆಗ್ರಹಿಸಿ ತಾಲ್ಲೂಕಿನ ಮಾಂಜರಿ ಗ್ರಾಮದಲ್ಲಿ ಮಂಗಳವಾರ ವಾಣಿಜ್ಯ ಸಂಕೀರ್ಣದಲ್ಲಿ ಶವ ಇಟ್ಟು ಪ್ರತಿಭಟನೆ ಮಾಡಿದ ಘಟನೆ ನಡೆದಿದೆ. ಮಾಂಜರಿ ನಿವಾಸಿ ಪುರಂದರ ಜೋಗೆ (85) ಅನಾರೋಗ್ಯದ ಕಾರಣ ಮಂಗಳವಾರ ನಿಧನರಾದರು. ಇದೇ ಊರಿನ ಸಿಕಂದರ್‌ ಕಿಲ್ಲೇದಾರ ಎನ್ನುವವರು ಪುರಂದರ ಅವರ ಜಾಗವನ್ನು ಅತಿಕ್ರಮಣ ಮಾಡಿಕೊಂಡಿದ್ದಾರೆ. ಅದನ್ನು ತೆರವುಗೊಳಿಸಿ ಮೂಲ ಮಾಲೀಕರಿಗೆ ನೀಡಬೇಕು ಎಂದು ಧರಣಿ ನಿರತರು ಆಗ್ರಹಿಸಿದರು. ‘ಪುರಂದರ ಅವರು ತಮ್ಮ …

Read More »

ಚಿಂಚಲಿ ಮಾಯಕ್ಕ ಜಾತ್ರೆ ಇಂದಿನಿಂದ

ರಾಯಬಾಗ: ಕರ್ನಾಟಕ ಹಾಗೂ ಮಹಾರಾಷ್ಟ್ರ ಭಕ್ತರ ಆರಾಧ್ಯ ದೇವತೆ ಚಿಂಚಲಿ ಮಾಯಕ್ಕದೇವಿ ಜಾತ್ರೆ ಫೆ.28ರಿಂದ ಮಾರ್ಚ್‌ 3ರವರೆಗೆ ಐದು ದಿನ ವೈಭವೋಪೇತವಾಗಿ ಜರುಗಲಿದೆ. ಮಾಯಕಾರತಿ, ಮಹಾಕಾಳಿ, ಮಾಯವ್ವ ಎಂಬೆಲ್ಲ ಹೆಸರಿನಿಂದ ಪೂಜಿಸಲ್ಪಡುವ ಮಾಯಕ್ಕ ದೇವಿ ಜಾತ್ರೆಗೆ ಚಿಂಚಲಿ ಪಟ್ಟಣ ಸಂಭ್ರಮದಿಂದ ಸಜ್ಜುಗೊಂಡಿದೆ. ಈ ಜಾತ್ರೆಗೆ ನೆರೆಯ ತಮಿಳುನಾಡು, ಗೋವಾ, ಆಂಧ್ರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ ಲಕ್ಷಲಕ್ಷ ಭಕ್ತರು ಆಗಮಿಸುತ್ತಾರೆ. ಜಾತ್ರೆಗೆ ಸುಮಾರು 5 ಲಕ್ಷಕ್ಕೂ ಹೆಚ್ಚು ಭಕ್ತರು ಆಗಮಿಸುವುದು ಪ್ರತಿವರ್ಷದ ವಾಡಿಕೆ. …

Read More »

ಕನ್ನಡದಲ್ಲೇ ಕನ್ನಡಿಗ-ಕನ್ನಡತಿ ಲಗ್ನ

ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ಸೋಮವಾರ ಕನ್ನಡಮಯವಾದ ಮದುವೆ ನೆರವೇರಿತು. ಸಂಪ್ರದಾಯದ ಕಟ್ಟು‍ಪಾಡು ಮೀರಿದ ಜೋಡಿ ಅಚ್ಚುಕಟ್ಟಾಗಿ, ಕನ್ನಡವನ್ನೇ ಅನುಸರಿಸಿ ಹೊಸಬಾಳಿಗೆ ಕಾಲಿಟ್ಟಿತು. ಖಾಸಗಿ ಕಂಪನಿಯ ಉದ್ಯೋಗಿಗಳಾದ ಬೆಳಗಾವಿ ತಾಲ್ಲೂಕಿನ ಶಿಂಧೋಳಿಯ ದೀಪಕ್‌ ಮುಂಗರವಾಡಿ ಮತ್ತು ಚನ್ನಮ್ಮನ ಕಿತ್ತೂರು ತಾಲ್ಲೂಕಿನ ದೇವಗಾಂವದ ರಾಜೇಶ್ವರಿ ವಾಂಗಿ ಅವರ ಮದುವೆ ಕನ್ನಡ ಸಾಹಿತ್ಯ ಸಮ್ಮೇಳನದ ವಾತಾವರಣ ನೆನಪಿಸಿತು. ಜೋಡಿಯು ಉಂಗುರದಿಂದ ಹಿಡಿದು ಕಲ್ಯಾಣ ಮಂಟಪದವರೆಗೆ ಸಂಪೂರ್ಣವಾಗಿ ಕನ್ನಡ ಅನುಸರಿಸಿತು. ಪ್ರವೇಶದ್ವಾರದ ಬಳಿ ಕಿತ್ತೂರು ರಾಣಿ …

Read More »