ನವದೆಹಲಿ, (ಫೆಬ್ರವರಿ 21): ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದೆ. ಕಬ್ಬಿನ(sugarcane) ಖರೀದಿ ದರ ಹೆಚ್ಚಳಕ್ಕೆ ಕೇಂದ್ರ ಸಂಪುಟ ಸಭೆ ಅನುಮತಿ ನೀಡಿದೆ. ಪ್ರತಿ ಕ್ವಿಂಟಲ್‌ಗೆ 315 ರೂಪಾಯಿದಿಂದ 340 ರೂ.ಗೆ ಏರಿಕೆ ಮಾಡಿದೆ. ಇದರೊಂದಿಗೆ ಕಬ್ಬಿನ ಎಫ್ಆರ್ಪಿ ಪ್ರತಿ ಕ್ವಿಂಟಲ್‌ಗೆ 25 ರೂ. ಹೆಚ್ಚಿಸಿದಂತಾಗಿದೆ. ಈ ಬಗ್ಗೆ ಕೇಂದ್ರ ಪ್ರಸಾರ ಮತ್ತು ಕ್ರೀಡಾ ಖಾತೆ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ. ಸಂಪುಟ ಸಭೆ ಬಳಿಕ ಸುದ್ದಿಗಾರೊಂದಿಗೆ …
Read More »ಬೆಂಗಳೂರು: ಹಪ್ತಾ, ಫ್ರೀ ಐಟಂಗಳಿಗಾಗಿ ವೃದ್ಧನ ಮುಂದೆ ಪುಂಡಾಟ
ಬೆಂಗಳೂರು, ಫೆ.22: ನಗರದ (Bengaluru) ಡಿಜೆ ಹಳ್ಳಿಯ ಪ್ರಿಯಾ ನಗರದಲ್ಲಿರುವ ಮೆಡಿಕಲ್ ಶಾಪ್ವೊಂದರಲ್ಲಿ ನಡೆದಿದೆ ಎನ್ನಲಾದ ಹಫ್ತಾ (Hafta) ವಸೂಲಿ ಹಾಗೂ ಉಚಿತ ಐಟಂಗಳಿಗಾಗಿ ಯುವಕನಹೈಡ್ರಾಮದವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ. ಡಿಜೆ ಹಳ್ಳಿ ಬಳಿ ಇರುವ ಪ್ರಿಯಾ ನಗರ ಮುಖ್ಯರಸ್ತೆಯಲ್ಲಿರುವ ರಿಝ್ವಾನ್ ಮೆಡಿಕಲ್ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಹಪ್ತಾ ಹಾಗೂ ಫ್ರೀ ಐಟಂಗಳಿಗಾಗಿ ಯುವಕನೊಬ್ಬ ಹುಚ್ಚನಂತೆ ವರ್ತನೆ ಮಾಡಿದ್ದಾನೆ. ರೋಲ್ ಕಾಲ್ ಕೊಡದಿದ್ದರೆ ಹಲ್ಲೆ ನಡೆಸುವುದಾಗಿ ಬೆದರಿಕೆ ಹಾಕಿದ್ದಾನೆ. ಮೆಡಿಕಲ್ ಶಾಪ್ನಲ್ಲಿದ್ದ ವೃದ್ಧನ ಮುಂದೆ …
Read More »ಶಾಲೆಗಳಿಂದ 100 ಮೀ. ವ್ಯಾಪ್ತಿಯಲ್ಲಿ ಸಿಗರೇಟ್ ನಿಷೇಧ, ದಂಡ ಹೆಚ್ಚಳ
ಬೆಂಗಳೂರು, ಫೆಬ್ರವರಿ 21: ಬೆಂಗಳೂರು, (ಫೆಬ್ರವರಿ 21): ಸಿಗರೇಟ್ಗಳ (cigarettes )ಮತ್ತು ಇತರೆ ತಂಬಾಕು (Tobacco) ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ವಿಧೇಯಕ ಇಂದು (ಫೆ.21) ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಂದ (Schools) ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡದ ಪ್ರಮಾಣ 100 ರೂ. …
Read More »ನಗರದ ಶಹರ ಪೋಲಿಸ್ ಠಾಣೆ ಆವರಣದಲ್ಲಿ ಪಿಎಸ್ಐ ಕೆ ವಾಲಿಕಾರ ಅವರು ಶಾಂತಿ ಸಭೆ
ಶಾಂತಿ ಸಭೆ ; ಗೋಕಾಕದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ : PSI ಕೆ ವಾಲಿಕಾರ ಗೋಕಾಕ : ನಗರದ ಶಹರ ಪೋಲಿಸ್ ಠಾಣೆ ಆವರಣದಲ್ಲಿ ಪಿಎಸ್ಐ ಕೆ ವಾಲಿಕಾರ ಅವರು ಶಾಂತಿ ಸಭೆ ಹಮ್ಮಿಕೊಂಡಿದ್ದರು. ಈ ಸಭೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುವಂತಹ ಪ್ರಚೋದನಕಾರಿ ಅಥವಾ ವಿವಾದಾತ್ಮಕ ಪೋಸ್ಟ್‌ಗಳನ್ನು ಹಾಕುವುದು, ಲೈಕ್ ಮಾಡುವುದು ಮತ್ತು ಶೇರ್ ಮಾಡುವುದು ಕಂಡು ಬಂದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು …
Read More »ಪ್ರವಾಸಿ ತಾಣ ಕೆಮ್ಮಣ್ಣು ಗುಂಡಿ ಗುಡ್ಡದಲ್ಲಿ ಕಾಡ್ಗಿಚ್ಚು
ಚಿಕ್ಕಮಗಳೂರು, ಫೆಬ್ರವರಿ 20: ಜಿಲ್ಲೆಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಪಶ್ಚಿಮಘಟ್ಟ ಭಾಗ ಹಾಗೂ ಶೋಲಾ ಅರಣ್ಯದಲ್ಲಿ ಕಾಡ್ಗಿಚ್ಚು ಬೀಳಲು ಆರಂಭವಾಗಿದೆ. ತರೀಕೆರೆ ತಾಲೂಕಿನ ಕೆಮ್ಮಣ್ಣು ಗುಂಡಿಯ (Kemmannu Gundi) ಗುಡ್ಡದಲ್ಲಿ ನಿನ್ನೆ (ಸೋಮವಾರ ಫೆ.19)ರ ರಾತ್ರಿ ಬೆಂಕಿ ಹೊತ್ತಿ ಉರಿದಿದೆ. ಕಾಡ್ಗಿಚ್ಚಿಗೆ ಶೋಲಾರಣ್ಯ ಗುಡ್ಡದಲ್ಲಿ ನೂರಾರು ಎಕರೆ ಪ್ರದೇಶ ನಾಶವಾಗಿದೆ. ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟರು. …
Read More »ಜೆರೋಸಾ ಶಾಲೆ ಶಿಕ್ಷಕಿ ವಿರುದ್ಧ ಆಡಿಯೋ ವೈರಲ್ ಮಾಡಿದ ಆರೋಪ; ಮಹಿಳೆಗೆ ವಿದೇಶದಿಂದ ಬೆದರಿಕೆ ಕರೆ
ಮಂಗಳೂರು, : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವಸಂತ ಜೆರೋಸಾ ಶಾಲೆಯ(St. Gerosa School, Mangaluru) ಶಿಕ್ಷಕಿ ಸಿಸ್ಟರ್ ಪ್ರಭಾ ಅವರು ಶ್ರೀರಾಮನಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಆಡಿಯೋ ಮಾಡಿದ ಪೋಷಕಿಗೆ ಇವರೇ ಎಂದು ಮಹಿಳೆಯ ಕುಟುಂಬ ಸಹಿತ ಫೋಟೋವನ್ನು ಕಿಡಿಗೇಡಿಗಳು ವೈರಲ್ ಮಾಡಿದ್ದಾರೆ. ಅಲ್ಲದೆ, ಪ್ರಕರಣದ ನಂತರ ವಿದೇಶದಿಂದ ನಿರಂತರವಾಗಿ ಕರೆ ಮಾಡಿ ಬೆದರಿಕೆ ಹಾಕುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಜೆರೋಸಾ ಶಾಲೆಯ ಶಿಕ್ಷಕಿ ಧರ್ಮ ಅವಹೇಳನ ಪ್ರಕರಣ ಸಂಬಂಧ ಶಿಕ್ಷಕಿ …
Read More »ಲೋಕಸಭೆಗೆ 2 ಕ್ಷೇತ್ರಗಳಿಂದ ಕಣಕ್ಕಿಳಿಯಲು ಸಿದ್ಧವಾಗಿರುವ ಜಗದೀಶ್ ಶೆಟ್ಟರ್
ಹುಬ್ಬಳ್ಳಿ, ಫೆಬ್ರವರಿ 19: ಬಿಜೆಪಿ ತೊರೆದು ಕಾಂಗ್ರೆಸ್‌ನಲ್ಲಿದ್ದಾಗ ಲೋಕಸಭಾ ಚುನಾವಣೆ ಸ್ಪರ್ಧೆ ಇಲ್ಲ ಎಂದು ಕಡ್ಡಿ ತುಂಡಾದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದರು. ಇದೀಗ ವರಸೆ ಬದಲಿಸಿರುವ ಅವರು ಬಿಜೆಪಿಯಿಂದ ಈ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಆಸೆ ವ್ಯಕ್ತಪಡಿಸಿದ್ದಾರೆ.ಎರಡು ದಿನ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯ ಕಾರ್ಯಕಾರಿಣಿ ಸಭೆಯ ಬಳಿಕ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಸಭೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ದೃಷ್ಟಿಯಿಂದ ಸಂಘಟನಾತ್ಮಕವಾಗಿ ಹಲವು ವಿಷಯಗಳು ಚರ್ಚೆಯಾದವು. ಟಿಕೆಟ್ …
Read More »ತೋಂಟದಾರ್ಯ ಮಠ v/s ಶಿರಹಟ್ಟಿ ಫಕೀರೇಶ್ವರ ಮಠ; ಸಿದ್ದಲಿಂಗ ಸ್ವಾಮೀಜಿ ಜಯಂತಿಯಂದು ಕರಾಳ ದಿನ ಆಚರಿಸುವ ಎಚ್ಚರಿಕೆ ಕೊಟ್ಟ ಫಕೀರ ದಿಂಗಾಲೇಶ್ವರ ಶ್ರೀ
ಗದಗ, : ಗದಗ ಜಿಲ್ಲೆಯ ಎರಡು ಪ್ರಮುಖ ಮಠಗಳ ನಡುವೆ ಸಂಘರ್ಷ ಉಂಟಾಗಿದೆ. ಗದಗ ತೋಂಟದಾರ್ಯ ಮಠ (Tontadarya Matha) ಹಾಗೂ ಶಿರಹಟ್ಟಿ ಫಕೀರೇಶ್ವರ ಮಠದ (Shirahatti Fakkireshwar Mutt) ನಡುವೆ ಸಂಘರ್ಷ ಉಂಟಾಗಿದ್ದು ಒಂದು ಮಠದ ಆಚರಣೆ ವಿರುದ್ಧ ಮತ್ತೊಂದು ಮಠ ವಿರೋಧ ವ್ಯಕ್ತಪಡಿಸಿದೆ. ತೋಂಟದ ಸಿದ್ದಲಿಂಗ ಶ್ರೀಗಳ ಜಯಂತಿಯನ್ನ ಭಾವೈಕ್ಯತಾ ದಿನವನ್ನಾಗಿ ಆಚರಿಸುತ್ತಿರುವುದಕ್ಕೆ ಶುರಹಟ್ಟಿ ಫಕೀರೇಶ್ವರ ಮಠದ ಉತ್ತರಾಧಿಕಾರಿ ಫಕೀರ ದಿಂಗಾಲೇಶ್ವರ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಗದಗದಲ್ಲಿ ಸುದ್ಧಿಗೋಷ್ಠಿಯಲ್ಲಿ …
Read More »ಗ್ಯಾರಂಟಿ ಯೋಜನೆ ಫಲಾನುಭವಿಗಳು ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವಂತೆ ಮಾಡುತ್ತಾರೆ: ಸಿಎಂ
ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ಉತ್ಸುಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭೆ ಚುನಾವಣೆಗೆ ಒಟ್ಟಾಗಿ ಕಣಕ್ಕಿಳಿದಿರುವ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಹೆಚ್’ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿಗಳು ಕಿಡಿಕಾರಿದರು. ನಮ್ಮ ವಿರೋಧಿಗಳು ಐದು ಗ್ಯಾರಂಟಿ ಘೋಷಣೆ ಮಾಡಿದಾಗ ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ಈಗ ರಾಜ್ಯ ಸುಭದ್ರವಾಗಿದೆ. ಕಳೆದ ಭಾರಿ ಬಜೆಟ್‍ಗಿಂತ 46 ಸಾವಿರ …
Read More »1 ಕೋಟಿ 5 ಲಕ್ಷ 74 ಸಾವಿರ ರೂ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ವಿಶ್ವವಿದ್ಯಾಲಯ
ಫೆಬ್ರವರಿ 19: ಹಂಪಿ ಕನ್ನಡ ವಿಶ್ವವಿದ್ಯಾಲಯ (Hampi Kannada University) 1 ಕೋಟಿ 5 ಲಕ್ಷ 74 ಸಾವಿರ ರೂ. ವಿದ್ಯುತ್ ಬಿಲ್ (Current Bill) ಬಾಕಿ ಉಳಿಸಿ ಕೊಂಡಿದ್ದು, ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (GESCOM) ನೋಟಿಸ್ ನೀಡಿದೆ. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದರಿಂದ, ಜೆಸ್ಕಾಂ ಅಧಿಕಾರಿಗಳು ವಿಶ್ವವಿದ್ಯಾಲಯಕ್ಕೆ ವಿದ್ಯುತ್ ಸರಬರಾಜು ಅನ್ನು ಸ್ಥಗಿತಗೊಳಿಸಿತ್ತು. ಆದರೆ “ನುಡಿ ಹಬ್ಬ” ಇದ್ದ ಕಾರಣ ವಿದ್ಯುತ್ ಸರಬರಾಜು ಮಾಡಿ ಎಂದು ವಿಶ್ವವಿದ್ಯಾಲಯ …
Read More »